ಯೆರೆಮೀಯ 22:17 - ಪರಿಶುದ್ದ ಬೈಬಲ್17 “ಯೆಹೋಯಾಕೀಮನೇ, ನಿನಗೆ ಲಾಭದಾಯಕವಾದದ್ದು ಮಾತ್ರ ನಿನ್ನ ಕಣ್ಣಿಗೆ ಕಾಣುತ್ತದೆ. ನೀನು ಯಾವಾಗಲೂ ನಿನಗೆ ಹೆಚ್ಚು ಲಾಭ ಬರುವದನ್ನು ನೋಡುವೆ. ನೀನು ನಿರಪರಾಧಿಗಳನ್ನು ಕೊಲ್ಲಲು ಸಿದ್ಧನಾಗಿರುವೆ. ನೀನು ಬೇರೆಯವರ ವಸ್ತುಗಳನ್ನು ಅಪಹರಿಸಲು ಸಿದ್ಧನಾಗಿರುವೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆದರೆ ನಿರ್ದೋಷಿಗಳ ರಕ್ತವನ್ನು ಸುರಿಸುವುದು, ದೋಚಿಕೊಳ್ಳುವುದು, ಹಿಂಸಿಸುವುದು, ಜಜ್ಜುವುದು, ಇವುಗಳನ್ನು ಮಾಡುವುದರಲ್ಲಿಯೇ ನಿನ್ನ ದೃಷ್ಟಿಯೂ, ನಿನ್ನ ಮನಸ್ಸೂ ನೆಲೆಗೊಂಡಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆದರೆ ನಿನ್ನ ದೃಷ್ಟಿ, ನಿನ್ನ ಮನಸ್ಸು ನೆಲೆಗೊಂಡಿವೆ ದುರ್ಲಾಭದಲ್ಲಿ, ನಿರ್ದೋಷಿಯ ರಕ್ತ ಸುರಿಸುವುದರಲ್ಲಿ ದಬ್ಬಾಳಿಕೆಯಲ್ಲಿ, ಹಿಂಸಾಚಾರಗಳಲ್ಲಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆದರೆ ನಿರ್ದೋಷಿಗಳ ರಕ್ತವನ್ನು ಸುರಿಸುವದು, ದೋಚಿಕೊಳ್ಳುವದು, ಹಿಂಸಿಸುವದು, ಜಜ್ಜುವದು, ಇವುಗಳನ್ನು ಮಾಡುವದರಲ್ಲಿಯೇ ನಿನ್ನ ದೃಷ್ಟಿಯೂ ನಿನ್ನ ಮನಸ್ಸೂ ನೆಲೆಗೊಂಡಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 “ಆದರೆ ನಿನ್ನ ಕಣ್ಣುಗಳು, ನಿನ್ನ ಹೃದಯವು ನಿನ್ನ ದುರ್ಲಾಭದ ಮೇಲೆ ಅಪರಾಧವಿಲ್ಲದವನ ರಕ್ತ ಚೆಲ್ಲುವುದರ ಮೇಲೆ ಮತ್ತು ಪೀಡೆಯನ್ನೂ, ಬಲಾತ್ಕಾರವನ್ನೂ ಮಾಡುವುದರ ಮೇಲೆಯೇ ಹೊರತು, ಮತ್ಯಾವುದರ ಮೇಲೆಯೂ ಇರುವುದಿಲ್ಲ.” ಅಧ್ಯಾಯವನ್ನು ನೋಡಿ |
ನಾವು ಜೆರಿಕೊ ನಗರವನ್ನು ಮತ್ತು ಅದರಲ್ಲಿದ್ದ ಎಲ್ಲ ವಸ್ತುಗಳನ್ನು ಸ್ವಾಧೀನಪಡಿಸಿಕೊಂಡು ಕೊಳ್ಳೆ ಹೊಡೆಯುತ್ತಿದ್ದಾಗ, ಬಾಬಿಲೋನಿನ ಒಂದು ಸುಂದರವಾದ ನಿಲುವಂಗಿಯನ್ನೂ ಸುಮಾರು ಐದು ಪೌಂಡಿನಷ್ಟು ಬೆಳ್ಳಿಯನ್ನೂ ಒಂದು ಪೌಂಡಿಗಿಂತಲೂ ಹೆಚ್ಚು ಬಂಗಾರವನ್ನೂ ಕಂಡೆನು. ಈ ವಸ್ತುಗಳನ್ನು ನನಗಾಗಿ ಇಟ್ಟುಕೊಳ್ಳಬೇಕೆಂದು ತುಂಬ ಆಶೆಯಾಯಿತು. ಅದಕ್ಕಾಗಿ ನಾನು ಅವುಗಳನ್ನು ತೆಗೆದುಕೊಂಡೆ. ಅವುಗಳನ್ನು ನನ್ನ ಗುಡಾರದಲ್ಲಿ ಹುಗಿದಿಟ್ಟಿದ್ದೇನೆ. ಬೆಳ್ಳಿಯು ನಿಲುವಂಗಿಯ ಕೆಳಗಡೆ ಇದೆ” ಎಂದು ಒಪ್ಪಿಕೊಂಡನು.
ಯೆಹೂದದ ಜನರು ನನ್ನ ಅನುಸರಣೆಯನ್ನು ಬಿಟ್ಟಿದ್ದರಿಂದ ನಾನು ಹೀಗೆ ಮಾಡುವೆನು. ಇದನ್ನು ಅವರು ಅನ್ಯದೇವರುಗಳ ಸ್ಥಳವನ್ನಾಗಿ ಮಾಡಿದ್ದಾರೆ. ಯೆಹೂದದ ಜನರು ಈ ಸ್ಥಳದಲ್ಲಿ ಅನ್ಯದೇವರುಗಳಿಗಾಗಿ ಧೂಪವನ್ನು ಹಾಕಿದ್ದಾರೆ. ಬಹಳ ಹಿಂದೆ ಈ ಜನರು ಆ ದೇವರುಗಳನ್ನು ಪೂಜಿಸುತ್ತಿರಲಿಲ್ಲ. ಅವರ ಹಿರಿಯರೂ ಆ ದೇವರುಗಳನ್ನು ಪೂಜಿಸುತ್ತಿರಲಿಲ್ಲ. ಇವುಗಳು ಅನ್ಯದೇಶದ ಹೊಸ ದೇವರುಗಳು. ಯೆಹೂದದ ರಾಜರು ಈ ಸ್ಥಳವನ್ನು ಮುಗ್ಧಮಕ್ಕಳ ರಕ್ತದಿಂದ ತುಂಬಿದರು.