ಯೆರೆಮೀಯ 22:24 - ಪರಿಶುದ್ದ ಬೈಬಲ್24 ಯೆಹೋವನು ಹೀಗೆನ್ನುತ್ತಾನೆ: “ಯೆಹೋಯಾಕೀಮನ ಮಗನೂ ಯೆಹೂದದ ರಾಜನೂ ಆಗಿರುವ ಯೆಹೋಯಾಚೀನನೇ, ನನ್ನ ಜೀವದಾಣೆಯಾಗಿಯೂ ನಿನಗೆ ಹೀಗೆ ಮಾಡುವೆನು. ನೀನು ನನ್ನ ಬಲಗೈಯ ಮುದ್ರೆಯುಂಗುರವಾಗಿದ್ದರೂ ನಾನು ನಿನ್ನನ್ನು ಅಲ್ಲಿಂದ ಕಿತ್ತುಹಾಕುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಯೆಹೋವನು ಹೀಗೆನ್ನುತ್ತಾನೆ, “ನನ್ನ ಜೀವದಾಣೆ, ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಕೊನ್ಯನೆಂಬ ನೀನು ನನ್ನ ಬಲಗೈಯ ಮುದ್ರೆಯುಂಗರವಾಗಿದ್ದರೂ ನಾನು ನಿನ್ನನ್ನು ಅಲ್ಲಿಂದ ಕಿತ್ತುಹಾಕುತ್ತಿದ್ದೆನು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಸರ್ವೇಶ್ವರನ ಮಾತಿದು - “ನನ್ನ ಜೀವದಾಣೆ, ಯೆಹೋಯಾಕೀಮನ ಮಗನೂ ಜುದೇಯದ ಅರಸನೂ ಆದ ಕೊನ್ಯನೇ, ನೀನು ನನ್ನ ಬಲಗೈ ಮುದ್ರೆಯುಂಗುರವಾಗಿದ್ದರೂ ನಾನು ನಿನ್ನನ್ನು ಅಲ್ಲಿಂದ ಕಿತ್ತುಹಾಕುತ್ತಿದ್ದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಯೆಹೋವನು ಹೀಗನ್ನುತ್ತಾನೆ - ನನ್ನ ಜೀವದಾಣೆ, ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಕೊನ್ಯನೆಂಬ ನೀನು ನನ್ನ ಬಲಗೈಯ ಮುದ್ರೆಯುಂಗುರವಾಗಿದ್ದರೂ ನಾನು ನಿನ್ನನ್ನು ಅಲ್ಲಿಂದ ಕಿತ್ತು ಹಾಕುತ್ತಿದ್ದೆನು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 “ನನ್ನ ಜೀವದಾಣೆ, ಯೆಹೋಯಾಕೀಮನ ಮಗ ಯೆಹೂದದ ಅರಸನಾದ ಕೊನ್ಯನು ನನ್ನ ಬಲಗೈಯ ಮುದ್ರೆ ಉಂಗುರವಾಗಿದ್ದರೂ, ನಿನ್ನನ್ನು ಅಲ್ಲಿಂದ ಕಿತ್ತುಹಾಕಿ, ಅಧ್ಯಾಯವನ್ನು ನೋಡಿ |
ಯೆಹೋವನು ನನಗೆ ಈ ವಸ್ತುಗಳನ್ನು ತೋರಿಸಿದನು: ಯೆಹೋವನು ಪವಿತ್ರಾಲಯದ ಎದುರುಗಡೆಯಲ್ಲಿ ಅಂಜೂರದ ಎರಡು ಬುಟ್ಟಿಗಳನ್ನು ಜೋಡಿಸಿಟ್ಟಿದ್ದು ನನಗೆ ಕಂಡುಬಂತು. (ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಕೊನ್ಯನನ್ನು ಸೆರೆಹಿಡಿದ ಮೇಲೆ ನಾನು ಈ ದರ್ಶನವನ್ನು ಕಂಡೆ. ಯೆಕೊನ್ಯನು ರಾಜನಾದ ಯೆಹೋಯಾಕೀಮನ ಮಗ. ಯೆಕೊನ್ಯನನ್ನು ಮತ್ತು ಅವನ ಪ್ರಮುಖ ಅಧಿಕಾರಿಗಳನ್ನು ಜೆರುಸಲೇಮಿನಿಂದ ಬಾಬಿಲೋನಿಗೆ ತೆಗೆದುಕೊಂಡು ಹೋಗಲಾಯಿತು. ನೆಬೂಕದ್ನೆಚ್ಚರನು ಯೆಹೂದದ ಎಲ್ಲಾ ಬಡಗಿಗಳನ್ನು ಮತ್ತು ಕಮ್ಮಾರರನ್ನು ತೆಗೆದುಕೊಂಡು ಹೋಗಿದ್ದನು.)