Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 23:33 - ಪರಿಶುದ್ದ ಬೈಬಲ್‌

33 “ಯೆಹೂದದ ಜನರಾಗಲಿ ಪ್ರವಾದಿಯಾಗಲಿ ಯಾಜಕನಾಗಲಿ ‘ಯೆರೆಮೀಯನೇ, ಯೆಹೋವನು ದಯಪಾಲಿಸಿರುವ ಪ್ರಕಟನೆಯೇನು?’ ಎಂದು ನಿನ್ನನ್ನು ಕೇಳಬಹುದು. ನೀನು ಅವರಿಗೆ, ‘ಯೆಹೋವನಿಗೆ ನೀವೇ ದೊಡ್ಡ ಭಾರ. ನಾನು ಆ ಭಾರವನ್ನು ಕೆಳಗೆ ಎಸೆದುಬಿಡುತ್ತೇನೆ’” ಎಂದು ಉತ್ತರಿಸು. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಪ್ರವಾದಿಯಾಗಲಿ ಅಥವಾ ಯಾಜಕನಾಗಲಿ ಈ ಜನರಲ್ಲಿ ಯಾರೇ ಆಗಲಿ “ಯೆಹೋವನು ದಯಪಾಲಿಸಿರುವ ವಾಕ್ಯದ ಆಧಾರವೇನು?” ಎಂದು ನಿನ್ನನ್ನು ಕೇಳಿದರೆ ನೀನು ಅವರಿಗೆ ಹೀಗೆ ಹೇಳು, “ಯೆಹೋವನು ಇಂತೆನ್ನುತ್ತಾನೆ, ನೀವೇ ನನ್ನ ಹೊರೆ, ನಾನು ನಿಮ್ಮನ್ನು ಎಸೆದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 “ಪ್ರವಾದಿಯಾಗಲಿ, ಯಾಜಕನಾಗಲಿ, ಈ ಜನರಲ್ಲಿ ಯಾರೇ ಆಗಲಿ, ‘ಸರ್ವೇಶ್ವರ ದಯಪಾಲಿಸಿರುವ ಹೊರೆ ಏನು?’ ಎಂದು ನಿನ್ನನ್ನು ಕೇಳಿದರೆ ನೀನು ಅವರಿಗೆ ಹೀಗೆಂದು ಹೇಳು: ‘ನೀವೇ ಸರ್ವೇಶ್ವರನ ಹೊರೆ. ನಿಮ್ಮನ್ನು ಅವರು ಎಸೆದುಬಿಡುವರು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಪ್ರವಾದಿಯಾಗಲಿ ಯಾಜಕನಾಗಲಿ ಈ ಜನರಲ್ಲಿ ಯಾರಾಗಲಿ ಯೆಹೋವನು ದಯಪಾಲಿಸಿರುವ ವಾಕ್ಯಭಾರವೇನು ಎಂದು ನಿನ್ನನ್ನು ಕೇಳಿದರೆ ನೀನು ಅವರಿಗೆ ಹೀಗೆ ಹೇಳು - ಯೆಹೋವನು ಇಂತೆನ್ನುತ್ತಾನೆ - ನೀವೇ ನನ್ನ ಭಾರ, ನಾನು ನಿಮ್ಮನ್ನು ಎಸೆದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 “ಪ್ರವಾದಿಯಾಗಲಿ, ಯಾಜಕನಾಗಲಿ, ಈ ಜನರಲ್ಲಿ ಯಾರೇ ಆಗಲಿ, ‘ಯೆಹೋವ ದೇವರು ದಯಪಾಲಿಸಿರುವ ಹೊರೆ ಏನು?’ ಎಂದು ನಿನ್ನನ್ನು ಕೇಳಿದರೆ, ನೀನು ಅವರಿಗೆ ಹೀಗೆಂದು ಹೇಳು: ‘ನೀವೇ, ಯೆಹೋವ ದೇವರ ಹೊರೆ. ನಿಮ್ಮನ್ನು ಆತನು ಎಸೆದುಬಿಡುವನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 23:33
19 ತಿಳಿವುಗಳ ಹೋಲಿಕೆ  

ದೇವರಿಂದ ಬಂದ ಸಂದೇಶ. ಯೆಹೋವ ದೇವರು ಮಲಾಕಿಯ ಮೂಲಕ ಇಸ್ರೇಲರಿಗೆ ಕೊಟ್ಟ ಸಂದೇಶ.


ಪ್ರವಾದಿಯಾದ ಹಬಕ್ಕೂಕನಿಗೆ ಕೊಡಲ್ಪಟ್ಟ ಸಂದೇಶ.


ಎಲ್ಕೋಷ್ ಎಂಬ ಊರಿನವನಾದ ನಹೂಮನಿಗೆ ಆದ ದೇವದರ್ಶನದ ಪುಸ್ತಕ. ನಿನೆವೆ ಪಟ್ಟಣದ ವಿಷಯವಾಗಿ ದುಃಖಕರವಾದ ಸಂದೇಶ.


ಒಂದುವೇಳೆ ಇಸ್ರೇಲರಿಗೆ ಮಕ್ಕಳು ಹುಟ್ಟಿದರೂ ಪ್ರಯೋಜನವಿಲ್ಲ. ಯಾಕೆಂದರೆ ಆ ಮಕ್ಕಳನ್ನು ಅವರಿಂದ ತೆಗೆದುಬಿಡುವೆನು. ನಾನು ಅವರನ್ನು ತೊರೆದುಬಿಡುವೆನು. ಆಗ ಅವರಿಗೆ ಸಂಕಟದ ಮೇಲೆ ಸಂಕಟವು ಪ್ರಾಪ್ತಿಯಾಗುವದು.”


“ನಾನು (ಯೆಹೋವನು) ನನ್ನ ಮನೆಯನ್ನು ತ್ಯಜಿಸಿದ್ದೇನೆ. ನಾನು ನನ್ನ ಆಸ್ತಿಯನ್ನು ಬಿಟ್ಟುಬಿಟ್ಟಿದ್ದೇನೆ. ನಾನು ನನ್ನ ಪ್ರಿಯತಮೆಯನ್ನು (ಯೆಹೂದ) ಅವಳ ಶತ್ರುಗಳಿಗೆ ಕೊಟ್ಟಿದ್ದೇನೆ.


ಆಮೋಚನ ಮಗನಾದ ಯೆಶಾಯನಿಗೆ ಬಾಬಿಲೋನಿನ ಬಗ್ಗೆ ದೊರೆತ ದೈವಸಂದೇಶ:


ಯೆಹೂದದ ಜನರು ನನಗೆ ಪ್ರಶ್ನೆಗಳನ್ನು ಕೇಳುತ್ತಿರುತ್ತಾರೆ. “ಯೆರೆಮೀಯನೇ, ಯೆಹೋವನ ಸಂದೇಶ ಎಲ್ಲಿದೆ? ಆ ಸಂದೇಶವು ಸತ್ಯವಾಗುವುದನ್ನು ನಾವು ಈಗಲೇ ನೋಡೋಣ” ಎಂದು ಅವರನ್ನುತ್ತಾರೆ.


ಅರಸನಾದ ಆಹಾಜನು ಸತ್ತ ವರ್ಷದಲ್ಲಿ ಈ ದುಃಖದ ಸಂದೇಶವು ಕೊಡಲ್ಪಟ್ಟಿತು:


ಯೆಹೋವನಿಂದ ಬಂದ ಸಂದೇಶ: ಹದ್ರಾಕ್ ದೇಶದ ಮತ್ತು ಅದರ ರಾಜಧಾನಿಯಾದ ದಮಸ್ಕ ನಗರದ ವಿರುದ್ಧವಾಗಿ ಯೆಹೋವನ ಸಂದೇಶ: “ಇಸ್ರೇಲ್ ಕುಲದವರು ಮಾತ್ರವೇ ದೇವರನ್ನು ತಿಳಿದವರಲ್ಲ. ಪ್ರತಿಯೊಬ್ಬರೂ ಸಹಾಯಕ್ಕಾಗಿ ಆತನಿಗೆ ಮೊರೆಯಿಡುವರು.


ಯೆಹೋವನು, “ನಾನು ಇಸ್ರೇಲರನ್ನು ತೆಗೆದುಹಾಕಿದಂತೆ ಯೆಹೂದ್ಯರನ್ನೂ ನನ್ನ ಸನ್ನಿಧಿಯಿಂದ ತೆಗೆದುಹಾಕುವೆನು. ನಾನು ಆರಿಸಿಕೊಂಡ ಜೆರುಸಲೇಮ್ ಪಟ್ಟಣವನ್ನೂ ನನ್ನ ನಾಮ ಮಹತ್ತಿಗಾಗಿ ಸ್ವೀಕರಿಸಿಕೊಂಡ ದೇವಾಲಯವನ್ನೂ ತಿರಸ್ಕರಿಸುವೆನು” ಎಂದು ಹೇಳಿದನು.


ನನ್ನ ಜನರನ್ನು ‘ತಿರಸ್ಕರಿಸಲಾದ ಬೆಳ್ಳಿ’ ಎಂದು ಕರೆಯಲಾಗುವದು. ಏಕೆಂದರೆ ಯೆಹೋವನು ಅವರನ್ನು ಸ್ವಿಕರಿಸಲಿಲ್ಲ.”


ನಾನು ನಿಮ್ಮ ಎಲ್ಲಾ ಸಹೋದರರನ್ನು ಅಂದರೆ ಸಮಸ್ತ ಎಫ್ರಾಯೀಮ್ ವಂಶದವರನ್ನು ಎಸೆದುಬಿಟ್ಟ ಹಾಗೆ ನಿಮ್ಮನ್ನೂ ನನ್ನಿಂದ ದೂರ ಎಸೆದುಬಿಡುವೆನು.”


ಯೆಹೋವನ ನುಡಿಯು ನನಗೆ ಬಂತು. ಆತನು ಹೇಳಿದ್ದೇನೆಂದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು