“‘ಇದಾದ ಮೇಲೆ ನಾನು ಯೆಹೂದದ ರಾಜನಾದ ಚಿದ್ಕೀಯನನ್ನು ಮತ್ತು ಅಧಿಪತಿಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸುತ್ತೇನೆ. ಜೆರುಸಲೇಮಿನ ಕೆಲವು ಜನರು ಭಯಂಕರವಾದ ರೋಗದಿಂದ ಸಾಯುವುದಿಲ್ಲ; ಕೆಲವು ಜನರು ಖಡ್ಗಗಳಿಗೆ ಆಹುತಿಯಾಗುವದಿಲ್ಲ; ಕೆಲವರು ಹಸಿವಿನಿಂದ ಸಾಯುವುದಿಲ್ಲ. ಅಂಥವರನ್ನು ನಾನು ನೆಬೂಕದ್ನೆಚ್ಚರನಿಗೆ ಕೊಡುತ್ತೇನೆ. ಯೆಹೂದದ ವೈರಿಯು ಗೆಲ್ಲುವಂತೆ ನಾನು ಮಾಡುತ್ತೇನೆ. ನೆಬೂಕದ್ನೆಚ್ಚರನ ಸೈನಿಕರು ಯೆಹೂದ್ಯರನ್ನು ಕೊಲ್ಲಬಯಸುತ್ತಾರೆ. ಆದ್ದರಿಂದ ಯೆಹೂದ ಮತ್ತು ಜೆರುಸಲೇಮಿನ ಜನರು ಖಡ್ಗಗಳಿಗೆ ಬಲಿಯಾಗುವರು. ನೆಬೂಕದ್ನೆಚ್ಚರನು ಸ್ವಲ್ಪವೂ ದಯೆ ತೋರುವದಿಲ್ಲ. ಆ ಜನರ ಸಲುವಾಗಿ ಅವನು ಮರುಗುವದಿಲ್ಲ.’