Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 23:11 - ಪರಿಶುದ್ದ ಬೈಬಲ್‌

11 “ಪ್ರವಾದಿಗಳೂ ಯಾಜಕರೂ ದುಷ್ಟರಾಗಿದ್ದಾರೆ. ಅವರು ನನ್ನ ಪವಿತ್ರಾಲಯದಲ್ಲಿಯೇ ದುಷ್ಕೃತ್ಯಗಳನ್ನು ಮಾಡುವುದನ್ನು ನಾನು ನೋಡಿದ್ದೇನೆ. ಇದು ಯೆಹೋವನಿಂದ ಬಂದ ಸಂದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಪ್ರವಾದಿಗಳು ಭ್ರಷ್ಟರು, ಯಾಜಕರೂ ಭ್ರಷ್ಟರು. ಹೌದು ನನ್ನ ಆಲಯದಲ್ಲಿಯೇ ಅವರ ಕೆಟ್ಟತನವನ್ನು ಕಂಡಿದ್ದೇನೆ ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ಪ್ರವಾದಿಗಳು ಭ್ರಷ್ಟರು, ಯಾಜಕರೂ ಭ್ರಷ್ಟರು ! ನನ್ನಾಲಯದಲ್ಲೆ ಅವರು ನಡೆಸುವ ಕೆಟ್ಟತನವನ್ನು ನಾನು ಕಂಡಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಪ್ರವಾದಿಗಳು ಭ್ರಷ್ಟರು, ಯಾಜಕರೂ ಭ್ರಷ್ಟರು! ಹೌದು ನನ್ನ ಆಲಯದಲ್ಲಿಯೇ ಅವರ ಕೆಟ್ಟತನವನ್ನು ಕಂಡಿದ್ದೇನೆ ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ಪ್ರವಾದಿಯೂ ಯಾಜಕನೂ ಕೂಡ ಭ್ರಷ್ಟರೇ. ಹೌದು, ನನ್ನ ಆಲಯದಲ್ಲಿ ಅವರ ಕೆಟ್ಟತನವನ್ನು ಕಂಡಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 23:11
24 ತಿಳಿವುಗಳ ಹೋಲಿಕೆ  

ಅವರ ಪ್ರವಾದಿಗಳು ಬಡಾಯಿಗಾರರೂ ದ್ರೋಹಿಗಳೂ ಆಗಿದ್ದಾರೆ. ಅವರು ಯಾವಾಗಲೂ ಇನ್ನೂಇನ್ನೂ ಹೆಚ್ಚಾಗಿ ದೊರಕುವಂತೆ ಪ್ರಯತ್ನಿಸಿರುತ್ತಾರೆ. ಅವರ ಯಾಜಕರು ಪವಿತ್ರ ವಸ್ತುಗಳನ್ನು ಸಾಧಾರಣ ವಸ್ತುಗಳನ್ನಾಗಿ ಉಪಯೋಗಿಸಿದ್ದಾರೆ. ದೇವರ ನಿಯಮಗಳನ್ನು ನಿರ್ಲಕ್ಷಿಸಿದ್ದಾರೆ.


“ಇಸ್ರೇಲಿನ ಎಲ್ಲಾ ಜನರಿಗೆ ಹೆಚ್ಚಾಗಿ ಹಣಬೇಕು. ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಲಾಭಕ್ಕಾಗಿ ಆಸೆಪಡುತ್ತಾರೆ. ಪ್ರವಾದಿಗಳು ಮತ್ತು ಯಾಜಕರು ಸಹ ಮೋಸಗಾರರಾಗಿದ್ದಾರೆ.


ಅವರ ವಿಗ್ರಹಗಳಿಗೋಸ್ಕರ ತಮ್ಮ ಮಕ್ಕಳನ್ನು ಕೊಂದರು. ಅನಂತರ ಅದೇ ದಿನದಲ್ಲೇ ನನ್ನ ಪವಿತ್ರ ಆಲಯದೊಳಕ್ಕೆ ಹೋಗಿ ಅದನ್ನು ಹೊಲೆ ಮಾಡಿದರು. ನನ್ನ ಆಲಯದೊಳಗೆ ಅವರು ಹಾಗೆ ಮಾಡಿದರು.


ಆ ಜನರು ತಮಗಾಗಿ ವಿಗ್ರಹಗಳನ್ನು ಮಾಡಿಕೊಂಡಿದ್ದಾರೆ. ನಾನು ಆ ವಿಗ್ರಹಗಳನ್ನು ದ್ವೇಷಿಸುತ್ತೇನೆ. ನನ್ನ ಹೆಸರಿನಿಂದ ಖ್ಯಾತಿಗೊಂಡ ಆಲಯದಲ್ಲಿ ಆ ವಿಗ್ರಹಗಳನ್ನಿಟ್ಟು ನನ್ನ ಆಲಯವನ್ನು ‘ಹೊಲಸು’ ಮಾಡಿದ್ದಾರೆ.


ದೇವರು ನನ್ನನ್ನು ಯೆಹೋವನಾಲಯದ ಒಳಗಿನ ಅಂಗಳಕ್ಕೆ ಕರಕೊಂಡು ಹೋದನು. ಯೆಹೋವನಾಲಯದ ಪ್ರವೇಶ ಸ್ಥಳದಲ್ಲಿ ಮಂಟಪಕ್ಕೂ ಯಜ್ಞವೇದಿಕೆಗೂ ನಡುವೆ ಪವಿತ್ರ ಸ್ಥಳದ ಕಡೆಗೆ ಬೆನ್ನು ಮಾಡಿಕೊಂಡಿದ್ದ ಇಪ್ಪತ್ತೈದು ಮಂದಿ ಇದ್ದರು. ಪೂರ್ವಕ್ಕೆ ಮುಖಮಾಡಿಕೊಂಡಿದ್ದ ಅವರು ಸೂರ್ಯನನ್ನು ಪೂಜಿಸುತ್ತಿದ್ದರು.


“ನನ್ನ ಪ್ರೇಯಸಿ (ಯೆಹೂದ) ನನ್ನ ಪವಿತ್ರ ಆಲಯದಲ್ಲಿ ಏಕೆ ಇದ್ದಾಳೆ? ಇಲ್ಲಿ ಇರಲು ಅವಳಿಗೆ ಅಧಿಕಾರವಿಲ್ಲ. ಅವಳು ಅನೇಕ ದುಷ್ಕೃತ್ಯಗಳನ್ನು ಮಾಡಿದ್ದಾಳೆ. ಯೆಹೂದವೇ, ಹರಕೆಗಳಿಂದ ಮತ್ತು ಪ್ರಾಣಿಗಳ ಬಲಿಯಿಂದ ನಿನ್ನ ವಿನಾಶವನ್ನು ತಡೆಯಬಹುದೆಂದು ತಿಳಿದುಕೊಂಡಿರುವಿಯಾ? ನನಗೆ ಹೋಮವನ್ನು ಅರ್ಪಿಸಿ ಶಿಕ್ಷೆಯಿಂದ ತಪ್ಪಿಸಿಕೊಳ್ಳಬಹುದೆಂದು ತಿಳಿದುಕೊಂಡಿರುವಿಯಾ?”


ಆದ್ದರಿಂದ ನಾನು ಅವರ ಹೆಂಡಂದಿರನ್ನು ಬೇರೆಯವರಿಗೆ ಕೊಡುತ್ತೇನೆ. ನಾನು ಅವರ ಹೊಲಗಳನ್ನು ಬೇರೆಯವರಿಗೆ ಕೊಡುತ್ತೇನೆ. ಇಸ್ರೇಲಿನ ಎಲ್ಲಾ ಜನರಿಗೆ ಹೆಚ್ಚಾಗಿ ಹಣಬೇಕು. ಸಾಮಾನ್ಯರನ್ನು ಮೊದಲುಗೊಂಡು ಅತ್ಯಂತ ಮುಖ್ಯರಾದವರೆಲ್ಲರೂ ಹೀಗೇ ಇದ್ದಾರೆ. ಪ್ರವಾದಿಗಳಿಂದ ಹಿಡಿದು ಯಾಜಕರವರೆಗೆ ಎಲ್ಲರೂ ಸುಳ್ಳು ಹೇಳುತ್ತಾರೆ.


ನೀನು ಹಾಗೆ ಮಾಡಲೇಬೇಕು ಯಾಕೆಂದರೆ, ಯೆಹೂದದ ಜನರು ಮಾಡುವ ದುಷ್ಕೃತ್ಯಗಳನ್ನು ನಾನು ನೋಡಿದ್ದೇನೆ.” ಯೆಹೋವನು ಹೀಗೆನ್ನುತ್ತಾನೆ: “ಅವರು ತಮ್ಮ ವಿಗ್ರಹಗಳನ್ನು ಸ್ಥಾಪಿಸಿದ್ದಾರೆ. ನಾನು ಆ ವಿಗ್ರಹಗಳನ್ನು ದ್ವೇಷಿಸುತ್ತೇನೆ. ನನ್ನ ಹೆಸರಿನಿಂದ ಖ್ಯಾತಿಪಡೆದ ಆಲಯದಲ್ಲಿ ಅವರು ವಿಗ್ರಹಗಳನ್ನು ಸ್ಥಾಪಿಸಿದ್ದಾರೆ. ಅವರು ನನ್ನ ಆಲಯವನ್ನು ‘ಮಲಿನ’ಗೊಳಿಸಿದ್ದಾರೆ.


ಅವನು ಮಾತ್ರವಲ್ಲದೆ ಎಲ್ಲಾ ಯಾಜಕರು, ಯೆಹೂದದ ಜನನಾಯಕರು ಬಹಳ ಪಾಪಗಳನ್ನು ಮಾಡಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟುಹೋಗಿದ್ದರು. ಅವರು ಬೇರೆ ದೇಶಗಳ ನಡವಳಿಕೆಯನ್ನು ಅನುಸರಿಸಿದರು. ಆ ನಾಯಕರುಗಳು ದೇವಾಲಯವನ್ನು ಹಾಳುಮಾಡಿದರು. ಜೆರುಸಲೇಮಿನಲ್ಲಿದ್ದ ಆ ಆಲಯವನ್ನು ಯೆಹೋವನು ತನಗಾಗಿ ಪ್ರತಿಷ್ಠಿಸಿಕೊಂಡಿದ್ದನು.


ನಾನು ಅಲ್ಲಿ ಶಾಫಾನನ ಮಗನಾದ ಯಾಜನ್ಯನು ಮತ್ತು ಇಸ್ರೇಲರ ಎಪ್ಪತ್ತು ಮಂದಿ ಹಿರಿಯರು ಈ ಚಿತ್ರಗಳ ಮತ್ತು ವಿಗ್ರಹಗಳ ಮುಂದೆ ನಿಂತಿರುವುದನ್ನು ಕಂಡೆನು. ಪ್ರತಿಯೊಬ್ಬನು ಒಂದು ಧೂಪಾರತಿಯನ್ನು ಹಿಡಿದುಕೊಂಡಿದ್ದನು. ಆ ಧೂಪದ ಹೊಗೆಯು ಆಕಾಶದವರೆಗೂ ಏರಿ ಹೋಗುತ್ತಿತ್ತು.


“ಆ ಜನರು ತಮ್ಮ ಬೆಳ್ಳಿಬಂಗಾರಗಳ ಆಭರಣಗಳನ್ನು ಅಲಂಕಾರದ ವಸ್ತುಗಳನ್ನಾಗಿ ಪರಿವರ್ತಿಸಿದರು. ಅವುಗಳಿಂದ ತಮ್ಮ ಕೊಳಕಾದ ಮತ್ತು ಅಸಹ್ಯಕರವಾದ ವಿಗ್ರಹಗಳನ್ನು ಮಾಡಿಕೊಂಡರು. ಆದ್ದರಿಂದ ಅವರ ಬೆಳ್ಳಿಬಂಗಾರಗಳನ್ನು ಅವರಿಗೆ ಕೊಳೆಯ ಬಟ್ಟೆಯನ್ನಾಗಿ ಮಾಡುವೆನು.


ಸರ್ವಶಕ್ತನಾದ ಯೆಹೋವನು ಪ್ರವಾದಿಗಳ ಬಗ್ಗೆ ಹೀಗೆನ್ನುತ್ತಾನೆ, “ನಾನು ಆ ಪ್ರವಾದಿಗಳನ್ನು ದಂಡಿಸುವೆನು. ಆ ಶಿಕ್ಷೆಯು ವಿಷಪೂರಿತ ಆಹಾರದಂತೆಯೂ ನೀರಿನಂತೆಯೂ ಇರುವುದು. ಪ್ರವಾದಿಗಳು ಒಂದು ಆಧ್ಯಾತ್ಮಿಕ ವ್ಯಾಧಿಯನ್ನು ಪ್ರಾರಂಭಿಸಿದರು. ಆ ವ್ಯಾಧಿಯು ಇಡೀ ದೇಶದಲ್ಲೆಲ್ಲ ಪ್ರಸರಿಸಿತು. ಆದ್ದರಿಂದ ನಾನು ಆ ಪ್ರವಾದಿಗಳನ್ನು ಶಿಕ್ಷಿಸುತ್ತೇನೆ. ಆ ವ್ಯಾಧಿಯು ಆ ಪ್ರವಾದಿಗಳಿಂದ ಜೆರುಸಲೇಮಿಗೆ ಬಂದಿತು.”


ಪ್ರವಾದಿಗಳು ಸುಳ್ಳು ಹೇಳುತ್ತಿದ್ದಾರೆ. ಯಾಜಕರು ಅಧಿಕಾರವನ್ನು ತಮ್ಮ ಕೈಗೆ ತೆಗೆದುಕೊಳ್ಳುತ್ತಿದ್ದಾರೆ. ನನ್ನ ಜನರು ಇದನ್ನೇ ಮೆಚ್ಚಿಕೊಳ್ಳುತ್ತಿದ್ದಾರೆ. ಆದರೆ ದಂಡನೆಯ ಸಮಯ ಬಂದಾಗ ನೀವು ಏನು ಮಾಡುವಿರಿ?” ಎಂದನು.


ಮನಸ್ಸೆಯು ಒಂದು ವಿಗ್ರಹವನ್ನು ಯೆಹೋವನ ಮಂದಿರದೊಳಗೆ ಪ್ರತಿಷ್ಠಾಪಿಸಿದನು. ಆ ಮಂದಿರದ ಬಗ್ಗೆ ಯೆಹೋವನು ದಾವೀದನೊಂದಿಗೂ ಸೊಲೊಮೋನನೊಂದಿಗೂ ಮಾತನಾಡಿ, “ನನ್ನ ಹೆಸರನ್ನು ಈ ಆಲಯದಲ್ಲಿಯೂ ಜೆರುಸಲೇಮಿನಲ್ಲಿಯೂ ಸ್ಥಾಪಿಸುವೆನು. ಈ ಪಟ್ಟಣವನ್ನು ಎಲ್ಲಾ ಕುಲಗಳ ಎಲ್ಲಾ ಪಟ್ಟಣಗಳಿಂದ ಆರಿಸಿಕೊಂಡಿರುತ್ತೇನೆ. ಇಲ್ಲಿ ನನ್ನ ನಾಮಸ್ಮರಣೆಯು ಸದಾಕಾಲ ನಡಿಯುವುದು.


ಮನಸ್ಸೆಯು ದೇವಾಲಯದ ಎರಡು ಅಂಗಳಗಳಲ್ಲಿ ಎಲ್ಲಾ ನಕ್ಷತ್ರಸಮೂಹಗಳಿಗೆ ವೇದಿಕೆಗಳನ್ನು ಕಟ್ಟಿಸಿದನು.


“ನನ್ನ ಜನರು ತಪ್ಪಿಸಿಕೊಂಡ ಕುರಿಗಳಂತಿದ್ದಾರೆ. ಅವರ ಕುರುಬರು ಅವರನ್ನು ತಪ್ಪು ದಾರಿಗೆ ಎಳೆದಿದ್ದಾರೆ. ಅವರ ನಾಯಕರುಗಳು ಅವರನ್ನು ಬೆಟ್ಟಗಳಲ್ಲಿ ಅಲೆಯುವಂತೆ ಮಾಡಿದ್ದಾರೆ. ಅವರ ವಿಶ್ರಾಂತಿಸ್ಥಾನವನ್ನು ಅವರು ಮರೆತುಬಿಟ್ಟಿದ್ದಾರೆ.


ನನ್ನ ಕಡೆಗೆ ನೋಡು. ನೀನು ಇಷ್ಟೆಲ್ಲ ಮಾಡಿದ್ದು ಯಾರಿಗೆ ಎಂಬುದನ್ನು ನೋಡು. ನಾನು ನಿನಗೆ ಈ ಪ್ರಶ್ನೆಗಳನ್ನು ಕೇಳಬಯಸುತ್ತೇನೆ. ಏನು, ಸ್ತ್ರೀಯರು ತಾವು ಹೆತ್ತ ಮಕ್ಕಳನ್ನೇ ತಿನ್ನಬೇಕೇ? ಸ್ತ್ರೀಯರು ತಾವು ಲಾಲನೆಪಾಲನೆ ಮಾಡಿದ ಮಕ್ಕಳನ್ನೇ ತಿನ್ನಬೇಕೇ? ಯೆಹೋವನ ಪವಿತ್ರ ಆಲಯದಲ್ಲಿಯೇ ಯಾಜಕನನ್ನು ಮತ್ತು ಪ್ರವಾದಿಯನ್ನು ಕೊಲ್ಲಬೇಕೇ?


ಯಾಜಕ ಸಂತತಿಯವರಲ್ಲಿ ಅನ್ಯಸ್ತ್ರೀಯರನ್ನು ಮದುವೆಯಾದವರು: ಯೋಚಾದಾಕನ ಮಗನಾದ ಯೇಷೂವ ಮತ್ತು ಅವನ ಸಹೋದರರಾದ ಮಾಸೇಯ, ಎಲೀಯೆಜರ್, ಯಾರೀಬ್ ಮತ್ತು ಗೆದಲ್ಯ.


ಗತಕಾಲದಲ್ಲಿ ಇಸ್ರೇಲರು ನನ್ನನ್ನು ತ್ಯಜಿಸಿದಾಗ ಲೇವಿಯರು ನನ್ನನ್ನು ಬಿಟ್ಟುಹೋದರು. ಇಸ್ರೇಲರು ನನ್ನನ್ನು ಬಿಟ್ಟು ವಿಗ್ರಹಗಳನ್ನು ಪೂಜಿಸಿದರು. ಲೇವಿಯರು ಮಾಡಿದ ಪಾಪಕ್ಕಾಗಿ ಶಿಕ್ಷಿಸಲ್ಪಡುವರು.


ಜೆರುಸಲೇಮಿನ ನಾಯಕರು ಗರ್ಜಿಸುವ ಸಿಂಹದಂತೆ ಇದ್ದಾರೆ, ಅವರ ನ್ಯಾಯಾಧಿಪತಿಗಳು ರಾತ್ರಿ ಕಾಲದಲ್ಲಿ ಕುರಿಗಳ ಮೇಲೆ ಬೀಳುವ ಹಸಿದ ತೋಳಗಳಂತಿದ್ದಾರೆ. ಬೆಳಗಾಗಲು, ಏನೂ ಉಳಿಯುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು