ಯೆರೆಮೀಯ 22:3 - ಪರಿಶುದ್ದ ಬೈಬಲ್3 ಯೆಹೋವನು ಅನ್ನುತ್ತಾನೆ, ನಿಮ್ಮ ಆಚರಣೆ ನೀತಿಬದ್ಧವಾಗಿಯೂ ನ್ಯಾಯಬದ್ಧವಾಗಿಯೂ ಇರಲಿ. ಸುಲಿಗೆಗೀಡಾದವರನ್ನು ದೋಚಿಕೊಂಡವನಿಂದ ರಕ್ಷಿಸಿರಿ. ಅನಾಥರನ್ನು ಮತ್ತು ವಿಧವೆಯರನ್ನು ಹಿಂಸಿಸಬೇಡಿ; ನಿರಪರಾಧಿಗಳನ್ನು ಕೊಲ್ಲಬೇಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯೆಹೋವನು, ನೀತಿ, ನ್ಯಾಯಗಳನ್ನು ಆಚರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ. ವಿದೇಶಿ, ಅನಾಥ, ವಿಧವೆ ಇವರಿಗೆ ಯಾವ ಅನ್ಯಾಯವನ್ನೂ ಮತ್ತು ಹಿಂಸೆಯನ್ನೂ ಮಾಡಬೇಡಿರಿ; ನಿರ್ದೋಷಿಯ ರಕ್ತವನ್ನು ಈ ಸ್ಥಳದಲ್ಲಿ ಸುರಿಸಬೇಡಿರಿ” ಎಂದು ಹೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಸರ್ವೇಶ್ವರನ ಸಂದೇಶ ಇದು: ನ್ಯಾಯನೀತಿಯನ್ನು ಆಚರಿಸಿರಿ. ವಂಚಿತನಾದವನನ್ನು ದೋಚಿಕೊಳ್ಳುವವನ ಕೈಯಿಂದ ಬಿಡಿಸಿರಿ. ಪರದೇಶೀಯರಿಗೆ, ಅನಾಥರಿಗೆ, ವಿಧವೆಯರಿಗೆ ಅನ್ಯಾಯಮಾಡಬೇಡಿ, ಅವರನ್ನು ಹಿಂಸಿಸಬೇಡಿ. ನಿರಪರಾಧಿಗಳ ರಕ್ತವನ್ನು ಈ ಸ್ಥಳದಲ್ಲಿ ಸುರಿಸಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯೆಹೋವನು ಹೀಗನ್ನುತ್ತಾನೆ - ನೀತಿನ್ಯಾಯಗಳನ್ನು ಆಚರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ; ವಿದೇಶಿ, ಅನಾಥ, ವಿಧವೆ, ಇವರಿಗೆ ಯಾವ ಅನ್ಯಾಯವನ್ನೂ ಹಿಂಸೆಯನ್ನೂ ಮಾಡಬೇಡಿರಿ; ನಿರ್ದೋಷಿಯ ರಕ್ತವನ್ನು ಈ ಸ್ಥಳದಲ್ಲಿ ಸುರಿಸದಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಯೆಹೋವ ದೇವರು ಹೇಳುವುದೇನೆಂದರೆ: ನ್ಯಾಯವನ್ನೂ, ನೀತಿಯನ್ನೂ ನಡೆಸಿರಿ. ಸುಲಿಗೆಯಾದವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ. ಪರದೇಶಸ್ಥನಿಗೆ, ದಿಕ್ಕಿಲ್ಲದವನಿಗೆ ಮತ್ತು ವಿಧವೆಗೆ ಉಪದ್ರವವನ್ನಾದರೂ, ಬಲಾತ್ಕಾರವನ್ನಾದರೂ ಮಾಡಬೇಡಿರಿ. ಈ ಸ್ಥಳದಲ್ಲಿ ನಿರಪರಾಧದ ರಕ್ತವನ್ನು ಚೆಲ್ಲಬೇಡಿರಿ. ಅಧ್ಯಾಯವನ್ನು ನೋಡಿ |
ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.
ಯಾವನಾದರೂ ಜಂಬಕೊಚ್ಚಿಕೊಳ್ಳಬೇಕಾದರೆ, ಅವನು ನನ್ನನ್ನು ಅರಿತಿರುವುದಾಗಿಯೂ ನನ್ನನ್ನು ತಿಳಿದುಕೊಂಡಿರುವುದಾಗಿಯೂ ಜಂಬಪಡಲಿ. ನಾನೇ ಯೆಹೋವನೆಂದು ತಿಳಿದುಕೊಂಡಿರುವುದಕ್ಕಾಗಿ ಅವನು ಜಂಬಪಡಲಿ. ನಾನು ದಯಾವಂತನೂ ನ್ಯಾಯವಂತನೂ ಆಗಿರುವೆ, ನಾನು ಭೂಲೋಕದಲ್ಲಿ ಒಳ್ಳೆಯದನ್ನು ಮಾಡುತ್ತೇನೆ ಎಂದು ತಿಳಿದುಕೊಂಡಿರುವವನು ಹೆಮ್ಮೆಪಡಲಿ. ಆಗ ನನಗೆ ಸಂತೋಷವಾಗುವುದು.” ಇದು ಯೆಹೋವನ ನುಡಿ.
ಜೆರುಸಲೇಮಿನ ನ್ಯಾಯಾಧೀಶರು ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಪುಕೊಡುವರು. ಜನರಿಗೆ ಬೋಧಿಸುವ ಮೊದಲು ಜೆರುಸಲೇಮಿನ ಯಾಜಕರು ಹಣವನ್ನು ವಸೂಲಿ ಮಾಡುವರು. ಜನರು ತಮ್ಮ ಭವಿಷ್ಯದ ಬಗ್ಗೆ ಕೇಳಲು ಪ್ರವಾದಿಗಳಿಗೆ ಮುಂಗಡವಾಗಿ ಹಣ ಕೊಡುವರು. ಆಮೇಲೆ ಆ ನಾಯಕರು, “ಯೆಹೋವನು ನಮ್ಮಲ್ಲಿ ವಾಸಮಾಡುತ್ತಿದ್ದಾನೆ. ಆದ್ದರಿಂದ ನಮಗೆ ಕೆಟ್ಟದ್ದು ಏನೂ ಸಂಭವಿಸುವದಿಲ್ಲ” ಎಂದು ಹೇಳುವರು.
“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನಿಮ್ಮಲ್ಲಿರುವ ಪ್ರತಿಯೊಂದರಲ್ಲೂ ನಿಮ್ಮ ಪುದೀನ, ಸಬ್ಬಸ್ಸಿಗೆ ಸೊಪ್ಪು, ಜೀರಿಗೆ ಗಿಡಗಳಲ್ಲಿಯೂ ಸಹ ಹತ್ತರಲ್ಲೊಂದು ಪಾಲನ್ನು ದೇವರಿಗೆ ಕೊಡುತ್ತೀರಿ. ಆದರೆ ಧರ್ಮಶಾಸ್ತ್ರದ ಬೋಧನೆಗಳಲ್ಲಿ ನಿಜವಾಗಿಯೂ ಪ್ರಾಮುಖ್ಯವಾದ ಆಜ್ಞೆಗಳನ್ನು ಅಂದರೆ ನ್ಯಾಯವನ್ನೂ ಕರುಣೆಯನ್ನೂ ಯಥಾರ್ಥತೆಯನ್ನೂ ನೀವು ತೊರೆದುಬಿಟ್ಟಿದ್ದೀರಿ. ಈ ಆಜ್ಞೆಗಳಿಗೆ ನೀವು ಮೊದಲು ವಿಧೇಯರಾಗಿ, ಈಗ ಮಾಡುತ್ತಿರುವಂಥ ಕಾರ್ಯಗಳನ್ನು ಮಾಡಬೇಕಿತ್ತು.
ನೀವು ನಿಮ್ಮ ಊಟವನ್ನು ಹಸಿದವರೊಂದಿಗೆ ಹಂಚಿಕೊಳ್ಳುವದನ್ನು ನಾನು ನೋಡಲು ಆಶಿಸುತ್ತೇನೆ. ಮನೆಗಳಿಲ್ಲದ ಬಡ ಜನರನ್ನು ಕಂಡುಹಿಡಿದು ಅವರನ್ನು ನಿಮ್ಮ ಮನೆಗಳಿಗೆ ಕರೆದುಕೊಂಡು ಬರುವದನ್ನು ನೋಡಲು ಆಶಿಸುತ್ತೇನೆ. ಬಟ್ಟೆ ಇಲ್ಲದ ಒಬ್ಬ ಮನುಷ್ಯನನ್ನು ನೋಡಿದರೆ ನೀವು ನಿಮ್ಮ ಬಟ್ಟೆಯನ್ನು ಅವನಿಗೆ ಕೊಡಿರಿ. ಅವರಿಗೆ ಸಹಾಯ ಮಾಡಲು ಹಿಂಜರಿಯಬೇಡಿರಿ. ಅವರು ನಿಮ್ಮಂತೆ ಮನುಷ್ಯರಲ್ಲವೋ?”
ಯೆಹೂದದ ಜನರು ನನ್ನ ಅನುಸರಣೆಯನ್ನು ಬಿಟ್ಟಿದ್ದರಿಂದ ನಾನು ಹೀಗೆ ಮಾಡುವೆನು. ಇದನ್ನು ಅವರು ಅನ್ಯದೇವರುಗಳ ಸ್ಥಳವನ್ನಾಗಿ ಮಾಡಿದ್ದಾರೆ. ಯೆಹೂದದ ಜನರು ಈ ಸ್ಥಳದಲ್ಲಿ ಅನ್ಯದೇವರುಗಳಿಗಾಗಿ ಧೂಪವನ್ನು ಹಾಕಿದ್ದಾರೆ. ಬಹಳ ಹಿಂದೆ ಈ ಜನರು ಆ ದೇವರುಗಳನ್ನು ಪೂಜಿಸುತ್ತಿರಲಿಲ್ಲ. ಅವರ ಹಿರಿಯರೂ ಆ ದೇವರುಗಳನ್ನು ಪೂಜಿಸುತ್ತಿರಲಿಲ್ಲ. ಇವುಗಳು ಅನ್ಯದೇಶದ ಹೊಸ ದೇವರುಗಳು. ಯೆಹೂದದ ರಾಜರು ಈ ಸ್ಥಳವನ್ನು ಮುಗ್ಧಮಕ್ಕಳ ರಕ್ತದಿಂದ ತುಂಬಿದರು.