ಯೆರೆಮೀಯ 22:20 - ಪರಿಶುದ್ದ ಬೈಬಲ್20 “ಯೆಹೂದವೇ, ಲೆಬನೋನ್ ಪರ್ವತವನ್ನು ಹತ್ತಿ ಕೂಗಿಕೊ, ನಿನ್ನ ಧ್ವನಿಯು ಬಾಷಾನ್ ಪರ್ವತಗಳಲ್ಲಿ ಕೇಳಿಸಲಿ. ಅಬಾರೀಮಿನಲ್ಲಿ ಅರಚಿಕೊ; ಏಕೆಂದರೆ ನಿನ್ನ ‘ಪ್ರಿಯತಮರೆಲ್ಲರನ್ನೂ’ ನಾಶಮಾಡಲಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಚೀಯೋನ್ ಯುವತಿಯೇ, ಲೆಬನೋನ್ ಪರ್ವತವನ್ನು ಹತ್ತಿ ಕೂಗಿಕೋ! ಬಾಷಾನಿನಲ್ಲಿ ಮೊರೆಯಿಡು, ಅಬಾರೀಮಿನಲ್ಲಿ ಅರಚಿಕೋ! ನಿನ್ನೊಂದಿಗೆ ವ್ಯಭಿಚಾರ ಮಾಡಿದವರೆಲ್ಲಾ ಹಾಳಾಗಿ ಹೋದರಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 “ಲೆಬನೋನ್ ಬೆಟ್ಟವನ್ನು ಹತ್ತಿ ಬೊಬ್ಬೆಯಿಡು ! ಬಾಷಾನಿನಲ್ಲಿ ಮೊರೆಯಿಡು ! ಅಬಾರೀಮಿನಲ್ಲಿ ಕಿರುಚಾಡು ! ಏಕೆಂದರೆ ನಿನ್ನ ಮಿಂಡರೆಲ್ಲ ಹಾಳಾಗಿಹೋದರು ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 [ಚೀಯೋನ್ ಯುವತಿಯೇ,] ಲೆಬನೋನ್ ಪರ್ವತವನ್ನು ಹತ್ತಿ ಕೂಗಿಕೋ! ಬಾಷಾನಿನಲ್ಲಿ ಮೊರೆಯಿಡು, ಅಬಾರೀವಿುನಲ್ಲಿ ಅರಚಿಕೋ! ನಿನ್ನ ವಿುಂಡರೆಲ್ಲಾ ಹಾಳಾಗಿ ಹೋದರಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 “ಲೆಬನೋನಿಗೆ ಹೋಗಿ ಕೂಗು, ಬಾಷಾನಿನಲ್ಲಿ ನಿನ್ನ ಸ್ವರವನ್ನೆತ್ತು, ಅಬಾರೀಮಿನಲ್ಲಿ ಮೊರೆಯಿಡು; ಏಕೆಂದರೆ ನಿನ್ನ ಜೊತೆಗಾರರು ನಾಶವಾಗಿದ್ದಾರೆ. ಅಧ್ಯಾಯವನ್ನು ನೋಡಿ |
ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.
ಹಾಳಾಗಿಹೋದ ಯೆಹೂದವೇ, ನೀನು ಮಾಡುತ್ತಿರುವುದೇನು? ಅತ್ಯುತ್ತಮವಾದ ಕೆಂಪುಬಣ್ಣದ ಪೋಷಾಕನ್ನು ನೀನು ಧರಿಸಿಕೊಳ್ಳುತ್ತಿರುವುದೇಕೆ? ಸುವರ್ಣಾಭರಣಗಳಿಂದ ನಿನ್ನನ್ನು ಏಕೆ ಅಲಂಕರಿಸಿಕೊಳ್ಳುತ್ತಿರುವೆ? ಕಣ್ಣಿಗೆ ಕಾಡಿಗೆಯನ್ನು ಏಕೆ ಹಚ್ಚುತ್ತಿರುವೆ? ನೀನು ಅಲಂಕಾರ ಮಾಡಿಕೊಳ್ಳುವದೆಲ್ಲ ವ್ಯರ್ಥ. ನಿನ್ನ ಪ್ರಿಯತಮರು ನಿನ್ನನ್ನು ತಿರಸ್ಕರಿಸುತ್ತಾರೆ. ಅವರು ನಿನ್ನನ್ನು ಕೊಲೆಮಾಡುವ ಪ್ರಯತ್ನದಲ್ಲಿದ್ದಾರೆ.
ನಿಮಗೆ ಸಹಾಯದ ಅವಶ್ಯಕತೆ ಬಂದಾಗ ನೀವು ಆ ಸುಳ್ಳುದೇವರುಗಳನ್ನು ಕರೆಯುವಿರಿ. ಅವುಗಳನ್ನು ನಿಮ್ಮ ಸುತ್ತಲೂ ಸೇರಿಸಿಕೊಂಡಿರುವಿರಿ. ಆದರೆ ನಾನು ಹೇಳುವುದೇನೆಂದರೆ, ಗಾಳಿಯು ಅವುಗಳನ್ನು ಬಡಿದುಕೊಂಡು ಹೋಗುವುದು. ಅವುಗಳನ್ನೆಲ್ಲ ಉಸಿರಿನ ಗಾಳಿಯು ನಿಮ್ಮಿಂದ ದೂರಕ್ಕೆ ಕೊಂಡೊಯ್ಯುವುದು. ಆದರೆ ನನ್ನನ್ನು ಅವಲಂಬಿಸಿರುವವರು ಭೂಮಿಯನ್ನು ಪಡೆದುಕೊಳ್ಳುವರು. ನನ್ನ ಪವಿತ್ರ ಪರ್ವತವನ್ನು ಬಾಧ್ಯವಾಗಿ ಹೊಂದಿಕೊಳ್ಳುವರು.”
ಯೆಹೋವನು ಹೀಗೆ ನುಡಿದನು: “ಒಬ್ಬನು ತನ್ನ ಹೆಂಡತಿಯೊಂದಿಗೆ ವಿವಾಹವಿಚ್ಛೇದನ ಮಾಡಿಕೊಂಡ ಮೇಲೆ ಅವಳು ಮತ್ತೊಬ್ಬನನ್ನು ಮದುವೆಯಾದರೆ ಆ ಮೊದಲನೆಯ ಗಂಡನು ಪುನಃ ಅವಳಲ್ಲಿಗೆ ಬರಲು ಸಾಧ್ಯವೇ? ಇಲ್ಲ. ಆ ಮನುಷ್ಯನು ಪುನಃ ಆ ಸ್ತ್ರೀಯಲ್ಲಿಗೆ ಹೋದರೆ ಆ ದೇಶವು ಪರಿಪೂರ್ಣವಾಗಿ ಅಪವಿತ್ರವಾಗುತ್ತದೆ. ಯೆಹೂದವೇ, ನೀನು ಬಹು ಜನರೊಂದಿಗೆ ಕಾಮದಾಟವಾಡಿದ ವೇಶ್ಯಾ ಸ್ತ್ರೀಯಂತೆ ವರ್ತಿಸಿದೆ. ಈಗ ನೀನು ಪುನಃ ನನ್ನಲ್ಲಿಗೆ ಬರಲು ಇಚ್ಛಿಸುವಿಯಾ?” ಇದು ಯೆಹೋವನ ನುಡಿ.