Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 23:22 - ಪರಿಶುದ್ದ ಬೈಬಲ್‌

22 ಅವರು ನನ್ನ ಪರಲೋಕದ ಸಭೆಯಲ್ಲಿ ಭಾಗವಹಿಸಿದ್ದ ಪಕ್ಷದಲ್ಲಿ ಅವರು ನನ್ನ ಸಂದೇಶಗಳನ್ನು ಯೆಹೂದದ ಜನರಿಗೆ ಹೇಳಬಹುದಾಗಿತ್ತು. ಅವರ ಕೆಟ್ಟತನವನ್ನೂ ದುಷ್ಟತನವನ್ನೂ ತಡೆಯಬಹುದಾಗಿತ್ತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಇವರು ಆಲೋಚನಾಸಭೆಯಲ್ಲಿ ನಿಂತಿದ್ದರೆ, ನನ್ನ ಮಾತುಗಳನ್ನು ನನ್ನ ಜನರ ಕಿವಿಗೆ ಮುಟ್ಟಿಸಿ, ಅವರನ್ನು ಅವರ ದುರ್ಮಾರ್ಗದಿಂದಲೂ ಮತ್ತು ದುಷ್ಕೃತ್ಯಗಳಿಂದಲೂ ತಪ್ಪಿಸುತ್ತಿದ್ದರು” ಎಂದು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಇವರು ನನ್ನ ಆಲೋಚನಾ ಸಭೆಯಲ್ಲಿ ಹಾಜರಿದ್ದಿದ್ದರೆ, ನನ್ನ ವಾಕ್ಯಗಳನ್ನು ನನ್ನ ಜನರ ಕಿವಿಗೆ ಮುಟ್ಟಿಸುತ್ತಿದ್ದರು; ಅವರನ್ನು ದುರ್ಮಾರ್ಗದಿಂದಲೂ ದುಷ್ಕೃತ್ಯಗಳಿಂದಲೂ ತಪ್ಪಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಇವರು ನನ್ನ ಆಲೋಚನಾಸಭೆಯಲ್ಲಿ ನಿಂತಿದ್ದರೆ ನನ್ನ ಮಾತುಗಳನ್ನು ನನ್ನ ಜನರ ಕಿವಿಗೆ ಮುಟ್ಟಿಸಿ ಅವರನ್ನು ಅವರ ದುರ್ಮಾರ್ಗದಿಂದಲೂ ದುಷ್ಕೃತ್ಯಗಳಿಂದಲೂ ತಪ್ಪಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆದರೆ ಅವರು ನನ್ನ ಆಲೋಚನಾ ಸಭೆಯಲ್ಲಿ ನಿಂತಿದ್ದರೆ, ಆಗ ಅವರು ಜನರಿಗೆ ನನ್ನ ವಾಕ್ಯಗಳನ್ನು ಹೇಳಿಕೊಟ್ಟು, ಅವರನ್ನು ತಮ್ಮ ಕೆಟ್ಟ ಮಾರ್ಗದಿಂದಲೂ, ತಮ್ಮ ಕ್ರಿಯೆಗಳ ಕೆಟ್ಟತನದಿಂದಲೂ ತಿರುಗಿಸುತ್ತಿದ್ದರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 23:22
18 ತಿಳಿವುಗಳ ಹೋಲಿಕೆ  

ಯೆಹೋವನು ಹೀಗೆನ್ನುತ್ತಾನೆ: “ನಿಮ್ಮ ಪೂರ್ವಿಕರಂತೆ ಆಗಬೇಡಿರಿ. ಹಿಂದಿನ ಕಾಲದಲ್ಲಿ ಪ್ರವಾದಿಗಳು ಅವರ ಸಂಗಡ ಮಾತನಾಡಿದರು. ಅವರು, ‘ಸರ್ವಶಕ್ತನಾದ ಯೆಹೋವನು ನಿಮ್ಮ ಕೆಟ್ಟಜೀವಿತವನ್ನು ಬದಲಾಯಿಸಲು ಇಷ್ಟಪಡುತ್ತಾನೆ. ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಿರಿ.’ ಆದರೆ ನಿಮ್ಮ ಪೂರ್ವಿಕರು ನನ್ನ ಮಾತುಗಳನ್ನು ಕೇಳಲಿಲ್ಲ.” ಇದು ಯೆಹೋವನ ನುಡಿ.


ಆ ಪ್ರವಾದಿಗಳು, “ನಿಮ್ಮ ಜೀವನಕ್ರಮವನ್ನು ಬದಲಾಯಿಸಿಕೊಳ್ಳಿರಿ. ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಿಬಿಡಿ. ನೀವು ಬದಲಾದರೆ, ಯೆಹೋವನು ನಿಮಗೂ ನಿಮ್ಮ ಪೂರ್ವಿಕರಿಗೂ ಬಹಳ ಹಿಂದೆ ಕೊಟ್ಟ ಭೂಮಿಯಲ್ಲಿ ನೀವು ನೆಲೆಸಬಹುದು. ನೀವು ಶಾಶ್ವತವಾಗಿ ವಾಸಿಸಬೇಕೆಂದು ಆತನು ಈ ಭೂಮಿಯನ್ನು ಕೊಟ್ಟಿದ್ದಾನೆ.


ಈ ಪ್ರವಾದಿಗಳಲ್ಲಿ ಒಬ್ಬನಾದರೂ ಪರಲೋಕದ ಸಭೆಯಲ್ಲಿ ನಿಂತಿಲ್ಲ. ಒಬ್ಬನಾದರೂ ಯೆಹೋವನ ಸಂದೇಶವನ್ನು ಕೇಳಿಲ್ಲ, ಅಥವಾ ನೋಡಿಲ್ಲ. ಒಬ್ಬನಾದರೂ ಆತನ ಸಂದೇಶವನ್ನು ಸೂಕ್ಷ್ಮವಾಗಿ ಪರಿಶೀಲಿಸಿಲ್ಲ.


ಯಾಕೆಂದರೆ ದೇವರ ಅಪೇಕ್ಷೆಗನುಸಾರವಾಗಿ ನೀವು ತಿಳಿದುಕೊಳ್ಳಬೇಕಾದ ಪ್ರತಿಯೊಂದನ್ನೂ ನಾನು ನಿಮಗೆ ನಿಶ್ಚಯವಾಗಿ ತಿಳಿಸಿದ್ದೇನೆ.


“‘ಪ್ರವಾದಿನಿಯರೇ, ನೀವು ಸುಳ್ಳುಗಾರ್ತಿಯರಾಗಿದ್ದೀರಿ. ನಿಮ್ಮ ಸುಳ್ಳುಗಳು ಒಳ್ಳೆಯವರಿಗೆ ದುಃಖವನ್ನು ಬರಮಾಡುವವು. ಒಳ್ಳೆಯ ವ್ಯಕ್ತಿಗಳಿಗೆ ನೋವು ಮಾಡಲು ನನಗೆ ಮನಸ್ಸಿಲ್ಲ. ದುಷ್ಟ ಜನರು ತಮ್ಮ ದುರ್ಮಾರ್ಗಗಳನ್ನು ತೊರೆದುಬಿಡದಂತೆಯೂ ತಮ್ಮ ಪ್ರಾಣಗಳನ್ನು ರಕ್ಷಿಸಿಕೊಳ್ಳದಂತೆಯೂ ನೀವು ಪ್ರೋತ್ಸಾಹಿಸುತ್ತೀರಿ.


ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಇಸ್ರೇಲಿಗೆ ಮತ್ತು ಯೆಹೂದಕ್ಕೆ ಕಳುಹಿಸಿಕೊಟ್ಟೆ. ನಾನು ಅವರನ್ನು ನಿಮ್ಮಲ್ಲಿಗೆ ಪುನಃಪುನಃ ಕಳುಹಿಸಿಕೊಟ್ಟೆ. ಆ ಪ್ರವಾದಿಗಳು, “ಇಸ್ರೇಲಿನ ಮತ್ತು ಯೆಹೂದದ ಪ್ರತಿಯೊಬ್ಬರೂ ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಬೇಕು. ನೀವು ಒಳ್ಳೆಯವರಾಗಿರಬೇಕು. ಬೇರೆ ದೇವರುಗಳನ್ನು ಅನುಸರಿಸಬಾರದು. ಅವುಗಳನ್ನು ಪೂಜಿಸಬಾರದು. ಅವುಗಳ ಸೇವೆಮಾಡಬಾರದು ಎಂದು ಹೇಳಿದರು. ನನ್ನ ಆಜ್ಞೆಯನ್ನು ಪಾಲಿಸಿದರೆ ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಕೊಟ್ಟ ಪ್ರದೇಶದಲ್ಲಿ ನೀವು ವಾಸಿಸಬಹುದು” ಎಂದು ಹೇಳಿದ್ದೆ. ಆದರೆ ನೀವು ನನ್ನ ಸಂದೇಶದ ಕಡೆಗೆ ಗಮನ ಕೊಡಲಿಲ್ಲ.


ಆದುದರಿಂದ ನಾವು ಇತರ ಜನರಂತಿರಬಾರದು. ನಾವು ನಿದ್ರೆ ಮಾಡುವುದೇ ಬೇಡ. ನಾವು ಎಚ್ಚರದಿಂದ ಇದ್ದು, ನಮ್ಮನ್ನು ಹತೋಟಿಯಲ್ಲಿ ಇಟ್ಟುಕೊಂಡಿರಬೇಕು.


“ನರಪುತ್ರನೇ, ನಾನು ನಿನ್ನನ್ನು ಇಸ್ರೇಲರಿಗೆ ಕಾವಲುಗಾರನನ್ನಾಗಿ ಮಾಡಿದ್ದೇನೆ. ನಾನು ಅವರಿಗೆ ಸಂಭವಿಸುವ ಕೆಟ್ಟ ವಿಷಯಗಳನ್ನು ನಿನಗೆ ಹೇಳುತ್ತಿದ್ದೇನೆ. ಮತ್ತು ನೀನು ನನ್ನ ಪರವಾಗಿ ಅವರನ್ನು ಎಚ್ಚರಿಸು.


ಅವರು ಕೇಳಲಿ, ಕೇಳದಿರಲಿ, ನಾನು ಹೇಳುವದನ್ನು ಅವರಿಗೆ ತಿಳಿಸು; ಯಾಕೆಂದರೆ ಅವರು ದಂಗೆಕೋರರು.


ಇಸ್ರೇಲರೇ, ನಾನು ಪ್ರತಿಯೊಬ್ಬನನ್ನು ಅವನವನ ಕಾರ್ಯಗಳ ಪ್ರಕಾರ ನ್ಯಾಯತೀರಿಸುವೆನು” ಎಂದು ಹೇಳಿದನು. ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಆದ್ದರಿಂದ ನನ್ನ ಬಳಿಗೆ ಬನ್ನಿರಿ, ದುಷ್ಟತನ ಮಾಡುವದನ್ನು ನಿಲ್ಲಿಸಿರಿ, ಪಾಪವು ನಿಮ್ಮ ನಾಶನಕ್ಕೆ ಕಾರಣವಾಗದಂತೆ ಎಚ್ಚರಿಕೆಯಾಗಿರಿ.


ನಾನು ಮಾಡಬೇಕೆಂದು ಯೋಚಿಸಿರುವುದನ್ನು ಯೆಹೂದ ಕುಲದವರು ಕೇಳಿಸಿಕೊಳ್ಳಬಹುದು. ಅವರು ಮಾಡುತ್ತಿರುವ ದುಷ್ಕೃತ್ಯಗಳನ್ನು ನಿಲ್ಲಿಸಬಹುದು. ಅವರು ಹಾಗೆ ಮಾಡಿದರೆ ಅವರು ಮಾಡಿದ ಪಾಪಗಳನ್ನು ನಾನು ಕ್ಷಮಿಸುವೆನು.”


ಈ ಭೂಮಿಯನ್ನು ಏಕೆ ಹಾಳು ಮಾಡಲಾಯಿತು? ಇದನ್ನು ಯಾರೂ ಹೋಗದ ಬರಿದಾದ ಮರಳುಗಾಡನ್ನಾಗಿ ಏಕೆ ಮಾಡಲಾಯಿತು? ಇದನ್ನರಿತ ಜ್ಞಾನಿಯೊಬ್ಬನಿದ್ದಾನೆಯೇ? ಯೆಹೋವನಿಂದ ತಿಳಿದುಕೊಂಡ ಜ್ಞಾನಿಯೊಬ್ಬನಿದ್ದಾನೆಯೇ? ಯೆಹೋವನ ಸಂದೇಶವನ್ನು ವಿವರಿಸಬಲ್ಲವನೊಬ್ಬನಿದ್ದಾನೆಯೇ?


ಯೆಹೂದದ ಪ್ರವಾದಿಗಳು ಜೆರುಸಲೇಮಿನಲ್ಲಿ ಭಯಂಕರ ದುಷ್ಕೃತ್ಯಗಳನ್ನು ಮಾಡುವುದನ್ನು ನಾನು ನೋಡಿದ್ದೇನೆ. ಈ ಪ್ರವಾದಿಗಳು ವ್ಯಭಿಚಾರ ಮಾಡುತ್ತಾರೆ. ಅವರು ಸುಳ್ಳುಗಳನ್ನು ಕೇಳಿ, ಆ ಸುಳ್ಳುಬೋಧನೆಗಳನ್ನು ಪಾಲಿಸುತ್ತಾರೆ. ಅವರು ದುಷ್ಟರಿಗೆ ಅವರ ದುಷ್ಟತನವನ್ನು ಮುಂದುವರಿಸಲು ಪ್ರೋತ್ಸಾಹಿಸುತ್ತಾರೆ. ಆದ್ದರಿಂದ ಜನರು ಪಾಪಮಾಡುವುದನ್ನು ನಿಲ್ಲಿಸಲಿಲ್ಲ. ಅವರೆಲ್ಲರು ನನಗೆ ಸೊದೋಮ್ ನಗರದಂತೆ ಇದ್ದಾರೆ. ಜೆರುಸಲೇಮಿನ ಜನರು ಗೊಮೋರ ನಗರದಂತೆ ಇದ್ದಾರೆ.”


ಗೋಡೆಗಳು ಬಿದ್ದುಹೋದ ಸ್ಥಳಗಳನ್ನು ನೀವು (ಪ್ರವಾದಿಗಳು) ಕಾವಲು ಕಾಯುವದಿಲ್ಲ. ಇಸ್ರೇಲ್ ಜನರಿಗೋಸ್ಕರ ನೀವು ಗೋಡೆಗಳನ್ನು ಕಟ್ಟುವುದಿಲ್ಲ. ಆದ್ದರಿಂದ ಯೆಹೋವನಿಂದ ದಂಡನೆಯ ದಿನವು ಬಂದಾಗ ಜನರು ಯುದ್ಧದಲ್ಲಿ ಸೋತು ಹೋಗುವರು.


ನನ್ನ ಒಡೆಯನಾದ ಯೆಹೋವನು ಒಂದು ಕಾರ್ಯವನ್ನು ಮಾಡಲು ನಿರ್ಧರಿಸಬಹುದು. ಆದರೆ ಆತನು ಹಾಗೆ ಮಾಡುವ ಮುಂಚಿತವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ಮುಂತಿಳಿಸುವನು.


ಲೇವಿಯು ಸುಳ್ಳನ್ನು ಸಮರ್ಥಿಸದೆ ಸತ್ಯ ಬೋಧನೆಯನ್ನು ಬೋಧಿಸಿದನು. ಅವನು ಪ್ರಮಾಣಿಕನಾಗಿದ್ದು ಸಮಾಧಾನವನ್ನು ಪ್ರೀತಿಸುತ್ತಿದ್ದನು. ಲೇವಿಯು ನನಗೆ ವಿಧೇಯನಾಗಿದ್ದು ಎಷ್ಟೋ ಮಂದಿ ಕೆಟ್ಟದಾರಿಯಲ್ಲಿ ಹೋಗುತ್ತಿರುವವರನ್ನು ನನ್ನ ಶಿಕ್ಷೆಯಿಂದ ಪಾರುಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು