ಯೆರೆಮೀಯ 22:21 - ಪರಿಶುದ್ದ ಬೈಬಲ್21 “ಯೆಹೂದವೇ, ನೀನು ಸುರಕ್ಷಿತಳಾಗಿರುವೆ ಎಂದು ನೀನು ಭಾವಿಸಿಕೊಂಡಿರುವೆ. ಆದರೆ ನಾನು ನಿನಗೆ ಎಚ್ಚರಿಕೆಯನ್ನು ಕೊಟ್ಟೆ. ಹೌದು, ನಾನೇ ಎಚ್ಚರಿಕೆಯನ್ನು ಕೊಟ್ಟೆ, ಆದರೆ ನೀನು ಅದನ್ನು ಕಿವಿಗೆ ಹಾಕಿಕೊಳ್ಳಲು ಒಪ್ಪಲಿಲ್ಲ. ನಿನ್ನ ಬಾಲ್ಯದಿಂದಲೂ ನೀನು ಹೀಗೆಯೇ ಮಾಡಿದೆ. ಯೆಹೂದವೇ, ನಿನ್ನ ಬಾಲ್ಯದಿಂದಲೂ ನೀನು ನನ್ನ ಆಜ್ಞೆಯನ್ನು ಪಾಲಿಸಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನಾನು ನೆಮ್ಮದಿಯಲ್ಲಿ ನಿನ್ನೊಡನೆ ಮಾತನಾಡಿದಾಗ “ನಾನು ಕೇಳುವುದಿಲ್ಲ” ಎಂದು ನೀನು ಹೇಳಿದಿ. ನನ್ನ ಮಾತನ್ನು ಕೇಳದಿರುವುದು ನಿನಗೆ ಬಾಲ್ಯದಿಂದಲೇ ಅಭ್ಯಾಸ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ನೀನು ನೆಮ್ಮದಿಯಾಗಿದ್ದ ಕಾಲದಲ್ಲಿ ನಿನ್ನೊಡನೆ ಮಾತಾಡಿದೆ ಆದರೆ ನೀನು, “ಕೇಳಲೊಲ್ಲೆ” ಎಂದು ಹೇಳಿಬಿಟ್ಟೆ. ನನ್ನ ಮಾತಿಗೆ ಕಿವಿಗೊಡದಿರುವುದು ನಿನಗೆ ಬಾಲ್ಯದಿಂದಲೆ ವಾಡಿಕೆ ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನಾನು ನಿನ್ನ ನೆಮ್ಮದಿಯಲ್ಲಿ ನಿನ್ನೊಡನೆ ಮಾತಾಡಿದಾಗ ಕೇಳಲೊಲ್ಲೆನು ಎಂದು ನೀನು ಹೇಳಿದಿ. ನನ್ನ ಮಾತನ್ನು ಕೇಳದಿರುವದು ನಿನಗೆ ಬಾಲ್ಯದಿಂದಲೇ ಅಭ್ಯಾಸ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನಿನ್ನ ಏಳಿಗೆಗೆ ನಿನ್ನ ಸಂಗಡ ಮಾತನಾಡಿದೆನು. ಆದರೆ ನೀನು, ‘ನಾನು ಕೇಳುವುದಿಲ್ಲ,’ ಎಂದೆ. ನನ್ನ ಮಾತಿಗೆ ಕಿವಿಗೊಡದೆ ಇರುವುದೇ ನಿನ್ನ ಯೌವನದ ರೀತಿಯಾಗಿದೆ. ಅಧ್ಯಾಯವನ್ನು ನೋಡಿ |
ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಇಸ್ರೇಲಿಗೆ ಮತ್ತು ಯೆಹೂದಕ್ಕೆ ಕಳುಹಿಸಿಕೊಟ್ಟೆ. ನಾನು ಅವರನ್ನು ನಿಮ್ಮಲ್ಲಿಗೆ ಪುನಃಪುನಃ ಕಳುಹಿಸಿಕೊಟ್ಟೆ. ಆ ಪ್ರವಾದಿಗಳು, “ಇಸ್ರೇಲಿನ ಮತ್ತು ಯೆಹೂದದ ಪ್ರತಿಯೊಬ್ಬರೂ ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಬೇಕು. ನೀವು ಒಳ್ಳೆಯವರಾಗಿರಬೇಕು. ಬೇರೆ ದೇವರುಗಳನ್ನು ಅನುಸರಿಸಬಾರದು. ಅವುಗಳನ್ನು ಪೂಜಿಸಬಾರದು. ಅವುಗಳ ಸೇವೆಮಾಡಬಾರದು ಎಂದು ಹೇಳಿದರು. ನನ್ನ ಆಜ್ಞೆಯನ್ನು ಪಾಲಿಸಿದರೆ ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಕೊಟ್ಟ ಪ್ರದೇಶದಲ್ಲಿ ನೀವು ವಾಸಿಸಬಹುದು” ಎಂದು ಹೇಳಿದ್ದೆ. ಆದರೆ ನೀವು ನನ್ನ ಸಂದೇಶದ ಕಡೆಗೆ ಗಮನ ಕೊಡಲಿಲ್ಲ.
“‘ಆದರೆ ಅವರ ಮಕ್ಕಳು ನನಗೆ ವಿರುದ್ಧವಾಗಿ ದಂಗೆ ಎದ್ದರು. ಅವರು ನನ್ನ ಕಟ್ಟಳೆಗಳನ್ನು ಅನುಸರಿಸಲಿಲ್ಲ. ಅವರು ನನ್ನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ. ನಾನು ಹೇಳಿದ್ದನ್ನು ಅವರು ಮಾಡಲಿಲ್ಲ. ಅವು ಒಳ್ಳೆಯ ಕಟ್ಟಳೆಗಳಾಗಿದ್ದವು. ಅವುಗಳಿಗೆ ವಿಧೇಯರಾಗುವವರು ಜೀವಿಸುವರು. ಅವರು ನನ್ನ ಸಬ್ಬತ್ ದಿವಸಗಳನ್ನು ಆಚರಿಸಲಿಲ್ಲ. ಆದ್ದರಿಂದ ಮರುಭೂಮಿಯಲ್ಲಿ ಅವರನ್ನು ಸಂಪೂರ್ಣವಾಗಿ ನಿರ್ಮೂಲ ಮಾಡಲು ನಿರ್ಧರಿಸಿದೆನು. ನನ್ನ ಕೋಪದ ತೀಕ್ಷ್ಣತೆಯನ್ನು ಅವರು ತಿಳಿದುಕೊಳ್ಳಬೇಕೆಂದು ತೀರ್ಮಾನಿಸಿದೆನು.
“‘ಆದರೆ ಇಸ್ರೇಲ್ ಜನರು ಅಡವಿಯಲ್ಲಿರುವಾಗ ನನಗೆ ವಿರುದ್ಧವಾಗಿ ತಿರುಗಿಬಿದ್ದರು. ನನ್ನ ಆಜ್ಞೆಗಳನ್ನು ಅವರು ಅನುಸರಿಸಲಿಲ್ಲ. ನನ್ನ ನಿಯಮಗಳಿಗೆ ವಿಧೇಯರಾಗಲು ನಿರಾಕರಿಸಿದರು. ಆ ಆಜ್ಞೆಗಳೆಲ್ಲಾ ನ್ಯಾಯವಾದವುಗಳೇ. ಒಬ್ಬನು ಆ ಆಜ್ಞೆಗಳಿಗೆ ವಿಧೇಯನಾದರೆ ಅವನು ಬಾಳುವನು. ನಾನು ನೇಮಿಸಿದ ಸಬ್ಬತ್ ದಿವಸಗಳನ್ನು ವಿಶೇಷವಾಗಿ ಅಲಕ್ಷ್ಯ ಮಾಡಿದರು. ಆ ದಿವಸಗಳಲ್ಲಿ ಅವರು ಎಷ್ಟೋ ಸಾರಿ ಕೆಲಸ ಮಾಡಿದರು. ನನ್ನ ರೌದ್ರದ ತೀವ್ರತೆಯನ್ನು ಅವರು ಅರಿತುಕೊಳ್ಳಲೆಂದು ನಾನು ಅವರನ್ನು ಅಡವಿಯಲ್ಲಿ ದಂಡಿಸಿ ನಾಶಮಾಡಲು ಆಲೋಚಿಸಿಕೊಂಡೆನು.
ಈ ಪೀಳಿಗೆಯ ಜನರೇ, ಯೆಹೋವನ ಸಂದೇಶದ ಕಡೆಗೆ ಗಮನ ಕೊಡಿ, “ಇಸ್ರೇಲಿನ ಜನರಿಗೆ ನಾನು ಮರಳುಗಾಡಿನಂತೆ ಇರುವೆನೇ? ನಾನು ಗಾಢಾಂಧಕಾರಮಯವಾದ ಮತ್ತು ಅಪಾಯಕಾರಿಯಾದ ಭೂಮಿಯಂತೆ ಇರುವೆನೇ? ನನ್ನ ಜನರು, ‘ನಮಗೆ ಇಷ್ಟವಾದ ಮಾರ್ಗವನ್ನು ಅನುಸರಿಸಲು ನಾವು ಸ್ವತಂತ್ರರಾಗಿದ್ದೇವೆ. ಯೆಹೋವನೇ, ನಾವು ಪುನಃ ನಿನ್ನಲ್ಲಿಗೆ ಬರುವದಿಲ್ಲ’ ಎಂದು ಹೇಳುತ್ತಾರೆ. ಅವರು ಹಾಗೆ ಏಕೆ ಹೇಳುತ್ತಾರೆ?
ಇದನ್ನು ತಿಳಿಸುವುದಕ್ಕಾಗಿಯೇ ದೇವರು ಹಿಂದಿನ ಕಾಲದಲ್ಲಿ ಪ್ರವಾದಿಗಳನ್ನು ಉಪಯೋಗಿಸಿದ್ದನು. ಜೆರುಸಲೇಮ್ ಜನಭರಿತವಾದ ಪಟ್ಟಣವಾಗಿದ್ದಾಗ ದೇವರು ಇದನ್ನು ಜನರಿಗೆ ತಿಳಿಸಿದ್ದನು. ಜೆರುಸಲೇಮಿನ ಸುತ್ತಮುತ್ತ ಇರುವ ಪಟ್ಟಣಗಳಲ್ಲಿ ಜನರು ವಾಸಿಸುತ್ತಿದ್ದ ಸಮಯದಲ್ಲಿ ದೇವರು ಇದನ್ನು ತಿಳಿಸಿದ್ದನು. ನೆಗೆವ್‌ನಲ್ಲಿಯೂ ಪಶ್ಚಿಮದ ಪರ್ವತಗಳ ಬುಡದಲ್ಲಿಯೂ ದೇವರು ಇದನ್ನು ಜನರಿಗೆ ತಿಳಿಸಿದ್ದನು.”