ಯೆರೆಮೀಯ 22:28 - ಪರಿಶುದ್ದ ಬೈಬಲ್28 ಯೆಹೋಯಾಚೀನನು ಎಸೆಯಲ್ಪಟ್ಟ ಒಡೆದ ಮಡಕೆಯಂತಿದ್ದಾನೆ. ಅವನು ಯಾರಿಗೂ ಬೇಡವಾಗದ ಮಡಕೆಯಂತಿದ್ದಾನೆ. ಯೆಹೋಯಾಚೀನನು ಮತ್ತು ಅವನ ಮಕ್ಕಳು ಏಕೆ ಹೊರಗೆ ಎಸೆಯಲ್ಪಡುವರು? ಅವರು ಪರದೇಶಕ್ಕೆ ಏಕೆ ಒಯ್ಯಲ್ಪಡುವರು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಕೊನ್ಯನೆಂಬ ಈ ಮನುಷ್ಯನು ಬಿಸಾಡಿದ ಒಡಕು ಕುಡಿಕೆಯೋ? ಯಾರಿಗೂ ಇಷ್ಟವಿಲ್ಲದ ಮಣ್ಣಿನ ಮಡಿಕೆಯೋ? ಎಂಬಂತೆ, ಅವನೂ ಅವನ ಸಂತತಿಯವರೂ ಏಕೆ ಬಿಸಾಡಲ್ಪಟ್ಟಿದ್ದಾರೆ? ನೋಡದ ದೇಶಕ್ಕೆ ಏಕೆ ಎಸೆಯಲ್ಪಟ್ಟಿದ್ದಾರೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಕೊನ್ಯನು ಬಿಸಾಡಲ್ಪಟ್ಟ ಒಡಕು ಕುಡಿಕೆಯೆ? ಯಾರಿಗೂ ಬೇಡವಾದ ಮಣ್ಣಿನ ಮಡಿಕೆಯೆ? ಅವನೂ ಅವನ ಮಡದಿಮಕ್ಕಳೇಕೆ ಬೀದಿಪಾಲಾಗಿದ್ದಾರೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಕೊನ್ಯನೆಂಬ ಈ ಮನುಷ್ಯನು ಅಸಡ್ಡೆಗೀಡಾದ ಒಡಕು ಗಡಿಗೆಯೋ? ಯಾರಿಗೂ ಇಷ್ಟವಲ್ಲದ ಮಡಿಕೆಯೋ? ಅವನೂ ಅವನ ಸಂತತಿಯವರೂ ಏಕೆ ಬಿಸಾಡಲ್ಪಟ್ಟಿದ್ದಾರೆ? ನೋಡದ ದೇಶಕ್ಕೆ ಏಕೆ ಎಸೆಯಲ್ಪಟ್ಟಿದ್ದಾರೆ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಕೊನ್ಯನೆಂಬ ಈ ಮನುಷ್ಯನು ಹೀನವಾಗಿ ಒಡೆದುಹೋದ ಮಡಿಕೆಯೆ? ಮೆಚ್ಚುಗೆ ಇಲ್ಲದ ಪಾತ್ರೆಯೆ? ಏಕೆ ಕೊನ್ಯನೂ, ಅವನ ಸಂತಾನವೂ ಬೀದಿಪಾಲಾಗಿದ್ದಾರೆ, ತಮಗೆ ತಿಳಿಯದ ದೇಶಕ್ಕೆ ಗಡಿಪಾರಾಗಿದ್ದಾರೆ? ಅಧ್ಯಾಯವನ್ನು ನೋಡಿ |
ಯೆಹೋವನು ನನಗೆ ಈ ವಸ್ತುಗಳನ್ನು ತೋರಿಸಿದನು: ಯೆಹೋವನು ಪವಿತ್ರಾಲಯದ ಎದುರುಗಡೆಯಲ್ಲಿ ಅಂಜೂರದ ಎರಡು ಬುಟ್ಟಿಗಳನ್ನು ಜೋಡಿಸಿಟ್ಟಿದ್ದು ನನಗೆ ಕಂಡುಬಂತು. (ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಕೊನ್ಯನನ್ನು ಸೆರೆಹಿಡಿದ ಮೇಲೆ ನಾನು ಈ ದರ್ಶನವನ್ನು ಕಂಡೆ. ಯೆಕೊನ್ಯನು ರಾಜನಾದ ಯೆಹೋಯಾಕೀಮನ ಮಗ. ಯೆಕೊನ್ಯನನ್ನು ಮತ್ತು ಅವನ ಪ್ರಮುಖ ಅಧಿಕಾರಿಗಳನ್ನು ಜೆರುಸಲೇಮಿನಿಂದ ಬಾಬಿಲೋನಿಗೆ ತೆಗೆದುಕೊಂಡು ಹೋಗಲಾಯಿತು. ನೆಬೂಕದ್ನೆಚ್ಚರನು ಯೆಹೂದದ ಎಲ್ಲಾ ಬಡಗಿಗಳನ್ನು ಮತ್ತು ಕಮ್ಮಾರರನ್ನು ತೆಗೆದುಕೊಂಡು ಹೋಗಿದ್ದನು.)