Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 23:21 - ಪರಿಶುದ್ದ ಬೈಬಲ್‌

21 ನಾನು ಆ ಪ್ರವಾದಿಗಳನ್ನು ಕಳುಹಿಸಲಿಲ್ಲ. ಆದರೂ ಅವರು ತಮ್ಮ ಸಂದೇಶವನ್ನು ಕೊಡಲು ಆತುರಪಟ್ಟರು. ನಾನು ಅವರೊಂದಿಗೆ ಮಾತನಾಡಲಿಲ್ಲ ಆದರೂ ಅವರು ನನ್ನ ಹೆಸರು ಹೇಳಿ ಉಪದೇಶ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಾನು ಈ ಪ್ರವಾದಿಗಳನ್ನು ಕಳುಹಿಸಲಿಲ್ಲ, ತಾವೇ ಆತುರಗೊಂಡರು; ನಾನು ಇವರಿಗೆ ಏನೂ ಹೇಳಲಿಲ್ಲ, ಅವರೇ ಪ್ರವಾದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಸರ್ವೇಶ್ವರ: “ಈ ಪ್ರವಾದಿಗಳನ್ನು ಕಳುಹಿಸಿದವನು ನಾನಲ್ಲ; ತಾವೇ ಓಡೋಡಿ ಬಂದಿದ್ದಾರೆ. ನಾನು ಇವರಿಗೆ ಏನೂ ಹೇಳಲಿಲ್ಲ; ತಾವೇ ಪ್ರವಾದನೆ ಮಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನಾನು ಈ ಪ್ರವಾದಿಗಳನ್ನು ಕಳುಹಿಸಲಿಲ್ಲ, ತಾವೇ ಆತುರಗೊಂಡರು; ನಾನು ಇವರಿಗೆ ಏನೂ ಹೇಳಲಿಲ್ಲ, ತಾವೇ ಪ್ರವಾದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಾನು ಈ ಪ್ರವಾದಿಗಳನ್ನು ಕಳುಹಿಸಲಿಲ್ಲ; ಆದರೂ ಅವರು ತಮ್ಮ ಸಂದೇಶದೊಂದಿಗೆ ಓಡಿದ್ದಾರೆ ನಾನು ಅವರ ಸಂಗಡ ಮಾತನಾಡಲಿಲ್ಲ. ಆದರೂ ಪ್ರವಾದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 23:21
12 ತಿಳಿವುಗಳ ಹೋಲಿಕೆ  

ಆಗ ಯೆಹೋವನು ನನಗೆ, “ಯೆರೆಮೀಯನೇ, ಆ ಪ್ರವಾದಿಗಳು ನನ್ನ ಹೆಸರಿನಿಂದ ಸುಳ್ಳುಬೋಧನೆ ಮಾಡುತ್ತಾರೆ. ನಾನು ಆ ಪ್ರವಾದಿಗಳನ್ನು ಕಳುಹಿಸಲಿಲ್ಲ. ಅವರಿಗೆ ನಾನು ಯಾವ ಅಪ್ಪಣೆಯನ್ನೂ ಕೊಟ್ಟಿಲ್ಲ, ಅವರೊಂದಿಗೆ ನಾನು ಮಾತನ್ನೂ ಆಡಿಲ್ಲ. ಆ ಪ್ರವಾದಿಗಳು ಸುಳ್ಳುದರ್ಶನಗಳನ್ನು ನಿಷ್ಪ್ರಯೋಜಕವಾದ ಮಾಟಮಂತ್ರಗಳನ್ನು ಸ್ವಕಲ್ಪಿತ ವಿಚಾರಗಳನ್ನೂ ಬೋಧಿಸುತ್ತಿದ್ದಾರೆ.


ನಾನು ಆ ಪ್ರವಾದಿಗಳನ್ನು ಕಳುಹಿಸಿಲ್ಲ. ಅವರು ಸುಳ್ಳು ಪ್ರವಾದನೆಗಳನ್ನು ಮಾಡುತ್ತಿದ್ದಾರೆ ಮತ್ತು ಅದು ನನ್ನ ಸಂದೇಶವೆಂದು ಹೇಳುತ್ತಲಿದ್ದಾರೆ. ನಾನು ಯೆಹೂದದ ಜನರಾದ ನಿಮ್ಮನ್ನು ದೂರ ಕಳುಹಿಸುತ್ತೇನೆ. ನೀವು ಸಾಯುವಿರಿ. ನಿಮಗೆ ಪ್ರವಾದನೆಯನ್ನು ಮಾಡುತ್ತಿರುವ ಆ ಪ್ರವಾದಿಗಳು ಸಹ ಸಾಯುತ್ತಾರೆ’” ಇದು ಯೆಹೋವನ ನುಡಿ.


ನಾನು ಕಾಲ್ಪನಿಕ ಕನಸುಗಳನ್ನು ಬೋಧಿಸುವ ಸುಳ್ಳುಪ್ರವಾದಿಗಳ ವಿರೋಧಿಯಾಗಿದ್ದೇನೆ.” ಇದು ಪ್ರಭುವಿನ ನುಡಿ. “ಅವರು ತಮ್ಮ ಸುಳ್ಳುಬೋಧನೆಗಳಿಂದ ನನ್ನ ಜನರನ್ನು ಅಡ್ಡದಾರಿಗೆಳೆಯುತ್ತಾರೆ. ನಾನು ಜನರಿಗೆ ಉಪದೇಶ ಮಾಡುವದಕ್ಕಾಗಿ ಆ ಪ್ರವಾದಿಗಳನ್ನು ಕಳುಹಿಸಿಲ್ಲ. ನನಗೋಸ್ಕರವಾಗಿ ಏನನ್ನಾದರೂ ಮಾಡಲು ನಾನು ಅವರಿಗೆ ಎಂದೂ ಆಜ್ಞಾಪಿಸಿಲ್ಲ. ಅವರು ಯೆಹೂದದ ಜನರಿಗೆ ಸ್ವಲ್ಪವೂ ಸಹಾಯವನ್ನು ಮಾಡಲಾರರು” ಇದು ಯೆಹೋವನ ನುಡಿ.


ಬಾರ್ನಬ ಮತ್ತು ಸೌಲರನ್ನು ಪವಿತ್ರಾತ್ಮನೇ ಕಳುಹಿಸಿಕೊಟ್ಟನು. ಅವರು ಸೆಲೂಸಿಯಾ ಪಟ್ಟಣಕ್ಕೆ ಹೋದರು. ಬಳಿಕ ಅವರು ಸೆಲೂಸಿಯಾದಿಂದ ಸೈಪ್ರಸ್ ದ್ವೀಪಕ್ಕೆ ಹಡಗಿನಲ್ಲಿ ಪ್ರಯಾಣ ಮಾಡಿದರು.


ಬಳಿಕ ಯೇಸು ಮತ್ತೆ, “ಶಾಂತಿಯು ನಿಮ್ಮೊಂದಿಗಿರಲಿ! ತಂದೆಯು ನನ್ನನ್ನು ಕಳುಹಿಸಿದನು. ಅದೇ ರೀತಿಯಲ್ಲಿ, ಈಗ ನಾನೂ ನಿಮ್ಮನ್ನು ಕಳುಹಿಸುತ್ತೇನೆ” ಎಂದು ಹೇಳಿದನು.


“ಯೆರೆಮೀಯನೇ, ಬಾಬಿಲೋನಿನಲ್ಲಿರುವ ಎಲ್ಲಾ ಬಂಧಿಗಳಿಗೆ ಈ ಸಂದೇಶವನ್ನು ಕಳುಹಿಸು, ‘ನೆಹೆಲಾಮ್ಯನಾದ ಶೆಮಾಯನ ವಿಷಯದಲ್ಲಿ ಯೆಹೋವನು ಹೀಗೆನ್ನುವನು: ಶೆಮಾಯನು ನಿಮಗೆ ಪ್ರವಾದನೆ ಮಾಡಿದ್ದಾನೆ. ಆದರೆ ನಾನು ಅವನನ್ನು ಕಳುಹಿಸಲಿಲ್ಲ. ನೀವು ಸುಳ್ಳನ್ನು ನಂಬುವಂತೆ ಅವನು ಮಾಡಿದ್ದಾನೆ.


ಅವರು ಸುಳ್ಳುಗಳನ್ನು ಬೋಧಿಸುತ್ತಿರುವರು. ಅವರ ಸಂದೇಶವು ನನ್ನಿಂದ ಬಂದಿದೆ ಎಂದು ಅವರು ಹೇಳುತ್ತಿರುವರು. ಆದರೆ ನಾನು ಅದನ್ನು ಕಳುಹಿಸಲಿಲ್ಲ.” ಈ ಸಂದೇಶವು ಯೆಹೋವನಿಂದ ಬಂದದ್ದು.


ತರುವಾಯ ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ ಹೀಗೆ ಹೇಳಿದನು: “ಹನನ್ಯನೇ, ಕೇಳು. ಯೆಹೋವನು ನಿನ್ನನ್ನು ಕಳುಹಿಸಲಿಲ್ಲ. ಆದರೆ ಯೆಹೂದದ ಜನರಿಗೆ ಸುಳ್ಳನ್ನು ನಂಬುವಂತೆ ನೀನು ಮಾಡಿರುವೆ.


ಆಗ ನಾನು ನನ್ನ ಒಡೆಯನಾದ ಯೆಹೋವನ ಸ್ವರವನ್ನು ಕೇಳಿದೆನು. ಆತನು, “ನಾನು ಯಾರನ್ನು ಕಳುಹಿಸಲಿ? ನಮಗೋಸ್ಕರ ಯಾರು ಹೋಗುವರು?” ಎಂದು ಕೇಳಿದನು. ಆಗ ನಾನು, “ನಾನಿದ್ದೇನೆ, ನನ್ನನ್ನು ಕಳುಹಿಸು” ಎಂದು ಹೇಳಿದೆನು.


ಬೋಧಕರನ್ನು ಕಳುಹಿಸದ ಹೊರತು ಜನರಿಗೆ ತಿಳಿಸುವುದಾದರೂ ಹೇಗೆ? ಆದ್ದರಿಂದಲೇ, “ಸುವಾರ್ತಿಕರ ಪಾದಗಳು ಸುಂದರವಾಗಿವೆ” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ.


ಆದರೆ ನೀವೆಂದಿಗೂ ಬಾಬಿಲೋನ್ ರಾಜನಿಗೆ ಗುಲಾಮರಾಗುವದಿಲ್ಲ ಎಂದು ಈ ಸುಳ್ಳುಪ್ರವಾದಿಗಳು ಹೇಳುತ್ತಿದ್ದಾರೆ. “‘ಆ ಪ್ರವಾದಿಗಳ ಮಾತುಗಳನ್ನು ಕಿವಿಗೆ ಹಾಕಿಕೊಳ್ಳಬೇಡಿ. ಅವರು ನಿಮಗೆ ಸುಳ್ಳುಪ್ರವಾದನೆ ಮಾಡುತ್ತಿದ್ದಾರೆ.


ಇಸ್ರೇಲರ ದೇವರೂ, ಸರ್ವಶಕ್ತನೂ ಆಗಿರುವ ಯೆಹೋವನು, ಹೀಗೆನ್ನುತ್ತಾನೆ: “ನಿಮ್ಮ ಪ್ರವಾದಿಗಳು ಮತ್ತು ಮಾಟಮಂತ್ರಗಾರರು ನಿಮ್ಮನ್ನು ಮರುಳುಗೊಳಿಸದಿರಲಿ. ಅವರು ನೋಡುವ ಕನಸುಗಳಿಗೆ ಕಿವಿಗೊಡಬೇಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು