ಯೆರೆಮೀಯ 23:32 - ಪರಿಶುದ್ದ ಬೈಬಲ್32 ನಾನು ಕಾಲ್ಪನಿಕ ಕನಸುಗಳನ್ನು ಬೋಧಿಸುವ ಸುಳ್ಳುಪ್ರವಾದಿಗಳ ವಿರೋಧಿಯಾಗಿದ್ದೇನೆ.” ಇದು ಪ್ರಭುವಿನ ನುಡಿ. “ಅವರು ತಮ್ಮ ಸುಳ್ಳುಬೋಧನೆಗಳಿಂದ ನನ್ನ ಜನರನ್ನು ಅಡ್ಡದಾರಿಗೆಳೆಯುತ್ತಾರೆ. ನಾನು ಜನರಿಗೆ ಉಪದೇಶ ಮಾಡುವದಕ್ಕಾಗಿ ಆ ಪ್ರವಾದಿಗಳನ್ನು ಕಳುಹಿಸಿಲ್ಲ. ನನಗೋಸ್ಕರವಾಗಿ ಏನನ್ನಾದರೂ ಮಾಡಲು ನಾನು ಅವರಿಗೆ ಎಂದೂ ಆಜ್ಞಾಪಿಸಿಲ್ಲ. ಅವರು ಯೆಹೂದದ ಜನರಿಗೆ ಸ್ವಲ್ಪವೂ ಸಹಾಯವನ್ನು ಮಾಡಲಾರರು” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಆಹಾ, ಸುಳ್ಳು ಕನಸುಗಳನ್ನು ಪ್ರಕಟಿಸಿ, ವಿವರಿಸಿ ತಮ್ಮ ಸುಳ್ಳು ಮಾತುಗಳಿಂದಲೂ, ನಿರ್ಲಕ್ಷದಿಂದಲೂ ನನ್ನ ಜನರಿಗೆ ದಾರಿತಪ್ಪಿಸುವ ಪ್ರವಾದಿಗಳನ್ನು ಎದುರಿಸುವವನಾಗಿದ್ದೇನೆ; ನಾನು ಅವರನ್ನು ಕಳುಹಿಸಲಿಲ್ಲ, ಆಜ್ಞಾಪಿಸಲಿಲ್ಲ. ಅವರಿಂದ ಈ ಜನರಿಗೆ ಯಾವ ಪ್ರಯೋಜನವೂ ಆಗುವುದಿಲ್ಲ. ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಸುಳ್ಳು ಕನಸುಗಳನ್ನು ಪ್ರಕಟಿಸುತ್ತಾ ಹಾಗು ವಿವರಿಸುತ್ತಾ ತಮ್ಮ ಅಬದ್ಧ ಮಾತುಗಳಿಂದಲೂ ಕಚ್ಚಾಟದಿಂದಲೂ ನನ್ನ ಜನರಿಗೆ ದಾರಿ ತಪ್ಪಿಸುವ ಪ್ರವಾದಿಗಳನ್ನು ನಾನು ಖಂಡಿಸುತ್ತೇನೆ. ನಾನು ಅವರನ್ನು ಕಳುಹಿಸಲಿಲ್ಲ, ಅಥವಾ ಅವರಿಗೆ ಆಜ್ಞಾಪಿಸಲಿಲ್ಲ. ಅವರಿಂದ ಈ ಜನರಿಗೆ ಯಾವ ಪ್ರಯೋಜನವೂ ಇಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಆಹಾ, ಸುಳ್ಳು ಕನಸುಗಳನ್ನು ಪ್ರಕಟಿಸಿ ವಿವರಿಸಿ ತಮ್ಮ ಸುಳ್ಳು ಮಾತುಗಳಿಂದಲೂ ಕೊಚ್ಚಾಟದಿಂದಲೂ ನನ್ನ ಜನರಿಗೆ ದಾರಿತಪ್ಪಿಸುವ ಪ್ರವಾದಿಗಳನ್ನು ಎದುರಿಸುವವನಾಗಿದ್ದೇನೆ; ನಾನು ಅವರನ್ನು ಕಳುಹಿಸಲಿಲ್ಲ, ಆಜ್ಞಾಪಿಸಲಿಲ್ಲ; ಅವರಿಂದ ಈ ಜನರಿಗೆ ಯಾವ ಪ್ರಯೋಜನವೂ ಆಗುವದಿಲ್ಲ. ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಸುಳ್ಳಿನ ಕನಸುಗಳನ್ನು ಪ್ರವಾದಿಸಿ, ತಮ್ಮ ಸುಳ್ಳುಗಳಿಂದಲೂ ತಮ್ಮ ನಿರರ್ಥಕವಾದ ವಿಚಾರಗಳಿಂದಲೂ ನನ್ನ ಜನರು ತಪ್ಪುವಂತೆ ಮಾಡುವವರಿಗೆ ವಿರೋಧವಾಗಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಅವರನ್ನು ಕಳುಹಿಸಲಿಲ್ಲ, ಅವರಿಗೆ ಅಪ್ಪಣೆ ಕೊಡಲಿಲ್ಲ. ಆದ್ದರಿಂದ ಅವರು ಹೇಗೂ ಈ ಜನರಿಗೆ ಪ್ರಯೋಜನವಾಗಿರುವುದೇ ಇಲ್ಲ,” ಎಂದು ಯೆಹೋವ ದೇವರು ನುಡಿಯುತ್ತಾರೆ. ಅಧ್ಯಾಯವನ್ನು ನೋಡಿ |
ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.
ಜನರು ಭವಿಷ್ಯವನ್ನು ತಿಳಿಯುವುದಕ್ಕೆ ತಮ್ಮ ಸಣ್ಣ ಬೊಂಬೆಗಳನ್ನೋ ಮಂತ್ರಜಾಲವನ್ನೋ ಉಪಯೋಗಿಸುವರು. ಆದರೆ ಅವೆಲ್ಲಾ ನಿಷ್ಪ್ರಯೋಜಕ. ಆ ಜನರು ದರ್ಶನವನ್ನು ನೋಡುವರು ಮತ್ತು ಕನಸುಗಳ ಬಗ್ಗೆ ಹೇಳುವರು. ಆದರೆ ಅವುಗಳೆಲ್ಲಾ ನಿಷ್ಪ್ರಯೋಜಕ ಸುಳ್ಳುಗಳಾಗಿವೆ. ಆದ್ದರಿಂದ ಜನರು ಸಹಾಯಕ್ಕಾಗಿ ಕೂಗುತ್ತಾ ಅತ್ತಿಂದಿತ್ತ ತಿರುಗಾಡುವ ಕುರಿಗಳಂತಿದ್ದಾರೆ. ಅವುಗಳನ್ನು ನಡಿಸಲು ಕುರುಬರೇ ಇಲ್ಲ.