8 “ಅನೇಕ ಜನಾಂಗಗಳ ಜನರು ಈ ನಗರದಿಂದ ಹಾದುಹೋಗುವರು. ಅವರು, ‘ಜೆರುಸಲೇಮ್ ಒಂದು ಮಹಾನಗರವಾಗಿತ್ತು. ಯೆಹೋವನು ಜೆರುಸಲೇಮಿಗೆ ಇಂಥ ಭಯಂಕರ ಸ್ಥಿತಿಯನ್ನು ಏಕೆ ತಂದನು?’ ಎಂದು ಒಬ್ಬರನ್ನೊಬ್ಬರು ಕೇಳುವರು.
8 ಅವರು ನಿನ್ನ ಶ್ರೇಷ್ಠ ದೇವದಾರುಗಳನ್ನು ಕಡಿದು ಬೆಂಕಿಯಲ್ಲಿ ಹಾಕುವರು. ಅನೇಕ ಜನಾಂಗಗಳವರು ಈ ಪಟ್ಟಣದ ಮಾರ್ಗವಾಗಿ ಹೋಗುತ್ತಾ - ಯೆಹೋವನು ಈ ಮಹಾ ಪಟ್ಟಣಕ್ಕೆ ಹೀಗೆ ಏಕೆ ಮಾಡಿದ ಎಂದು ಒಬ್ಬರಿಗೊಬ್ಬರು ಮಾತಾಡಿಕೊಳ್ಳುತ್ತಾ -
“ಯೆಹೋವನೇ, ನೀನು ಒಳ್ಳೆಯವನು, ಒಳ್ಳೆಯತನ ನಿನ್ನ ಪಾಲಾಗಿದೆ. ಆದರೆ ಈಗ ನಮ್ಮದು ನಾಚಿಕೆಪಡುವ ಸ್ಥಿತಿಯಾಗಿದೆ. ಯೆಹೂದ ಮತ್ತು ಜೆರುಸಲೇಮಿನ ಜನರು ನಾಚಿಕೆಪಡುವಂತಾಗಿದೆ. ಹತ್ತಿರದಲ್ಲಿದ್ದವರು ಹಾಗೂ ದೂರದಲ್ಲಿದ್ದವರು, ಒಟ್ಟಿನಲ್ಲಿ ಇಸ್ರೇಲಿನ ಎಲ್ಲ ಜನರು ನಾಚಿಕೆಪಡುವಂತಾಗಿದೆ. ಯೆಹೋವನೇ, ನೀನು ಆ ಜನರನ್ನು ಎಲ್ಲಾ ದೇಶಗಳಲ್ಲಿ ಚದರಿಸಿಬಿಟ್ಟಿರುವೆ. ಆ ಎಲ್ಲಾ ದೇಶಗಳಲ್ಲಿರುವ ಇಸ್ರೇಲರು ನಾಚಿಕೆಪಡಬೇಕಾಗಿದೆ. ಯೆಹೋವನೇ, ನಿನ್ನ ವಿರುದ್ಧ ಮಾಡಿದ ಎಲ್ಲಾ ಹೀನಕೃತ್ಯಗಳಿಗಾಗಿ ಅವರು ನಾಚಿಕೆಪಡಬೇಕಾಗಿದೆ.
“ಯೆರೆಮೀಯನೇ, ನೀನು ಈ ವಿಷಯವನ್ನು ಯೆಹೂದದ ಜನರಿಗೆ ಹೇಳಿದಾಗ ‘ಈ ಮಹಾವಿಪತ್ತು ನಮಗೆ ಸಂಭವಿಸಬೇಕೆಂದು ಯೆಹೋವನು ಏಕೆ ನಿರ್ಣಯಿಸಿದ್ದಾನೆ? ನಮ್ಮ ಅಪರಾಧವೇನು? ನಮ್ಮ ದೇವರಾದ ಯೆಹೋವನ ವಿರುದ್ಧವಾಗಿ ನಾವು ಮಾಡಿದ ಪಾಪವೇನು?’ ಎಂದು ಅವರು ಕೇಳುತ್ತಾರೆ.
ನಿನ್ನ ಸುತ್ತಲೂ ಇರುವ ಜನಾಂಗಗಳು ನಿನಗೆ ಅವಮಾನ ಮಾಡಿ ಗೇಲಿ ಮಾಡುತ್ತವೆ. ನೀನು ಅವರಿಗೆ ಎಚ್ಚರಿಕೆಯಾಗಿಯೂ ಭಯೋತ್ಪಾದಕಕಾರಿಯಾಗಿಯೂ ಇರುವಿ. ನಾನು ನನ್ನ ಮಹಾಕೋಪದಿಂದ ನಿನ್ನನ್ನು ದಂಡಿಸಿದಾಗ ಇದು ಸಂಭವಿಸುವುದು. ಯೆಹೋವನಾದ ನಾನೇ ಇದನ್ನು ಹೇಳಿದ್ದೇನೆ.
“ಆದರೆ ನಾನು ಅವರಲ್ಲಿ ಕೆಲವರನ್ನು ಯುದ್ಧಗಳಿಂದ, ಬರಗಾಲಗಳಿಂದ ಮತ್ತು ರೋಗಗಳಿಂದ ಉಳಿಸುವೆನು. ಅವರು ತಾವು ಹೋಗುವ ದೇಶಗಳಲ್ಲಿನ ಜನರಿಗೆ ತಮ್ಮ ಅಸಹ್ಯವಾದ ಆಚರಣೆಗಳ ಕುರಿತು ಹೇಳಲಾಗುವಂತೆ ನಾನು ಇದನ್ನು ಮಾಡುತ್ತೇನೆ. ನಾನೇ ಯೆಹೋವನೆಂದು ಆಗ ಅವರು ತಿಳಿದುಕೊಳ್ಳುವರು.”
ಅವರು ಜೀವಿಸುವ ರೀತಿ, ದುಷ್ಟತನವನ್ನು ನಡಿಸುವ ರೀತಿಯನ್ನು ನೀವು ನೋಡುವಿರಿ. ಆಗ ನಾನು ಯಾಕೆ ಅವರನ್ನು ಶಿಕ್ಷಿಸುತ್ತೇನೆಂದು ನಿಮಗೆ ಗೊತ್ತಾಗುವದು.” ಇದು ನನ್ನ ಒಡೆಯನಾದ ಯೆಹೋವನ ನುಡಿ.
ಎಲ್ಲಾ ಜನಾಂಗಗಳವರಿಗೆ ನಾನು ಯಾಕೆ ಇಸ್ರೇಲರು ಸೆರೆಹಿಡಿಯಲ್ಪಟ್ಟು ಚದರಿಹೋಗುವಂತೆ ಮಾಡಿದೆನು ಎಂದು ತಿಳಿಯುವರು. ನನ್ನ ಜನರು ನನಗೆ ವಿರುದ್ಧವಾಗಿ ತಿರುಗಿ ಬಿದ್ದರು. ಆಗ ನಾನು ಅವರಿಂದ ದೂರ ಹೋದೆನು. ಅವರ ವೈರಿಗಳು ಅವರನ್ನು ಸೋಲಿಸುವಂತೆ ಮಾಡಿದೆನು. ಆದ್ದರಿಂದ ಅವರು ರಣರಂಗದಲ್ಲಿ ಮಡಿದರು.