Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 23:8 - ಪರಿಶುದ್ದ ಬೈಬಲ್‌

8 ಆದರೆ ಹೊಸ ಕಾಲ ಬರಲಿದೆ. ಆಗ, ‘ಇಸ್ರೇಲರನ್ನು ಉತ್ತರದ ನಾಡಿನಿಂದಲೂ ಅವರನ್ನು ಚದರಿಸಿಬಿಟ್ಟಿದ್ದ ಎಲ್ಲ ದೇಶಗಳಿಂದಲೂ ಹೊರತಂದ ಯೆಹೋವನಾಣೆ’ ಎಂದು ಹೇಳುವರು. ಆಗ ಇಸ್ರೇಲರು ಸ್ವದೇಶದಲ್ಲಿ ನೆಲಸುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇಸ್ರಾಯೇಲ್ ಮನೆತನವೆಂಬ ಸಂತಾನವನ್ನು ಉತ್ತರ ದಿಕ್ಕಿನ ದೇಶದಿಂದಲೂ, ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಬರಮಾಡಿ, ಉದ್ಧರಿಸಿದ ಯೆಹೋವನ ಜೀವದಾಣೆ ಎಂದು ಪ್ರಮಾಣಮಾಡುವರು. ಅವರು ಸ್ವದೇಶದಲ್ಲಿ ಸುಖವಾಸಿಗಳಾಗುವರು.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಬದಲಿಗೆ ‘ಇಸ್ರಯೇಲ್ ಮನೆತನವೆಂಬ ಸಂತಾನವನ್ನು ಉತ್ತರನಾಡಿನಿಂದಲೂ ಅವರನ್ನು ತಳ್ಳಲಾಗಿದ್ದ ಸಕಲ ಸೀಮೆಗಳಿಂದಲೂ ಬರಮಾಡಿ ಉದ್ಧರಿಸಿದ ಸರ್ವೇಶ್ವರನ ಜೀವದಾಣೆ’ ಎಂದು ಪ್ರಮಾಣ ಮಾಡುವರು. ಅವರು ಸ್ವಂತ ನಾಡಿನಲ್ಲಿ ಸುಖವಾಗಿ ಬಾಳುವರು. ಇದು ಸರ್ವೇಶ್ವರನಾದ ನನ್ನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇಸ್ರಾಯೇಲ್ ಮನೆತನವೆಂಬ ಸಂತಾನವನ್ನು ಬಡಗಣ ದೇಶದಿಂದಲೂ ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಬರಮಾಡಿ ಉದ್ಧರಿಸಿದ ಯೆಹೋವನ ಜೀವದಾಣೆ ಎಂದು ಪ್ರಮಾಣಮಾಡುವರು; ಅವರು ಸ್ವದೇಶದಲ್ಲಿ ಸುಖವಾಸಿಗಳಾಗುವರು. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದರೆ, ‘ಇಸ್ರಾಯೇಲಿನ ಮನೆತನದವರ ಸಂತಾನವನ್ನು ಉತ್ತರ ದೇಶದಿಂದಲೂ ಬರಮಾಡಿದ ಯೆಹೋವ ದೇವರ ಜೀವದಾಣೆ,’ ಎಂದು ಹೇಳುವರು. ಅವರು ತಮ್ಮ ದೇಶದಲ್ಲಿಯೇ ವಾಸಮಾಡುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 23:8
24 ತಿಳಿವುಗಳ ಹೋಲಿಕೆ  

ನನ್ನ ಕುರಿಗಳನ್ನು ಆ ದೇಶಗಳಿಂದ ಬರಮಾಡುವೆನು. ಆ ದೇಶಗಳಿಂದ ಅವುಗಳನ್ನು ಒಟ್ಟುಗೂಡಿಸುವೆನು. ಅವುಗಳ ಸ್ವಂತ ದೇಶಕ್ಕೆ ಹಿಂದಿರುಗಿಸುವೆನು. ಇಸ್ರೇಲರ ಬೆಟ್ಟಗಳಲ್ಲಿ ಅವುಗಳನ್ನು ಮೇಯಿಸುವೆನು. ನೀರಿನ ತೊರೆಗಳ ಬದಿಯಲ್ಲಿ ಜನರಿರುವ ಸ್ಥಳಗಳಲ್ಲಿ ನಾನು ಅವುಗಳನ್ನು ಮೇಯಿಸುವೆನು.


ಆಗ ನಿಮ್ಮೆಲ್ಲರನ್ನು ನಾನು ಹಿಂದಕ್ಕೆ ಕರೆತರುವೆನು. ನಿನ್ನನ್ನು ಪ್ರಸಿದ್ಧಿಪಡಿಸುವೆನು. ಎಲ್ಲಾ ಜನರು ನಿನ್ನನ್ನು ಹೊಗಳುವರು. ನಿನ್ನ ಕಣ್ಣೆದುರಿಗೆ ಸೆರೆಹಿಡಿದವರನ್ನು ಕರೆತರುವಾಗ ಹಾಗೆ ಆಗುವದು” ಇದು ಯೆಹೋವನ ನುಡಿ.


ನಾನು ಅವರ ಒಡೆಯನಾದ ಯೆಹೋವನೆಂದು ತಿಳಿಯುವರು. ಯಾಕೆಂದರೆ ನಾನು, ಅವರನ್ನು ಅವರ ಸ್ವದೇಶವನ್ನು ಬಿಟ್ಟು ಸೆರೆಹಿಡಿಯಲ್ಪಟ್ಟವರಾಗಿ ಬೇರೆ ದೇಶಗಳಿಗೆ ಹೋಗುವಂತೆ ಮಾಡಿದೆನು. ಆಮೇಲೆ ತಿರುಗಿ ಅವರನ್ನು ಒಟ್ಟುಗೂಡಿಸಿ ಅವರ ದೇಶಕ್ಕೆ ಹಿಂದಕ್ಕೆ ಕರೆಸಿದೆನು.


ನಾನು ನನ್ನ ಸೇವಕನಾದ ಯಾಕೋಬನಿಗೆ ಕೊಟ್ಟಿರುವ ದೇಶದಲ್ಲಿ ಅವರು ವಾಸಿಸುವರು. ನಿಮ್ಮ ಪೂರ್ವಿಕರು ಆ ಪ್ರಾಂತ್ಯದಲ್ಲಿ ವಾಸವಾಗಿದ್ದರು. ನನ್ನ ಜನರು ಅಲ್ಲಿಯೇ ವಾಸಮಾಡುವರು. ಅವರೂ ಅವರ ಮಕ್ಕಳೂ ಮೊಮ್ಮಕ್ಕಳೂ ಅಲ್ಲಿ ನಿತ್ಯಕಾಲಕ್ಕೂ ಜೀವಿಸುವರು. ನನ್ನ ಸೇವಕನಾದ ದಾವೀದನು ಅವರ ನಿತ್ಯಕಾಲದ ರಾಜನು.


ದೇವರು ಹೇಳಿದ್ದೇನೆಂದರೆ, “ನಾನು ಆ ದೇಶಗಳಿಂದ ನಿಮ್ಮನ್ನು ತೆಗೆದು, ನಿಮ್ಮನ್ನು ಒಟ್ಟುಗೂಡಿಸಿ ನಿಮ್ಮ ಸ್ವದೇಶಕ್ಕೆ ತಿರುಗಿ ಬರಮಾಡುವೆನು.


“ನಾನು ನನ್ನ ಕುರಿಗಳನ್ನು ಬೇರೆ ದೇಶಗಳಿಗೆ ಕಳುಹಿಸಿದೆ. ಆದರೆ ಉಳಿದ ನನ್ನ ಕುರಿಗಳನ್ನು ಒಂದೆಡೆ ಸೇರಿಸುವೆನು. ಅವುಗಳನ್ನು ಅವುಗಳ ಹುಲ್ಲುಗಾವಲಿಗೆ ತರುವೆನು. ಅವುಗಳಿಗೆ ಅನೇಕ ಮಕ್ಕಳಾಗಿ ಅವುಗಳ ಸಂಖ್ಯೆ ಬೆಳೆಯುವುದು.


ಮುಂದಿನ ದಿವಸಗಳಲ್ಲಿ ಯೆಹೋವನು ಯಾಕೋಬನ ಮೇಲೆ ಮತ್ತೆ ಪ್ರೀತಿತೋರುವನು. ಯೆಹೋವನು ಮತ್ತೆ ಇಸ್ರೇಲರನ್ನು ಆರಿಸುವನು. ಆ ಸಮಯದಲ್ಲಿ ಅವರ ದೇಶವನ್ನು ಅವರಿಗೆ ಹಿಂತಿರುಗಿಸುವನು. ಆಗ ಯೆಹೂದ್ಯರಲ್ಲದವರು ಯೆಹೂದ್ಯರೊಂದಿಗೆ ಸೇರಿಕೊಳ್ಳುವರು. ಅವರೆಲ್ಲರೂ ಒಂದೇ ವಂಶದವರಾಗುವರು. ಅದು ಯಾಕೋಬನ ವಂಶ.


“ಯೆಹೂದದ ಜನರು ತಮ್ಮ ಮನೆಗಳನ್ನು ಮತ್ತು ಪ್ರದೇಶವನ್ನು ಬಿಡುವಂತೆ ಮಾಡುತ್ತೇನೆ. ಆ ಜನರನ್ನು ಪರದೇಶಕ್ಕೆ ಒಯ್ಯಲಾಗುವುದು. ಯುದ್ಧದಲ್ಲಿ ಮರಣ ಹೊಂದದೆ ಅಳಿದುಳಿದ ಕೆಲವು ಮಂದಿ ಯೆಹೂದಿಯರು ತಾವು ಸತ್ತುಹೋಗಿದ್ದರೆ ಚೆನ್ನಾಗಿತ್ತು ಎಂದುಕೊಳ್ಳುವರು.” ಇದು ಯೆಹೋವನ ನುಡಿ.


ಆಗ ಅವರು ‘ಇಸ್ರೇಲರನ್ನು ಉತ್ತರದ ನಾಡಿನಿಂದಲೂ ಎಲ್ಲಾ ದೇಶಗಳಿಂದಲೂ ಹೊರತಂದ ಯೆಹೋವನ ಜೀವದಾಣೆ.’ ಇಸ್ರೇಲರನ್ನು ನಾನು ಅವರ ಪೂರ್ವಿಕರಿಗೆ ಕೊಟ್ಟ ದೇಶಕ್ಕೆ ಮತ್ತೆ ಕರೆದುಕೊಂಡು ಬರುವೆನು. ಆದ್ದರಿಂದಲೇ ಜನರು ಹೀಗೆ ಹೇಳುವರು.”


ನಾನು ನಿಮಗೆ ದೊರೆಯುವೆನು.” ಇದು ಯೆಹೋವನ ನುಡಿ. “ನಾನು ನಿಮ್ಮನ್ನು ನಿಮ್ಮ ಬಂಧನದಿಂದ ಬಿಡಿಸಿ ಕರೆದುತರುವೆನು. ನಾನು ಈ ಸ್ಥಳವನ್ನು ಬಿಡಲು ನಿಮಗೆ ಒತ್ತಾಯಿಸಿದೆ. ಆದರೆ ನಾನು ನಿಮ್ಮನ್ನು ಕಳುಹಿಸಿದ್ದ ಎಲ್ಲಾ ಜನಾಂಗಗಳಿಂದ ಮತ್ತು ಎಲ್ಲಾ ಸ್ಥಳಗಳಿಂದ ನಿಮ್ಮನ್ನು ಒಟ್ಟುಗೂಡಿಸಿ ಈ ಸ್ಥಳಕ್ಕೆ ಕರೆದು ತರುವೆನು.” ಇದು ಯೆಹೋವನ ನುಡಿ.


ಏಕೆಂದರೆ ನಾನು ನನ್ನ ಜನರಾದ ಇಸ್ರೇಲರನ್ನು ಮತ್ತು ಯೆಹೂದ್ಯರನ್ನು ಸೆರೆವಾಸದಿಂದ ಕರೆದುಕೊಂಡು ಬರುವ ದಿನಗಳು ಬರುತ್ತಿವೆ.” ಈ ಸಂದೇಶವು ಯೆಹೋವನಿಂದ ಬಂದದ್ದು. “ಆ ಜನರನ್ನು ನಾನು ಅವರ ಪೂರ್ವಿಕರಿಗೆ ಕೊಟ್ಟ ಪ್ರದೇಶದಲ್ಲಿ ನೆಲಸುವಂತೆ ಮಾಡುತ್ತೇನೆ. ಆಗ ನನ್ನ ಜನರು ಆ ಪ್ರದೇಶದ ಒಡೆತನ ಪಡೆಯುವರು.”


ಯೆಹೋವನು ಹೀಗೆಂದನು: “ನನ್ನ ಸೇವಕನಾದ ಯಾಕೋಬನೇ, ಭಯಪಡಬೇಡ! ಇಸ್ರೇಲೇ, ಅಂಜಬೇಡ, ನಾನು ನಿಮ್ಮನ್ನು ಆ ದೂರಪ್ರದೇಶದಿಂದ ರಕ್ಷಿಸುವೆನು. ಆ ದೂರದೇಶದಲ್ಲಿ ನೀವು ಬಂಧಿಗಳಾಗಿದ್ದೀರಿ, ಆದರೆ ನಾನು ನಿಮ್ಮ ವಂಶದವರನ್ನು ರಕ್ಷಿಸುತ್ತೇನೆ. ಅವರನ್ನು ಆ ನಾಡಿನಿಂದ ಮತ್ತೆ ಕರೆದುತರುತ್ತೇನೆ. ಯಾಕೋಬು ಮತ್ತೆ ನೆಮ್ಮದಿಯಿಂದ ಇರುವುದು. ಜನರು ಯಾಕೋಬನನ್ನು ಪೀಡಿಸುವದಿಲ್ಲ; ನನ್ನ ಜನರನ್ನು ಹೆದರಿಸುವ ಶತ್ರುಗಳಿರುವದಿಲ್ಲ.” ಇದು ಯೆಹೋವನ ನುಡಿ.


ನಾನು ಇಸ್ರೇಲರನ್ನು ಉತ್ತರದ ದೇಶದಿಂದ ತರುವೆನು. ನಾನು ಜಗತ್ತಿನ ದೂರದೂರದ ಸ್ಥಳಗಳಿಂದ ಇಸ್ರೇಲರನ್ನು ಒಟ್ಟುಗೂಡಿಸುವೆನೆಂದು ತಿಳಿದುಕೊಳ್ಳಿರಿ. ಅವರಲ್ಲಿ ಕೆಲವರು ಕುರುಡರಾಗಿರುವರು; ಕುಂಟರಾಗಿರುವರು, ಕೆಲವು ಸ್ತ್ರೀಯರು ಗರ್ಭಿಣಿಯರಾಗಿದ್ದು ಹೆರಿಗೆಯ ದಿನಗಳು ತುಂಬಿದವರಾಗಿರುತ್ತಾರೆ. ಬಹಳಷ್ಟು ಜನರು ಹಿಂತಿರುಗಿಬರುತ್ತಾರೆ.


‘ಇಸ್ರೇಲರನ್ನು ಮತ್ತು ಯೆಹೂದ್ಯರನ್ನು ತಮ್ಮ ಪ್ರದೇಶವನ್ನು ಬಿಟ್ಟುಹೋಗಲು ನಾನು ಒತ್ತಾಯಿಸಿದ್ದೇನೆ. ನಾನು ಅವರ ಮೇಲೆ ತುಂಬ ಕೋಪಗೊಂಡಿದ್ದೆ. ಆದರೆ ನಾನು ಅವರನ್ನು ಈ ಸ್ಥಳಕ್ಕೆ ಹಿಂದಿರುಗಿಸುವೆನು. ನಾನು ಒತ್ತಾಯಿಸಿ ಅವರನ್ನು ಅಟ್ಟಿದ ಸ್ಥಳಗಳಿಂದ ಅವರನ್ನು ಒಟ್ಟುಗೂಡಿಸುವೆನು. ಅವರನ್ನು ಪುನಃ ಈ ಸ್ಥಳಕ್ಕೆ ಕರೆತರುವೆನು. ಅವರು ನೆಮ್ಮದಿಯಿಂದ ಮತ್ತು ಸುರಕ್ಷಿತವಾಗಿ ಇರುವಂತೆ ಮಾಡುವೆನು.


ನನ್ನ ಒಡೆಯನಾದ ಯೆಹೋವನು ಹೀಗೆ ಹೇಳಿದನು: “ಬೇರೆ ದೇಶಗಳಿಗೆ ನಾನು ಇಸ್ರೇಲರನ್ನು ಚದರಿಸಿದೆನು. ಆದರೆ ತಿರುಗಿ ಇಸ್ರೇಲರನ್ನೆಲ್ಲಾ ಒಟ್ಟುಗೂಡಿಸುವೆನು. ಆಗ ಆ ದೇಶದವರು ನಾನು ಪವಿತ್ರವಾದ ದೇವರೆಂದು ತಿಳಿದು ಆ ರೀತಿಯಾಗಿ ನನ್ನನ್ನು ನೋಡುವರು. ಆಗ ಇಸ್ರೇಲರು ತಮ್ಮ ದೇಶದಲ್ಲಿ ವಾಸಮಾಡುವರು. ಆ ದೇಶವನ್ನು ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟಿದ್ದೆನು.


ಆ ದೂರದ ಸ್ಥಳಗಳಿಗೆ ನನ್ನ ಜನರನ್ನು ಕಳುಹಿಸಿದಿರಿ, ಆದರೆ ನಾನು ಅವರನ್ನು ಹಿಂದೆ ತರುವೆನು. ಮತ್ತು ನೀವು ಮಾಡಿದ ಕೃತ್ಯಕ್ಕೆ ನಾನು ನಿಮ್ಮನ್ನು ಶಿಕ್ಷಿಸುವೆನು.


ಆ ಸಮಯದಲ್ಲಿ ನನ್ನ ಒಡೆಯನು ಎರಡನೆ ಸಾರಿ ಕೈಚಾಚಿ, ಉಳಿದ ತನ್ನ ಜನರನ್ನು ತೆಗೆದುಕೊಳ್ಳುವನು. ಇವರು ಅಶ್ಶೂರ, ಉತ್ತರ ಈಜಿಪ್ಟ್, ದಕ್ಷಿಣ ಈಜಿಪ್ಟ್, ಇಥಿಯೋಪ್ಯ, ಏಲಾಮ್, ಬಾಬಿಲೋನಿಯ, ಹಮಾಥ್ ಮತ್ತು ಕರಾವಳಿ ಪ್ರದೇಶಗಳಲ್ಲಿರುವ ಎಲ್ಲಾ ಜನಾಂಗಗಳವರು.


ಯೆಹೋವನು ಹೇಳಿದನು: “ಪ್ರಮಾಣ ಮಾಡಬೇಕಾದರೆ ಜನರು ‘ಇಸ್ರೇಲರನ್ನು ಈಜಿಪ್ಟಿನಿಂದ ಹೊರತಂದ ಯೆಹೋವನ ಜೀವದಾಣೆ’ ಎಂದು ಹೇಳುತ್ತಾರೆ. ಒಂದು ಕಾಲ ಬರಲಿದೆ.


‘ಹಿಂದಿನ ಕಾಲದಲ್ಲಿ ದೇಶವು ಹಾಳಾಗಿ ಹೋಗಿತ್ತು. ಈಗ ಇದು ಏದೆನ್ ತೋಟದಂತಿದೆ. ಪಟ್ಟಣಗಳು ನಾಶವಾಗಿದ್ದವು, ಬರಿದಾಗಿದ್ದವು. ಈಗಲಾದರೋ ಅವು ಸುರಕ್ಷಿತವಾಗಿದ್ದು ಜನಭರಿತವಾಗಿವೆ’” ಎಂದು ಜನರು ಅನ್ನುವರು.


ನಿನ್ನನ್ನು ಈಜಿಪ್ಟಿನಿಂದ ಬರಮಾಡಿದಾಗ ಅನೇಕ ಅದ್ಭುತಕಾರ್ಯಗಳನ್ನು ಮಾಡಿದೆನು. ಇನ್ನೂ ಅನೇಕ ಅದ್ಭುತಗಳನ್ನು ನೀನು ನೋಡುವಂತೆ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು