Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 22:18 - ಪರಿಶುದ್ದ ಬೈಬಲ್‌

18 ಯೋಷೀಯನ ಮಗನಾದ ಯೆಹೋಯಾಕೀಮನಿಗೆ ಯೆಹೋವನು ಹೀಗೆ ಹೇಳುವನು, “ಯೆಹೂದದ ಜನರು ಯೆಹೋಯಾಕೀಮನಿಗೋಸ್ಕರ ಗೋಳಾಡುವದಿಲ್ಲ. ಅವರು ಒಬ್ಬರಿಗೊಬ್ಬರು, ‘ನನ್ನ ಸೋದರನೇ, ಯೆಹೋಯಾಕೀಮನಿಗೋಸ್ಕರ ನನಗೆ ತುಂಬ ದುಃಖವಾಗಿದೆ, ನನ್ನ ಸೋದರಿಯೇ, ಯೆಹೋಯಾಕೀಮನಿಗೋಸ್ಕರ ನನಗೆ ತುಂಬ ದುಃಖವಾಗಿದೆ’ ಎಂದು ಹೇಳುವದಿಲ್ಲ. ಯೆಹೂದದ ಜನರು ಯೆಹೋಯಾಕೀಮನಿಗೋಸ್ಕರ ಅಳುವದಿಲ್ಲ. ಅವರು ಅವನ ಬಗ್ಗೆ ‘ಒಡೆಯನೇ, ನನ್ನ ರಾಜನೇ, ನನಗೆ ತುಂಬಾ ದುಃಖವಾಗಿದೆ’ ಎಂದು ಹೇಳುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆದಕಾರಣ ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ವಿಷಯವಾಗಿ ಯೆಹೋವನು. “ಅಯ್ಯೋ ಅಣ್ಣಾ, ಅಯ್ಯೋ ಅಕ್ಕಾ ಎಂದು ಗೋಳಾಡುವಂತೆ ಇವನಿಗಾಗಿ ಯಾರೂ ಗೋಳಾಡುವುದಿಲ್ಲ; ಅಯ್ಯೋ ನಮ್ಮೊಡೆಯಾ, ಅಯ್ಯೋ, ದೊರೆಯ ಮಹಿಮೆಯೇ ಎಂದು ಇವನಿಗಾಗಿ ಯಾರೂ ಪ್ರಲಾಪಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆದಕಾರಣ ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ವಿಷಯವಾಗಿ ಸರ್ವೇಶ್ವರ ಹೀಗೆನ್ನುತ್ತಾರೆ: “ಇವನಿಗಾಗಿ ಯಾರೂ ‘ಅಯ್ಯೋ ಸೋದರಸೋದರಿಯೇ’ ಎಂದು ಗೋಳಾಡರು ‘ಅಯ್ಯೋ ನಮ್ಮೊಡೆಯಾ, ರಾಜಾಧಿರಾಜ’ ಎಂದು ಪ್ರಲಾಪಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆದಕಾರಣ ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ವಿಷಯವಾಗಿ ಯೆಹೋವನು ಹೀಗನ್ನುತ್ತಾನೆ - ಅಯ್ಯೋ, ಅಣ್ಣಾ, ಅಯ್ಯೋ, ಅಕ್ಕಾ ಎಂದು ಗೋಳಾಡುವಂತೆ ಇವನಿಗಾಗಿ ಯಾರೂ ಗೋಳಾಡುವದಿಲ್ಲ; ಅಯ್ಯೋ, ನಮ್ಮೊಡೆಯಾ, ಅಕಟಾ, ದೊರೆಯ ಮಹಿಮೆಯೇ ಎಂದು ಇವನಿಗಾಗಿ ಯಾರೂ ಪ್ರಲಾಪಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆದ್ದರಿಂದ ಯೋಷೀಯನ ಮಗ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಯೆಹೋವ ದೇವರು ಹೀಗೆ ಹೇಳುತ್ತಾರೆ: “ಅವರು ಅವನನ್ನು ಕುರಿತು ಗೋಳಾಡಿ, ‘ಅಯ್ಯೋ, ನನ್ನ ಸಹೋದರನೇ, ಅಯ್ಯೋ, ನನ್ನ ಸಹೋದರಿಯೇ,’ ಎಂದು ಅನ್ನುವುದಿಲ್ಲ. ‘ಅಯ್ಯೋ, ದೊರೆಯೇ, ಅಯ್ಯೋ, ಅವನ ವೈಭವವೇ,’ ಎಂದು ಅವನನ್ನು ಕುರಿತು ಗೋಳಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 22:18
17 ತಿಳಿವುಗಳ ಹೋಲಿಕೆ  

“ಯೆಹೂದದ ಪ್ರಮುಖರು ಮತ್ತು ಜನಸಾಮಾನ್ಯರು ಸತ್ತುಹೋಗುವರು. ಯಾರೂ ಅವರನ್ನು ಹೂಳುವದಿಲ್ಲ. ಅವರಿಗೋಸ್ಕರ ಗೋಳಾಡುವದಿಲ್ಲ. ಅವರ ಬಗ್ಗೆ ದುಃಖ ಸೂಚಿಸಲು ಯಾರೂ ತಮಗೆ ಗಾಯಗಳನ್ನು ಮಾಡಿಕೊಳ್ಳುವದಿಲ್ಲ; ತಮ್ಮ ತಲೆಗಳನ್ನು ಬೋಳಿಸಿಕೊಳ್ಳುವದಿಲ್ಲ.


ಪ್ರವಾದಿಯು ತನ್ನ ಕುಟುಂಬದ ಸ್ಮಶಾನದಲ್ಲಿ ಆ ಮನುಷ್ಯನ ದೇಹವನ್ನು ಸಮಾಧಿ ಮಾಡಿದನು. ಪ್ರವಾದಿಯು ಅವನಿಗಾಗಿ ಗೋಳಾಡುತ್ತಾ, “ಅಯ್ಯೋ, ನನ್ನ ಸೋದರನೇ!” ಎಂದು ಹೇಳಿದನು.


ಸತ್ತ ರಾಜನ ಬಗ್ಗೆ ಅಳಬೇಡಿ. ಅವನಿಗೋಸ್ಕರ ಅಳಬೇಡಿ. ಆದರೆ ಇಲ್ಲಿಂದ ಹೋಗುತ್ತಿರುವ ರಾಜನ ಬಗ್ಗೆ ಗಟ್ಟಿಯಾಗಿ ರೋಧಿಸಿರಿ. ಅವನು ಮತ್ತೆ ಇಲ್ಲಿಗೆ ಬರುವದಿಲ್ಲ. ಆದ್ದರಿಂದ ಅವನಿಗೋಸ್ಕರ ರೋಧಿಸಿರಿ. ಯೋಹಾಜನು ತನ್ನ ಜನ್ಮಭೂಮಿಯನ್ನು ಮತ್ತೆಂದಿಗೂ ನೋಡುವುದಿಲ್ಲ.


“ಅವರು ಒಂದು ಭಯಾನಕವಾದ ರೀತಿಯಲ್ಲಿ ಮರಣಹೊಂದುತ್ತಾರೆ. ಅವರನ್ನು ಯಾರೂ ಹೂಳುವುದಿಲ್ಲ. ಅವರ ದೇಹಗಳು ಭೂಮಿಯ ಮೇಲೆ ಗೊಬ್ಬರದಂತೆ ಬಿದ್ದಿರುತ್ತವೆ. ಅವರು ವೈರಿಗಳ ಖಡ್ಗಗಳಿಂದ ಮಡಿಯುವರು. ಅವರು ಅನ್ನವಿಲ್ಲದೆ ಸಾಯುವರು. ಅವರ ಶವಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೇಲಿನ ಕಾಡುಪ್ರಾಣಿಗಳಿಗೂ ಆಹಾರವಾಗುವವು.”


ನೀನು ಸಮಾಧಾನದಿಂದ ಸಾಯುವೆ. ನೀನು ರಾಜನಾಗುವ ಮುನ್ನ ಆಳಿದ ನಿನ್ನ ಪೂರ್ವಿಕರಿಗೆ ಗೌರವ ತೋರುವದಕ್ಕಾಗಿ ಜನರು ಶವಸಂಸ್ಕಾರದ ಧೂಪವನ್ನು ಹಾಕಿದ್ದರು. ಹಾಗೆಯೇ ನಿನ್ನನ್ನು ಗೌರವಿಸಲು ಜನರು ಶವಸಂಸ್ಕಾರದ ಧೂಪವನ್ನು ಹಾಕುವರು. ಅವರು ನಿನಗೋಸ್ಕರ ಅಳುವರು. ಅವರು ದುಃಖದಿಂದ, “ಅಯ್ಯೋ, ಯೆಹೋವನೇ” ಎಂದು ಗೋಳಾಡುವರು. ಸ್ವತಃ ನಾನೇ ನಿನಗೆ ಈ ವಾಗ್ದಾನವನ್ನು ಮಾಡುತ್ತಿದ್ದೇನೆ.’” ಇದು ಯೆಹೋವನ ನುಡಿ.


ಯೆರೆಮೀಯನು ಅವನ ಬಗ್ಗೆ ಶೋಕಗೀತೆಗಳನ್ನು ರಚಿಸಿ ಹಾಡಿದನು. ಆ ಗೀತೆಗಳನ್ನು ಗಂಡಸರು ಹೆಂಗಸರು ಈಗಲೂ ಹಾಡುತ್ತಾರೆ. ಯೋಷೀಯನ ಕುರಿತು ದುಃಖದ ಹಾಡನ್ನು ಹಾಡುವದು ಅವರಿಗೆ ರೂಢಿಯಾಗಿದೆ. ಆ ಗೀತೆಗಳನ್ನು ಮರಣದ ಹಾಡಿನ ಪುಸ್ತಕದಲ್ಲಿ ಬರೆಯಲಾಗಿದೆ.


ನನ್ನ ಸೋದರನಾದ ಯೋನಾತಾನನೇ, ನಿನಗಾಗಿ ನಾನು ದುಃಖಿಸುವೆ! ನಿನ್ನ ಗೆಳೆತನವು ನನಗೆ ಉಲ್ಲಾಸದಾಯಕವಾಗಿತ್ತು. ನನ್ನ ಮೇಲಿನ ನಿನ್ನ ಪ್ರೀತಿಯು ಸ್ತ್ರೀಯರ ಪ್ರೀತಿಗಿಂತಲೂ ಅತಿಶಯವಾಗಿತ್ತು.


ಯೋಷೀಯನು ಅಶೇರಸ್ತಂಭವನ್ನು ದೇವಾಲಯದಿಂದ ತೆಗೆದುಹಾಕಿದನು. ಅವನು ಅಶೇರಸ್ತಂಭವನ್ನು ನಗರದ ಹೊರವಲಯದ ಕಿದ್ರೋನ್ ಕಣಿವೆಗೆ ತೆಗೆದುಕೊಂಡು ಹೋಗಿ ಅದನ್ನು ಅಲ್ಲಿ ಸುಟ್ಟುಹಾಕಿದನು. ನಂತರ ಅವನು ಅದನ್ನು ಪುಡಿಪುಡಿ ಮಾಡಿಸಿ ಧೂಳಿನಲ್ಲಿ ಬೆರಸಿ ಸಾಮಾನ್ಯ ಜನರ ಸ್ಮಶಾನದಲ್ಲಿ ಆ ಧೂಳನ್ನು ಚೆಲ್ಲಿದನು.


ಯೆಹೋಯಾಕೀಮನು ರಾಜನಾದಾಗ ಅವನಿಗೆ ಇಪ್ಪತ್ತೈದು ವರ್ಷ ವಯಸ್ಸಾಗಿತ್ತು. ಅವನು ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನ ತಾಯಿಯ ಹೆಸರು ಜೆಬೂದಾ. ಆಕೆಯು ರೂಮದ ಪೆದಾಯನ ಮಗಳು.


ಯೆಹೋಯಾಕೀಮನು ತೀರಿಕೊಂಡಾಗ ಅವನನ್ನು ಅವನ ಪೂರ್ವಿಕರ ಜೊತೆಯಲ್ಲಿ ಸಮಾಧಿಮಾಡಿದರು. ಯೆಹೋಯಾಕೀಮನ ಮಗನಾದ ಯೆಹೋಯಾಖೀನನು ಅವನ ನಂತರ ಹೊಸ ರಾಜನಾದನು.


ಯೆಹೋಯಾಕೀಮನು ಯೆಹೂದ ದೇಶದ ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷ ಪ್ರಾಯದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಯೆಹೋಯಾಕೀಮನು ಯೆಹೋವನ ಚಿತ್ತಕ್ಕೆ ಒಳಗಾಗಲಿಲ್ಲ. ಅವನು ತನ್ನ ದೇವರಾದ ಯೆಹೋವನ ವಿರುದ್ಧವಾಗಿ ಪಾಪಮಾಡಿದನು.


ಈಜಿಪ್ಟಿನವರು ಅವನನ್ನು ತೆಗೆದುಕೊಂಡು ಹೋದ ಸ್ಥಳದಲ್ಲಿಯೇ ಸತ್ತುಹೋಗುವನು. ಅವನು ಮತ್ತೊಮ್ಮೆ ಈ ಪ್ರದೇಶವನ್ನು ನೋಡಲಾರನು.”


ಯೋಷೀಯನ ಗಂಡುಮಕ್ಕಳು ಯಾರೆಂದರೆ: ಮೊದಲನೆಯವನು ಯೋಹಾನಾನ್; ಎರಡನೆಯವನು ಯೆಹೋಯಾಕೀಮ; ಮೂರನೆಯವನು ಚಿದ್ಕೀಯ; ನಾಲ್ಕನೆಯವನು ಶಲ್ಲೂಮ್.


“ಯೆಹೂದದ ರಾಜಮನೆತನದವರಿಗೆ ಈ ವಿಷಯಗಳನ್ನು ತಿಳಿಸಿರಿ: ‘ಯೆಹೋವನ ಸಂದೇಶವನ್ನು ಕೇಳಿರಿ.


ಇಗೋ ಯೆಹೂದದ ರಾಜನಾದ ಯೆಹೋಯಾಕೀಮನ ಬಗ್ಗೆ ಯೆಹೋವನು ಹೀಗೆ ಹೇಳುತ್ತಾನೆ: ಯೆಹೋಯಾಕೀಮನ ಸಂತಾನದವರು ದಾವೀದನ ಸಿಂಹಾಸನದ ಮೇಲೆ ಕುಳಿತುಕೊಳ್ಳಲಾಗದು. ಯೆಹೋಯಾಕೀಮನು ಸತ್ತರೆ ರಾಜ ಮರ್ಯಾದೆಯಿಂದ ಅವನ ಶವಸಂಸ್ಕಾರ ಮಾಡಲಾಗುವದಿಲ್ಲ. ಅವನ ಶವವನ್ನು ನೆಲದ ಮೇಲೆ ಎಸೆಯಲಾಗುವುದು. ಅವನ ಶವ ಹಗಲಿನ ತಾಪದಲ್ಲಿ ಮತ್ತು ರಾತ್ರಿಯ ಚಳಿಯಲ್ಲಿ ಹೊರಗೆ ಬಿದ್ದಿರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು