Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 23:17 - ಪರಿಶುದ್ದ ಬೈಬಲ್‌

17 ಕೆಲವು ಜನರು ಯೆಹೋವನ ನಿಜವಾದ ಸಂದೇಶಗಳನ್ನು ದ್ವೇಷಿಸುತ್ತಾರೆ. ಆದ್ದರಿಂದ ಆ ಪ್ರವಾದಿಗಳು ಆ ಜನರಿಗೆ ಬೇರೆಯದನ್ನೇ ಹೇಳುತ್ತಾರೆ. ಅವರು ‘ನಿಮಗೆ ಶುಭವಾಗುವುದು’ ಎನ್ನುತ್ತಾರೆ. ಕೆಲವು ಜನರು ಬಹಳ ಮೊಂಡರಾಗಿದ್ದಾರೆ. ಅವರು ತಮ್ಮ ಮನಸ್ಸಿಗೆ ಬಂದುದನ್ನೇ ಮಾಡುತ್ತಾರೆ. ಅವರಿಗೆ ಈ ಪ್ರವಾದಿಗಳು ‘ನಿಮಗೆ ಯಾವ ಕೇಡೂ ಸಂಭವಿಸುವದಿಲ್ಲ’ ಎಂದು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನನ್ನನ್ನು ಅಸಡ್ಡೆಮಾಡುವವರಿಗೆ, ‘ನಿಮಗೆ ಶುಭವಾಗುವುದು ಎಂಬುದಾಗಿ ಯೆಹೋವನು ನುಡಿದಿದ್ದಾನೆ’ ಎಂದು ಹೇಳುತ್ತಲೇ ಇದ್ದಾರೆ. ಸ್ವಂತ ಹೃದಯದ ಹಟದಂತೆ ನಡೆಯುವವರೆಲ್ಲರಿಗೂ, ‘ನಿಮಗೆ ಯಾವ ಕೇಡೂ ಸಂಭವಿಸದು’ ಎಂದು ನುಡಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನನ್ನನ್ನು ಅಸಡ್ಡೆಮಾಡುವವರಿಗೆ, ‘ನಿಮಗೆ ಶುಭವಾಗುವುದು ಎಂದು ಸರ್ವೇಶ್ವರನೇ ನುಡಿದಿದ್ದಾರೆ’ ಎಂದು ಹೇಳುತ್ತಲೇ ಇದ್ದಾರೆ. ಹಟಮಾರಿ ಹೃದಯಿಗಳೆಲ್ಲರಿಗೆ, ‘ನಿಮಗೆ ಯಾವ ಕೇಡೂ ಸಂಭವಿಸದು’ ಎಂದು ನುಡಿಯುತ್ತಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನನ್ನನ್ನು ಅಸಡ್ಡೆಮಾಡುವವರಿಗೆ - ನಿಮಗೆ ಶುಭವಾಗುವದು ಎಂಬದಾಗಿ ಯೆಹೋವನು ಅಂದಿದ್ದಾನೆ ಎಂದು ಹೇಳುತ್ತಲೇ ಇದ್ದಾರೆ; ಸ್ವಂತ ಹೃದಯದ ಹಟದಂತೆ ನಡೆಯುವವರೆಲ್ಲರಿಗೂ - ನಿಮಗೆ ಯಾವ ಕೇಡೂ ಸಂಭವಿಸದು ಎಂದು ನುಡಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೂ ನನ್ನನ್ನು ಅಸಹ್ಯಿಸುವವರಿಗೆ, ಅವರು, ‘ನಿಮಗೆ ಸಮಾಧಾನವಾಗುವುದು, ಎಂದು ಯೆಹೋವ ದೇವರು ಹೇಳಿದ್ದಾರೆ,’ ಎಂದು ಹೇಳುತ್ತಲೇ ಇದ್ದಾರೆ. ತಮ್ಮ ಹೃದಯದ ಹಟದ ಪ್ರಕಾರ ನಡೆದುಕೊಳ್ಳುವವರೆಲ್ಲರಿಗೆ ‘ನಿಮ್ಮ ಮೇಲೆ ಕೇಡು ಬರುವುದಿಲ್ಲ,’ ಎನ್ನುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 23:17
34 ತಿಳಿವುಗಳ ಹೋಲಿಕೆ  

ಜೆರುಸಲೇಮಿನ ನ್ಯಾಯಾಧೀಶರು ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಪುಕೊಡುವರು. ಜನರಿಗೆ ಬೋಧಿಸುವ ಮೊದಲು ಜೆರುಸಲೇಮಿನ ಯಾಜಕರು ಹಣವನ್ನು ವಸೂಲಿ ಮಾಡುವರು. ಜನರು ತಮ್ಮ ಭವಿಷ್ಯದ ಬಗ್ಗೆ ಕೇಳಲು ಪ್ರವಾದಿಗಳಿಗೆ ಮುಂಗಡವಾಗಿ ಹಣ ಕೊಡುವರು. ಆಮೇಲೆ ಆ ನಾಯಕರು, “ಯೆಹೋವನು ನಮ್ಮಲ್ಲಿ ವಾಸಮಾಡುತ್ತಿದ್ದಾನೆ. ಆದ್ದರಿಂದ ನಮಗೆ ಕೆಟ್ಟದ್ದು ಏನೂ ಸಂಭವಿಸುವದಿಲ್ಲ” ಎಂದು ಹೇಳುವರು.


ಯೆಹೂದದಲ್ಲಿ ದುಷ್ಟರೂ ಗರ್ವಿಷ್ಠರೂ ಆಗಿರುವ ಜನರನ್ನು ಹಾಳುಮಾಡುವೆನು. ಅವರು ನನ್ನ ಸಂದೇಶವನ್ನು ಕೇಳುವುದಿಲ್ಲ. ಅವರು ಹಟಮಾರಿಗಳೂ ತಮ್ಮ ಮನಸ್ಸಿಗೆ ಬಂದಂತೆ ಮಾಡುವವರೂ ಆಗಿದ್ದಾರೆ. ಅವರು ಬೇರೆ ದೇವರುಗಳನ್ನು ಅನುಸರಿಸುತ್ತಾರೆ ಮತ್ತು ಪೂಜಿಸುತ್ತಾರೆ. ಯೆಹೂದದ ಜನರು ಈ ನಾರಿನ ನಡುಪಟ್ಟಿಯಂತೆ ಆಗುವರು. ಅವರು ಹಾಳಾಗಿ ನಿಷ್ಪ್ರಯೋಜಕರಾಗುವರು.


“ನನ್ನ ಜನರಲ್ಲಿ ಪಾಪಿಗಳು ಹೇಳುತ್ತಾರೆ: ‘ನಮಗೆ ಯಾವ ಕೇಡೂ ಸಂಭವಿಸುವುದಿಲ್ಲ.’ ಆದರೆ ಅವರೆಲ್ಲಾ ಕತ್ತಿಯಿಂದ ಸಾಯುವರು.”


ಕೆಲವು ಸುಳ್ಳುಪ್ರವಾದಿಗಳೆದ್ದು ಯೆಹೋವನ ಜನರಿಗೆ ಸುಳ್ಳನ್ನು ತಿಳಿಸುತ್ತಾರೆ. ಅಂಥವರ ಬಗ್ಗೆ ಯೆಹೋವನು ಹೇಳುವುದೇನೆಂದರೆ, “ಈ ಪ್ರವಾದಿಗಳ ಮಾತುಗಳು ಅವರ ಹೊಟ್ಟೆಗಳನ್ನವಲಂಬಿಸಿವೆ. ಜನರು ಅವರಿಗೆ ಆಹಾರ ಕೊಟ್ಟರೆ ಶಾಂತಿಯನ್ನು ವಾಗ್ದಾನ ಮಾಡುತ್ತಾರೆ. ಜನರು ಅವರಿಗೆ ಆಹಾರ ಕೊಡದಿದ್ದರೆ ಯುದ್ಧವನ್ನು ವಾಗ್ದಾನ ಮಾಡುತ್ತಾರೆ.


ಯೆಹೂದದ ಜನರು ತಮ್ಮದೇ ಆದ ರೀತಿಯಲ್ಲಿ ಜೀವಿಸಿದರು. ಅವರು ಹಟಮಾರಿಗಳಾಗಿದ್ದರು. ಅವರು ಸುಳ್ಳುದೇವರಾದ ಬಾಳನನ್ನು ಅನುಸರಿಸಿದರು. ಅವರ ಪೂರ್ವಿಕರು ಸುಳ್ಳುದೇವರುಗಳ ಸೇವೆ ಮಾಡುವದನ್ನು ಅವರಿಗೆ ಕಲಿಸಿದರು.”


ಪ್ರವಾದಿಗಳು ಮತ್ತು ಯಾಜಕರು ನಮ್ಮ ಜನರ ಆಳವಾದ ಗಾಯಗಳನ್ನು ಕೇವಲ ಅಲ್ಪಗಾಯಗಳಂತೆ ಪರಿಗಣಿಸಿ ಚಿಕಿತ್ಸೆ ಕೊಡುತ್ತಿದ್ದಾರೆ. “ಎಲ್ಲಾ ಚೆನ್ನಾಗಿದೆ, ಎಲ್ಲಾ ಚೆನ್ನಾಗಿದೆ” ಎಂದು ಅವರು ಹೇಳುತ್ತಾರೆ. ಆದರೆ ಎಲ್ಲಾ ಚೆನ್ನಾಗಿಲ್ಲ.


“ಆ ಜನರು ಯೆಹೋವನ ಬಗ್ಗೆ ಸುಳ್ಳು ಹೇಳಿದ್ದಾರೆ. ‘ಯೆಹೋವನು ನಮಗೇನೂ ಮಾಡುವುದಿಲ್ಲ. ನಮಗೆ ಕೆಟ್ಟದ್ದೇನೂ ಆಗುವದಿಲ್ಲ. ಯಾವ ಸೈನ್ಯವೂ ನಮ್ಮ ಮೇಲೆ ಧಾಳಿ ಮಾಡುವುದಿಲ್ಲ; ನಾವೆಂದೂ ಉಪವಾಸಬೀಳುವದಿಲ್ಲ’ ಎಂದು ಅವರು ಹೇಳಿದ್ದಾರೆ.


“ನಾನು ತಿಳಿಸಿದ ಶಾಪವನ್ನೆಲ್ಲಾ ಕೇಳಿಸಿಕೊಂಡು, ‘ನಾನು ನನ್ನ ಇಷ್ಟ ಬಂದಂತೆ ಮಾಡುತ್ತೇನೆ. ನನಗೆ ಯಾವ ಕೇಡೂ ಆಗುವುದಿಲ್ಲ’ ಎಂದು ಯಾವನಾದರೂ ಹೇಳಿಕೊಂಡು ತನ್ನನ್ನು ತಾನೇ ಸಮಾಧಾನಪಡಿಸಿಕೊಂಡರೆ, ಅವನು ತನಗೆ ಮಾತ್ರವಲ್ಲ ಎಲ್ಲಾ ಒಳ್ಳೆಯ ಜನರಿಗೂ ಕೇಡಾಗುವಂತೆ ಮಾಡುತ್ತಾನೆ.


ಜನರು ಭವಿಷ್ಯವನ್ನು ತಿಳಿಯುವುದಕ್ಕೆ ತಮ್ಮ ಸಣ್ಣ ಬೊಂಬೆಗಳನ್ನೋ ಮಂತ್ರಜಾಲವನ್ನೋ ಉಪಯೋಗಿಸುವರು. ಆದರೆ ಅವೆಲ್ಲಾ ನಿಷ್ಪ್ರಯೋಜಕ. ಆ ಜನರು ದರ್ಶನವನ್ನು ನೋಡುವರು ಮತ್ತು ಕನಸುಗಳ ಬಗ್ಗೆ ಹೇಳುವರು. ಆದರೆ ಅವುಗಳೆಲ್ಲಾ ನಿಷ್ಪ್ರಯೋಜಕ ಸುಳ್ಳುಗಳಾಗಿವೆ. ಆದ್ದರಿಂದ ಜನರು ಸಹಾಯಕ್ಕಾಗಿ ಕೂಗುತ್ತಾ ಅತ್ತಿಂದಿತ್ತ ತಿರುಗಾಡುವ ಕುರಿಗಳಂತಿದ್ದಾರೆ. ಅವುಗಳನ್ನು ನಡಿಸಲು ಕುರುಬರೇ ಇಲ್ಲ.


“‘ಪ್ರವಾದಿನಿಯರೇ, ನೀವು ಸುಳ್ಳುಗಾರ್ತಿಯರಾಗಿದ್ದೀರಿ. ನಿಮ್ಮ ಸುಳ್ಳುಗಳು ಒಳ್ಳೆಯವರಿಗೆ ದುಃಖವನ್ನು ಬರಮಾಡುವವು. ಒಳ್ಳೆಯ ವ್ಯಕ್ತಿಗಳಿಗೆ ನೋವು ಮಾಡಲು ನನಗೆ ಮನಸ್ಸಿಲ್ಲ. ದುಷ್ಟ ಜನರು ತಮ್ಮ ದುರ್ಮಾರ್ಗಗಳನ್ನು ತೊರೆದುಬಿಡದಂತೆಯೂ ತಮ್ಮ ಪ್ರಾಣಗಳನ್ನು ರಕ್ಷಿಸಿಕೊಳ್ಳದಂತೆಯೂ ನೀವು ಪ್ರೋತ್ಸಾಹಿಸುತ್ತೀರಿ.


“ಮತ್ತೆಮತ್ತೆ ಆ ಸುಳ್ಳು ಪ್ರವಾದಿಗಳು ನನ್ನ ಜನರಿಗೆ ಸುಳ್ಳು ಹೇಳಿದರು. ಅವರು ಶಾಂತಿ ಇರುವದೆಂದು ಹೇಳಿದರು. ಆದರೆ ಶಾಂತಿ ಇರಲಿಲ್ಲ. ಅದು ಈ ರೀತಿಯಲ್ಲಿದೆ: ಜನರು ಬಲಹೀನವಾದ ಗೋಡೆಯನ್ನು ಕಟ್ಟುತ್ತಾರೆ; ಅದು ಬಲವಾಗಿ ಕಾಣುವಂತೆ ಮಾಡಲು ಪ್ರವಾದಿಗಳು ಅದಕ್ಕೆ ತೆಳುವಾದ ಮಡ್ಡಿ ಮಾಡುತ್ತಾರೆ.


ಆಗ ಯೆರೆಮೀಯನ ವೈರಿಗಳು ಹೀಗೆಂದರು: “ಬನ್ನಿ, ನಾವು ಯೆರೆಮೀಯನ ವಿರುದ್ಧ ಒಳಸಂಚು ಮಾಡೋಣ. ಯಾಜಕನಿಂದ ಧರ್ಮೋಪದೇಶವು ತಪ್ಪುವದಿಲ್ಲ, ಇದು ಖಂಡಿತ. ಜ್ಞಾನಿಗಳಿಂದ ಮಂತ್ರಾಲೋಚನೆಯು ಇದ್ದೇ ಇರುತ್ತದೆ. ದೈವೋಕ್ತಿಯು ಪ್ರವಾದಿಯಿಂದ ಎಂದಿಗೂ ತಪ್ಪದು. ಆದ್ದರಿಂದ ಅವನ ಬಗ್ಗೆ ಸುಳ್ಳು ಹೇಳಿ ನಾಶಮಾಡೋಣ. ಅವನು ಹೇಳುವ ಯಾವುದಕ್ಕೂ ನಾವು ಗಮನಕೊಡಬೇಕಾಗಿಲ್ಲ.”


ಪ್ರವಾದಿಗಳು ಮತ್ತು ಯಾಜಕರು ನನ್ನ ಜನರಿಗಾದ ದೊಡ್ಡ ಗಾಯಗಳಿಗೆ ಚಿಕ್ಕಗಾಯಗಳಿಗೋ ಎಂಬಂತೆ ಚಿಕಿತ್ಸೆ ಮಾಡುತ್ತಾರೆ. ವಾಸಿಯಾಗಿಲ್ಲದಿದ್ದರೂ ‘ವಾಸಿಯಾಗಿದೆ’ ಎನ್ನುತ್ತಾರೆ.


ಆ ಕಾಲದಲ್ಲಿ ಜೆರುಸಲೇಮ್ ನಗರಕ್ಕೆ ‘ಯೆಹೋವನ ಸಿಂಹಾಸನ’ ಎಂದು ಕರೆಯುವರು. ಯೆಹೋವನ ಹೆಸರಿಗೆ ಗೌರವ ಸೂಚಿಸಲು ಎಲ್ಲಾ ಜನಾಂಗದವರು ಜೆರುಸಲೇಮಿನಲ್ಲಿ ಬಂದು ಸೇರುವರು. ಅವರು ತಮ್ಮ ದುಷ್ಟ ಮತ್ತು ಹಟಮಾರಿ ಹೃದಯಗಳನ್ನು ಅನುಸರಿಸುವುದಿಲ್ಲ.


ಒಂದು ತಿಂಗಳು ಪೂರ್ತಿ ಮಾಂಸವನ್ನು ತಿನ್ನುವಿರಿ. ಅದು ನಿಮ್ಮ ಮೂಗಿನಲ್ಲಿ ಓಕರಿಕೆಯಾಗಿ ಹೊರಬರುವ ತನಕ ಮತ್ತು ನಿಮಗೆ ಅಸಹ್ಯವಾಗುವವರೆಗೆ ಅದನ್ನು ತಿನ್ನುವಿರಿ. ನೀವು ನಿಮ್ಮ ಮಧ್ಯದಲ್ಲಿರುವ ಯೆಹೋವನನ್ನು ತಿರಸ್ಕರಿಸಿದ್ದರಿಂದ ಮತ್ತು ‘ನಾವೇಕೆ ಈಜಿಪ್ಟನ್ನು ಬಿಟ್ಟು ಬಂದೆವು?’ ಎಂದು ಆತನ ಮುಂದೆ ದೂರು ಹೇಳಿದ್ದರಿಂದ ಇದು ನಿಮಗೆ ಸಂಭವಿಸುವುದು.”


ಆದುದರಿಂದ ಈ ಉಪದೇಶವನ್ನು ಅನುಸರಿಸದವನು ಅವಿಧೇಯನಾಗಿರುವುದು ದೇವರಿಗೇ ಹೊರತು ಮಾನವನಿಗಲ್ಲ. ನಮಗೆ ತನ್ನ ಪವಿತ್ರಾತ್ಮನನ್ನು ನೀಡಿದಾತನು ದೇವರೇ.


“ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನೇ ಕೇಳುವವನಾಗಿದ್ದಾನೆ. ನಿಮ್ಮನ್ನು ಅಂಗೀಕರಿಸದವನು ನನ್ನನ್ನೇ ಅಂಗಿಕರಿಸದವನಾಗಿದ್ದಾನೆ. ನನ್ನನ್ನು ನಿರಾಕರಿಸುವವನು ನನ್ನನ್ನು ಕಳುಹಿಸಿದಾತನನ್ನೇ (ದೇವರು) ನಿರಾಕರಿಸುವವನಾಗಿದ್ದಾನೆ” ಎಂದು ಹೇಳಿದನು.


ನಿನ್ನ ಪ್ರವಾದಿಗಳು ನಿನಗಾಗಿ ದರ್ಶನಗಳನ್ನು ಕಂಡರು. ಆದರೆ ಅವರ ದರ್ಶನಗಳು ನಿರರ್ಥಕವಾದ ಹುಸಿನುಡಿಗಳಾಗಿವೆ. ಅವರು ನಿನ್ನ ಪಾಪಕೃತ್ಯಗಳನ್ನು ಬಹಿರಂಗಪಡಿಸಲಿಲ್ಲ. ಅವರು ಪರಿಸ್ಥಿತಿಯನ್ನು ಸುಧಾರಿಸುವ ಪ್ರಯತ್ನ ಮಾಡಲಿಲ್ಲ. ಅವರು ನಿನ್ನ ಕುರಿತು ಸಂದೇಶಗಳನ್ನು ಪ್ರವಾದಿಸಿದರು. ಆದರೆ ಅವು ನಿರಾಧಾರವಾದ ಸಂದೇಶಗಳಾಗಿದ್ದು ನಿನ್ನನ್ನು ಮರುಳುಗೊಳಿಸಿದವು.


“ಆದರೆ ನಿಮ್ಮ ಪೂರ್ವಿಕರು ನನ್ನ ಮಾತನ್ನು ಕೇಳಲಿಲ್ಲ. ಅವರು ನನ್ನ ಕಡೆಗೆ ಗಮನ ಕೊಡಲಿಲ್ಲ. ಅವರು ಮೊಂಡರಾಗಿದ್ದು ತಮ್ಮ ಮನಸ್ಸಿಗೆ ಬಂದಂತೆ ನಡೆದುಕೊಂಡರು. ಅವರು ಒಳ್ಳೆಯವರಾಗಲಿಲ್ಲ. ಅವರು ಇನ್ನೂ ಕೆಟ್ಟವರಾದರು. ಅವರು ಹಿಂದಕ್ಕೆ ಸರಿದರು, ಮುಂದಕ್ಕೆ ಬರಲಿಲ್ಲ.


ಆಗ ಯೆರೆಮೀಯನೆಂಬ ನಾನು, “ನನ್ನ ಒಡೆಯನಾದ ಯೆಹೋವನೇ, ನೀನು ಯೆಹೂದ ಮತ್ತು ಜೆರುಸಲೇಮಿನ ಜನರಿಗೆ ಮೋಸ ಮಾಡಿದೆ, ‘ನೀವು ಶಾಂತಿಯಿಂದ ಇರುವಿರಿ’ ಎಂದು ನೀನು ಅವರಿಗೆ ಹೇಳಿದೆ. ಆದರೆ ಈಗ ಅವರ ಕತ್ತಿನ ಮೇಲೆ ಖಡ್ಗ ಇದೆ” ಅಂದೆನು.


ನನ್ನ ದೇವರು ಹೇಳುವುದೇನೆಂದರೆ: “ದುಷ್ಟ ಜನರಿಗೆ ಸಮಾಧಾನವಿಲ್ಲ.”


ನೀನು ಅವನ ಹೆಂಡತಿಯನ್ನು ತೆಗೆದುಕೊಂಡದ್ದರಿಂದ ಮತ್ತು ನನ್ನ ಆಜ್ಞೆಯನ್ನು ತಿರಸ್ಕರಿಸಿದ್ದರಿಂದ ಕತ್ತಿಯು ನಿನ್ನ ಕುಟುಂಬವನ್ನು ಸದಾ ಹಿಡಿದಿರುವುದು.’


“ನಿಮ್ಮ ತಂದೆಯ ಕುಟುಂಬವು ಸರ್ವಕಾಲವೂ ಆತನ ಸೇವೆ ಮಾಡುವುದೆಂದು ಇಸ್ರೇಲಿನ ದೇವರಾದ ಯೆಹೋವನು ವಾಗ್ದಾನ ಮಾಡಿದ್ದನು. ಆದರೆ ಈಗ ಯೆಹೋವನು ಹೀಗೆನ್ನುತ್ತಾನೆ: ‘ಅದೆಂದಿಗೂ ಸಾಧ್ಯವಿಲ್ಲ. ನನ್ನನ್ನು ಸನ್ಮಾನಿಸುವವರನ್ನು ನಾನೂ ಸನ್ಮಾನಿಸುತ್ತೇನೆ. ಆದರೆ ನನ್ನನ್ನು ತಿರಸ್ಕರಿಸುವವರನ್ನು ನಾನೂ ತಿರಸ್ಕರಿಸುತ್ತೇನೆ.


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ, “ಮಕ್ಕಳು ಹೆತ್ತವರನ್ನು ಗೌರವಿಸುವರು. ಸೇವಕರು ಯಜಮಾನನನ್ನು ಗೌರವಿಸುತ್ತಾರೆ. ನಾನು ನಿಮ್ಮ ತಂದೆಯಾಗಿದ್ದೇನೆ, ಆದರೆ ನನ್ನನ್ನು ಯಾಕೆ ಗೌರವಿಸುವದಿಲ್ಲ? ನಾನು ನಿಮ್ಮ ಯಜಮಾನನಾಗಿದ್ದೇನೆ, ಆದರೆ ನನ್ನನ್ಯಾಕೆ ಗೌರವಿಸುವದಿಲ್ಲ? ಯಾಜಕರೇ, ನೀವು ನನ್ನ ಹೆಸರನ್ನು ಗೌರವಿಸುವದಿಲ್ಲ.” ಆದರೆ ನೀವು, “ನಾವು ನಿನಗೆ ಯಾವ ವಿಷಯದಲ್ಲಿ ಗೌರವ ಕೊಟ್ಟಿಲ್ಲ” ಎಂದು ಕೇಳುತ್ತೀರಿ.


“ಆ ಸಮಯಗಳಲ್ಲಿ ನಾನು ದೀಪವನ್ನು ಹಚ್ಚಿ ಜೆರುಸಲೇಮಿನಲ್ಲಿ ಹುಡುಕಾಡುವೆನು. ತಮ್ಮ ಸ್ವಂತ ರೀತಿಯಲ್ಲಿ ನಡೆದು ತೃಪ್ತಿಯಾಗಿರುವ ಜನರನ್ನು ಕಂಡುಕೊಳ್ಳುವೆನು. ಅವರು ಹೇಳುವುದೇನೆಂದರೆ, ‘ಯೆಹೋವನು ಏನೂ ಮಾಡುವುದಿಲ್ಲ. ಅವನು ಸಹಾಯವನ್ನೂ ಮಾಡುವುದಿಲ್ಲ. ಜನರಿಗೆ ಕೆಡುಕನ್ನೂ ಮಾಡುವುದಿಲ್ಲ.’ ಅಂಥವರನ್ನು ನಾನು ಹಿಡಿದು ಶಿಕ್ಷಿಸುವೆನು.


ಅವರು ಪ್ರವಾದಿಗಳಿಗೆ, “ನಾವು ಮಾಡಬೇಕಿರುವ ಕಾರ್ಯಗಳ ಬಗ್ಗೆ ದೈವೋಕ್ತಿ ನುಡಿಯಬೇಡಿ, ನಮಗೆ ಸತ್ಯವನ್ನು ತಿಳಿಸಬೇಡಿ. ನಮಗೊಪ್ಪುವ ಮನರಂಜನೆಯ ಮಾತುಗಳನ್ನಾಡಿ. ನಮಗೋಸ್ಕರ ಒಳ್ಳೆಯ ಸಂಗತಿಗಳನ್ನೇ ನಿಮ್ಮ ದರ್ಶನಗಳಲ್ಲಿ ನೋಡಿರಿ.


ಆದರೆ ಯೆಹೂದದ ಜನರು, ‘ಪ್ರಯತ್ನ ಮಾಡುವದರಿಂದ ಏನೂ ಪ್ರಯೋಜನವಿಲ್ಲ. ನಮ್ಮ ಮನಸ್ಸಿಗೆ ಬಂದಂತೆ ನಾವು ಮಾಡುತ್ತಿದ್ದೇವೆ. ನಮ್ಮಲ್ಲಿ ಪ್ರತಿಯೊಬ್ಬರೂ ನಮ್ಮ ದುಷ್ಟ ಮತ್ತು ಮೊಂಡುಮನಸ್ಸು ಹೇಳಿದಂತೆ ನಡೆಯುವೆವು’ ಎಂಬುದಾಗಿ ಉತ್ತರಿಸುವರು” ಎಂದನು.


ಜನರೆದುರಿನಲ್ಲಿ ನನಗೆ ನೀವು ಮಹತ್ವವನ್ನು ಕೊಡುವದಿಲ್ಲ. ಸ್ವಲ್ಪ ಬಾರ್ಲಿಗಾಗಿಯೂ ಕೆಲವು ತುಂಡು ರೊಟ್ಟಿಗಾಗಿಯೂ ನೀವು ನನಗೆ ವಿರುದ್ಧವಾಗಿ ವರ್ತಿಸುತ್ತೀರಿ. ನನ್ನ ಜನರಿಗೆ ನೀವು ಸುಳ್ಳನ್ನು ಆಡುತ್ತೀರಿ. ಅವರಿಗೆ ಸುಳ್ಳೆಂದರೆ ಬಹಳ ಪ್ರೀತಿ. ನೀವು ಸಾಯತಕ್ಕಲ್ಲದವರನ್ನು ಸಾವಿಗೀಡು ಮಾಡುತ್ತೀರಿ. ಬದುಕತಕ್ಕಲ್ಲದವರನ್ನು ಜೀವಂತವಾಗಿಡುತ್ತೀರಿ.


ಈ ಜನರು ನನ್ನ ಮಾತುಗಳನ್ನು ಕೇಳಲು ಇಷ್ಟಪಡುವದಿಲ್ಲ. ಆದರೆ ಬೇರೊಬ್ಬನ ಸುಳ್ಳು ಮಾತುಗಳನ್ನು ಕೇಳಲು ಇಷ್ಟಪಡುವರು. ಸುಳ್ಳು ಪ್ರವಾದಿಯು ಬಂದು, “ನಿಮಗೆ ಒಳ್ಳೆಯ ಭವಿಷ್ಯವಿದೆ. ಬೇಕಾದಷ್ಟು ದ್ರಾಕ್ಷಾರಸ, ಮದ್ಯವು ನಿಮಗೆ ದೊರಕುವವು” ಎಂದು ಹೇಳಿದರೆ ಅವರು ಅವನನ್ನು ನಂಬಿ ಸ್ವೀಕರಿಸಿಕೊಳ್ಳುವರು.


ಇಲ್ಲಿರುವ ಯಾವ ಪುರುಷನಾಗಲಿ ಸ್ತ್ರೀಯಾಗಲಿ ಯಾವ ಗೋತ್ರದವರಾಗಲಿ ನಿಮ್ಮ ದೇವರಾದ ಯೆಹೋವನನ್ನು ಬಿಟ್ಟುಹೋಗದಂತೆ ನೋಡಿಕೊಳ್ಳಿರಿ. ಯಾವನೂ ಹೋಗಿ ಬೇರೆ ಜನಾಂಗಗಳ ದೇವರುಗಳ ಸೇವೆಮಾಡಬಾರದು. ಅಂಥದ್ದನ್ನು ಮಾಡುವ ಜನರು ಕಹಿಯಾದ ಮತ್ತು ವಿಷಭರಿತವಾದ ಹಣ್ಣನ್ನು ಬಿಡುವ ಗಿಡದಂತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು