ಯೆರೆಮೀಯ 22:27 - ಪರಿಶುದ್ದ ಬೈಬಲ್27 ಯೆಹೋಯಾಚೀನನೇ, ನೀನು ನಿನ್ನ ದೇಶಕ್ಕೆ ಹಿಂದಿರುಗಬೇಕೆಂದು ಅಪೇಕ್ಷಿಸಿದರೂ ನಿನಗೆ ಬರಲು ಸಾಧ್ಯವಾಗದು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಹಿಂದಿರುಗಬೇಕೆಂದು ಹಂಬಲಿಸುವ ದೇಶಕ್ಕೆ ಅವರು ಹಿಂದಿರುಗುವುದೇ ಇಲ್ಲ” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಹಿಂದಿರುಗಬೇಕೆಂದು ಹಂಬಲಿಸಿದರೂ ತಾಯ್ನಾಡಿಗೆ ಹಿಂದಿರುಗುವುದೇ ಇಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಅಲ್ಲೇ ಸಾಯುವಿರಿ, ಹಿಂದಿರುಗಬೇಕೆಂದು ಹಂಬಲಿಸುವ ದೇಶಕ್ಕೆ ಅವರು ಹಿಂದಿರುಗುವದೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆದರೆ ಅವರು ತಿರುಗಿ ಬರುವುದಕ್ಕೆ ಮನಸ್ಸು ಮಾಡುವ ದೇಶಕ್ಕೆ ಹಿಂದಿರುಗಲಾರರು,” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |
“ಸರ್ವಶಕ್ತನೂ ಇಸ್ರೇಲರ ದೇವರೂ ಆಗಿರುವ ಯೆಹೋವನು ಹೀಗೆಂದನು: ‘ನಾನು ಜೆರುಸಲೇಮಿನ ಮೇಲೆ ನನ್ನ ಕೋಪವನ್ನು ತೋರಿಸಿದೆ. ಜೆರುಸಲೇಮಿನಲ್ಲಿ ವಾಸಿಸುವ ಜನರನ್ನು ನಾನು ದಂಡಿಸಿದೆ. ಅದೇ ರೀತಿ, ಈಜಿಪ್ಟಿಗೆ ಹೋಗುವವರೆಲ್ಲರ ಮೇಲೂ ನಾನು ನನ್ನ ಕೋಪವನ್ನು ತೋರಿಸುವೆನು. ಬೇರೆಯವರಿಗೆ ಕೆಟ್ಟದಾಗಲಿ ಎಂದು ಹೇಳಬೇಕಾದಾಗ ಜನರು ನಿಮ್ಮಂತೆ ಆಗಲಿ ಎಂದು ನಿಮ್ಮ ಉದಾಹರಣೆಯನ್ನು ಕೊಡುವರು. ನೀವು ಒಂದು ಶಾಪದ ಶಬ್ದವಾಗುವಿರಿ. ಜನರು ನಿಮ್ಮಿಂದ ನಾಚಿಕೆಪಟ್ಟುಕೊಳ್ಳುವರು. ಜನರು ನಿಮ್ಮನ್ನು ಅಪಮಾನ ಮಾಡುವರು. ಯೆಹೂದವನ್ನು ಪುನಃ ನೀವು ಎಂದೂ ನೋಡುವದಿಲ್ಲ.’