ಯೆರೆಮೀಯ 24:7 - ಪರಿಶುದ್ದ ಬೈಬಲ್7 ಅವರಲ್ಲಿ ನನ್ನನ್ನು ಅರಿತುಕೊಳ್ಳುವ ಬಯಕೆ ಉಂಟಾಗುವಂತೆ ಮಾಡುತ್ತೇನೆ. ನಾನೇ ಯೆಹೋವನು ಎಂಬುದನ್ನು ಅವರು ತಿಳಿದುಕೊಳ್ಳುವರು. ಅವರು ನನ್ನ ಜನರಾಗುವರು ಮತ್ತು ನಾನು ಅವರ ದೇವರಾಗುವೆನು. ನಾನು ಹೀಗೇಕೆ ಮಾಡುತ್ತೇನೆಂದರೆ ಬಾಬಿಲೋನಿನಲ್ಲಿ ಸೆರೆಯಾಳುಗಳಾಗಿದ್ದ ಜನರು ಮನಃಪೂರ್ವಕವಾಗಿ ನನ್ನ ಕಡೆಗೆ ತಿರುಗುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವರು ನನ್ನನ್ನು ಯೆಹೋವನೆಂದು ಗ್ರಹಿಸತಕ್ಕ ಹೃದಯವನ್ನು ಅವರಿಗೆ ಅನುಗ್ರಹಿಸುವೆನು. ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು; ಅವರು ನನ್ನ ಕಡೆಗೆ ಮನಃಪೂರ್ವಕವಾಗಿ ಹಿಂದಿರುಗಿ ಬರುವರು” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಾನೇ ಸರ್ವೇಶ್ವರ ಎಂದು ಒಪ್ಪಿಕೊಳ್ಳುವ ಹೃದಯವನ್ನು ಅವರಿಗೆ ಅನುಗ್ರಹಿಸುವೆನು. ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು. ಅವರು ನನ್ನತ್ತ ಮನಪೂರ್ವಕವಾಗಿ ಹಿಂದಿರುಗಿ ಬರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅವರು ನನ್ನನ್ನು ಯೆಹೋವನೆಂದು ಗ್ರಹಿಸತಕ್ಕ ಹೃದಯವನ್ನು ಅವರಿಗೆ ಅನುಗ್ರಹಿಸುವೆನು; ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು; ಅವರು ನನ್ನ ಕಡೆಗೆ ಮನಃಪೂರ್ವಕವಾಗಿ ಹಿಂದಿರುಗಿ ಬರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಾನೇ ಯೆಹೋವನೆಂದು ನನ್ನನ್ನು ತಿಳಿದುಕೊಳ್ಳುವುದಕ್ಕೆ ಅವರಿಗೆ ಹೃದಯವನ್ನು ಕೊಡುವೆನು. ಅವರು ನನ್ನ ಜನರಾಗಿರುವರು. ನಾನು ಅವರ ದೇವರಾಗಿರುವೆನು. ಏಕೆಂದರೆ ಅವರು ತಮ್ಮ ಪೂರ್ಣಹೃದಯದಿಂದ ನನ್ನ ಬಳಿಗೆ ಹಿಂದಿರುಗಿಕೊಳ್ಳುವರು. ಅಧ್ಯಾಯವನ್ನು ನೋಡಿ |
ಸಮುವೇಲನು ಇಸ್ರೇಲರಿಗೆ, “ನೀವು ಯೆಹೋವನ ಬಳಿಗೆ ಪೂರ್ಣಮನಸ್ಸಿನಿಂದ ಮತ್ತೆ ಬರುವುದಾದರೆ ನಿಮ್ಮ ಬಳಿಯಿರುವ ಅನ್ಯದೇವರುಗಳನ್ನು ಎಸೆಯಬೇಕು. ನೀವು ಅಷ್ಟೋರೆತ್ ದೇವತೆಯ ವಿಗ್ರಹಗಳನ್ನು ತ್ಯಜಿಸಬೇಕು. ನೀವು ನಿಮ್ಮನ್ನು ಯೆಹೋವನಿಗೆ ಸಂಪೂರ್ಣವಾಗಿ ಒಪ್ಪಿಸಿಕೊಟ್ಟು ಆತನ ಸೇವೆಯನ್ನು ಮಾತ್ರ ಮಾಡಬೇಕು. ಆಗ ಆತನು ನಿಮ್ಮನ್ನು ಫಿಲಿಷ್ಟಿಯರಿಂದ ರಕ್ಷಿಸುತ್ತಾನೆ” ಎಂದು ಹೇಳಿದನು.
ಆ ಬಳಿಕ ನಾನು ಉಳಿದವರನ್ನು ಪರೀಕ್ಷಿಸುವೆನು. ಅವರಿಗೆ ಅನೇಕ ಸಂಕಟ ಬರಮಾಡುವೆನು. ಅದು ಬೆಳ್ಳಿಯನ್ನು ಬೆಂಕಿಯಲ್ಲಿ ಪರೀಕ್ಷಿಸಿದಂತಿರುವುದು. ಒಬ್ಬನು ಬಂಗಾರವನ್ನು ಪರೀಕ್ಷಿಸುವಂತೆ ನಾನು ಅವರನ್ನು ಪರೀಕ್ಷಿಸುವೆನು. ಆಗ ಅವರು ಸಹಾಯ ಮಾಡುವಂತೆ ನನಗೆ ಮೊರೆಯಿಡುವರು ಮತ್ತು ನಾನು ಅವರಿಗೆ ಉತ್ತರಕೊಡುವೆನು. ಆಗ ನಾನು, ‘ನೀವು ನನ್ನ ಜನರು’ ಎಂದು ಹೇಳುವೆನು. ಅದಕ್ಕವರು, ‘ಯೆಹೋವನು ನಮ್ಮ ದೇವರು’ ಎಂದು ಹೇಳುವರು.”
ನಾನು ನಿಮ್ಮ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯ ಬಗ್ಗೆ ಮಾತನಾಡುತ್ತಿದ್ದೇನೆ. ನಾನು ಈಜಿಪ್ಟಿನಿಂದ ಅವರನ್ನು ಹೊರತಂದಾಗ ನಾನು ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಂಡೆ. ಈಜಿಪ್ಟು ಅನೇಕ ಕಷ್ಟಗಳ ನಾಡಾಗಿತ್ತು. ಅದು ಕಬ್ಬಿಣವನ್ನು ಕರಗಿಸುವ ಉರಿಯುವ ಕುಲುಮೆಯಂತಿತ್ತು. ನಾನು ಅವರಿಗೆ, ‘ನನ್ನ ಆಜ್ಞಾಪಾಲನೆಯನ್ನು ಮಾಡಿರಿ ಮತ್ತು ನಾನು ಹೇಳಿದಂತೆ ಎಲ್ಲವನ್ನು ಮಾಡಿರಿ. ಆಗ ನೀವು ನನ್ನ ಭಕ್ತರಾಗುವಿರಿ. ನಾನು ನಿಮ್ಮ ದೇವರಾಗುವೆನು’ ಎಂದೆ.