ಯೆರೆಮೀಯ 23:40 - ಪರಿಶುದ್ದ ಬೈಬಲ್40 ನಿಮಗೆ ಶಾಶ್ವತವಾದ ಅಪಕೀರ್ತಿಯನ್ನು ತರುವೆನು. ನೀವು ಈ ಅವಮಾನವನ್ನು ಎಂದಿಗೂ ಮರೆಯಲಾರಿರಿ.’” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಮತ್ತು ನಾನು ನಿತ್ಯನಿಂದೆಯನ್ನೂ ಎಂದಿಗೂ ಮರೆಯದ ಶಾಶ್ವತ ಅವಮಾನವನ್ನು ನಿಮಗೆ ಬರಮಾಡುವೆನು.’” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ನೀವು ನಿಂದೆಗೆ ಗುರಿಯಾಗುವಿರಿ. ಎಂದಿಗೂ ಮರೆಯಲಾಗದ ಶಾಶ್ವತ ಅವಮಾನವನ್ನು ನಿಮಗೆ ಬರಮಾಡುವೆನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ನಿತ್ಯನಿಂದೆಯನ್ನೂ ಎಂದಿಗೂ ಮರೆಯದ ಶಾಶ್ವತಾಪಮಾನವನ್ನೂ ನಿಮಗೆ ಬರಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ನೀವು ನಿಂದೆಗೆ ಗುರಿಯಾಗುವಿರಿ. ಎಂದಿಗೂ ಮರೆಯಲಾಗದ ಶಾಶ್ವತ ಅವಮಾನವನ್ನು ನಿಮಗೆ ಬರಮಾಡುವೆನು.” ಅಧ್ಯಾಯವನ್ನು ನೋಡಿ |
“ಸರ್ವಶಕ್ತನೂ ಇಸ್ರೇಲರ ದೇವರೂ ಆಗಿರುವ ಯೆಹೋವನು ಹೀಗೆಂದನು: ‘ನಾನು ಜೆರುಸಲೇಮಿನ ಮೇಲೆ ನನ್ನ ಕೋಪವನ್ನು ತೋರಿಸಿದೆ. ಜೆರುಸಲೇಮಿನಲ್ಲಿ ವಾಸಿಸುವ ಜನರನ್ನು ನಾನು ದಂಡಿಸಿದೆ. ಅದೇ ರೀತಿ, ಈಜಿಪ್ಟಿಗೆ ಹೋಗುವವರೆಲ್ಲರ ಮೇಲೂ ನಾನು ನನ್ನ ಕೋಪವನ್ನು ತೋರಿಸುವೆನು. ಬೇರೆಯವರಿಗೆ ಕೆಟ್ಟದಾಗಲಿ ಎಂದು ಹೇಳಬೇಕಾದಾಗ ಜನರು ನಿಮ್ಮಂತೆ ಆಗಲಿ ಎಂದು ನಿಮ್ಮ ಉದಾಹರಣೆಯನ್ನು ಕೊಡುವರು. ನೀವು ಒಂದು ಶಾಪದ ಶಬ್ದವಾಗುವಿರಿ. ಜನರು ನಿಮ್ಮಿಂದ ನಾಚಿಕೆಪಟ್ಟುಕೊಳ್ಳುವರು. ಜನರು ನಿಮ್ಮನ್ನು ಅಪಮಾನ ಮಾಡುವರು. ಯೆಹೂದವನ್ನು ಪುನಃ ನೀವು ಎಂದೂ ನೋಡುವದಿಲ್ಲ.’
ಯೆಹೋವನೇ, ನಾವು ಮತ್ತು ನಮ್ಮ ಪೂರ್ವಿಕರು ನಿನಗೆ ಪಾಪಮಾಡಿದ್ದರಿಂದ ಇದೆಲ್ಲಾ ಆಗುತ್ತಿದೆ. ಜೆರುಸಲೇಮಿನ ಮೇಲೆ ಕೋಪ ಮಾಡುವದನ್ನು ದಯವಿಟ್ಟು ನಿಲ್ಲಿಸು. ಜೆರುಸಲೇಮ್ ನಗರವು ನಿನ್ನ ಪವಿತ್ರವಾದ ಬೆಟ್ಟದ ಮೇಲೆ ಇದೆ. ನೀನು ಸರಿಯಾದದ್ದನ್ನು ಮಾಡುವೆ. ಆದ್ದರಿಂದ ಜೆರುಸಲೇಮಿನ ಮೇಲೆ ಕೋಪಗೊಳ್ಳುವದನ್ನು ದಯವಿಟ್ಟು ನಿಲ್ಲಿಸಿಬಿಡು. ನಮ್ಮ ಸುತ್ತಮುತ್ತಲಿನ ಜನರೆಲ್ಲ ನಮ್ಮನ್ನು ನಿಂದಿಸುವರು ಮತ್ತು ನಮ್ಮ ಜನರನ್ನು ಗೇಲಿ ಮಾಡುವರು.