ಯೆರೆಮೀಯ 24:10 - ಪರಿಶುದ್ದ ಬೈಬಲ್10 ನಾನು ಖಡ್ಗ, ಕ್ಷಾಮ, ವ್ಯಾಧಿಗಳನ್ನು ಅವರ ಮೇಲೆ ಕಳುಹಿಸುವೆನು. ಅವರೆಲ್ಲರೂ ಸತ್ತುಹೋಗುವವರೆಗೆ ನಾನು ಅವರ ಮೇಲೆ ಧಾಳಿಮಾಡುವೆನು. ನಾನು ಅವರಿಗೆ ಮತ್ತು ಅವರ ಪೂರ್ವಿಕರಿಗೆ ಕೊಟ್ಟ ಭೂಮಿಯ ಮೇಲೆ ಅವರು ವಾಸಿಸಲಾಗುವದಿಲ್ಲ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಾನು ಅವರಿಗೂ ಅವರ ಪೂರ್ವಿಕರಿಗೂ ಅನುಗ್ರಹಿಸಿದ ದೇಶದೊಳಗಿಂದ ಅವರು ನಿರ್ಮೂಲರಾಗುವ ತನಕ ಖಡ್ಗ, ಕ್ಷಾಮ ಮತ್ತು ವ್ಯಾಧಿಗಳನ್ನು ಅವರ ಮೇಲೆ ಕಳುಹಿಸುವೆನು” ಎಂದು ಹೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅವರಿಗೂ ಅವರ ಪೂರ್ವಜರಿಗೂ ನಾನು ಅನುಗ್ರಹಿಸಿದ ನಾಡಿನಿಂದ ಅವರು ನಿರ್ಮೂಲರಾಗುವ ತನಕ ಖಡ್ಗ, ಕ್ಷಾಮ, ವ್ಯಾಧಿಗಳನ್ನು ಅವರ ಮೇಲೆ ಕಳುಹಿಸುವೆನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಾನು ಅವರಿಗೂ ಅವರ ಪಿತೃಗಳಿಗೂ ಅನುಗ್ರಹಿಸಿದ ದೇಶದೊಳಗಿಂದ ಅವರು ನಿರ್ಮೂಲರಾಗುವ ತನಕ ಖಡ್ಗಕ್ಷಾಮವ್ಯಾಧಿಗಳನ್ನು ಅವರ ಮೇಲೆ ಕಳುಹಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಾನು ಅವರಿಗೂ, ಅವರ ತಂದೆಗಳಿಗೂ ಕೊಟ್ಟ ದೇಶದೊಳಗಿಂದ ಅವರು ನಾಶವಾಗುವವರೆಗೂ ಖಡ್ಗವನ್ನೂ, ಕ್ಷಾಮವನ್ನೂ, ವ್ಯಾಧಿಯನ್ನೂ ಅವರಲ್ಲಿ ಕಳುಹಿಸುವೆನು.’ ” ಅಧ್ಯಾಯವನ್ನು ನೋಡಿ |
“ಅದಕ್ಕಾಗಿ ಯೆಹೋವನು ಹೀಗೆನ್ನುತ್ತಾನೆ: ‘ನೀವು ನನ್ನ ಆಜ್ಞಾಪಾಲನೆಯನ್ನು ಮಾಡಿಲ್ಲ. ನೀವು ನಿಮ್ಮ ಸಹೋದರರಾದ ಇಬ್ರಿಯರಿಗೆ ಸ್ವಾತಂತ್ರ್ಯವನ್ನು ಕೊಟ್ಟಿಲ್ಲ. ನೀವು ಒಡಂಬಡಿಕೆಗನುಸಾರವಾಗಿ ನಡೆದುಕೊಂಡಿಲ್ಲ. ಅದಕ್ಕಾಗಿ ನಾನು “ಸ್ವಾತಂತ್ರ್ಯವನ್ನು ಕೊಡುತ್ತೇನೆ.” ಇದು ಯೆಹೋವನ ನುಡಿ. ಖಡ್ಗ, ಭಯಂಕರವಾದ ವ್ಯಾಧಿ ಮತ್ತು ಹಸಿವು ಇವುಗಳಿಗೆ ನಿಮ್ಮನ್ನು ಕೊಲ್ಲುವ “ಸ್ವಾತಂತ್ರ್ಯವನ್ನು” ನಾನು ಕೊಡುತ್ತೇನೆ. ಈ ವಿಷಯ ಕೇಳಿ ಭೂಲೋಕದ ಸಮಸ್ತ ರಾಜ್ಯಗಳು ಭಯಪಡುವಂತೆ ಮಾಡುತ್ತೇನೆ.
“‘ಆದರೆ ಈಗ ಕೆಲವು ಜನಾಂಗಗಳು ಅಥವಾ ರಾಜ್ಯಗಳು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಸೇವಿಸಲು ಒಪ್ಪಲಿಲ್ಲ. ಅವುಗಳು ಅವನ ನೊಗವನ್ನು ತಮ್ಮ ಕತ್ತಿನ ಮೇಲೆ ಇಟ್ಟುಕೊಳ್ಳಲು ಒಪ್ಪಲಿಲ್ಲ. ಆದ್ದರಿಂದ ನಾನು ಆ ಜನಾಂಗವನ್ನು ಖಡ್ಗ, ಹಸಿವು ಮತ್ತು ಭಯಂಕರ ವ್ಯಾಧಿಗಳಿಂದ ಶಿಕ್ಷಿಸುತ್ತೇನೆ, ಇದು ಯೆಹೋವನಿಂದ ಬಂದ ಸಂದೇಶ. ನಾನು ಆ ಜನಾಂಗವನ್ನು ನಾಶಗೊಳಿಸುವವರೆಗೂ ಹಾಗೆ ಮಾಡುವೆನು. ಅವನ ವಿರುದ್ಧ ಹೋರಾಡುವ ಜನಾಂಗವನ್ನು ನಾಶಮಾಡುವದಕ್ಕಾಗಿ ನಾನು ನೆಬೂಕದ್ನೆಚ್ಚರನನ್ನು ಉಪಯೋಗಿಸುತ್ತೇನೆ.
‘ನಾವು ಎಲ್ಲಿಗೆ ಹೋಗಬೇಕು’ ಎಂದು ಅವರು ಕೇಳಬಹುದು. ಯೆಹೋವನು ಹೀಗೆ ಹೇಳಿದ್ದಾನೆ ಎಂದು ನೀನು ಅವರಿಗೆ ಹೇಳು. “‘ಕೆಲವು ಜನರು ಮರಣಹೊಂದಬೇಕೆಂದು ನಾನು ಗೊತ್ತುಮಾಡಿದ್ದೇನೆ. ಅವರು ಮರಣಹೊಂದುತ್ತಾರೆ. ಕೆಲವು ಜನರು ಖಡ್ಗಗಳಿಂದ ಕೊಲ್ಲಲ್ಪಡಬೇಕೆಂದು ನಾನು ಗೊತ್ತುಮಾಡಿದ್ದೇನೆ. ಅವರು ಖಡ್ಗಗಳಿಗೆ ಬಲಿಯಾಗುತ್ತಾರೆ. ಕೆಲವು ಜನರು ಹೊಟ್ಟೆಗೆ ಅನ್ನವಿಲ್ಲದೆ ಸಾಯಬೇಕು ಎಂದು ನಾನು ಗೊತ್ತುಮಾಡಿದ್ದೇನೆ. ಅವರು ಹಸಿವಿನಿಂದ ಸಾಯುತ್ತಾರೆ. ಕೆಲವು ಜನರನ್ನು ಶತ್ರುಗಳು ಸೆರೆಹಿಡಿದು ಪರದೇಶಕ್ಕೆ ತೆಗೆದುಕೊಂಡು ಹೋಗಲಿ ಎಂದು ಗೊತ್ತುಮಾಡಿದ್ದೇನೆ. ಅವರು ಪರದೇಶದಲ್ಲಿ ಸೆರೆಯಾಳುಗಳಾಗಿ ಇರುವರು.
ನಾನು ನೋಡಿದಾಗ, ನನ್ನ ಮುಂದೆ ಒಂದು ಬೂದುಬಣ್ಣದ ಕುದುರೆಯಿರುವುದು ನನಗೆ ಕಾಣಿಸಿತು. ಆ ಕುದುರೆಯ ಮೇಲೆ ಕುಳಿತಿದ್ದ ಸವಾರನೇ ಮೃತ್ಯು. ಅವನ ಹಿಂದೆ ಪಾತಾಳ ಎಂಬುವನು ಬಂದನು. ಅವರಿಗೆ ಭೂಮಿಯ ಕಾಲುಭಾಗದ ಮೇಲೆ ಅಧಿಕಾರವನ್ನು ನೀಡಲಾಯಿತು. ಕತ್ತಿಯಿಂದಲೂ ಬರಗಾಲದಿಂದಲೂ ರೋಗಗಳಿಂದಲೂ ಮತ್ತು ಲೋಕದ ಮೇಲಿರುವ ಕಾಡುಮೃಗಗಳಿಂದಲೂ ಜನರನ್ನು ಕೊಲ್ಲುವ ಅಧಿಕಾರವನ್ನು ಅವರಿಗೆ ನೀಡಲಾಯಿತು.
ನಂತರ ಯೆಹೋವನು ಇಸ್ರೇಲರನ್ನು ಹೊಡೆಯುತ್ತಾನೆ. ಇಸ್ರೇಲಿನ ಜನರು ಬಹಳ ಭಯಗೊಳ್ಳುವರು. ಅವರು ನೀರಿನಲ್ಲಿ ಎತ್ತರವಾಗಿ ಬೆಳೆದಿರುವ ಹುಲ್ಲಿನಂತೆ ನಡುಗುವರು. ಯೆಹೋವನು ಇಸ್ರೇಲರನ್ನು ಈ ಶ್ರೇಷ್ಠವಾದ ದೇಶದಿಂದ ಚದರಿಸಿಬಿಡುವನು; ಆತನು ಈ ದೇಶವನ್ನು ಅವರ ಪೂರ್ವಿಕರಿಗೆ ಕೊಟ್ಟಿದ್ದನು. ಆತನು ಇಸ್ರೇಲರನ್ನು ಯೂಫ್ರೇಟೀಸ್ ನದಿಯ ಮತ್ತೊಂದು ಕಡೆಗೆ ಚದರಿಸಿಬಿಡುತ್ತಾನೆ. ಯೆಹೋವನು ಅವರ ಮೇಲೆ ಕೋಪಗೊಂಡಿರುವುದೇ ಅದಕ್ಕೆ ಕಾರಣ. ಅವರು ಅಶೇರ್ ವಿಗ್ರಹವನ್ನು ಆರಾಧಿಸಲು ವಿಶೇಷ ಸ್ತಂಭಗಳನ್ನು ಮಾಡಿಕೊಂಡಿದ್ದರಿಂದ ಆತನು ಅವರ ಮೇಲೆ ಕೋಪಗೊಂಡನು.
ಯೆಹೂದದ ಜನರು ಉಪವಾಸ ವ್ರತವನ್ನು ಕೈಕೊಳ್ಳಬಹುದು ಮತ್ತು ನನಗೆ ಪ್ರಾರ್ಥನೆ ಮಾಡಬಹುದು. ಆದರೆ ನಾನು ಅವರ ಪ್ರಾರ್ಥನೆಗಳನ್ನು ಕೇಳುವದಿಲ್ಲ. ಅವರು ನನಗೆ ಸರ್ವಾಂಗಹೋಮಗಳನ್ನು ಮತ್ತು ಧಾನ್ಯನೈವೇದ್ಯಗಳನ್ನು ಅರ್ಪಿಸಿದರೂ ಸಹ ನಾನು ಅವರನ್ನು ಸ್ವಿಕರಿಸುವದಿಲ್ಲ. ನಾನು ಯುದ್ಧದಿಂದ ಯೆಹೂದದ ಜನರನ್ನು ನಾಶಮಾಡುತ್ತೇನೆ. ನಾನು ಅವರ ಆಹಾರವನ್ನು ಕಿತ್ತುಕೊಳ್ಳುತ್ತೇನೆ; ಯೆಹೂದದ ಜನರು ಉಪವಾಸದಿಂದ ಸಾಯುವಂತೆ ಮಾಡುತ್ತೇನೆ. ನಾನು ಅವರನ್ನು ಭಯಂಕರವಾದ ವ್ಯಾಧಿಗಳಿಂದ ನಾಶಮಾಡುತ್ತೇನೆ” ಎಂದು ಹೇಳಿದನು.
ಇನ್ನೂ ಜೆರುಸಲೇಮಿನಲ್ಲಿರುವ ಜನರಿಗೆ ಖಡ್ಗ, ಹಸಿವು ಮತ್ತು ಭಯಂಕರವಾದ ವ್ಯಾಧಿಗಳಿಂದೊಡಗೂಡಿ ಬೆನ್ನಟ್ಟುವೆನು. ಆ ಜನರ ದುರ್ಗತಿಯನ್ನು ನೋಡಿ ಭೂಲೋಕದ ಸಮಸ್ತ ರಾಜ್ಯಗಳಿಗೆ ಭಯ ಉಂಟಾಗುವಂತೆ ಮಾಡುವೆನು. ಆ ಜನರನ್ನು ನಾಶಮಾಡುವೆನು. ನಡೆದ ವಿಷಯಗಳ ಬಗ್ಗೆ ಕೇಳಿ ಜನರು ಬೆರಗಾಗಿ ಸಿಳ್ಳುಹಾಕುವರು. ಯಾರಿಗಾದರೂ, ಕೇಡಾಗಲಿ ಎಂದು ಹೇಳಬೇಕಾದರೆ ಜನರು ಅವರ ಉದಾಹರಣೆಯನ್ನು ಕೊಡುವರು. ನಾನು ಅವರನ್ನು ಅಟ್ಟಿದ ಎಲ್ಲೆಡೆಯಲ್ಲಿಯೂ ಜನರು ಅವರನ್ನು ಅವಮಾನಗೊಳಿಸುವರು.
“ಈಗ ವೈರಿಗಳು ನಗರವನ್ನು ಮುತ್ತಿದ್ದಾರೆ. ಜೆರುಸಲೇಮಿನ ಗೋಡೆಯನ್ನು ಹತ್ತಿ ಅದನ್ನು ಸ್ವಾಧೀನಪಡಿಸಿಕೊಳ್ಳುವದಕ್ಕಾಗಿ ಅವರು ಇಳಿಜಾರುಗೋಡೆಗಳನ್ನು ಕಟ್ಟುತ್ತಿದ್ದಾರೆ. ಬಾಬಿಲೋನಿನ ಸೈನಿಕರು ತಮ್ಮ ಖಡ್ಗ, ಕ್ಷಾಮ ಮತ್ತು ಭಯಂಕರವ್ಯಾಧಿ ಇವುಗಳ ಸಹಾಯದಿಂದ ಜೆರುಸಲೇಮ್ ನಗರವನ್ನು ಸ್ವಾಧೀನಪಡಿಸಿಕೊಳ್ಳುವರು. ಬಾಬಿಲೋನಿನ ಸೈನಿಕರು ಈಗ ನಗರದ ಮೇಲೆ ಧಾಳಿ ಮಾಡುತ್ತಿದ್ದಾರೆ. ಯೆಹೋವನೇ, ಹೀಗಾಗುವದೆಂದು ನೀನು ಹೇಳಿದ್ದೆ, ಈಗ ನೀನು ಹೇಳಿದಂತೆಯೇ ಆಗುತ್ತಿದೆ.
“ನನ್ನ ಒಡೆಯನಾದ ಯೆಹೋವನೇ, ಆ ದುರ್ಬಟನೆಗಳೆಲ್ಲಾ ಸಂಭವಿಸುತ್ತಿವೆ. ಆದರೆ ಈಗ ನೀನು ‘ಯೆರೆಮೀಯನೇ, ಬೆಳ್ಳಿಯನ್ನು ಕೊಟ್ಟು ಹೊಲವನ್ನು ಕೊಂಡುಕೋ ಮತ್ತು ಈ ಖರೀದಿಗೆ ಸಾಕ್ಷಿಯಾಗಿ ಕೆಲವು ಜನರನ್ನು ಆರಿಸಿಕೋ’ ಎಂದು ಹೇಳುತ್ತಿರುವಿಯಲ್ಲ. ಬಾಬಿಲೋನಿನ ಸೈನ್ಯವು ನಗರವನ್ನು ಸ್ವಾಧೀನಪಡಿಸಿಕೊಳ್ಳಲು ಸಿದ್ಧವಾಗಿ ನಿಂತಿರುವಾಗ ನೀನು ಇದನ್ನು ಹೇಳುತ್ತಿರುವಿಯಲ್ಲ, ಏಕೆ? ಏಕೆ ನಾನು ಹಣವನ್ನು ಹೀಗೆ ವ್ಯರ್ಥವಾಗಿ ಕಳೆದುಕೊಳ್ಳಬೇಕು?”