5 ಇಸ್ರೇಲಿನ ದೇವರಾದ ಯೆಹೋವನು ಹೇಳಿದನು: “ಯೆಹೂದದ ಜನರನ್ನು ಅವರ ದೇಶದಿಂದ ತೆಗೆದುಕೊಂಡು ಹೋಗಲಾಯಿತು. ಅವರ ಶತ್ರು ಅವರನ್ನು ಬಾಬಿಲೋನಿಗೆ ತಂದನು. ಆ ಜನರು ಈ ಒಳ್ಳೆಯ ಅಂಜೂರದಂತಿರುವರು. ಆ ಜನರಿಗೆ ನಾನು ದಯೆತೋರುವೆನು.
5 “ಇಸ್ರಾಯೇಲ ದೇವರಾದ ಯೆಹೋವನು ಇಂತೆನ್ನುತ್ತಾನೆ, ನಾನು ಈ ಸ್ಥಳದೊಳಗಿಂದ ಕಸ್ದೀಯರ ದೇಶಕ್ಕೆ ಕಳುಹಿಸಿಬಿಟ್ಟ ಸೆರೆಯವರಾದ ಯೆಹೂದ್ಯರನ್ನು ಈ ಉತ್ತಮವಾದ ಅಂಜೂರದ ಫಲಗಳಂತೆ ಲಕ್ಷಿಸಿ, ಅವರಿಗೆ ಮೇಲನ್ನುಂಟುಮಾಡುವೆನು.
5 “ಇಸ್ರಯೇಲರ ದೇವರಾದ ಸರ್ವೇಶ್ವರ ಹೇಳುವುದನ್ನು ಕೇಳು - ನಾನು ಈ ಸ್ಥಳದಿಂದ ಬಾಬಿಲೋನಿಗೆ ಕಳಿಸಿಬಿಟ್ಟು ಅಲ್ಲಿ ಸೆರೆಯಾಳುಗಳಾಗಿರುವ ಯೆಹೂದ್ಯರು ಈ ಉತ್ತಮವಾದ ಅಂಜೂರದ ಹಣ್ಣುಗಳಂಥವರು. ಅವರನ್ನು ಆದರದಿಂದ ನೋಡಿ ಅವರಿಗೆ ಒಳ್ಳೆಯದನ್ನೇ ಮಾಡುವೆನು.
5 ಇಸ್ರಾಯೇಲ್ಯರ ದೇವರಾದ ಯೆಹೋವನು ಇಂತೆನ್ನುತ್ತಾನೆ - ನಾನು ಈ ಸ್ಥಳದೊಳಗಿಂದ ಕಸ್ದೀಯರ ದೇಶಕ್ಕೆ ಕಳುಹಿಸಿಬಿಟ್ಟ ಸೆರೆಯವರಾದ ಯೆಹೂದ್ಯರನ್ನು ಈ ಉತ್ತಮವಾದ ಅಂಜೂರದ ಫಲಗಳಂತೆ ಲಕ್ಷಿಸಿ ಅವರಿಗೆ ಮೇಲನ್ನುಂಟುಮಾಡುವೆನು.
5 “ಇಸ್ರಾಯೇಲರ ದೇವರಾದ ಯೆಹೋವ ದೇವರು ಹೇಳುವುದನ್ನು ಕೇಳು, ‘ನಾನು ಈ ಸ್ಥಳದಿಂದ ಬಾಬಿಲೋನಿಗೆ ಕಳುಹಿಸಿಬಿಟ್ಟು, ಅಲ್ಲಿ ಸೆರೆಯಾಳುಗಳಾಗಿರುವ ಯೆಹೂದ್ಯರು ಈ ಉತ್ತಮವಾದ ಅಂಜೂರದ ಹಣ್ಣುಗಳಂತವರು. ನಾನು ಅವರನ್ನು ಒಳ್ಳೆಯವರಂತೆ ಪರಿಗಣಿಸುತ್ತೇನೆ.
ಆ ಬಳಿಕ ನಾನು ಉಳಿದವರನ್ನು ಪರೀಕ್ಷಿಸುವೆನು. ಅವರಿಗೆ ಅನೇಕ ಸಂಕಟ ಬರಮಾಡುವೆನು. ಅದು ಬೆಳ್ಳಿಯನ್ನು ಬೆಂಕಿಯಲ್ಲಿ ಪರೀಕ್ಷಿಸಿದಂತಿರುವುದು. ಒಬ್ಬನು ಬಂಗಾರವನ್ನು ಪರೀಕ್ಷಿಸುವಂತೆ ನಾನು ಅವರನ್ನು ಪರೀಕ್ಷಿಸುವೆನು. ಆಗ ಅವರು ಸಹಾಯ ಮಾಡುವಂತೆ ನನಗೆ ಮೊರೆಯಿಡುವರು ಮತ್ತು ನಾನು ಅವರಿಗೆ ಉತ್ತರಕೊಡುವೆನು. ಆಗ ನಾನು, ‘ನೀವು ನನ್ನ ಜನರು’ ಎಂದು ಹೇಳುವೆನು. ಅದಕ್ಕವರು, ‘ಯೆಹೋವನು ನಮ್ಮ ದೇವರು’ ಎಂದು ಹೇಳುವರು.”
ಆದರೆ ದೇವರ ಭದ್ರವಾದ ಬುನಾದಿಯು ಬದಲಾಗುವುದೇ ಇಲ್ಲ. “ಪ್ರಭುವಿಗೆ ತನ್ನವರು ಯಾರೆಂಬುದು ತಿಳಿದಿದೆ” ಎಂತಲೂ “ಪ್ರಭುವಿನಲ್ಲಿ ನಂಬಿಕೆಯಿಟ್ಟಿರುವವರೆಲ್ಲರೂ ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಆ ಬುನಾದಿಯ ಮೇಲೆ ಕೆತ್ತಲಾಗಿದೆ.
ಈಗಲಾದರೋ ಸತ್ಯದೇವರನ್ನು ತಿಳಿದಿದ್ದೀರಿ. ನಿಜವಾಗಿ ಹೇಳಬೇಕಾದರೆ, ನಿಮ್ಮನ್ನು ತಿಳಿದಿರುವಾತನು ದೇವರೇ. ಹೀಗಿರಲಾಗಿ ಮೊದಲು ನೀವು ಅನುಸರಿಸುತ್ತಿದ್ದ ಬಲಹೀನವೂ ನಿರುಪಯುಕ್ತವೂ ಆದ ನಿಯಮಗಳಿಗೆ ನೀವು ಯಾಕೆ ಹಿಂತಿರುಗಬೇಕು? ಅವುಗಳಿಗೆ ಮತ್ತೆ ಗುಲಾಮರಾಗಬೇಕೆಂದಿದ್ದೀರೋ?
ದೇವರು ತನ್ನನ್ನು ಪ್ರೀತಿಸುವವರ ಒಳ್ಳೆಯದಕ್ಕಾಗಿ ಪ್ರತಿಯೊಂದು ಕಾರ್ಯವನ್ನೂ ಅನುಕೂಲ ಮಾಡುತ್ತಾನೆಂದು ನಮಗೆ ಗೊತ್ತಿದೆ. ಆ ಜನರನ್ನು ದೇವರೇ ಆರಿಸಿಕೊಂಡನು, ಏಕೆಂದರೆ ಅದು ಆತನ ಯೋಜನೆಯಾಗಿತ್ತು.
ನಿಮ್ಮ ಪೂರ್ವಿಕರು ನೋಡಿಲ್ಲದ ಮನ್ನವನ್ನು ಯೆಹೋವನು ನಿಮಗೆ ಮರುಭೂಮಿಯಲ್ಲಿ ತಿನ್ನಲು ಕೊಟ್ಟನು. ಯೆಹೋವನು ನಿಮ್ಮನ್ನು ಪರೀಕ್ಷಿಸಿದನು. ನೀವು ಒಳ್ಳೆಯ ಫಲಭರಿತವಾದ ಜೀವಿತವನ್ನು ನಡೆಸಬೇಕೆಂದು ಯೆಹೋವನು ನಿಮ್ಮನ್ನು ದೀನರನ್ನಾಗಿ ಮಾಡಿದನು.
ಆದ್ದರಿಂದ ಹೀಗೆ ಹೇಳು: ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನಾನು ನಿಮ್ಮನ್ನು ಜನಾಂಗಗಳಿಂದ ಒಟ್ಟುಗೂಡಿಸುವೆನು; ನೀವು ಚದರಿಸಲ್ಪಟ್ಟಿರುವ ದೇಶಗಳಿಂದ ನಾನು ನಿಮ್ಮನ್ನು ಒಟ್ಟುಗೂಡಿಸುವೆನು; ಮತ್ತು ನಾನು ನಿಮಗೆ ಇಸ್ರೇಲ್ ದೇಶವನ್ನು ಕೊಡುವೆನು.
ಅವರು ನಿಜವಾಗಿ ಪಾಪಮಾಡಿದ್ದರೂ ಸಹಾಯಕ್ಕಾಗಿ ಅವರು ನನ್ನ ಬಳಿಗೆ ಬಂದರೆ ನಾನು ಅವರಿಗೆ ವಿಮುಖನಾಗುವುದಿಲ್ಲ. ಅವರು ತಮ್ಮ ಶತ್ರುಗಳ ದೇಶದಲ್ಲಿದ್ದರೂ ನಾನು ಅವರಿಗೆ ಕಿವಿಗೊಡುವೆನು. ಅವರನ್ನು ಸಂಪೂರ್ಣವಾಗಿ ನಾಶಮಾಡುವುದಿಲ್ಲ. ಅವರೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಮರೆಯುವುದಿಲ್ಲ. ಯಾಕೆಂದರೆ ನಾನೇ ಅವರ ದೇವರಾದ ಯೆಹೋವನು!
ನಾನು ನಿಮಗಾಗಿ ಹಾಕಿದ ಯೋಜನೆಗಳು ನನಗೆ ಗೊತ್ತಿರುವುದರಿಂದ ನಾನು ಹೀಗೆ ಹೇಳುತ್ತಿದ್ದೇನೆ.” ಇದು ಯೆಹೋವನ ಸಂದೇಶ. “ನಾನು ನಿಮಗಾಗಿ ಒಳ್ಳೆಯ ಯೋಜನೆಗಳನ್ನು ಹಾಕಿದ್ದೇನೆ. ನಿಮಗೆ ಕೆಟ್ಟದ್ದನ್ನು ಮಾಡುವ ವಿಚಾರ ನನಗಿಲ್ಲ. ನಾನು ನಿಮಗಾಗಿ ಆಶಾದಾಯಕವಾದ ಮತ್ತು ಒಳ್ಳೆಯ ಭವಿಷ್ಯದ ವಿಚಾರಗಳನ್ನಿಟ್ಟುಕೊಂಡಿದ್ದೇನೆ.