Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 23:39 - ಪರಿಶುದ್ದ ಬೈಬಲ್‌

39 ಆದರೆ ನೀವು ನನ್ನ ಸಂದೇಶವನ್ನು ಭಾರವಾದ ಹೊರೆ ಎಂದು ಹೇಳಿದ್ದೀರಿ. ಆದ್ದರಿಂದ ನಾನು ನಿಮ್ಮನ್ನು ಒಂದು ಭಾರವಾದ ಹೊರೆಯಂತೆ ಎತ್ತಿ ನನ್ನಿಂದ ದೂರ ಎಸೆಯುತ್ತೇನೆ. ನಾನು ನಿಮ್ಮ ಪೂರ್ವಿಕರಿಗೆ ಜೆರುಸಲೇಮ್ ನಗರವನ್ನು ಕೊಟ್ಟೆ. ಆದರೆ ನಾನು ನಿಮ್ಮನ್ನೂ ಆ ನಗರವನ್ನೂ ನನ್ನಿಂದ ದೂರ ಎಸೆಯುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಖಂಡಿತವಾಗಿ ನಿಮ್ಮನ್ನೂ ನಾನು ನಿಮಗೆ ಮತ್ತು ನಿಮ್ಮ ಪೂರ್ವಿಕರಿಗೆ ದಯಪಾಲಿಸಿದ ಪಟ್ಟಣವನ್ನೂ ಹೊರೆಯೆಂದು ಎತ್ತಿ ನನ್ನೆದುರಿನಿಂದ ಎಸೆದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಈ ಕಾರಣ ನಿಮ್ಮನ್ನು ಮತ್ತು ನಿಮಗೂ ನಿಮ್ಮ ಪೂರ್ವಜರಿಗೂ ನಾನು ಕೊಟ್ಟ ನಗರವನ್ನು ನನ್ನೆದುರಿನಿಂದ ಎತ್ತಿ ಎಸೆದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಇಗೋ, ಖಂಡಿತವಾಗಿ ನಿಮ್ಮನ್ನೂ ನಾನು ನಿಮಗೆ ಮತ್ತು ನಿಮ್ಮ ಪಿತೃಗಳಿಗೆ ದಯಪಾಲಿಸಿದ ಪಟ್ಟಣವನ್ನೂ ಭಾರವೆಂದು ಎತ್ತಿ ನನ್ನೆದುರಿನಿಂದ ಎಸೆದುಬಿಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಈ ಕಾರಣ ನಿಮ್ಮನ್ನು ಮತ್ತು ನಿಮಗೂ ನಿಮ್ಮ ಪೂರ್ವಜರಿಗೂ ನಾನು ಕೊಟ್ಟ ನಗರವನ್ನು ನನ್ನೆದುರಿನಿಂದ ಎತ್ತಿ ಎಸೆದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 23:39
30 ತಿಳಿವುಗಳ ಹೋಲಿಕೆ  

“ಯೆಹೂದದ ಜನರಾಗಲಿ ಪ್ರವಾದಿಯಾಗಲಿ ಯಾಜಕನಾಗಲಿ ‘ಯೆರೆಮೀಯನೇ, ಯೆಹೋವನು ದಯಪಾಲಿಸಿರುವ ಪ್ರಕಟನೆಯೇನು?’ ಎಂದು ನಿನ್ನನ್ನು ಕೇಳಬಹುದು. ನೀನು ಅವರಿಗೆ, ‘ಯೆಹೋವನಿಗೆ ನೀವೇ ದೊಡ್ಡ ಭಾರ. ನಾನು ಆ ಭಾರವನ್ನು ಕೆಳಗೆ ಎಸೆದುಬಿಡುತ್ತೇನೆ’” ಎಂದು ಉತ್ತರಿಸು. ಇದು ಯೆಹೋವನ ನುಡಿ.


ಅವರಿಗೆ ನಾನು ನನ್ನ ರೌದ್ರವನ್ನು ತೋರಿಸುವೆನು. ಅವರಿಗೆ ನಾನು ಕರುಣೆಯನ್ನು ಎಂದಿಗೂ ತೋರಿಸುವುದಿಲ್ಲ. ಅವರಿಗಾಗಿ ನಾನು ದುಃಖಿಸುವುದೂ ಇಲ್ಲ. ಅವರು ನನ್ನನ್ನು ಕೂಗುವರು, ಆದರೆ ನಾನು ಅವರಿಗೆ ಕಿವಿಗೊಡುವುದಿಲ್ಲ.”


ಅವರಿಗೆ ನಿತ್ಯವಾದ ದಂಡನೆಯಾಗುವುದು. ಪ್ರಭುವಿನೊಂದಿಗಿರಲು ಅವರಿಗೆ ಅವಕಾಶ ದೊರೆಯುವುದಿಲ್ಲ. ಆತನು ತನ್ನ ಮಹಾಶಕ್ತಿಯಿಂದ ಅವರನ್ನು ದೂರವಿರಿಸುತ್ತಾನೆ.


“ಆಮೇಲೆ ರಾಜನು ತನ್ನ ಎಡಗಡೆಯಿದ್ದ ಜನರಿಗೆ, ‘ನನ್ನಿಂದ ತೊಲಗಿಹೋಗಿರಿ, ನಿಮಗೆ ಶಿಕ್ಷೆಯಾಗಬೇಕೆಂದು ದೇವರು ತೀರ್ಮಾನಿಸಿದ್ದಾನೆ. ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


ಯಾಕೆಂದರೆ ನಾನು ಎಫ್ರಾಯೀಮನಿಗೆ ಸಿಂಹದಂತಿರುವೆನು. ಯೆಹೂದ ಜನಾಂಗದವರಿಗೆ ನಾನು ಪ್ರಾಯದ ಸಿಂಹದಂತಿರುವೆನು. ಹೌದು, ಯೆಹೋವನಾದ ನಾನು ಅವರನ್ನು ಹರಿದು ಚೂರುಚೂರಾಗಿ ಮಾಡುವೆನು. ನಾನು ಅವರನ್ನು ಎತ್ತಿಕೊಂಡು ಹೋಗುವೆನು. ಯಾರೂ ಅವರನ್ನು ನನ್ನಿಂದ ರಕ್ಷಿಸಲಾರರು.


“ನನ್ನ ಜನರು ಅಜ್ಞಾನಿಗಳಾಗಿರುವುದರಿಂದ ಅವರು ನಾಶವಾಗುವರು, ನೀವು ಕಲಿಯಲು ನಿರಾಕರಿಸುತ್ತೀರಿ. ಆದ್ದರಿಂದ ನೀವು ನನ್ನ ಯಾಜಕರಾಗಿರಲು ನಾನು ನಿರಾಕರಿಸುತ್ತೇನೆ. ನಿಮ್ಮ ದೇವರ ಕಟ್ಟಳೆಗಳನ್ನು ನೀವು ಮರೆತುಬಿಟ್ಟಿರುವಿರಿ. ಆದ್ದರಿಂದ ನಾನು ನಿಮ್ಮ ಮಕ್ಕಳನ್ನು ಮರೆತುಬಿಡುವೆನು.


ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ನಾನು ಕೊಬ್ಬಿದ ಕುರಿಗಳಿಗೂ ಬಲಹೀನ ಕುರಿಗಳಿಗೂ ನ್ಯಾಯತೀರಿಸುವೆನು.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ, “ನಾನೇ ಅವರಿಗೆ ಕುರುಬನಾಗಿರುವೆನು. ತಪ್ಪಿಹೋದ ಕುರಿಗಳನ್ನು ನಾನು ಹುಡುಕುವೆನು, ನಾನು ಅವರನ್ನು ಗಮನಿಸುತ್ತಾ ನಡೆಸುವೆನು.


‘ಇಸ್ರೇಲಿನ ಪರ್ವತಗಳೇ, ನನ್ನ ಒಡೆಯನಾದ ಯೆಹೋವನ ಸಂದೇಶಕ್ಕೆ ಕಿವಿಗೊಡಿರಿ. ಬೆಟ್ಟಗಳಿಗೂ ಪರ್ವತಗಳಿಗೂ ಕೊರಕಲುಗಳಿಗೂ ಕಣಿವೆಗಳಿಗೂ ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, ನಾನು ವೈರಿಯನ್ನು ನಿಮ್ಮ ವಿರುದ್ಧ ಯುದ್ಧ ಮಾಡಲು ಕಳುಹಿಸುವೆನು. ನಿಮ್ಮ ಎಲ್ಲಾ ಉನ್ನತ ಸ್ಥಳಗಳನ್ನು ನಾಶಮಾಡುವೆನು.


ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನಾನು ನಿಮಗೆ ವಿರೋಧವಾಗಿದ್ದೇನೆ. ಬೇರೆ ಜನರ ಕಣ್ಣೆದುರಿನಲ್ಲಿಯೇ ನಿಮ್ಮನ್ನು ದಂಡಿಸುವೆನು.


ಯೆಹೋವನೇ, ನೀನು ನಮ್ಮನ್ನು ಶಾಶ್ವತವಾಗಿ ಮರೆತಿರುವುದೇಕೆ? ನೀನು ನಮ್ಮನ್ನು ದೀರ್ಘಕಾಲದವರೆಗೆ ತೊರೆದುಬಿಟ್ಟಿರುವುದೇಕೆ?


ಯೆಹೋವನಿಗೆ ಅವರ ಮೇಲೆ ಕೋಪ ಬಂದುದರಿಂದ ಜೆರುಸಲೇಮ್ ಮತ್ತು ಯೆಹೂದಗಳಿಗೆ ವಿಪತ್ತುಗಳು ಸಂಭವಿಸಿದವು. ಕೊನೆಗೆ, ಯೆಹೋವನು ಜೆರುಸಲೇಮ್ ಮತ್ತು ಯೆಹೂದದ ಜನರನ್ನು ತನ್ನಿದ ದೂರ ಎಸೆದುಬಿಟ್ಟನು. ಚಿದ್ಕೀಯನು ಬಾಬಿಲೋನ್ ರಾಜನ ವಿರುದ್ಧವಾಗಿ ದಂಗೆ ಎದ್ದನು.


ಯೆಹೋವನಾದ ನಾನು ಯೆಹೋಯಾಕೀಮ ಮತ್ತು ಅವನ ಮಕ್ಕಳನ್ನು ದಂಡಿಸುವೆನು. ನಾನು ಅವನ ಅಧಿಕಾರಿಗಳನ್ನೂ ದಂಡಿಸುವೆನು. ಅವರು ದುಷ್ಟರಾದುದರಿಂದ ಹೀಗೆ ಮಾಡುವೆನು. ನಾನು ಅವರ ಮೇಲೂ ಜೆರುಸಲೇಮಿನಲ್ಲಿ ವಾಸಮಾಡುವ ಜನರೆಲ್ಲರ ಮೇಲೂ ಮತ್ತು ಯೆಹೂದದ ಜನರ ಮೇಲೂ ಭಯಂಕರವಾದ ಕೇಡನ್ನು ತರಲು ನಿಶ್ಚಯಿಸಿದ್ದೇನೆ. ನಾನು ಹೇಳಿದಂತೆ ಅವರಿಗೆ ಎಲ್ಲಾ ಕೆಡುಕನ್ನು ಉಂಟುಮಾಡುವೆನು. ಏಕೆಂದರೆ ಅವರು ನನ್ನ ಮಾತನ್ನು ಕೇಳಲಿಲ್ಲ.’”


“ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆಂದನು: ‘ಯೆಹೂದ ಮತ್ತು ಜೆರುಸಲೇಮಿಗೆ ಅನೇಕ ಕೇಡುಗಳು ಸಂಭವಿಸುವವೆಂದು ನಾನು ಹೇಳಿರುವೆನು. ಆ ಎಲ್ಲಾ ಕೇಡುಗಳು ಬೇಗನೆ ಸಂಭವಿಸುವಂತೆ ನಾನು ಮಾಡುವೆನು. ನಾನು ಆ ಜನರೊಂದಿಗೆ ಮಾತನಾಡಿದೆ, ಆದರೆ ಅವರು ಕಿವಿಗೆ ಹಾಕಿಕೊಳ್ಳಲಿಲ್ಲ. ನಾನು ಅವರನ್ನು ಕೂಗಿದೆ, ಆದರೆ ಅವರು ನನಗೆ ಓಗೊಡಲಿಲ್ಲ.’”


ನಾನು ನಿಮ್ಮ ಎಲ್ಲಾ ಸಹೋದರರನ್ನು ಅಂದರೆ ಸಮಸ್ತ ಎಫ್ರಾಯೀಮ್ ವಂಶದವರನ್ನು ಎಸೆದುಬಿಟ್ಟ ಹಾಗೆ ನಿಮ್ಮನ್ನೂ ನನ್ನಿಂದ ದೂರ ಎಸೆದುಬಿಡುವೆನು.”


ಯೆಹೋವನು ಹೇಳುವುದೇನೆಂದರೆ, “ನಿನ್ನನ್ನು ಸಂತೈಸುವಾತನು ನಾನೇ. ಆದ್ದರಿಂದ ನೀನು ಜನರಿಗೆ ಯಾಕೆ ಹೆದರಬೇಕು. ಅವರು ಹುಟ್ಟಿ ಸಾಯುವ ನರರಾಗಿದ್ದಾರೆ. ಅವರು ಹುಲ್ಲಿನಂತೆ ಸಾಯುವ ಕೇವಲ ಮಾನವರಾಗಿದ್ದಾರೆ.”


“ನಾನು ಅವನನ್ನು ಕರೆಯುವುದಾಗಿ ಹೇಳಿದ್ದೇನೆ. ನಾನು ಅವನನ್ನು ಕರೆದುತರುವೆನು; ಅವನಿಗೆ ಜಯವನ್ನು ಅನುಗ್ರಹಿಸುವೆನು.


ಬುದ್ಧಿಮಾತನ್ನು ಕೇಳದವನು ತನಗೆ ತೊಂದರೆಯನ್ನು ಬರಮಾಡಿಕೊಳ್ಳುವನು. ಬುದ್ಧಿವಾದವನ್ನು ಗೌರವಿಸುವವನು ಪ್ರತಿಫಲವನ್ನು ಹೊಂದುವನು.


ನಿನ್ನ ಸನ್ನಿಧಿಯಿಂದ ನನ್ನನ್ನು ತಳ್ಳಿಬಿಡಬೇಡ! ನಿನ್ನ ಪವಿತ್ರಾತ್ಮನನ್ನು ನನ್ನಿಂದ ತೆಗೆಯಬೇಡ!


“‘ನಾನೇ ದೇವರು, ನನ್ನ ಹೊರತು ಬೇರೆ ದೇವರಿಲ್ಲ. ಜನರಿಗೆ ಮರಣವನ್ನೂ ಜೀವವನ್ನೂ ಕೊಡುವವನು ನಾನೇ. ಅವರಿಗೆ ಗಾಯ ಮಾಡುವವನೂ ನಾನೇ, ಅದನ್ನು ಗುಣಮಾಡುವವನೂ ನಾನೇ. ನನ್ನ ಶಕ್ತಿಯ ಹಿಡಿತದಿಂದ ಇನ್ನೊಬ್ಬನನ್ನು ರಕ್ಷಿಸಲು ಯಾರಿಗೂ ಸಾಧ್ಯವಿಲ್ಲ.


ನಾನು ನಿಜವಾಗಿ ನನ್ನ ಕೋಪವನ್ನು ತೋರಿಸುವೆನು. ಹೌದು, ನಾನೇ ನಿಮ್ಮ ಪಾಪಗಳಿಗಾಗಿ ನಿಮ್ಮನ್ನು ಏಳರಷ್ಟಾಗಿ ದಂಡಿಸುವೆನು.


“ನಾನು ನಿನಗೆ ಹೇಳುತ್ತಿರುವುದನ್ನು ಅರ್ಥಮಾಡಿಕೊ. ನಾನು ಭೂಮಿಯ ಮೇಲೆ ಮಹಾ ಜಲಪ್ರಳಯವನ್ನು ತರುವೆನು. ಆಕಾಶದ ಕೆಳಗಿರುವ ಎಲ್ಲಾ ಜೀವಿಗಳನ್ನು ನಾಶಮಾಡುವೆನು. ಭೂಮಿಯ ಮೇಲಿರುವ ಪ್ರತಿಯೊಂದೂ ಸಾಯುವುದು.


ಕಾಯಿನನು ಯೆಹೋವನ ಪ್ರಸನ್ನತೆಯಿಂದ ದೂರ ಹೊರಟುಹೋದನು. ಕಾಯಿನನು ನೋದು ಎಂಬ ನಾಡಿನಲ್ಲಿ ವಾಸಿಸಿದನು. ಅದು ಏದೆನ್ ತೋಟಕ್ಕೆ ಪೂರ್ವದಲ್ಲಿರುವುದು.


ಆದ್ದರಿಂದ ನನ್ನ ಹೆಸರನ್ನು ಹೊಂದಿರುವ ಆಲಯವನ್ನೂ ನೀವು ನಂಬಿರುವ ಆಲಯವನ್ನೂ ನಿಮ್ಮ ಪೂರ್ವಿಕರಿಗೆ ನಾನು ಕೊಟ್ಟಿರುವ ಸ್ಥಳವನ್ನೂ ನಾನು ಶೀಲೋವಿಗೆ ಮಾಡಿದಂತೆ ಮಾಡುವೆನು.


“ನಾನು (ಯೆಹೋವನು) ನನ್ನ ಮನೆಯನ್ನು ತ್ಯಜಿಸಿದ್ದೇನೆ. ನಾನು ನನ್ನ ಆಸ್ತಿಯನ್ನು ಬಿಟ್ಟುಬಿಟ್ಟಿದ್ದೇನೆ. ನಾನು ನನ್ನ ಪ್ರಿಯತಮೆಯನ್ನು (ಯೆಹೂದ) ಅವಳ ಶತ್ರುಗಳಿಗೆ ಕೊಟ್ಟಿದ್ದೇನೆ.


ಆದರೆ ‘ಯೆಹೋವನ ಭಾರವೇನು?’ ಎಂದು ಕೇಳಬೇಡಿರಿ. ನೀವು ಆ ಪದಗಳನ್ನು ಬಳಸಿದರೆ ಯೆಹೋವನು ನಿಮಗೆ ಹೀಗೆ ಹೇಳುವನು: ‘ನೀವು ನನ್ನ ಸಂದೇಶವನ್ನು “ಯೆಹೋವನ ಭಾರವೆಂದು” ಹೇಳಬಾರದಾಗಿತ್ತು. ಆ ಪದಗಳನ್ನು ಬಳಸಬಾರದೆಂದು ನಾನು ನಿಮಗೆ ಹೇಳಿದ್ದೇನೆ.


ಯೆಹೋವನು, “ನಾನು ಇಸ್ರೇಲರನ್ನು ತೆಗೆದುಹಾಕಿದಂತೆ ಯೆಹೂದ್ಯರನ್ನೂ ನನ್ನ ಸನ್ನಿಧಿಯಿಂದ ತೆಗೆದುಹಾಕುವೆನು. ನಾನು ಆರಿಸಿಕೊಂಡ ಜೆರುಸಲೇಮ್ ಪಟ್ಟಣವನ್ನೂ ನನ್ನ ನಾಮ ಮಹತ್ತಿಗಾಗಿ ಸ್ವೀಕರಿಸಿಕೊಂಡ ದೇವಾಲಯವನ್ನೂ ತಿರಸ್ಕರಿಸುವೆನು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು