Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 22:15 - ಪರಿಶುದ್ದ ಬೈಬಲ್‌

15 “ಯೆಹೋಯಾಕೀಮನೇ, ನಿನ್ನ ಮನೆಯಲ್ಲಿ ದೇವದಾರಿನ ಮರವನ್ನು ಬಹಳವಾಗಿ ಇಟ್ಟುಕೊಳ್ಳುವದರಿಂದ ನೀನು ದೊಡ್ಡ ರಾಜನಾಗುವದಿಲ್ಲ. ನಿನ್ನ ತಂದೆಯಾದ ಯೋಷೀಯನು ಅನ್ನಪಾನೀಯಗಳಿಂದ ತೃಪ್ತಿಪಟ್ಟುಕೊಳ್ಳುತ್ತಿದ್ದನು. ಅವನು ನೀತಿ ಮತ್ತು ನ್ಯಾಯ ಸಮ್ಮತವಾದದ್ದನ್ನು ಮಾಡುತ್ತಿದ್ದನು. ಯೋಷೀಯನು ಹಾಗೆ ಮಾಡಿದ್ದರಿಂದ ಎಲ್ಲವೂ ಸರಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನೀನು ದೇವದಾರುವಿನ ಕೆಲಸದಲ್ಲಿ ಸ್ಪರ್ಧಿಸುವುದರಿಂದಲೇ ಆಳತಕ್ಕವನಾಗಿದ್ದೀಯೋ? ನಿನ್ನ ತಂದೆಯು ಎಷ್ಟೇ ಉಂಡು ಕುಡಿದರೂ ನೀತಿ ನ್ಯಾಯಗಳನ್ನಂತು ಕೈಕೊಳ್ಳುತ್ತಿದ್ದನು; ಆಗ ಅವನಿಗೆ ನೆಮ್ಮದಿಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ದೇವದಾರಿನ ಕೆಲಸದಲ್ಲಿ, ಬೇರೆಯವರನ್ನು ಮೀರಿಸುವುದರಲ್ಲಿ ಅಡಗಿದೆಯೇ ನಿನ್ನ ದೊರೆತನದ ಹಿರಿಮೆ? ನಿನ್ನ ತಂದೆ ಎಷ್ಟೇ ಕುಡಿದರೂ ತಿಂದರೂ ನ್ಯಾಯನೀತಿಯನ್ನು ಪಾಲಿಸುತ್ತಿದ್ದನಲ್ಲವೆ? ಆಗ ಅವನಿಗೆ ಎಲ್ಲವು ನೆಮ್ಮದಿಯಾಗಿತ್ತಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನೀನು ದೇವದಾರುವಿನ ಕೆಲಸದಲ್ಲಿ ಸ್ಪರ್ಧೆಯುಳ್ಳವನಾಗಿರುವದರಿಂದಲೇ ಆಳತಕ್ಕವನಾಗಿದ್ದೀಯೋ? ನಿನ್ನ ತಂದೆಯು ಎಷ್ಟೇ ಉಂಡು ಕುಡಿದರೂ ನೀತಿನ್ಯಾಯಗಳನ್ನಂತು ಕೈಕೊಳ್ಳುತ್ತಿದ್ದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ಹೆಚ್ಚು ಹೆಚ್ಚು ದೇವದಾರುಗಳನ್ನು ಹೊಂದಲು ಅದು ನಿಮ್ಮನ್ನು ರಾಜನನ್ನಾಗಿಸುತ್ತದೆಯೇ? ನಿನ್ನ ತಂದೆ ಉಂಡು, ಕುಡಿದು ನ್ಯಾಯವನ್ನೂ, ನೀತಿಯನ್ನೂ ಮಾಡಲಿಲ್ಲವೋ? ಆಗ ಅವನಿಗೆ ಒಳ್ಳೆಯದಾಗಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 22:15
33 ತಿಳಿವುಗಳ ಹೋಲಿಕೆ  

ಇದಕ್ಕೆ ಮೊದಲು ಯೋಷೀಯನಂತಹ ರಾಜನು ಇರಲೇ ಇಲ್ಲ. ಯೋಷೀಯನು ತನ್ನ ಪೂರ್ಣ ಹೃದಯದಿಂದಲೂ ತನ್ನ ಪೂರ್ಣ ಆತ್ಮದಿಂದಲೂ ತನ್ನ ಪೂರ್ಣ ಶಕ್ತಿಯಿಂದಲೂ ಯೆಹೋವನ ಕಡೆಗೆ ತಿರುಗಿದನು. ಮೋಶೆಯ ಧರ್ಮಶಾಸ್ತ್ರವನ್ನು ಯೋಷೀಯನಂತೆ ಬೇರೆ ಯಾವ ರಾಜನೂ ಅನುಸರಿಸಿರಲಿಲ್ಲ. ಆ ಕಾಲದವರೆಗೆ ಯೋಷೀಯನಂತಹ ಮತ್ತೊಬ್ಬ ರಾಜನು ಇರಲೇ ಇಲ್ಲ.


ಒಳ್ಳೆಯವರಿಗೆ ಒಳ್ಳೆಯವುಗಳೇ ಸಂಭವಿಸುತ್ತವೆ ಎಂಬುದಾಗಿ ತಿಳಿಸು. ಅವರು ಮಾಡುವ ಒಳ್ಳೆಯ ಕಾರ್ಯಗಳಿಗಾಗಿ ಅವರಿಗೆ ಬಹುಮಾನ ದೊರೆಯುವುದು.


ಆದರೆ ರಾಜನು ಒಳ್ಳೆಯ ಕುಟುಂಬದಿಂದ ಬಂದವನಾಗಿದ್ದರೆ ದೇಶಕ್ಕೆ ತುಂಬ ಒಳ್ಳೆಯದಾಗುವುದು; ಅಧಿಪತಿಗಳು ತಿನ್ನುವುದನ್ನೂ ಕುಡಿಯುವುದನ್ನೂ ಹತೋಟಿಯಲ್ಲಿಟ್ಟುಕೊಂಡರೆ ದೇಶಕ್ಕೆ ತುಂಬ ಒಳ್ಳೆಯದಾಗುವುದು. ಅಧಿಪತಿಗಳು ತಿನ್ನುವುದೂ ಕುಡಿಯುವುದೂ ಬಲಹೊಂದುವುದಕ್ಕಾಗಿಯೇ ಹೊರತು ಮತ್ತರಾಗುವುದಕ್ಕಾಗಿಯಲ್ಲ.


ಅಂತೆಯೇ, ರಾಜನಿಂದ ಕೆಟ್ಟ ಆಲೋಚನೆಗಾರರನ್ನು ತೆಗೆದುಹಾಕಿದರೆ, ಒಳ್ಳೆಯತನವು ಅವನ ಆಡಳಿತವನ್ನು ಭದ್ರಗೊಳಿಸುತ್ತದೆ.


ರಾಜನು ನ್ಯಾಯವಂತನಾಗಿದ್ದರೆ ದೇಶವು ಬಲಿಷ್ಠವಾಗಿರುವುದು. ರಾಜನು ತನ್ನ ಐಶ್ವರ್ಯವನ್ನು ಹೆಚ್ಚಿಸಿಕೊಳ್ಳುವುದಕ್ಕಾಗಿ ವಿಪರೀತ ತೆರಿಗೆಗಳನ್ನು ಹಾಕಿದರೆ, ದೇಶವು ಹಾಳಾಗುವುದು.


ಯೆಹೋವನು ಯೋಗ್ಯವೆಂದು ಹೇಳಿದ ಕಾರ್ಯಗಳನ್ನು ಯೋಷೀಯನು ಮಾಡಿದನು. ಯೋಷೀಯನು ತನ್ನ ಪೂರ್ವಿಕನಾದ ದಾವೀದನಂತೆ ದೇವರನ್ನು ಅನುಸರಿಸಿದನು. ಯೋಷೀಯನು ದೇವರ ಬೋಧನೆಗಳಲ್ಲಿ ಯಾವುದೇ ಬದಲಾವಣೆ ಮಾಡದೆ ಅವುಗಳನ್ನು ಅನುಸರಿಸಿದನು.


ಯೆಹೋವನ ಸಂದೇಶವು ನಮಗೆ ಇಷ್ಟವಾಗಲಿ ಅಥವಾ ಇಷ್ಟವಾಗದಿರಲಿ ನಾವು ನಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಪಾಲಿಸುತ್ತೇವೆ. ಯೆಹೋವನ ಸಂದೇಶಕ್ಕಾಗಿ ನಾವು ನಿನ್ನನ್ನು ಆತನಲ್ಲಿಗೆ ಕಳುಹಿಸುತ್ತಿದ್ದೇವೆ. ಆತನು ಹೇಳಿದಂತೆ ನಾವು ನಡೆದುಕೊಳ್ಳುತ್ತೇವೆ. ಆಗ ನಮಗೆ ಒಳ್ಳೆಯದಾಗುತ್ತದೆ. ಹೌದು, ನಮ್ಮ ದೇವರಾದ ಯೆಹೋವನು ಹೇಳಿದಂತೆಯೇ ನಾವು ನಡೆದುಕೊಳ್ಳುತ್ತೇವೆ” ಎಂದು ಹೇಳಿದರು.


ದಾವೀದನ ಮನೆತನದವರೇ, ಯೆಹೋವನು ಹೀಗೆ ಹೇಳುತ್ತಾನೆ: ನೀವು ಪ್ರತಿದಿನ ನಿಷ್ಪಕ್ಷಪಾತವಾಗಿ ನ್ಯಾಯನಿರ್ಣಯ ಮಾಡಬೇಕು. ಅಪರಾಧಿಗಳಿಂದ ಕಷ್ಟಕ್ಕೊಳಗಾದವರನ್ನು ರಕ್ಷಿಸಬೇಕು. ನೀವು ಹಾಗೆ ಮಾಡದಿದ್ದರೆ ನನಗೆ ಬಹಳ ಕೋಪ ಬರುತ್ತದೆ. ನನ್ನ ಕೋಪವು ಯಾರಿಂದಲೂ ನಂದಿಸಲಾಗದ ಬೆಂಕಿಯಂತಿದೆ. ನೀವು ದುಷ್ಕೃತ್ಯಗಳನ್ನು ಮಾಡಿದ್ದರಿಂದ ಹೀಗಾಗುತ್ತದೆ.’


ಸರಿಯಾದ ಮತ್ತು ನ್ಯಾಯವಾದ ಕಾರ್ಯಗಳನ್ನು ಮಾಡು. ಯೆಹೋವನು ಅವುಗಳನ್ನು ಯಜ್ಞಗಳಿಗಿಂತಲೂ ಹೆಚ್ಚಾಗಿ ಪ್ರೀತಿಸುವನು.


ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ! ನಿನ್ನನ್ನು ಇಸ್ರೇಲಿನ ರಾಜನಾಗಿ ಮಾಡಲು ಆತನು ಸಂತೋಷಪಟ್ಟಿರಬೇಕು. ದೇವರಾದ ಯೆಹೋವನು ಇಸ್ರೇಲನ್ನು ಸದಾ ಪ್ರೀತಿಸುತ್ತಾನೆ. ಆದ್ದರಿಂದಲೇ ಆತನು ನಿನ್ನನ್ನು ರಾಜನನ್ನಾಗಿ ನೇಮಿಸಿದನು. ನೀನು ಕಟ್ಟಳೆಗಳನ್ನು ಅನುಸರಿಸುತ್ತಿರುವೆ ಮತ್ತು ಜನರಿಗೆ ನ್ಯಾಯ ದೊರಕಿಸುತ್ತಿರುವೆ” ಎಂದು ಹೇಳಿದಳು.


ದಾವೀದನು ಸಮಸ್ತ ಇಸ್ರೇಲರನ್ನು ಆಳಿದನು. ದಾವೀದನು ಜನರಿಗೆ ನ್ಯಾಯವಾದ ಮತ್ತು ಸರಿಯಾದ ತೀರ್ಪುಗಳನ್ನು ಕೊಡುತ್ತಿದ್ದನು.


ಆದ್ದರಿಂದ ನೀವು ತಿಂದರೂ ಕುಡಿದರೂ ಏನೇ ಮಾಡಿದರೂ ದೇವರ ಮಹಿಮೆಗಾಗಿ ಅದನ್ನು ಮಾಡಿರಿ.


ಪ್ರತಿದಿನ ದೇವಾಲಯದಲ್ಲಿ ಸೇರಿಬರುತ್ತಿದ್ದರು. ಅವರೆಲ್ಲರ ಉದ್ದೇಶ ಒಂದೇ ಆಗಿತ್ತು. ಅವರು ತಮ್ಮ ಮನೆಗಳಲ್ಲಿ ರೊಟ್ಟಿ ಮುರಿದು ಒಟ್ಟಾಗಿ ಊಟ ಮಾಡುತ್ತಿದ್ದರು. ಅವರ ಹೃದಯಗಳು ಆನಂದದಿಂದ ತುಂಬಿದ್ದವು.


ಆದ್ದರಿಂದ ಪಾತ್ರೆ ಮತ್ತು ಬಟ್ಟಲುಗಳ ಒಳಗಿರುವುದನ್ನು ಬಡವರಿಗೆ ದಾನಮಾಡಿರಿ. ಆಗ ನೀವು ಪೂರ್ಣಶುದ್ಧರಾಗುತ್ತೀರಿ.


ಇದು ಯೆಹೋವನ ಸಂದೇಶ: “ನಾನು ಒಳ್ಳೆಯ ‘ಸಸಿಯನ್ನು’ ಚಿಗುರಿಸುವ ಕಾಲ ಬಂದಿದೆ. ಅವನು ಬುದ್ಧಿವಂತಿಕೆಯಿಂದ ಆಳುವ ರಾಜನಾಗಿರುವನು. ಅವನು ದೇಶದಲ್ಲಿ ನೀತಿ ಮತ್ತು ನ್ಯಾಯಬದ್ಧವಾದದ್ದನ್ನು ಮಾಡುವನು.


ಯೋಷೀಯನ ಮಗನಾದ ಯೆಹೋಯಾಕೀಮನಿಗೆ ಯೆಹೋವನು ಹೀಗೆ ಹೇಳುವನು, “ಯೆಹೂದದ ಜನರು ಯೆಹೋಯಾಕೀಮನಿಗೋಸ್ಕರ ಗೋಳಾಡುವದಿಲ್ಲ. ಅವರು ಒಬ್ಬರಿಗೊಬ್ಬರು, ‘ನನ್ನ ಸೋದರನೇ, ಯೆಹೋಯಾಕೀಮನಿಗೋಸ್ಕರ ನನಗೆ ತುಂಬ ದುಃಖವಾಗಿದೆ, ನನ್ನ ಸೋದರಿಯೇ, ಯೆಹೋಯಾಕೀಮನಿಗೋಸ್ಕರ ನನಗೆ ತುಂಬ ದುಃಖವಾಗಿದೆ’ ಎಂದು ಹೇಳುವದಿಲ್ಲ. ಯೆಹೂದದ ಜನರು ಯೆಹೋಯಾಕೀಮನಿಗೋಸ್ಕರ ಅಳುವದಿಲ್ಲ. ಅವರು ಅವನ ಬಗ್ಗೆ ‘ಒಡೆಯನೇ, ನನ್ನ ರಾಜನೇ, ನನಗೆ ತುಂಬಾ ದುಃಖವಾಗಿದೆ’ ಎಂದು ಹೇಳುವದಿಲ್ಲ.


ಯೆಹೋವನು ಅನ್ನುತ್ತಾನೆ, ನಿಮ್ಮ ಆಚರಣೆ ನೀತಿಬದ್ಧವಾಗಿಯೂ ನ್ಯಾಯಬದ್ಧವಾಗಿಯೂ ಇರಲಿ. ಸುಲಿಗೆಗೀಡಾದವರನ್ನು ದೋಚಿಕೊಂಡವನಿಂದ ರಕ್ಷಿಸಿರಿ. ಅನಾಥರನ್ನು ಮತ್ತು ವಿಧವೆಯರನ್ನು ಹಿಂಸಿಸಬೇಡಿ; ನಿರಪರಾಧಿಗಳನ್ನು ಕೊಲ್ಲಬೇಡಿ.


ಅಂಥವರು ಉನ್ನತವಾದ ಸ್ಥಳದಲ್ಲಿ ಸುರಕ್ಷಿತವಾಗಿ ವಾಸಿಸುವರು. ಎತ್ತರವಾದ ಬಂಡೆಕಲ್ಲಿನ ಕೋಟೆಯೊಳಗೆ ಅವರು ಕಾಪಾಡಲ್ಪಡುವರು. ಅವರ ಬಳಿ ಆಹಾರ ಮತ್ತು ನೀರು ಯಾವಾಗಲೂ ಇರುವದು.


ಆತನ ರಾಜ್ಯದಲ್ಲಿ ಸಮಾಧಾನವೂ ಅಧಿಕಾರವೂ ಇರುತ್ತದೆ. ದಾವೀದನ ಕುಟುಂಬದವನ ರಾಜ್ಯದಲ್ಲಿ ಅವು ಸ್ಥಿರವಾಗಿರುತ್ತವೆ. ಈ ಅರಸನು ನ್ಯಾಯನೀತಿಗಳಿಂದ ನಿತ್ಯಕಾಲಕ್ಕೂ ರಾಜ್ಯವಾಳುವನು. ಸರ್ವಶಕ್ತನಾದ ಯೆಹೋವನಿಗೆ ತನ್ನ ಜನರ ಮೇಲೆ ಬಲವಾದ ಪ್ರೀತಿಯಿದೆ. ಆತನ ಈ ಕಾರ್ಯಗಳನ್ನೆಲ್ಲಾ ಮಾಡಲು ಬಲವಾದ ಪ್ರೀತಿಯೇ ಕಾರಣ.


ಜೀವನದಲ್ಲಿ ಸುಖಪಡಲು ನನಗಿಂತಲೂ ಹೆಚ್ಚಾಗಿ ಯಾರಾದರೂ ಪ್ರಯತ್ನಿಸಿರುವರೇ? ಇಲ್ಲ! ಅನುಭವದಿಂದ ಹೇಳುವುದೇನೆಂದರೆ, ಅನ್ನಪಾನಗಳನ್ನು ತೆಗೆದುಕೊಂಡು ಪ್ರಯಾಸದಲ್ಲಿಯೂ ಸುಖಪಡುವುದಕ್ಕಿಂತ ಬೇರೆ ಯಾವ ಮೇಲೂ ಮನುಷ್ಯನಿಗಿಲ್ಲ. ಇದು ಸಹ ದೇವರಿಂದ ಬಂದ ಭಾಗ್ಯವೆಂದು ಕಂಡುಕೊಂಡೆನು.


ಸತ್ಯವಾದವುಗಳ ಪರವಾಗಿ ನಿಂತುಕೋ. ಜನರಿಗೆಲ್ಲಾ ನ್ಯಾಯವಾದ ತೀರ್ಪನ್ನು ಮಾಡು. ಬಡಜನರ ಮತ್ತು ಕೊರತೆಯಲ್ಲಿರುವವರ ಹಕ್ಕುಗಳನ್ನು ಕಾಪಾಡು.


ರಾಜನು ನಂಬಿಗಸ್ತನಾಗಿಯೂ ಪ್ರೀತಿಯುಳ್ಳವನಾಗಿಯೂ ಇದ್ದರೆ, ಅವನ ಅಧಿಕಾರ ಉಳಿದುಕೊಳ್ಳುವುದು; ಅವನ ಆಡಳಿತ ಮುಂದುವರಿಯುವುದು.


ಯೋಷೀಯನು ಯೆಹೋವನಿಗೆ ಮೆಚ್ಚಿಕೆಯಾದ ಕಾರ್ಯಗಳನ್ನೇ ಮಾಡಿದನು. ಅವನು ತನ್ನ ಪೂರ್ವಿಕನಾದ ದಾವೀದನಂತೆ ದೇವರ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನು. ಅವನು ಒಳ್ಳೆಯ ಕಾರ್ಯಗಳನ್ನು ಮಾಡುವುದನ್ನು ಬಿಟ್ಟುಬಿಡಲಿಲ್ಲ.


ಯೋಷೀಯನ ಗಂಡುಮಕ್ಕಳು ಯಾರೆಂದರೆ: ಮೊದಲನೆಯವನು ಯೋಹಾನಾನ್; ಎರಡನೆಯವನು ಯೆಹೋಯಾಕೀಮ; ಮೂರನೆಯವನು ಚಿದ್ಕೀಯ; ನಾಲ್ಕನೆಯವನು ಶಲ್ಲೂಮ್.


ನಾನು ಈ ಹೊತ್ತು ಕೊಡಲಿರುವ ಆತನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ನೀವು ಪರಿಪಾಲಿಸಬೇಕು. ಆಗ ನಿಮಗೂ ನಿಮ್ಮ ನಂತರ ಜೀವಿಸುವ ನಿಮ್ಮ ಮಕ್ಕಳಿಗೂ ಶುಭವಾಗುವುದು. ದೇವರಾದ ಯೆಹೋವನು ನಿಮಗೆ ಕೊಡಲಿರುವ ದೇಶದಲ್ಲಿ ಶಾಶ್ವತವಾಗಿ ಬಾಳುವಿರಿ!”


ನೀವು ನಿಮ್ಮ ನಡತೆಯನ್ನು ಬದಲಾಯಿಸಿ ಸತ್ಕಾರ್ಯಗಳನ್ನು ಮಾಡಿದರೆ ನಾನು ನಿಮಗೆ ಈ ಸ್ಥಳದಲ್ಲಿ ವಾಸಿಸಲು ಆಸ್ಪದಕೊಡುತ್ತೇನೆ. ನೀವು ಒಬ್ಬರಿಗೊಬ್ಬರು ನ್ಯಾಯವಾದ ರೀತಿಯಲ್ಲಿ ವ್ಯವಹರಿಸಬೇಕು.


ಆದರೆ ಅರಸನಾದ ಯೋಷೀಯನು ಹಿಂದಕ್ಕೆ ಹೋಗಲಿಲ್ಲ. ಅವನು ನೆಕೋನನ್ನು ಎದುರಿಸಲು ನಿರ್ಧರಿಸಿದನು. ತನ್ನ ವೇಷ ಬದಲಾಯಿಸಿ ಯುದ್ಧಕ್ಕೆ ಹೋದನು. ದೇವರ ಅಪ್ಪಣೆಯ ಬಗ್ಗೆ ನೆಕೋ ಹೇಳಿದ್ದನ್ನು ಕೇಳಲು ಯೋಷೀಯನು ನಿರಾಕರಿಸಿ ಮೆಗಿದ್ದೋ ಕಣಿವೆಯಲ್ಲಿ ಯುದ್ಧಕ್ಕೆ ಹೊರಟನು.


ಯೋಷೀಯನು ಅರಸನಾಗಿದ್ದಾಗ ಮಾಡಿದ ಇತರ ಕಾರ್ಯಗಳನ್ನೂ ಅವನ ಆಳ್ವಿಕೆಯ ಪ್ರಾರಂಭದಿಂದ ಕೊನೆಯ ತನಕದ ವಿಷಯಗಳನ್ನೂ ಇಸ್ರೇಲಿನ ಮತ್ತು ಯೆಹೂದದ ಅರಸರ ಗ್ರಂಥದಲ್ಲಿ ಬರೆಯಲಾಗಿದೆ. ದೇವರ ಮೇಲೆ ಯೋಷೀಯನಿಗಿದ್ದ ಭಕ್ತಿಯನ್ನೂ ಅವನು ಯೆಹೋವನಿಗೆ ಹೇಗೆ ವಿಧೇಯನಾಗಿದ್ದನೆಂಬುದನ್ನೂ ಆ ಗ್ರಂಥದಲ್ಲಿ ವಿವರಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು