ಯೆರೆಮೀಯ 23:14 - ಪರಿಶುದ್ದ ಬೈಬಲ್14 ಯೆಹೂದದ ಪ್ರವಾದಿಗಳು ಜೆರುಸಲೇಮಿನಲ್ಲಿ ಭಯಂಕರ ದುಷ್ಕೃತ್ಯಗಳನ್ನು ಮಾಡುವುದನ್ನು ನಾನು ನೋಡಿದ್ದೇನೆ. ಈ ಪ್ರವಾದಿಗಳು ವ್ಯಭಿಚಾರ ಮಾಡುತ್ತಾರೆ. ಅವರು ಸುಳ್ಳುಗಳನ್ನು ಕೇಳಿ, ಆ ಸುಳ್ಳುಬೋಧನೆಗಳನ್ನು ಪಾಲಿಸುತ್ತಾರೆ. ಅವರು ದುಷ್ಟರಿಗೆ ಅವರ ದುಷ್ಟತನವನ್ನು ಮುಂದುವರಿಸಲು ಪ್ರೋತ್ಸಾಹಿಸುತ್ತಾರೆ. ಆದ್ದರಿಂದ ಜನರು ಪಾಪಮಾಡುವುದನ್ನು ನಿಲ್ಲಿಸಲಿಲ್ಲ. ಅವರೆಲ್ಲರು ನನಗೆ ಸೊದೋಮ್ ನಗರದಂತೆ ಇದ್ದಾರೆ. ಜೆರುಸಲೇಮಿನ ಜನರು ಗೊಮೋರ ನಗರದಂತೆ ಇದ್ದಾರೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಯೆರೂಸಲೇಮಿನ ಪ್ರವಾದಿಗಳಲ್ಲಿಯೂ ನಾನು ಅಸಹ್ಯವನ್ನು ನೋಡಿದ್ದೇನೆ. ಅವರು ವ್ಯಭಿಚಾರಮಾಡಿ, ಮೋಸದಲ್ಲಿ ನಡೆದು, ದುಷ್ಟರಲ್ಲಿ ಯಾರೂ ತನ್ನ ದುಷ್ಟತನವನ್ನು ಬಿಡದಂತೆ ಅವರ ಕೈಗಳನ್ನು ಬಲಪಡಿಸುತ್ತಿದ್ದಾರೆ. ಅವರೆಲ್ಲರು ಸೊದೋಮಿನಂತೆ, ಆ ಪಟ್ಟಣದ ನಿವಾಸಿಗಳು ಗೊಮೋರದ ಹಾಗೆ ನನಗೆ ಕಾಣುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಜೆರುಸಲೇಮಿನ ಪ್ರವಾದಿಗಳಲ್ಲೂ ಭೀಕರವಾದುವನ್ನು ನೋಡಿರುವೆನು ವ್ಯಭಿಚಾರ ಮಾಡುತ್ತಾರೆ, ಸುಳ್ಳು ಹಾದಿಯನ್ನು ಹಿಡಿಯುತ್ತಾರೆ ದುರುಳರು ದುರಾಚಾರವನ್ನು ಬಿಡದಂತೆ ದೃಢಪಡಿಸುತ್ತಾರೆ. ನನ್ನ ದೃಷ್ಟಿಗೆ ಅವರೆಲ್ಲರು ಸೊದೋಮಿನಂತೆ, ಆ ಪುರನಿವಾಸಿಗಳು ನನ್ನ ಕಣ್ಣಿಗೆ ಗೊಮೋರದಂತೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಯೆರೂಸಲೇವಿುನ ಪ್ರವಾದಿಗಳಲ್ಲಿಯೂ ನಾನು ಅಸಹ್ಯವನ್ನು ನೋಡಿದ್ದೇನೆ; ಅವರು ವ್ಯಭಿಚಾರಮಾಡಿ ಮೋಸದಲ್ಲಿ ನಡೆದು ದುಷ್ಟರಲ್ಲಿ ಯಾವನೂ ತನ್ನ ದುಷ್ಟತನವನ್ನು ಬಿಡದಂತೆ ಅವರ ಕೈಗಳನ್ನು ಬಲಪಡಿಸುತ್ತಿದ್ದಾರೆ; ಅವರೆಲ್ಲರು ಸೊದೋವಿುನಂತೆ, ಆ ಪುರನಿವಾಸಿಗಳು ಗೊಮೋರದ ಹಾಗೆ ನನಗೆ ಕಾಣುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಯೆರೂಸಲೇಮಿನ ಪ್ರವಾದಿಗಳಲ್ಲಿ ಭಯಂಕರವಾದದ್ದನ್ನು ನೋಡಿದ್ದೇನೆ. ಅವರು ವ್ಯಭಿಚಾರ ಮಾಡಿ, ಸುಳ್ಳಿನಲ್ಲಿ ನಡೆದುಕೊಂಡದ್ದಲ್ಲದೆ, ದುಷ್ಟರು ತಮ್ಮ ದುಷ್ಟತ್ವವನ್ನು ಬಿಟ್ಟು ತಿರುಗದ ಹಾಗೆ ಅವರ ಕೈಗಳನ್ನು ಬಲಪಡಿಸುತ್ತಾರೆ. ಅವರೆಲ್ಲರೂ ನನಗೆ ಸೊದೋಮಿನ ಹಾಗೆಯೂ, ಅದರ ನಿವಾಸಿಗಳು ಗೊಮೋರದ ಹಾಗೆಯೂ ಇದ್ದಾರೆ.” ಅಧ್ಯಾಯವನ್ನು ನೋಡಿ |
ಜೆರುಸಲೇಮಿನ ನ್ಯಾಯಾಧೀಶರು ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಪುಕೊಡುವರು. ಜನರಿಗೆ ಬೋಧಿಸುವ ಮೊದಲು ಜೆರುಸಲೇಮಿನ ಯಾಜಕರು ಹಣವನ್ನು ವಸೂಲಿ ಮಾಡುವರು. ಜನರು ತಮ್ಮ ಭವಿಷ್ಯದ ಬಗ್ಗೆ ಕೇಳಲು ಪ್ರವಾದಿಗಳಿಗೆ ಮುಂಗಡವಾಗಿ ಹಣ ಕೊಡುವರು. ಆಮೇಲೆ ಆ ನಾಯಕರು, “ಯೆಹೋವನು ನಮ್ಮಲ್ಲಿ ವಾಸಮಾಡುತ್ತಿದ್ದಾನೆ. ಆದ್ದರಿಂದ ನಮಗೆ ಕೆಟ್ಟದ್ದು ಏನೂ ಸಂಭವಿಸುವದಿಲ್ಲ” ಎಂದು ಹೇಳುವರು.
ನಾನು ಕಾಲ್ಪನಿಕ ಕನಸುಗಳನ್ನು ಬೋಧಿಸುವ ಸುಳ್ಳುಪ್ರವಾದಿಗಳ ವಿರೋಧಿಯಾಗಿದ್ದೇನೆ.” ಇದು ಪ್ರಭುವಿನ ನುಡಿ. “ಅವರು ತಮ್ಮ ಸುಳ್ಳುಬೋಧನೆಗಳಿಂದ ನನ್ನ ಜನರನ್ನು ಅಡ್ಡದಾರಿಗೆಳೆಯುತ್ತಾರೆ. ನಾನು ಜನರಿಗೆ ಉಪದೇಶ ಮಾಡುವದಕ್ಕಾಗಿ ಆ ಪ್ರವಾದಿಗಳನ್ನು ಕಳುಹಿಸಿಲ್ಲ. ನನಗೋಸ್ಕರವಾಗಿ ಏನನ್ನಾದರೂ ಮಾಡಲು ನಾನು ಅವರಿಗೆ ಎಂದೂ ಆಜ್ಞಾಪಿಸಿಲ್ಲ. ಅವರು ಯೆಹೂದದ ಜನರಿಗೆ ಸ್ವಲ್ಪವೂ ಸಹಾಯವನ್ನು ಮಾಡಲಾರರು” ಇದು ಯೆಹೋವನ ನುಡಿ.
ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.
ಕೊಲಾಯನ ಮಗನಾದ ಅಹಾಬ ಮತ್ತು ಮಾಸೇಯನ ಮಗನಾದ ಚಿದ್ಕೀಯ ಇವರ ವಿಷಯವಾಗಿ ಸರ್ವಶಕ್ತನಾದ ಯೆಹೋವನು ಹೀಗೆಂದನು: “ಇವರಿಬ್ಬರು ನಿಮಗೆ ಸುಳ್ಳುಪ್ರವಾದನೆ ಮಾಡಿದ್ದಾರೆ. ಅವರ ಸಂದೇಶವು ನನ್ನಿಂದ ಬಂದದ್ದು ಎಂದು ಅವರು ಹೇಳಿದ್ದಾರೆ. ಆದರೆ ಅವರು ಹೇಳಿದ್ದು ಸುಳ್ಳು. ನಾನು ಆ ಇಬ್ಬರು ಪ್ರವಾದಿಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸುವೆನು. ನೆಬೂಕದ್ನೆಚ್ಚರನು ಬಾಬಿಲೋನಿನಲ್ಲಿ ಬಂಧಿಯಾಗಿರುವ ನಿಮ್ಮೆಲ್ಲರ ಸಮ್ಮುಖದಲ್ಲಿ ಆ ಇಬ್ಬರು ಪ್ರವಾದಿಗಳನ್ನು ಕೊಲ್ಲುವನು.