ಯೆರೆಮೀಯ 24:8 - ಪರಿಶುದ್ದ ಬೈಬಲ್8 “ಆದರೆ ಯೆಹೂದದ ರಾಜನಾದ ಚಿದ್ಕೀಯನು ತಿನ್ನಲು ಬಾರದಷ್ಟು ಕೊಳೆತ ಅಂಜೂರದಂತಾಗುವನು. ಚಿದ್ಕೀಯನೂ ಅವನ ಹಿರಿಯ ಅಧಿಕಾರಿಗಳೂ ಜೆರುಸಲೇಮಿನಲ್ಲಿ ಅಳಿದುಳಿದ ಜನರೂ ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಯೆಹೂದದ ಜನರೂ ಕೊಳೆತ ಅಂಜೂರದಂತಾಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಇದಲ್ಲದೆ ಯೆಹೋವನು, “ಯೆಹೂದದ ಅರಸನಾದ ಚಿದ್ಕೀಯ, ಅವನ ಪ್ರಧಾನರು, ಈ ದೇಶದಲ್ಲಿ ನಿಂತಿರುವ ಯೆರೂಸಲೇಮಿನವರ ಶೇಷ, ಐಗುಪ್ತ ದೇಶಕ್ಕೆ ವಲಸೆಯಾದವರು, ಕೆಟ್ಟು ಯಾರೂ ತಿನ್ನದ ಹಾಗೆ ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳ ಗತಿಗೆ ಇವರನ್ನು ತರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 “ಇದಲ್ಲದೆ ಸರ್ವೇಶ್ವರನಾದ ನಾನು ಹೇಳುವುದು ಇದು: ಜುದೇಯದ ಅರಸ ಚಿದ್ಕೀಯನು, ಅವನ ಪ್ರಧಾನಿಗಳು, ಜೆರುಸಲೇಮಿನ ಜನರು ಶೇಷವಾಗಿ ಈ ನಾಡಿನಲ್ಲೆ ಉಳಿದವರು ಮತ್ತು ಈಜಿಪ್ಟ್ ದೇಶಕ್ಕೆ ವಲಸೆಹೋದವರು - ಇವರೆಲ್ಲರು ಕೆಟ್ಟು ಯಾರೂ ತಿನ್ನಲಾಗದಷ್ಟು ಅಸಹ್ಯವಾದ ಅಂಜೂರದ ಹಣ್ಣುಗಳಂಥವರು. ಅವರನ್ನು ಅಂಥ ಗತಿಗೆ ಇಳಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಇದಲ್ಲದೆ ಯೆಹೋವನು ಇಂತೆನ್ನುತ್ತಾನೆ - ಯೆಹೂದದ ಅರಸನಾದ ಚಿದ್ಕೀಯ, ಅವನ ಪ್ರಧಾನರು, ಈ ದೇಶದಲ್ಲಿ ನಿಂತಿರುವ ಯೆರೂಸಲೇವಿುನವರ ಶೇಷ, ಐಗುಪ್ತದೇಶಕ್ಕೆ ವಲಸೆಯಾದವರು, ಇವರೆಲ್ಲರನ್ನು ಕೆಟ್ಟು ಯಾರೂ ತಿನ್ನದ ಹಾಗೆ ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳ ಗತಿಗೆ ತರುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 “ ‘ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳಾಗಿರುವ ಆ ಕೆಟ್ಟ ಅಂಜೂರದ ಹಣ್ಣುಗಳ ಹಾಗೆ ನಿಶ್ಚಯವಾಗಿ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ, ಅವನ ಪ್ರಧಾನರನ್ನೂ ಈ ದೇಶದಲ್ಲಿ ಉಳಿಯುವ ಯೆರೂಸಲೇಮಿನ ಶೇಷವನ್ನೂ, ಈಜಿಪ್ಟ್ ದೇಶದಲ್ಲಿ ವಾಸಿಸುವವರನ್ನೂ ಒಪ್ಪಿಸುತ್ತೇನೆ,’ ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |