ಯೆರೆಮೀಯ 23:15 - ಪರಿಶುದ್ದ ಬೈಬಲ್15 ಸರ್ವಶಕ್ತನಾದ ಯೆಹೋವನು ಪ್ರವಾದಿಗಳ ಬಗ್ಗೆ ಹೀಗೆನ್ನುತ್ತಾನೆ, “ನಾನು ಆ ಪ್ರವಾದಿಗಳನ್ನು ದಂಡಿಸುವೆನು. ಆ ಶಿಕ್ಷೆಯು ವಿಷಪೂರಿತ ಆಹಾರದಂತೆಯೂ ನೀರಿನಂತೆಯೂ ಇರುವುದು. ಪ್ರವಾದಿಗಳು ಒಂದು ಆಧ್ಯಾತ್ಮಿಕ ವ್ಯಾಧಿಯನ್ನು ಪ್ರಾರಂಭಿಸಿದರು. ಆ ವ್ಯಾಧಿಯು ಇಡೀ ದೇಶದಲ್ಲೆಲ್ಲ ಪ್ರಸರಿಸಿತು. ಆದ್ದರಿಂದ ನಾನು ಆ ಪ್ರವಾದಿಗಳನ್ನು ಶಿಕ್ಷಿಸುತ್ತೇನೆ. ಆ ವ್ಯಾಧಿಯು ಆ ಪ್ರವಾದಿಗಳಿಂದ ಜೆರುಸಲೇಮಿಗೆ ಬಂದಿತು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆದಕಾರಣ ಸೇನಾಧೀಶ್ವರನಾದ ಯೆಹೋವನು ಪ್ರವಾದಿಗಳ ವಿಷಯದಲ್ಲಿ, “ಆಹಾ, ನಾನು ಇವರಿಗೆ ಕಹಿಯಾದ ಆಹಾರ ಮತ್ತು ಪಾನಗಳನ್ನು ಕೊಡುವೆನು; ಯೆರೂಸಲೇಮಿನ ಪ್ರವಾದಿಗಳಿಂದ ಭ್ರಷ್ಟತನವು ದೇಶದಲ್ಲೆಲ್ಲಾ ಹರಡಿದೆಯಷ್ಟೆ” ಎಂದು ನುಡಿಯುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆದಕಾರಣ ಸರ್ವಶಕ್ತ ಸರ್ವೇಶ್ವರ ಪ್ರವಾದಿಗಳ ವಿಷಯದಲ್ಲಿ ಹೇಳುವುದನ್ನು ಕೇಳಿ: “ಇವರು ಇಟ್ಟಿಕಾಯನ್ನು ತಿನ್ನುವಂತೆ ಮಾಡುವೆನು. ವಿಷಬೆರೆತ ನೀರನ್ನು ಕುಡಿಯುವಂತೆ ಮಾಡುವೆನು ಜೆರುಸಲೇಮಿನ ಈ ಪ್ರವಾದಿಗಳಿಂದ ಭ್ರಷ್ಟತನ ನಾಡಿನಲ್ಲೆಲ್ಲೂ ಹರಡಿರುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆದಕಾರಣ ಸೇನಾಧೀಶ್ವರನಾದ ಯೆಹೋವನು ಪ್ರವಾದಿಗಳ ವಿಷಯದಲ್ಲಿ ಹೀಗನ್ನುತ್ತಾನೆ - ಆಹಾ, ನಾನು ಇವರಿಗೆ ಕಹಿಯಾದ ಆಹಾರಪಾನಗಳನ್ನು ಕೊಡುವೆನು; ಯೆರೂಸಲೇವಿುನ ಪ್ರವಾದಿಗಳಿಂದ ಭ್ರಷ್ಟತನವು ದೇಶದಲ್ಲೆಲ್ಲಾ ಹರಡಿದೆಯಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಪ್ರವಾದಿಗಳ ವಿಷಯವಾಗಿ ಹೇಳುವುದೇನೆಂದರೆ: “ನಾನು ಅವರಿಗೆ ಕಹಿಯಾದ ಆಹಾರ ತಿನ್ನುವುದಕ್ಕೆ ಕೊಡುವೆನು. ವಿಷದ ನೀರನ್ನು ಕುಡಿಯ ಕೊಡುವೆನು. ಏಕೆಂದರೆ ಯೆರೂಸಲೇಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ.” ಅಧ್ಯಾಯವನ್ನು ನೋಡಿ |
ನನ್ನ ಹೆಸರಿನಲ್ಲಿ ಬೋಧನೆ ಮಾಡುತ್ತಿರುವ ಈ ಪ್ರವಾದಿಗಳ ಬಗ್ಗೆ ನಾನು ಹೇಳುವದು ಇಷ್ಟೇ. ನಾನು ಆ ಪ್ರವಾದಿಗಳನ್ನು ಕಳುಹಿಸಿಲ್ಲ. ಆ ಪ್ರವಾದಿಗಳು ‘ಶತ್ರುಗಳು ಖಡ್ಗಧಾರಿಗಳಾಗಿ ಎಂದಿಗೂ ಈ ದೇಶದ ಮೇಲೆ ಧಾಳಿ ಮಾಡುವದಿಲ್ಲ. ಈ ದೇಶದಲ್ಲಿ ಎಂದೂ ಕ್ಷಾಮ ಕಾಣಿಸಿಕೊಳ್ಳುವದಿಲ್ಲ’ ಎಂದು ಹೇಳಿದ್ದಾರೆ. ಆದರೆ ಆ ಪ್ರವಾದಿಗಳು ಹಸಿವಿನ ತಾಪದಿಂದ ಸಾಯುತ್ತಾರೆ ಮತ್ತು ಶತ್ರುವಿನ ಖಡ್ಗ ಅವರನ್ನು ಕೊಲ್ಲುತ್ತದೆ.