Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 22:6 - ಪರಿಶುದ್ದ ಬೈಬಲ್‌

6 ಯೆಹೂದದ ರಾಜನು ವಾಸಮಾಡುವ ಅರಮನೆಯ ಬಗ್ಗೆ ಯೆಹೋವನು ಹೀಗೆನ್ನುತ್ತಾನೆ: “ಈ ಅರಮನೆಯು ಗಿಲ್ಯಾದಿನ ಅರಣ್ಯದಂತೆ, ಲೆಬನೋನಿನ ಪರ್ವತದಂತೆ ಎತ್ತರವಾಗಿದೆ. ಆದರೆ ನಾನು ಅದನ್ನು ನಿಜವಾಗಿ ಮರುಭೂಮಿಯಂತೆ ಮಾಡುತ್ತೇನೆ. ಈ ಅರಮನೆಯು ಹಾಳುಬಿದ್ದ ನಗರದಂತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನು ಯೆಹೂದದ ಅರಸನ ಮನೆತನವನ್ನು ಕುರಿತು ಹೀಗೆನ್ನುತ್ತಾನೆ, “ನೀನು ನನ್ನ ದೃಷ್ಟಿಯಲ್ಲಿ ಗಿಲ್ಯಾದಿನಂತೆಯೂ, ಲೆಬನೋನಿನ ಶಿಖರದ ಹಾಗೂ ಇದ್ದಿ, ಆದರೂ ನಾನು ನಿನ್ನನ್ನು ಮರುಭೂಮಿಯನ್ನಾಗಿಯೂ ಮತ್ತು ನಿರ್ಜನ ಪಟ್ಟಣವನ್ನಾಗಿಯೂ ಮಾಡುವುದು ಖಂಡಿತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಹೌದು, ಜುದೇಯದ ಅರಸನ ಮನೆತನವನ್ನು ಕುರಿತು ಸರ್ವೇಶ್ವರ ಹೀಗೆನ್ನುತ್ತಾರೆ : “ನನ್ನ ದೃಷ್ಟಿಗೆ ನೀನಿರುವೆ ಗಿಲ್ಯಾದಿನಂತೆ, ಲೆಬನೋನಿನ ಶಿಖರದಂತೆ ಆದರೆ ನಿನ್ನನ್ನು ಮರುಭೂಮಿಯಂತೆ , ನಿರ್ಜನಪ್ರದೇಶದಂತೆ ಮಾಡುವೆನೆಂಬುದು ನಿಶ್ಚಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆಹೋವನು ಯೆಹೂದದ ಅರಸನ ಮನೆತನವನ್ನು ಕುರಿತು ಹೀಗನ್ನುತ್ತಾನೆ - ನೀನು ನನ್ನ ದೃಷ್ಟಿಯಲ್ಲಿ ಗಿಲ್ಯಾದಿನಂತೆಯೂ ಲೆಬನೋನಿನ ಶಿಖರದ ಹಾಗೂ ಇದ್ದೀ, ಆದರೂ ನಾನು ನಿನ್ನನ್ನು ಮರುಭೂವಿುಯನ್ನಾಗಿಯೂ ನಿರ್ಜನ ಪಟ್ಟಣವನ್ನಾಗಿಯೂ ಮಾಡುವದು ಖಂಡಿತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೆಹೋವ ದೇವರು ಯೆಹೂದದ ಅರಸನ ಅರಮನೆಗೆ ಹೀಗೆ ಹೇಳುತ್ತಾರೆ: “ನೀನು ನನಗೆ ಗಿಲ್ಯಾದೂ, ಲೆಬನೋನಿನ ಗಿರಿಶೃಂಗ ಆಗಿದ್ದೀ. ಆದರೂ ನಿಶ್ಚಯವಾಗಿ ನಿನ್ನನ್ನು ಮರುಭೂಮಿಯಾಗಿಯೂ, ನಿವಾಸಿಗಳಿಲ್ಲದ ಪಟ್ಟಣಗಳನ್ನಾಗಿಯೂ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 22:6
26 ತಿಳಿವುಗಳ ಹೋಲಿಕೆ  

ಆಗ ನಾನು, “ಒಡೆಯನೇ, ಎಷ್ಟರ ತನಕ ನಾನು ಹೀಗೆ ಮಾಡಬೇಕು?” ಎಂದು ವಿಚಾರಿಸಿದೆನು. ಅದಕ್ಕೆ ಯೆಹೋವನು, “ನಗರಗಳು ನಾಶವಾಗುವ ತನಕ ಹೀಗೆಯೇ ಮಾಡು. ಮನೆಗಳಲ್ಲಿ ಜನರು ಇಲ್ಲದೆ ಹೋಗುವವರೆಗೆ ಹೀಗೆಯೇ ಮಾಡು. ಇಡೀ ದೇಶವು ಹಾಳಾಗಿ ಬೆಂಗಾಡಾಗುವ ತನಕ ಹೀಗೆಯೇ ಮಾಡುತ್ತಿರು” ಎಂದು ಹೇಳಿದನು.


ಆತನು ಫಲವತ್ತಾದ ಭೂಮಿಯನ್ನು ಉಪಯೋಗವಿಲ್ಲದ ಉಪ್ಪುಭೂಮಿಯನ್ನಾಗಿ ಪರಿವರ್ತಿಸಿದನು, ಯಾಕೆಂದರೆ ಅಲ್ಲಿ ಕೆಟ್ಟಜನರು ನೆಲೆಸಿದ್ದರು.


ನಾಯಕರೇ, ನಿಮ್ಮಿಂದಾಗಿ ಚೀಯೋನ್ ನಾಶವಾಗುವದು. ನೇಗಿಲಿನಿಂದ ಉತ್ತಲ್ಪಟ್ಟ ಹೊಲದಂತೆ ಅದು ಇರುವದು. ಜೆರುಸಲೇಮ್ ಕಲ್ಲಿನ ರಾಶಿಯಾಗುವದು. ಆಲಯದ ಗುಡ್ಡವು ಬರಿದಾದ ಬೆಟ್ಟವಾಗುವುದು. ಅದರ ಮೇಲೆ ಪೊದೆಗಳು ಹುಲುಸಾಗಿ ಬೆಳೆದುಕೊಳ್ಳುವವು.


ಆ ಸಮಯದಲ್ಲಿ ಆ ಮಹಾನಗರವು ನಿರ್ಜನವಾಗಿರುವದು. ಅದು ಮರುಭೂಮಿಯಂತಿರುವದು. ಜನರೆಲ್ಲರೂ ಹೊರಟುಹೋಗಿರುವರು. ಅವರು ಪಲಾಯನಗೈದಿದ್ದಾರೆ. ನಗರವು ತೆರೆದ ಹುಲ್ಲುಗಾವಲಿನಂತಿರುವುದು. ಪಶುಗಳು ಅಲ್ಲಿ ಹುಲ್ಲನ್ನು ಮೇಯುತ್ತವೆ. ದನಗಳು ದ್ರಾಕ್ಷಾಲತೆಯ ಚಿಗುರೆಲೆಗಳನ್ನು ತಿನ್ನುವವು.


ಹೀಗೆ ಹೇಳಿದರು, “ಪ್ರವಾದಿಯಾದ ಮೀಕಾಯನು ಮೋರೆಷೆತ್ ನಗರದವನಾಗಿದ್ದನು. ಹಿಜ್ಕೀಯನು ಯೆಹೂದದ ರಾಜನಾಗಿದ್ದ ಕಾಲದಲ್ಲಿ ಮೀಕಾಯನು ಪ್ರವಾದಿಯಾಗಿದ್ದನು. ಯೆಹೂದದ ಸಮಸ್ತ ಜನರಿಗೆ ಮೀಕಾಯನು ಹೀಗೆ ಹೇಳಿದನು: ‘ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ‘ಚೀಯೋನ್ ನಗರವು ನೇಗಿಲುಹೊಡೆದ ಹೊಲವಾಗುವುದು. ಜೆರುಸಲೇಮ್ ನಗರವು ಕಲ್ಲಿನ ದಿಬ್ಬವಾಗುವುದು. ಪವಿತ್ರ ಆಲಯವಿದ್ದ ಪರ್ವತವು ಮರಗಿಡಗಳಿಂದ ಮುಚ್ಚಿಹೋಗುವುದು.’


“ನಾನು (ಯೆಹೋವನು) ಜೆರುಸಲೇಮ್ ನಗರವನ್ನು ಕಸದ ರಾಶಿಯನ್ನಾಗಿ ಮಾಡುವೆನು. ಅದು ನರಿಗಳ ನಿವಾಸವಾಗುವದು. ನಾನು ಯೆಹೂದ ಪ್ರಾಂತದ ನಗರಗಳನ್ನು ನಾಶಮಾಡುವೆನು. ಅಲ್ಲಿ ಒಬ್ಬರೂ ವಾಸಮಾಡಲಾರರು.”


ಜೆರುಸಲೇಮಿನ ಬೀದಿಗಳಲ್ಲಿಯೂ ಯೆಹೂದದ ಪಟ್ಟಣಗಳಲ್ಲಿಯೂ ಸಂತೋಷ ಮತ್ತು ಸಂಭ್ರಮದ ಧ್ವನಿಯನ್ನೂ ವಧುವರರ ಸ್ವರವನ್ನೂ ಬರದಂತೆ ಮಾಡುತ್ತೇನೆ. ಈ ಪ್ರದೇಶವು ಬರಿದಾದ ಮರಳುಗಾಡಾಗುವದು.”


ಯೋಸೇಫನು ಬಾವಿಯೊಳಗಿದ್ದಾಗ, ಅವನ ಅಣ್ಣಂದಿರು ಊಟಕ್ಕೆ ಕುಳಿತುಕೊಂಡರು. ಅವರು ಕಣ್ಣೆತ್ತಿ ನೋಡಿದಾಗ ಗಿಲ್ಯಾದಿನಿಂದ ಈಜಿಪ್ಟಿಗೆ ಹೋಗುತ್ತಿದ್ದ ವ್ಯಾಪಾರಿಗಳನ್ನು ಕಂಡರು. ಅವರ ಒಂಟೆಗಳು ಅನೇಕ ಬಗೆಯ ಸಾಂಬಾರ ಪದಾರ್ಥಗಳನ್ನು ಮತ್ತು ಬೆಲೆಬಾಳುವ ವಸ್ತುಗಳನ್ನು ಹೊತ್ತುಕೊಂಡು ಹೋಗುತ್ತಿದ್ದವು.


ಯೆಹೋವನು ಹೀಗೆನ್ನುತ್ತಾನೆ: “ಯೆಹೋಯಾಕೀಮನ ಮಗನೂ ಯೆಹೂದದ ರಾಜನೂ ಆಗಿರುವ ಯೆಹೋಯಾಚೀನನೇ, ನನ್ನ ಜೀವದಾಣೆಯಾಗಿಯೂ ನಿನಗೆ ಹೀಗೆ ಮಾಡುವೆನು. ನೀನು ನನ್ನ ಬಲಗೈಯ ಮುದ್ರೆಯುಂಗುರವಾಗಿದ್ದರೂ ನಾನು ನಿನ್ನನ್ನು ಅಲ್ಲಿಂದ ಕಿತ್ತುಹಾಕುವೆನು.


“ನೀವು ತಕ್ಕ ಶಿಕ್ಷೆಯನ್ನು ಅನುಭವಿಸುವಿರಿ. ನಾನು ನಿಮ್ಮ ಅರಣ್ಯಗಳಲ್ಲಿ ಬೆಂಕಿಯನ್ನು ಹೊತ್ತಿಸುತ್ತೇನೆ. ಆ ಬೆಂಕಿಯು ನಿಮ್ಮ ಸುತ್ತಮುತ್ತಲಿನ ಪ್ರತಿಯೊಂದು ವಸ್ತುವನ್ನು ಸುಟ್ಟುಹಾಕುತ್ತದೆ.”


“ಯೆಹೂದದ ರಾಜಮನೆತನದವರಿಗೆ ಈ ವಿಷಯಗಳನ್ನು ತಿಳಿಸಿರಿ: ‘ಯೆಹೋವನ ಸಂದೇಶವನ್ನು ಕೇಳಿರಿ.


ವಿನಾಶನದ ಮೇಲೆ ವಿನಾಶವು ಬಂದು ಇಡೀ ದೇಶವೇ ಹಾಳಾಗಿದೆ. ಫಕ್ಕನೆ ನನ್ನ ಗುಡಾರಗಳು ಹಾಳಾದವು. ನನ್ನ ಪರದೆಗಳು ಹರಿದುಹೋದವು.


ಅವನ ಕಾಲುಗಳು ಬಂಗಾರದ ಪಾದಗಳುಳ್ಳ ಅಮೃತ ಶಿಲೆಯ ಕಂಬಗಳಂತಿವೆ. ಅವನು ಲೆಬನೋನಿನ ದೇವದಾರು ವೃಕ್ಷದಂತೆ ಎತ್ತರವಾಗಿದ್ದಾನೆ.


ನಾನು ಜೋರ್ಡನ್ ನದಿ ದಾಟಿ, ನೀನು ನಮಗೆ ಕೊಡುವ ಉತ್ತಮವಾದ ದೇಶವನ್ನು ನಾನು ನೋಡುವಂತೆ ಮಾಡು. ಅದರ ಮನೋಹರವಾದ ಬೆಟ್ಟಪ್ರದೇಶಗಳನ್ನೂ ಲೆಬನೋನ್ ಪ್ರಾಂತ್ಯಗಳನ್ನೂ ನೋಡುವಂತೆ ಮಾಡು’ ಎಂದು ಬೇಡಿದೆನು.


ರೂಬೇನ್ ಕುಲದವರಿಗೂ ಗಾದ್ ಕುಲದವರಿಗೂ ಬಹಳ ದನಕುರಿಗಳಿದ್ದವು. ಅವರು ಯಗ್ಜೇರ್ ಮತ್ತು ಗಿಲ್ಯಾದ್ ಪ್ರದೇಶಗಳನ್ನು ನೋಡಿದಾಗ ಅವು ಅವರ ಪಶುಗಳ ಮೇವಿಗೆ ಒಳ್ಳೆಯ ಸ್ಥಳವೆಂದು ತಿಳಿದುಕೊಂಡರು.


ನನ್ನ ಪ್ರಿಯಳೇ, ನೀನು ಬಹಳ ಸುಂದರಿ! ನೀನು ರೂಪವತಿ! ಮುಸುಕಿನೊಳಗಿರುವ ನಿನ್ನ ಕಣ್ಣುಗಳು ಕೋಮಲವಾದ ಪಾರಿವಾಳಗಳಂತಿವೆ. ನಿನ್ನ ಕೂದಲು ಗಿಲ್ಯಾದ್ ಬೆಟ್ಟದ ಇಳಿಜಾರುಗಳಲ್ಲಿ ನೃತ್ಯವಾಡುತ್ತಿರುವ ಆಡುಮಂದೆಯಂತೆ ಬಳಕುತ್ತಿದೆ.


ಈಗ ನಿನ್ನ ತಾಯಿಯು ಬಹಳ ನಾಚಿಕೆಪಡುವಳು. ನಿನಗೆ ಜನ್ಮಕೊಟ್ಟ ಆ ಸ್ತ್ರೀಯು ಅಪಮಾನ ಹೊಂದುವಳು. ಎಲ್ಲಾ ಜನಾಂಗಗಳಲ್ಲಿ ಬಾಬಿಲೋನ್ ಕನಿಷ್ಟವೆನಿಸುವುದು. ಅದು ಬರಿದಾದ ಮರುಭೂಮಿಯಂತಾಗುವುದು.


ಲೆಬನೋನೇ, ನೀನು ನಿನ್ನ ದ್ವಾರಗಳನ್ನು ತೆರೆ. ಆಗ ಬೆಂಕಿಯು ಒಳಬಂದು ನಿನ್ನ ದೇವದಾರು ಮರಗಳನ್ನೆಲ್ಲಾ ಸುಟ್ಟು ಹಾಕುವದು.


ನನ್ನ ಒಡೆಯನಾದ ಯೆಹೋವನನ್ನು ತುಚ್ಛೀಕರಿಸಲಿಕ್ಕೆ ನೀನು ನಿನ್ನ ಅಧಿಕಾರಿಯನ್ನು ಕಳುಹಿಸಿದೆ. “ನನ್ನಲ್ಲಿ ಬಲ ಸಾಮರ್ಥ್ಯಗಳಿವೆ; ನನ್ನಲ್ಲಿ ಅನೇಕಾನೇಕ ರಥಗಳಿವೆ. ನನ್ನ ಬಲದಿಂದ ನಾನು ಲೆಬನೋನನ್ನು ಸೋಲಿಸಿದೆ. ಲೆಬನೋನಿನ ಉನ್ನತ ಶಿಖರಗಳನ್ನು ನಾನು ಏರಿದೆನು. ಲೆಬನೋನಿನ ಎತ್ತರವಾದ ದೇವದಾರು ಮರಗಳನ್ನೂ ಶ್ರೇಷ್ಠವಾದ ತುರಾಯಿ ಮರಗಳನ್ನೂ (ಸೈನ್ಯ) ನಾನು ಕಡಿದುಹಾಕಿದೆನು. ನಾನು ಅತ್ಯುನ್ನತ ಶಿಖರಕ್ಕೂ ದಟ್ಟವಾದ ಕಾಡಿನೊಳಗೂ ಹೋಗಿದ್ದೇನೆ.


ತನ್ನ ಗುಹೆಯಿಂದ ಒಂದು “ಸಿಂಹವು” ಹೊರಬಂದಿದೆ. ಜನಾಂಗಗಳ ವಿನಾಶಕವಾದ ಸಿಂಹವು ಹೆಜ್ಜೆ ಹಾಕುತ್ತಿದೆ. ಅದು ನಿಮ್ಮ ಪ್ರದೇಶವನ್ನು ನಾಶಮಾಡಲು ತನ್ನ ಗುಹೆಯನ್ನು ಬಿಟ್ಟು ಹೊರಟಿದೆ. ನಿಮ್ಮ ಪಟ್ಟಣಗಳೆಲ್ಲ ನಾಶಹೊಂದುವವು. ಅಲ್ಲಿ ವಾಸಿಸಲು ಜನರೇ ಇಲ್ಲದಂತಾಗುವುದು.


ಗಿಲ್ಯಾದಿನಲ್ಲಿ ಖಂಡಿತವಾಗಿಯೂ ಔಷಧವಿದೆ. ಖಂಡಿತವಾಗಿಯೂ ಅಲ್ಲಿ ಒಬ್ಬ ವೈದ್ಯನಿದ್ದಾನೆ. ಆದರೆ ನನ್ನ ಜನರ ಗಾಯಗಳು ಗುಣವಾಗಲಿಲ್ಲವೇಕೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು