Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 24:1 - ಪರಿಶುದ್ದ ಬೈಬಲ್‌

1 ಯೆಹೋವನು ನನಗೆ ಈ ವಸ್ತುಗಳನ್ನು ತೋರಿಸಿದನು: ಯೆಹೋವನು ಪವಿತ್ರಾಲಯದ ಎದುರುಗಡೆಯಲ್ಲಿ ಅಂಜೂರದ ಎರಡು ಬುಟ್ಟಿಗಳನ್ನು ಜೋಡಿಸಿಟ್ಟಿದ್ದು ನನಗೆ ಕಂಡುಬಂತು. (ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಕೊನ್ಯನನ್ನು ಸೆರೆಹಿಡಿದ ಮೇಲೆ ನಾನು ಈ ದರ್ಶನವನ್ನು ಕಂಡೆ. ಯೆಕೊನ್ಯನು ರಾಜನಾದ ಯೆಹೋಯಾಕೀಮನ ಮಗ. ಯೆಕೊನ್ಯನನ್ನು ಮತ್ತು ಅವನ ಪ್ರಮುಖ ಅಧಿಕಾರಿಗಳನ್ನು ಜೆರುಸಲೇಮಿನಿಂದ ಬಾಬಿಲೋನಿಗೆ ತೆಗೆದುಕೊಂಡು ಹೋಗಲಾಯಿತು. ನೆಬೂಕದ್ನೆಚ್ಚರನು ಯೆಹೂದದ ಎಲ್ಲಾ ಬಡಗಿಗಳನ್ನು ಮತ್ತು ಕಮ್ಮಾರರನ್ನು ತೆಗೆದುಕೊಂಡು ಹೋಗಿದ್ದನು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಯೆಕೊನ್ಯನನ್ನೂ, ಯೆಹೂದದ ಪ್ರಧಾನರನ್ನೂ, ಶಿಲ್ಪಿಗಳನ್ನೂ ಮತ್ತು ಕಮ್ಮಾರರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದ ಮೇಲೆ ಯೆಹೋವನ ಆಲಯದ ಮುಂದೆ ಇಟ್ಟಿರುವ ಅಂಜೂರದ ಹಣ್ಣು ತುಂಬಿದ ಎರಡು ಪುಟ್ಟಿಗಳನ್ನು ಯೆಹೋವನು ನನಗೆ ತೋರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗ ಹಾಗೂ ಜುದೇಯದ ಅರಸ ಆದ ಯೆಕೊನ್ಯನನ್ನು, ಜುದೇಯದ ಪ್ರಧಾನಿಗಳನ್ನು, ಶಿಲ್ಪಿಗಳನ್ನು ಮತ್ತು ಕಮ್ಮಾರರನ್ನು ಜೆರುಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದನು. ಇದಾದ ಬಳಿಕ ಸರ್ವೇಶ್ವರ ಸ್ವಾಮಿ ತಮ್ಮ ಆಲಯದ ಮುಂದೆ ಇಟ್ಟಿದ್ದ, ಅಂಜೂರದ ಹಣ್ಣು ತುಂಬಿದ್ದ, ಎರಡು ಬುಟ್ಟಿಗಳನ್ನು ನನಗೆ ಕಾಣುವಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಯೆಕೊನ್ಯನನ್ನೂ ಯೆಹೂದದ ಪ್ರಧಾನರನ್ನೂ ಶಿಲ್ಪಿಗಳನ್ನೂ ಕಮ್ಮಾರರನ್ನೂ ಯೆರೂಸಲೇವಿುನಿಂದ ಬಾಬೆಲಿಗೆ ಸೆರೆ ಒಯ್ದ ಮೇಲೆ ಯೆಹೋವನ ಆಲಯದ ಮುಂದೆ ಇಟ್ಟಿರುವ ಅಂಜೂರದ ಹಣ್ಣು ತುಂಬಿದ ಎರಡು ಪುಟ್ಟಿಗಳನ್ನು ಯೆಹೋವನು ನನಗೆ ಕಾಣಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು, ಯೆಹೂದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯನನ್ನೂ, ಯೆಹೂದದ ಪ್ರಧಾನರನ್ನೂ, ಬಡಗಿಯರನ್ನೂ, ಕಮ್ಮಾರರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆಗೆ ಒಯ್ದನು. ಯೆಹೋವ ದೇವರ ದೇವಾಲಯದ ಮುಂದೆ ಇಟ್ಟಿರುವ ಎರಡು ಬುಟ್ಟಿ ಅಂಜೂರದ ಹಣ್ಣುಗಳನ್ನು ಯೆಹೋವ ದೇವರು ನನಗೆ ತೋರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 24:1
22 ತಿಳಿವುಗಳ ಹೋಲಿಕೆ  

(ರಾಜನಾದ ಯೆಹೋಯಾಕೀನನನ್ನು, ರಾಜಮಾತೆಯನ್ನು, ಯೆಹೂದದ ಮತ್ತು ಜೆರುಸಲೇಮಿನ ಅಧಿಕಾರಿಗಳನ್ನು, ಮುಂದಾಳುಗಳನ್ನು, ಬಡಗಿಗಳನ್ನು ಮತ್ತು ಕಮ್ಮಾರರನ್ನು ಜೆರುಸಲೇಮಿನಿಂದ ತೆಗೆದುಕೊಂಡು ಹೋದ ಮೇಲೆ ಈ ಪತ್ರವನ್ನು ಕಳಿಸಲಾಯಿತು.)


ವಸಂತ ಕಾಲದಲ್ಲಿ ನೆಬೂಕದ್ನೆಚ್ಚರನು ತನ್ನ ಸೇವಕರನ್ನು ಕಳುಹಿಸಿ ಯೆಹೋಯಾಕೀನನನ್ನು ಕರೆಯಿಸಿದನು. ಆ ಸೇವಕರು ದೇವಾಲಯದ ಕೆಲವು ವಸ್ತುಗಳನ್ನೂ ಅವನ ಜೊತೆಯಲ್ಲಿ ಬಾಬಿಲೋನಿಗೆ ತೆಗೆದುಕೊಂಡು ಹೋದರು. ನೆಬೂಕದ್ನೆಚ್ಚರನು ಯೆಹೂದ ಮತ್ತು ಜೆರುಸಲೇಮಿಗೆ ಚಿದ್ಕೀಯನನ್ನು ಹೊಸ ಅರಸನನ್ನಾಗಿ ಮಾಡಿದನು. ಚಿದ್ಕೀಯನು ಯೆಹೋಯಾಕೀನನ ಸಂಬಂಧಿಕನಾಗಿದ್ದನು.


ದೇವದೂತನು ನನಗೆ ಪ್ರಧಾನ ಯಾಜಕನಾದ ಯೆಹೋಶುವನನ್ನು ತೋರಿಸಿದನು. ಅವನು ಯೆಹೋವನ ದೂತನ ಮುಂದೆ ನಿಂತಿದ್ದನು. ಸೈತಾನನು ಯೆಹೋಶುವನ ಬಲಗಡೆಯಲ್ಲಿ ನಿಂತಿದ್ದನು. ಯೆಹೋಶುವನು ಕೆಟ್ಟಕೃತ್ಯಗಳನ್ನು ಮಾಡಿದ್ದಾನೆಂದು ದೂರು ಹೇಳುವದಕ್ಕಾಗಿ ಸೈತಾನನು ಅಲ್ಲಿ ನಿಂತಿದ್ದನು.


ಯೆಹೋವನು ನನಗೆ ನಾಲ್ಕು ಮಂದಿ ಕೆಲಸಗಾರರನ್ನು ತೋರಿಸಿದನು.


ಯೆಹೋವನು ಈ ದರ್ಶನವನ್ನು ನನಗೆ ದಯಪಾಲಿಸಿದನು. ಕೈಯಲ್ಲಿ ತೂಗುಗುಂಡನ್ನು ಹಿಡಿದುಕೊಂಡು ಗೋಡೆಯ ಬದಿಯಲ್ಲಿ ನಿಂತಿದ್ದನು. ಆ ಗೋಡೆಯು ನೂಲಿನಿಂದ ಗುರುತು ಮಾಡಲ್ಪಟ್ಟಿತ್ತು.


ನನ್ನ ಒಡೆಯನಾದ ಯೆಹೋವನು ಈ ವಿಷಯಗಳನ್ನು ನನಗೆ ತೋರಿಸಿದನು. ದೇವರಾದ ಯೆಹೋವನು ಬೆಂಕಿಯಿಂದ ನ್ಯಾಯತೀರಿಸುವುದಕ್ಕಾಗಿ ಕರೆಯುವುದನ್ನು ಕಂಡೆನು. ಆ ಬೆಂಕಿಯು ಮಹಾ ಸಾಗರವನ್ನು ನಾಶಮಾಡಿತು. ಭೂಮಿಯನ್ನು ತಿಂದುಬಿಡಲೂ ಪ್ರಾರಂಭಿಸಿತು.


ಯೆಹೋವನು ನನಗೆ ಇದನ್ನು ತೋರಿಸಿದನು: ಎರಡನೇ ಬೆಳೆಯು ಬೆಳೆಯಲಾರಂಭಿಸಿದ ಕಾಲದಲ್ಲಿ ಆತನು ಮಿಡತೆಗಳನ್ನು ತಯಾರು ಮಾಡುತ್ತಿದ್ದನು. ಅರಸನು ಮೊದಲನೇ ಬೆಳೆಯನ್ನು ರಾಶಿಮಾಡಿಸಿಕೊಂಡು ಹೋದ ನಂತರದ ಬೆಳೆ ಇದು.


ನನ್ನ ಒಡೆಯನಾದ ಯೆಹೋವನು ಒಂದು ಕಾರ್ಯವನ್ನು ಮಾಡಲು ನಿರ್ಧರಿಸಬಹುದು. ಆದರೆ ಆತನು ಹಾಗೆ ಮಾಡುವ ಮುಂಚಿತವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ಮುಂತಿಳಿಸುವನು.


ಅವರು ಅದನ್ನು ಮರದ ಪಂಜರದಲ್ಲಿಟ್ಟು ಕೊಂಡಿಗಳನ್ನು ಹಾಕಿ, ಬಾಬಿಲೋನಿನ ರಾಜನ ಬಳಿಗೆ ಕೊಂಡೊಯ್ದರು. ಅದರ ಗರ್ಜನೆಯು ಇಸ್ರೇಲಿನ ಪರ್ವತಗಳ ಮೇಲೆ ಇನ್ನೆಂದಿಗೂ ಕೇಳದಿರಲಿ ಎಂದು ಅದನ್ನು ಅಲ್ಲಿ ಸೆರೆಮನೆಗೆ ಹಾಕಿದರು.


ಆ ಸಮಯದಲ್ಲಿ ಬಾಬಿಲೋನ್ ರಾಜನಾದ ನೆಬೂಕದ್ನೆಚ್ಚರನ ಅಧಿಕಾರಿಗಳು ಜೆರುಸಲೇಮಿಗೆ ಮುತ್ತಿಗೆ ಹಾಕಿದರು.


ಆಮೋಚನ ಮಗನಾದ ಯೆಶಾಯನಿಗೆ ಬಾಬಿಲೋನಿನ ಬಗ್ಗೆ ದೊರೆತ ದೈವಸಂದೇಶ:


ನೆಬೂಕದ್ನೆಚ್ಚರನು ಯೆಹೂದದ ರಾಜನಾದ ಯೆಹೋಯಾಕೀನನನ್ನು ಸೆರೆಯಾಳಾಗಿ ತೆಗೆದುಕೊಂಡು ಹೋಗುವಾಗ ಆ ವಸ್ತುಗಳನ್ನು ತೆಗೆದುಕೊಂಡು ಹೋಗಲಿಲ್ಲ. ಯೆಹೋಯಾಕೀನನು ಯೆಹೋಯಾಕೀಮನ ಮಗನಾಗಿದ್ದನು. ನೆಬೂಕದ್ನೆಚ್ಚರನು ಯೆಹೂದ ಮತ್ತು ಜೆರುಸಲೇಮಿನಿಂದ ಬೇರೆ ಪ್ರಮುಖ ಜನರನ್ನು ಸಹ ತೆಗೆದುಕೊಂಡು ಹೋದನು.


ನಾನು ಯೆಹೂದದ ರಾಜನಾದ ಯೆಹೋಯಾಕೀನನನ್ನು ಇಲ್ಲಿಗೆ ಕರೆದುಕೊಂಡು ಬರುತ್ತೇನೆ. ಯೆಹೋಯಾಕೀನನು ಯೆಹೋಯಾಕೀಮನ ಮಗನು. ನೆಬೂಕದ್ನೆಚ್ಚರನು ಬಾಬಿಲೋನಿಗೆ ತೆಗೆದುಕೊಂಡು ಹೋದ ಎಲ್ಲಾ ಯೆಹೂದ್ಯರನ್ನು ನಾನು ಮತ್ತೆ ಕರೆದುಕೊಂಡು ಬರುತ್ತೇನೆ. ಬಾಬಿಲೋನಿನ ರಾಜನು ಯೆಹೂದದ ಜನರ ಮೇಲೆ ಹೇರಿದ ನೊಗವನ್ನು ನಾನು ಮುರಿದುಹಾಕುತ್ತೇನೆ.’” ಇದು ಯೆಹೋವನ ಸಂದೇಶ.


ಯೆರೆಮೀಯನು ಬಾಬಿಲೋನಿನಲ್ಲಿದ್ದ ಯೆಹೂದ್ಯ ಸೆರೆಯಾಳುಗಳಿಗೆ, ಅಂದರೆ ಹಿರಿಯನಾಯಕರಿಗೆ, ಯಾಜಕರಿಗೆ, ಪ್ರವಾದಿಗಳಿಗೆ ಮತ್ತು ಇನ್ನುಳಿದ ಸಮಸ್ತ ಜನರಿಗೆ ಪತ್ರವನ್ನು ಕಳುಹಿಸಿದನು. ಇವರನ್ನು ನೆಬೂಕದ್ನೆಚ್ಚರನು ಜೆರುಸಲೇಮಿನಿಂದ ಬಾಬಿಲೋನಿಗೆ ಸೆರೆಯಾಳುಗಳಾಗಿ ಕೊಂಡೊಯ್ದನು.


ನೆಬೂಕದ್ನೆಚ್ಚರನು ಬಾಬಿಲೋನಿನ ರಾಜನಾಗಿದ್ದನು. ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗನಾದ ಕೊನ್ಯನ ಸ್ಥಾನದಲ್ಲಿ ಚಿದ್ಕೀಯನನ್ನು ಯೆಹೂದದ ರಾಜನನ್ನಾಗಿ ನೇಮಿಸಿದ್ದನು. ಚಿದ್ಕೀಯನು ರಾಜನಾದ ಯೋಷೀಯನ ಮಗನಾಗಿದ್ದನು.


ನೆಗೆವ್ ಮರುಭೂಮಿಯ ಎಲ್ಲಾ ನಗರಗಳಿಗೆ ಬೀಗ ಹಾಕಲಾಗಿದೆ. ಅವುಗಳನ್ನು ತೆರೆಯುವುದು ಯಾರಿಂದಲೂ ಸಾಧ್ಯವಿಲ್ಲ. ಯೆಹೂದದ ಎಲ್ಲಾ ಜನರು ಸೆರೆ ಒಯ್ಯಲ್ಪಟ್ಟಿದ್ದಾರೆ. ಅವರೆಲ್ಲರನ್ನು ಸೆರೆಯಾಳುಗಳಾಗಿ ತೆಗೆದುಕೊಂಡು ಹೋಗಲಾಗಿದೆ.


ಆ ಹದ್ದು ದೇವದಾರು ಮರದ (ಯೆಹೂದದ ರಾಜನಾದ ಯೆಹೋಯಾಖೀನ್) ಮೇಲ್ಭಾಗವನ್ನು ಮುರಿದುಬಿಟ್ಟಿತು. ಅದನ್ನು ವ್ಯಾಪಾರಿಗಳ ದೇಶಕ್ಕೆ ತಂದುಹಾಕಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು