Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 23:19 - ಪರಿಶುದ್ದ ಬೈಬಲ್‌

19 ಈಗ ಯೆಹೋವನಿಂದ ದಂಡನೆಯು ಬಿರುಗಾಳಿಯಂತೆ ಬರುವುದು. ಯೆಹೋವನ ಕೋಪವು ತೂಫಾನಿನಂತೆ ದುಷ್ಟರ ತಲೆಯ ಮೇಲೆ ಆರ್ಭಟಿಸಿ ಬೀಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆಹಾ, ಯೆಹೋವನ ರೋಷವೆಂಬ ಬಿರುಗಾಳಿಯು, ಸುಂಟರಗಾಳಿಯು ಹೊರಟಿದೆ. ಅದು ದುಷ್ಟರ ತಲೆಯ ಮೇಲೆ ಹೊಡೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಇಗೋ ಕೇಳಿ: ಸರ್ವೇಶ್ವರನ ಕೋಪವೆಂಬ ಬಿರುಗಾಳಿ ಹೊರಟಿದೆ. ಅದು ದುಷ್ಟರ ತಲೆಯ ಮೇಲೆ ಸುಂಟರಗಾಳಿಯಂತೆ ಬಡಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆಹಾ, ಯೆಹೋವನ ರೋಷವೆಂಬ ಬಿರುಗಾಳಿಯು, ಸುಂಟರಗಾಳಿಯು, ಹೊರಟಿದೆ; ಅದು ದುಷ್ಟರ ತಲೆಯ ಮೇಲೆ ಹೊಡೆಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಇಗೋ, ಯೆಹೋವ ದೇವರ ಬಿರುಗಾಳಿಯು ಉಗ್ರವಾಗಿ ಹೊರಟಿದೆ. ಅಘೋರವಾದ ಆ ಬಿರುಗಾಳಿಯು ದುಷ್ಟರ ತಲೆಯ ಮೇಲೆ ಕಠಿಣವಾಗಿ ಬೀಳುವುದು

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 23:19
19 ತಿಳಿವುಗಳ ಹೋಲಿಕೆ  

ಯೆಹೋವನು ಬಹಳ ಕೋಪ ತಾಳಿದ್ದನು. ಅವನು ಜನರನ್ನು ಶಿಕ್ಷಿಸಿದನು. ಆ ಶಿಕ್ಷೆಯು ಒಂದು ಬಿರುಗಾಳಿಯಂತೆ ಬಂದಿತು. ಆ ಶಿಕ್ಷೆಯು ದುಷ್ಟಜನರ ಮೇಲೆ ತೂಫಾನಿನಂತೆ ಬಂದಿತು.


“ವಿಪತ್ತುಗಳು ಬಹುಬೇಗ ದೇಶದಿಂದ ದೇಶಕ್ಕೆ ಹರಡುವವು. ಅವು ಭೂಲೋಕದ ಎಲ್ಲಾ ದೂರದೂರದ ದೇಶಗಳಲ್ಲಿ ಭಯಂಕರವಾದ ಬಿರುಗಾಳಿಯಂತೆ ಬರುವವು.”


ಆದ್ದರಿಂದ ನಾನು ರಬ್ಬದ ಗೋಡೆಗಳಲ್ಲಿ ಬೆಂಕಿ ಹಾಕುವೆನು. ಆ ಬೆಂಕಿಯು ರಬ್ಬದ ಉನ್ನತ ಗೋಪುರಗಳನ್ನು ನಾಶಮಾಡುವದು; ಹಗಲಿನ ಯುದ್ಧದ ಕೂಗಾಟದಂತೆಯೂ ಸುಂಟರಗಾಳಿಯಂತೆಯೂ ಸಂಕಟವು ಅವರ ದೇಶಕ್ಕೆ ಬರುವದು.


ಸಮುದ್ರದ ಮರುಭೂಮಿಗೆ ದುಃಖದ ಸಂದೇಶ: ನೆಗೆವ್ ಮೂಲಕ ಬೀಸುವ ಬಿರುಗಾಳಿಯಂತೆ ಮರುಭೂಮಿಯಿಂದಲೂ ಭಯಂಕರ ದೇಶದಿಂದಲೂ ಒಬ್ಬನು ದಂಡೆತ್ತಿ ಬರುವನು.


ಆಪತ್ತು ಬಂದಾಗ ದುಷ್ಟನು ನಾಶವಾಗುವನು. ಆದರೆ ಒಳ್ಳೆಯವನು ಸದಾಕಾಲ ಬಲವಾಗಿ ನಿಲ್ಲುವನು.


ಯೆಹೋವನು ಅವರಿಗೆ ಕಾಣಿಸಿಕೊಂಡು ತನ್ನ ಬಾಣವನ್ನು ಮಿಂಚಿನ ವೇಗದಲ್ಲಿ ಹಾರಿಸುವನು. ನನ್ನ ಒಡೆಯನಾದ ಯೆಹೋವನು ತುತ್ತೂರಿ ಊದಿದಾಗ ಮರುಭೂಮಿಯ ಬಿರುಗಾಳಿಯಂತೆ ಸೈನ್ಯವು ಮುಂದಕ್ಕೆ ನುಗ್ಗುವುದು.


ಆ ಸಮಯದಲ್ಲಿ ಯೆಹೂದ ಮತ್ತು ಜೆರುಸಲೇಮಿನ ಜನರಿಗೆ ಒಂದು ಸಂದೇಶವನ್ನು ಕೊಡಲಾಗುವುದು. “ಬೋಳುಬೆಟ್ಟಗಳಿಂದ ಒಂದು ಬಿಸಿಗಾಳಿಯು ಬೀಸುವುದು. ಅದು ಮರಳುಗಾಡಿನಿಂದ ಬೀಸುವುದು. ಇದು ರೈತನು ತೂರಿ ಹೊಟ್ಟಿನಿಂದ ಕಾಳನ್ನು ಬೇರ್ಪಡಿಸಲು ಬೇಕಾಗುವ ಸೌಮ್ಯವಾದ ಗಾಳಿಯಂತಲ್ಲ.


ಇವರು ನೆಲದಲ್ಲಿ ನೆಟ್ಟಿರುವ ಸಸಿಗಳಂತಿರುವರು. ಅವುಗಳ ಬೇರುಗಳು ನೆಲದೊಳಗೆ ಆಳವಾಗಿ ಹೋಗುವ ಮೊದಲೇ ದೇವರ ಉಸಿರಿಗೆ ಅವು ಬಾಡಿ ಸಾಯುವವು; ಗಾಳಿಯು ಒಣಹುಲ್ಲಿನಂತೆ ಅವುಗಳನ್ನು ಬಡಿದುಕೊಂಡು ಹೋಗುವದು.


ಮಹಾ ಸಂಕಷ್ಟವು ಕೆಟ್ಟ ಬಿರುಗಾಳಿಯಂತೆ ನಿಮಗೆ ಬರುವುದು. ತೊಂದರೆಗಳು ಬಲವಾದ ಗಾಳಿಯಂತೆ ನಿಮಗೆ ಬಡಿಯುವುದು. ನಿಮ್ಮ ಕಷ್ಟಗಳು ಮತ್ತು ದುಃಖಗಳು ನಿಮ್ಮ ಮೇಲೆ ಬಹು ಭಾರವಾಗಿರುತ್ತವೆ.


ಒಲೆಯಲ್ಲಿ ಉರಿದುಹೋಗುವ ಮುಳ್ಳುಕಡ್ಡಿಗಳನ್ನು ಗಾಳಿಯು ಹಾರಿಸಿಬಿಡುವಂತೆ ದೇವರ ಉಗ್ರಕೋಪವು ಅವರನ್ನು ನಾಶಮಾಡಲಿ.


ಯೆಹೋವನು ಹೀಗೆನ್ನುತ್ತಾನೆ: “ನಾನು ಭಯಂಕರವಾದ ಬಿರುಗಾಳಿ ಬೀಸುವಂತೆ ಮಾಡುವೆನು. ಅದು ಬಾಬಿಲೋನಿನ ಮೇಲೂ ಬಾಬಿಲೋನಿನ ಜನರ ಮೇಲೂ ಬೀಸುವಂತೆ ಮಾಡುವೆನು.


ಉತ್ತರ ದಿಕ್ಕಿನಿಂದ ಒಂದು ದೊಡ್ಡ ಬಿರುಗಾಳಿ ಬರುವದನ್ನು ಯೆಹೆಜ್ಕೇಲನಾದ ನಾನು ನೋಡಿದೆನು. ಬಿರುಗಾಳಿಯೊಡನೆ ಕೂಡಿದ ಒಂದು ದೊಡ್ಡ ಮೋಡವು ಅಲ್ಲಿತ್ತು. ಅದರಿಂದ ಬೆಂಕಿಯು ಪ್ರಜ್ವಲಿಸುತ್ತಿತ್ತು. ಮೋಡದ ಸುತ್ತಲೂ ಬೆಳಕಿತ್ತು. ಬೆಂಕಿಯ ಮಧ್ಯದಲ್ಲಿ ಕಾದಲೋಹದಂತೆ ಹೊಳೆಯುತ್ತಿದ್ದ ಏನನ್ನೊ ಕಂಡೆನು.


ನಾನು ಇತರ ಜನಾಂಗಗಳನ್ನು ಬಿರುಗಾಳಿಯಂತೆ ಅವರ ಬಳಿಗೆ ಕಳುಹಿಸುವೆನು. ಆ ರಾಷ್ಟ್ರಗಳನ್ನು ಅವರು ತಿಳಿದಿರಲಿಲ್ಲ. ಆದರೆ ಆ ದೇಶಗಳವರು ಇವರ ದೇಶವನ್ನು ದಾಟಿಹೋಗುವಾಗ ಆ ಸುಂದರವಾದ ದೇಶವು ನಾಶವಾಗುವದು.”


ಆ ಧ್ವನಿಯು ಭೂಲೋಕದ ಎಲ್ಲಾ ಕಡೆಗೂ ಹಬ್ಬುತ್ತದೆ. ಈ ಧ್ವನಿಯೆಲ್ಲಾ ಏತಕ್ಕೆ? ಯೆಹೋವನು ಎಲ್ಲಾ ಜನಾಂಗದ ಜನರನ್ನು ದಂಡಿಸುತ್ತಿದ್ದಾನೆ. ಯೆಹೋವನು ಜನರ ವಿರುದ್ಧ ತನ್ನ ವಾದವನ್ನು ಹೇಳಿದನು. ಜನರ ಬಗ್ಗೆ ತೀರ್ಪನ್ನು ಕೊಟ್ಟನು. ಆತನು ದುಷ್ಟರನ್ನು ಖಡ್ಗದಿಂದ ಕೊಲ್ಲುತ್ತಿದ್ದಾನೆ.’” ಈ ಸಂದೇಶವು ಯೆಹೋವನಿಂದ ಬಂದದ್ದು.


ಜನರನ್ನು ಸಂಪೂರ್ಣವಾಗಿ ಶಿಕ್ಷಿಸುವವರೆಗೆ ಯೆಹೋವನು ಕೋಪಿಷ್ಟನಾಗಿಯೇ ಇರುವನು. ಯೆಹೂದದ ಜನರಾದ ನೀವು ಅದನ್ನು ಕೊನೆಯ ದಿನಗಳಲ್ಲಿ ತಿಳಿದುಕೊಳ್ಳುವಿರಿ.


ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, “ನಾನು ಸಿಟ್ಟುಗೊಂಡಿದ್ದೇನೆ. ಮತ್ತು ನಿಮಗೆ ವಿರುದ್ಧವಾಗಿ ಬಿರುಗಾಳಿಯನ್ನು ಕಳುಹಿಸುತ್ತೇನೆ. ನಾನು ಕೋಪಗೊಂಡಿದ್ದೇನೆ. ಆದ್ದರಿಂದ ಭಾರೀ ಮಳೆಯು ಬೀಳುವಂತೆ ಮಾಡುವೆನು. ನಾನು ಕೋಪಗೊಂಡಿದ್ದರಿಂದ ನಾಶಕರವಾದ ಆಲಿಕಲ್ಲು ಆಕಾಶದಿಂದ ಬೀಳುವಂತೆ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು