ಯೆರೆಮೀಯ 23:6 - ಪರಿಶುದ್ದ ಬೈಬಲ್6 ಸದ್ಧರ್ಮದ ‘ಸಸಿಯ’ ಸಮಯದಲ್ಲಿ ಯೆಹೂದದ ಜನರು ರಕ್ಷಿಸಲ್ಪಡುವರು ಮತ್ತು ಇಸ್ರೇಲ್ ಸುರಕ್ಷಿತವಾಗಿರುವುದು. ಯೆಹೋವನೇ, ನಮ್ಮ ಸದ್ಧರ್ಮ ಎಂಬ ಹೆಸರು ಅವನಿಗಾಗುವುದು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು, ಇಸ್ರಾಯೇಲರು ನೆಮ್ಮದಿಯಾಗಿ ವಾಸಿಸುವರು; ‘ಯೆಹೋವ ಚಿದ್ಕೇನು’ ಅಂದರೆ ಯೆಹೋವನೇ ನಮ್ಮ ಸದ್ಧರ್ಮ ಎಂಬ ಹೆಸರು ಅವನಿಗಾಗುವುದು” ಎಂದು ನುಡಿಯುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆತನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿ ಇರುವರು. ಇಸ್ರಯೇಲರು ನೆಮ್ಮದಿಯಿಂದ ಬಾಳುವರು. ‘ಯೆಹೋವ ಚಿದ್ಕೇನು’ (ಎಂದರೆ ಸರ್ವೇಶ್ವರನೇ ನಮ್ಮ ಸದ್ಧರ್ಮ) ಎಂಬ ಹೆಸರು ಆತನಿಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅವನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು, ಇಸ್ರಾಯೇಲ್ಯರು ನೆಮ್ಮದಿಯಾಗಿ ವಾಸಿಸುವರು; ಯೆಹೋವ ಚಿದ್ಕೇನು [ಅಂದರೆ ಯೆಹೋವನೇ ನಮ್ಮ ಸದ್ಧರ್ಮ] ಎಂಬ ಹೆಸರು ಅವನಿಗಾಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆತನ ದಿನಗಳಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು. ಇಸ್ರಾಯೇಲರು ನೆಮ್ಮದಿಯಿಂದ ವಾಸಿಸುವರು. ಯೆಹೋವ ಚಿದ್ಕೇನು ಎಂದರೆ, ಯೆಹೋವ ದೇವರೇ ನಮ್ಮ ಸದ್ಧರ್ಮ ಎಂಬ ಹೆಸರು ಅವರಿಗಿರುವುದು. ಅಧ್ಯಾಯವನ್ನು ನೋಡಿ |
“ದಾನಿಯೇಲನೇ, ನಿಮ್ಮ ಜನರಿಗೆ ಮತ್ತು ನಿಮ್ಮ ಪವಿತ್ರ ನಗರಕ್ಕೆ ದೇವರು ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತುಮಾಡಿದ್ದಾನೆ. ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತಡೆಯುವುದು, ಅಪರಾಧಗಳನ್ನು ನಿವಾರಿಸುವುದು, ಜನರನ್ನು ಪರಿಶುದ್ಧಗೊಳಿಸುವುದು, ಎಂದೆಂದಿಗೂ ಉಳಿಯುವ ಧರ್ಮವನ್ನು ಸ್ಥಾಪಿಸುವುದು, ದರ್ಶನಗಳಿಗೆ ಮತ್ತು ಪ್ರವಾದಿಯ ನುಡಿಗಳಿಗೆ ಮುದ್ರೆಹಾಕಿ ಕಾರ್ಯರೂಪಕ್ಕೆ ತರುವುದು, ಪವಿತ್ರ ಸ್ಥಳವನ್ನು ಪ್ರತಿಷ್ಠಿಸುವುದು, ಇವೆಲ್ಲವುಗಳಿಗಾಗಿ ಈ ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತು ಮಾಡಲಾಗಿದೆ.
‘ಇಸ್ರೇಲರನ್ನು ಮತ್ತು ಯೆಹೂದ್ಯರನ್ನು ತಮ್ಮ ಪ್ರದೇಶವನ್ನು ಬಿಟ್ಟುಹೋಗಲು ನಾನು ಒತ್ತಾಯಿಸಿದ್ದೇನೆ. ನಾನು ಅವರ ಮೇಲೆ ತುಂಬ ಕೋಪಗೊಂಡಿದ್ದೆ. ಆದರೆ ನಾನು ಅವರನ್ನು ಈ ಸ್ಥಳಕ್ಕೆ ಹಿಂದಿರುಗಿಸುವೆನು. ನಾನು ಒತ್ತಾಯಿಸಿ ಅವರನ್ನು ಅಟ್ಟಿದ ಸ್ಥಳಗಳಿಂದ ಅವರನ್ನು ಒಟ್ಟುಗೂಡಿಸುವೆನು. ಅವರನ್ನು ಪುನಃ ಈ ಸ್ಥಳಕ್ಕೆ ಕರೆತರುವೆನು. ಅವರು ನೆಮ್ಮದಿಯಿಂದ ಮತ್ತು ಸುರಕ್ಷಿತವಾಗಿ ಇರುವಂತೆ ಮಾಡುವೆನು.
ಯೆಹೋವನು ಹೀಗೆಂದನು: “ನನ್ನ ಸೇವಕನಾದ ಯಾಕೋಬನೇ, ಭಯಪಡಬೇಡ! ಇಸ್ರೇಲೇ, ಅಂಜಬೇಡ, ನಾನು ನಿಮ್ಮನ್ನು ಆ ದೂರಪ್ರದೇಶದಿಂದ ರಕ್ಷಿಸುವೆನು. ಆ ದೂರದೇಶದಲ್ಲಿ ನೀವು ಬಂಧಿಗಳಾಗಿದ್ದೀರಿ, ಆದರೆ ನಾನು ನಿಮ್ಮ ವಂಶದವರನ್ನು ರಕ್ಷಿಸುತ್ತೇನೆ. ಅವರನ್ನು ಆ ನಾಡಿನಿಂದ ಮತ್ತೆ ಕರೆದುತರುತ್ತೇನೆ. ಯಾಕೋಬು ಮತ್ತೆ ನೆಮ್ಮದಿಯಿಂದ ಇರುವುದು. ಜನರು ಯಾಕೋಬನನ್ನು ಪೀಡಿಸುವದಿಲ್ಲ; ನನ್ನ ಜನರನ್ನು ಹೆದರಿಸುವ ಶತ್ರುಗಳಿರುವದಿಲ್ಲ.” ಇದು ಯೆಹೋವನ ನುಡಿ.
ಈಗ ಎಲ್ಲಾ ದೇಶಗಳಿಗೆ ದೇವರೇ ನ್ಯಾಯಾಧೀಶನಾಗಿರುವನು. ಅನೇಕ ಜನರ ತರ್ಕಗಳನ್ನು ದೇವರು ಕೊನೆಗಾಣಿಸುವನು. ಆ ಜನರು ಯುದ್ಧಕ್ಕಾಗಿ ಆಯುಧಗಳನ್ನು ಉಪಯೋಗಿಸುವದನ್ನು ನಿಲ್ಲಿಸುವರು; ತಮ್ಮ ಖಡ್ಗಗಳಿಂದ ಅವರು ನೇಗಿಲುಗಳನ್ನು ತಯಾರಿಸುವರು; ತಮ್ಮ ಬರ್ಜಿಗಳಿಂದ ಸಸಿಗಳನ್ನು ಕೊಯ್ಯುವ ಕುಡುಗೋಲುಗಳನ್ನು ಮಾಡುವರು. ಪರಸ್ಪರ ಹೊಡೆದಾಡಿಕೊಳ್ಳುವದನ್ನು ಜನಾಂಗಗಳು ನಿಲ್ಲಿಸುವರು. ಇನ್ನೆಂದಿಗೂ ಜನಾಂಗಗಳು ಯುದ್ಧಾಭ್ಯಾಸ ತರಬೇತಿಯನ್ನು ಹೊಂದುವುದಿಲ್ಲ.
“ಯೆಹೋವನೇ, ನೀನು ಒಳ್ಳೆಯವನು, ಒಳ್ಳೆಯತನ ನಿನ್ನ ಪಾಲಾಗಿದೆ. ಆದರೆ ಈಗ ನಮ್ಮದು ನಾಚಿಕೆಪಡುವ ಸ್ಥಿತಿಯಾಗಿದೆ. ಯೆಹೂದ ಮತ್ತು ಜೆರುಸಲೇಮಿನ ಜನರು ನಾಚಿಕೆಪಡುವಂತಾಗಿದೆ. ಹತ್ತಿರದಲ್ಲಿದ್ದವರು ಹಾಗೂ ದೂರದಲ್ಲಿದ್ದವರು, ಒಟ್ಟಿನಲ್ಲಿ ಇಸ್ರೇಲಿನ ಎಲ್ಲ ಜನರು ನಾಚಿಕೆಪಡುವಂತಾಗಿದೆ. ಯೆಹೋವನೇ, ನೀನು ಆ ಜನರನ್ನು ಎಲ್ಲಾ ದೇಶಗಳಲ್ಲಿ ಚದರಿಸಿಬಿಟ್ಟಿರುವೆ. ಆ ಎಲ್ಲಾ ದೇಶಗಳಲ್ಲಿರುವ ಇಸ್ರೇಲರು ನಾಚಿಕೆಪಡಬೇಕಾಗಿದೆ. ಯೆಹೋವನೇ, ನಿನ್ನ ವಿರುದ್ಧ ಮಾಡಿದ ಎಲ್ಲಾ ಹೀನಕೃತ್ಯಗಳಿಗಾಗಿ ಅವರು ನಾಚಿಕೆಪಡಬೇಕಾಗಿದೆ.