ಯೆರೆಮೀಯ 22:5 - ಪರಿಶುದ್ದ ಬೈಬಲ್5 ನೀವು ಈ ಆಜ್ಞೆಗಳನ್ನು ಪಾಲಿಸದಿದ್ದರೆ ರಾಜನ ಅರಮನೆಯನ್ನು ನಾಶಮಾಡಲಾಗುವುದು. ಅದು ಕಲ್ಲುಬಂಡೆಗಳ ರಾಶಿಯಾಗುವದೆಂದು ಯೆಹೋವನಾದ ನಾನು ಆಣೆಯಿಟ್ಟುಕೊಂಡು ಹೇಳುತ್ತೇನೆ’” ಎಂದು ಯೆಹೋವನು ನುಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನೀವು ಈ ಮಾತುಗಳನ್ನು ಕೇಳದಿದ್ದರೆ ಈ ಅರಮನೆಯು ಹಾಳುಬೀಳುವುದು ಎಂದು ನನ್ನ ಮೇಲೆ ಆಣೆಯಿಡುತ್ತೇನೆ ಇದು ಯೆಹೋವನ ನುಡಿ” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನೀವು ಈ ಮಾತುಗಳನ್ನು ಕೇಳದೆಹೋದರೆ ಈ ಅರಮನೆ ಹಾಳುಬೀಳುವುದು. ಇದನ್ನು ನನ್ನ ಮೇಲೆ ಆಣೆಯಿಟ್ಟು ಹೇಳುತ್ತೇನೆ. ಇದು ಸರ್ವೇಶ್ವರನಾದ ನನ್ನ ನುಡಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನೀವು ಈ ಮಾತುಗಳನ್ನು ಕೇಳದಿದ್ದರೆ ಈ ಅರಮನೆಯು ಹಾಳುಬೀಳುವದು ಎಂದು ನನ್ನ ಮೇಲೆ ಆಣೆಯಿಡುತ್ತೇನೆ. ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆದರೆ ನೀವು ಈ ವಾಕ್ಯಗಳನ್ನು ಕೇಳದೆ ಹೋದರೆ, ಈ ಅರಮನೆ ಹಾಳಾಗುವುದು ಎಂದು ನನ್ನ ಮೇಲೆ ಆಣೆ ಇಡುತ್ತೇನೆಂದು ಯೆಹೋವ ದೇವರು ಹೇಳುತ್ತಾರೆ.’ ” ಅಧ್ಯಾಯವನ್ನು ನೋಡಿ |
“‘ನೀವು ನನ್ನ ಮಾತನ್ನು ಕೇಳದಿದ್ದರೆ ಮತ್ತು ನನ್ನ ಆಜ್ಞೆಯನ್ನು ಪಾಲಿಸದಿದ್ದರೆ ಕೇಡಾಗುವುದು. ಸಬ್ಬತ್‌ದಿನದಲ್ಲಿ ಹೊರೆಗಳನ್ನು ಹೊತ್ತುಕೊಂಡು ಜೆರುಸಲೇಮಿಗೆ ಹೋದರೆ ನೀವು ಆ ದಿನವನ್ನು ಪವಿತ್ರದಿನವೆಂದು ಆಚರಿಸಿದಂತೆ ಆಗುವುದಿಲ್ಲ. ಆಗ ನಾನು ನಂದಿಸಲಾಗದ ಬೆಂಕಿಯನ್ನು ಹೊತ್ತಿಸುತ್ತೇನೆ. ಆ ಬೆಂಕಿಯು ಜೆರುಸಲೇಮಿನ ದ್ವಾರಗಳಲ್ಲಿ ಪ್ರಾರಂಭವಾಗಿ ಅರಮನೆಗಳನ್ನು ಸುಡುವವರೆಗೂ ಉರಿಯುತ್ತಿರುವುದು.’”
ಆದರೆ, ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಎಲ್ಲಾ ಯೆಹೂದ್ಯರೇ, ಯೆಹೋವನ ಸಂದೇಶವನ್ನು ಕೇಳಿರಿ. ‘ನಾನು ಆಣೆಮಾಡಿ ಹೀಗೆ ಹೇಳುತ್ತೇನೆ. ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಯೆಹೂದಿಯರಲ್ಲಿ ಯಾರೊಬ್ಬರೂ ಇನ್ನು ಮುಂದೆ ನನ್ನ ಹೆಸರಿನ ಮೇಲೆ ಆಣೆಯಿಟ್ಟು ಹೇಳಲಾರರು ಎಂದು ನಾನು ನನ್ನ ಮಹತ್ತಾದ ನಾಮದ ಮೇಲೆ ಆಣೆಯಿಟ್ಟುಕೊಂಡು ಹೇಳುತ್ತೇನೆ. ಇನ್ನು ಮುಂದೆ ಎಂದೂ ಅವರು “ದೇವರ ಆಣೆಯಾಗಿ” ಎಂದು ಹೇಳಲಾರರು.