Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 23:10 - ಪರಿಶುದ್ದ ಬೈಬಲ್‌

10 ಯೆಹೂದ ದೇಶವು ವ್ಯಭಿಚಾರಿಗಳಿಂದ ತುಂಬಿಹೋಗಿದೆ. ಅವರು ಅನೇಕ ರೀತಿಯಲ್ಲಿ ಅಪನಂಬಿಗಸ್ತರಾಗಿದ್ದಾರೆ. ಯೆಹೋವನು ನಾಡನ್ನು ಶಪಿಸಿದ್ದರಿಂದ ಅದು ಬರಡು ಭೂಮಿಯಾಯಿತು. ಹುಲ್ಲುಗಾವಲಿನ ಸಸಿಗಳು ಒಣಗಿ ಸತ್ತುಹೋಗುತ್ತಲಿವೆ. ಹೊಲಗಳು ಮರುಭೂಮಿಯಂತಾಗಿವೆ. ಪ್ರವಾದಿಗಳು ಸೆರೆ ಒಯ್ಯಲ್ಪಟ್ಟಿದ್ದಾರೆ. ಆ ಪ್ರವಾದಿಗಳು ತಮ್ಮ ಪ್ರಭಾವವನ್ನೂ ಶಕ್ತಿಯನ್ನೂ ತಪ್ಪಾಗಿ ಬಳಸಿಕೊಳ್ಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಸೀಮೆಯು ವ್ಯಭಿಚಾರಿಗಳಿಂದ ತುಂಬಿದೆ, ದೈವಶಾಪದ ನಿಮಿತ್ತ ದೇಶವು ದುಃಖಿಸುತ್ತದೆ. ಅಡವಿಯ ಹುಲ್ಗಾವಲು ಬಾಡಿದೆ; ದೇಶದವರು ತ್ವರೆಪಡುವ ಮಾರ್ಗವು ದುರ್ಮಾರ್ಗ, ಅವನ ಶೌರ್ಯವು ಅನ್ಯಾಯಸಾಧಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ದೈವಶಾಪದ ನಿಮಿತ್ತ ದೇಶ ದುಃಖಿಸುತ್ತಿದೆ ವ್ಯಭಿಚಾರದಿಂದ ನಾಡು ತುಂಬಿತುಳುಕುತ್ತಿದೆ ಅಡವಿಯ ಹುಲ್ಲುಗಾವಲು ಬಾಡಿದೆ. ನಾಡಿನ ಜನರು ಹಿಡಿದೋಡುತ್ತಿರುವ ಮಾರ್ಗ ದುರ್ಮಾರ್ಗ ಅನ್ಯಾಯ ಸಾಧನೆಗಾಗಿಯೆ ಅವರ ಅಧಿಕಾರ ಪ್ರಯೋಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಸೀಮೆಯು ಸೂಳೆಗಾರರಿಂದ ತುಂಬಿದೆ, ದೈವಶಾಪದ ನಿವಿುತ್ತ ದೇಶವು ದುಃಖಿಸುತ್ತದೆ; ಅಡವಿಯ ಹುಲ್ಗಾವಲು ಬಾಡಿದೆ; ದೇಶದವರು ತ್ವರೆಪಡುವ ಮಾರ್ಗವು ದುರ್ಮಾರ್ಗ, ಅವರ ಶೌರ್ಯವು ಅನ್ಯಾಯಸಾಧಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಏಕೆಂದರೆ ದೇಶವು ವ್ಯಭಿಚಾರಗಳಿಂದ ತುಂಬಿದೆ. ದೇಶವು ಶಾಪದಿಂದ ದುಃಖಿಸುತ್ತದೆ. ಮರುಭೂಮಿಯ ಮನೋಹರವಾದ ಸ್ಥಳಗಳು ಒಣಗಿ ಹೋಗಿವೆ. ಪ್ರವಾದಿಗಳು ಕೆಟ್ಟ ಮಾರ್ಗವನ್ನು ಅನುಸರಿಸುತ್ತಾರೆ ಮತ್ತು ತಮ್ಮ ಶಕ್ತಿಯನ್ನು ಅನ್ಯಾಯವಾಗಿ ಬಳಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 23:10
27 ತಿಳಿವುಗಳ ಹೋಲಿಕೆ  

ಆತನು ಫಲವತ್ತಾದ ಭೂಮಿಯನ್ನು ಉಪಯೋಗವಿಲ್ಲದ ಉಪ್ಪುಭೂಮಿಯನ್ನಾಗಿ ಪರಿವರ್ತಿಸಿದನು, ಯಾಕೆಂದರೆ ಅಲ್ಲಿ ಕೆಟ್ಟಜನರು ನೆಲೆಸಿದ್ದರು.


ನಾನು ಪರ್ವತಗಳಿಗಾಗಿ ಗಟ್ಟಿಯಾಗಿ ಅಳುವೆನು; ಬರಿದಾದ ಹೊಲಗಳಿಗಾಗಿ ಶೋಕಗೀತೆಯನ್ನು ಹಾಡುವೆನು. ಏಕೆಂದರೆ ಅಲ್ಲಿ ಸಜೀವ ವಸ್ತುಗಳಿಲ್ಲ. ಯಾರೂ ಅಲ್ಲಿ ತಿರುಗಾಡುವದಿಲ್ಲ. ಆ ಸ್ಥಳಗಳಲ್ಲಿ ದನಗಳ ಸದ್ದು ಕೇಳಿಸುವದಿಲ್ಲ. ಪಕ್ಷಿಗಳು ಹಾರಿಹೋಗಿವೆ; ಪ್ರಾಣಿಗಳು ಓಡಿಹೋಗಿವೆ.


ಮರಳುಗಾಡಿನಲ್ಲಿ ನನಗೊಂದು ಸ್ಥಳವಿದ್ದಿದ್ದರೆ, ಪ್ರಯಾಣಿಕರು ರಾತ್ರಿಯಲ್ಲಿ ತಂಗುವ ಮನೆ ಇದ್ದಿದ್ದರೆ, ನಾನು ನನ್ನ ಜನರನ್ನು ಅಲ್ಲಿ ಬಿಟ್ಟು, ಅವರಿಂದ ದೂರ ಹೋಗಬಹುದಾಗಿತ್ತು. ಏಕೆಂದರೆ ಅವರೆಲ್ಲರೂ ದೇವರಿಗೆ ದ್ರೋಹ ಮಾಡುತ್ತಿದ್ದಾರೆ, ಅವರೆಲ್ಲರೂ ಆತನಿಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ.


ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.


ಆ ದೇಶದಲ್ಲಿ ವಾಸಿಸುವ ಜನರು ದೇವರಿಗೆ ವಿರುದ್ಧವಾಗಿ ನಡೆದರು. ಆದ್ದರಿಂದ ದೇವರು ಈ ದೇಶವನ್ನು ನಾಶಮಾಡಲು ತೀರ್ಮಾನಿಸಿದನು. ಜನರು ಶಿಕ್ಷಿಸಲ್ಪಡುವರು. ಕೆಲವೇ ಮಂದಿ ಮಾತ್ರ ಉಳಿಯುವರು.


ಆದ್ದರಿಂದ ನೀವು ದೇವರಿಗೆ ನಂಬಿಗಸ್ತರಾಗಿಲ್ಲ! ಇಹಲೋಕದ ಮೇಲಿರುವ ವ್ಯಾಮೋಹ ದೇವರ ಮೇಲಿರುವ ದ್ವೇಷಕ್ಕೆ ಸಮಾನವಾಗಿದೆ. ಆದ್ದರಿಂದ ಈ ಲೋಕವನ್ನು ಪ್ರೀತಿಸುವವನು ತನ್ನನ್ನು ದೇವರಿಗೆ ಶತ್ರುವನ್ನಾಗಿ ಮಾಡಿಕೊಳ್ಳುತ್ತಾನೆ.


ಮದುವೆಯನ್ನು ಜನರೆಲ್ಲರೂ ಗೌರವಿಸಬೇಕು. ಗಂಡ ಹೆಂಡತಿಯರ ಸಂಬಂಧ ಪರಿಶುದ್ಧವಾಗಿರಬೇಕು. ಲೈಂಗಿಕ ಪಾಪಗಳನ್ನು ಮಾಡುವವರು ಮತ್ತು ವ್ಯಭಿಚಾರವನ್ನು ಮಾಡುವವರು ದೇವರ ತೀರ್ಪಿಗೆ ಒಳಗಾಗಿದ್ದಾರೆ.


ಲೈಂಗಿಕ ಪಾಪಗಳನ್ನು ಮಾಡುವವರಿಗೆ, ಸಲಿಂಗಕಾಮಿಗಳಿಗೆ, ಗುಲಾಮರನ್ನು ಮಾರಾಟ ಮಾಡುವವರಿಗೆ, ಸುಳ್ಳನ್ನು ಹೇಳುವವರಿಗೆ, ಒಪ್ಪಂದವನ್ನು ಮೀರುವ ಜನರಿಗೆ, ದೇವರ ಸತ್ಯೋಪದೇಶಕ್ಕೆ ವಿರುದ್ಧವಾಗಿ ಏನನ್ನು ಬೇಕಾದರೂ ಮಾಡುವವರಿಗೆ ಅದನ್ನು ರೂಪಿಸಲಾಗಿದೆ.


ಹೊಲಗದ್ದೆಗಳೆಲ್ಲಾ ನಾಶವಾದವು. ಭೂಮಿಯೂ ಗೋಳಾಡುತ್ತಿರುವುದು. ಯಾಕೆಂದರೆ ಧಾನ್ಯವು ನಾಶವಾದವು. ಹೊಸ ದ್ರಾಕ್ಷಾರಸವು ಬತ್ತಿಹೋಯಿತು. ಎಣ್ಣೆಯು ಇಲ್ಲದೆಹೋಯಿತು.


“ಯೆಹೂದ ಜನಾಂಗವು ಸತ್ತುಹೋದವರಿಗಾಗಿ ಗೋಳಾಡುವುದು. ಯೆಹೂದದ ನಗರಗಳಲ್ಲಿದ್ದ ಜನರು ದಿನೇದಿನೇ ನಿಬರ್ಲರಾಗುತ್ತಾರೆ. ಆ ಜನರು ನೆಲದ ಮೇಲೆ ಬಿದ್ದು ಬಿಡುತ್ತಾರೆ. ಜೆರುಸಲೇಮ್ ನಗರದಿಂದ ಜನರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಡುತ್ತಾರೆ.


ನೀವು ಕದಿಯುವುದಿಲ್ಲವೇ? ಕೊಲೆಗಳನ್ನು ಮಾಡುವುದಿಲ್ಲವೇ? ನೀವು ವ್ಯಭಿಚಾರ ಮಾಡುವುದಿಲ್ಲವೇ? ನೀವು ಅನ್ಯರ ಮೇಲೆ ಸುಳ್ಳು ದೋಷಾರೋಪಣೆ ಮಾಡುವುದಿಲ್ಲವೇ? ನೀವು ಸುಳ್ಳುದೇವರಾದ ಬಾಳನನ್ನು ಪೂಜಿಸಿ ಅನ್ಯದೇವರುಗಳ ಅನುಯಾಯಿಗಳಾಗಿಲ್ಲವೇ?


“ನ್ಯಾಯಾಧಿಕಾರಿಯು ತಿಳಿಸಬೇಕೆಂದು ಕೇಳಿದರೂ ಒಬ್ಬನು ತಾನು ಕಂಡದ್ದನ್ನಾಗಲಿ ಕೇಳಿದ್ದನ್ನಾಗಲಿ ತಿಳಿಸದೆ ಹೋದರೆ ಅವನು ಪಾಪಕ್ಕೆ ಗುರಿಯಾಗಿದ್ದಾನೆ.


ಆ ಜನರನ್ನು ನೋಡಿರಿ. ಜನರು ಹಗ್ಗಗಳಿಂದ ಗಾಡಿಯನ್ನು ಎಳೆದುಕೊಂಡು ಹೋಗುವಂತೆ ಅವರು ತಮ್ಮ ಪಾಪಗಳನ್ನು ಎಳೆದುಕೊಂಡು ಹೋಗುತ್ತಿದ್ದಾರೆ.


ಈ ಭೂಮಿಯನ್ನು ಏಕೆ ಹಾಳು ಮಾಡಲಾಯಿತು? ಇದನ್ನು ಯಾರೂ ಹೋಗದ ಬರಿದಾದ ಮರಳುಗಾಡನ್ನಾಗಿ ಏಕೆ ಮಾಡಲಾಯಿತು? ಇದನ್ನರಿತ ಜ್ಞಾನಿಯೊಬ್ಬನಿದ್ದಾನೆಯೇ? ಯೆಹೋವನಿಂದ ತಿಳಿದುಕೊಂಡ ಜ್ಞಾನಿಯೊಬ್ಬನಿದ್ದಾನೆಯೇ? ಯೆಹೋವನ ಸಂದೇಶವನ್ನು ವಿವರಿಸಬಲ್ಲವನೊಬ್ಬನಿದ್ದಾನೆಯೇ?


ಹೌದು, ಮರಳುಭೂಮಿಯನ್ನಾಗಿ ಮಾಡಿದ್ದಾರೆ. ಅದು ಒಣಗಿಹೋಗಿ ನಿಸ್ಸತ್ವವಾಗಿದೆ. ಅಲ್ಲಿ ಯಾರೂ ವಾಸಿಸುವದಿಲ್ಲ. ಇಡೀ ದೇಶವೇ ಬರಿದಾದ ಮರಳುಗಾಡಾಗಿದೆ. ಆ ತೋಟವನ್ನು ನೋಡಿಕೊಳ್ಳುವದಕ್ಕೆ ಯಾರೂ ಉಳಿದಿಲ್ಲ.


ರೊಟ್ಟಿಯನ್ನು ಸುಡಲು ರೊಟ್ಟಿಗಾರನು ಹಿಟ್ಟನ್ನು ನಾದುವನು. ರೊಟ್ಟಿಯು ಶಾಖದಿಂದ ಉಬ್ಬುತ್ತಿರುವಾಗ ರೊಟ್ಟಿಗಾರನು ಒಲೆಯನ್ನು ಮತ್ತಷ್ಟು ಉರಿಸುವುದಿಲ್ಲ. ಇಸ್ರೇಲರಾದರೋ ಹಾಗಲ್ಲ, ಅವರು ಒಲೆಯನ್ನು ಮತ್ತಷ್ಟು ಉರಿಸುತ್ತಾರೆ.


ಯಾಜಕ ಸಂತತಿಯವರಲ್ಲಿ ಅನ್ಯಸ್ತ್ರೀಯರನ್ನು ಮದುವೆಯಾದವರು: ಯೋಚಾದಾಕನ ಮಗನಾದ ಯೇಷೂವ ಮತ್ತು ಅವನ ಸಹೋದರರಾದ ಮಾಸೇಯ, ಎಲೀಯೆಜರ್, ಯಾರೀಬ್ ಮತ್ತು ಗೆದಲ್ಯ.


“ಇಸ್ರೇಲಿನ ಎಲ್ಲಾ ಜನರಿಗೆ ಹೆಚ್ಚಾಗಿ ಹಣಬೇಕು. ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಲಾಭಕ್ಕಾಗಿ ಆಸೆಪಡುತ್ತಾರೆ. ಪ್ರವಾದಿಗಳು ಮತ್ತು ಯಾಜಕರು ಸಹ ಮೋಸಗಾರರಾಗಿದ್ದಾರೆ.


ಅವರ ಪ್ರವಾದಿಗಳು ಬಡಾಯಿಗಾರರೂ ದ್ರೋಹಿಗಳೂ ಆಗಿದ್ದಾರೆ. ಅವರು ಯಾವಾಗಲೂ ಇನ್ನೂಇನ್ನೂ ಹೆಚ್ಚಾಗಿ ದೊರಕುವಂತೆ ಪ್ರಯತ್ನಿಸಿರುತ್ತಾರೆ. ಅವರ ಯಾಜಕರು ಪವಿತ್ರ ವಸ್ತುಗಳನ್ನು ಸಾಧಾರಣ ವಸ್ತುಗಳನ್ನಾಗಿ ಉಪಯೋಗಿಸಿದ್ದಾರೆ. ದೇವರ ನಿಯಮಗಳನ್ನು ನಿರ್ಲಕ್ಷಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು