ಯೆರೆಮೀಯ 25:1 - ಪರಿಶುದ್ದ ಬೈಬಲ್1 ಯೆಹೂದದ ಎಲ್ಲಾ ಜನರ ಬಗ್ಗೆ ಯೆರೆಮೀಯನಿಗೆ ಈ ಸಂದೇಶವು ಬಂದಿತು. ಈ ಸಂದೇಶವು ಯೆಹೂದದ ಅರಸನಾದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಬಂದಿತು. ಯೆಹೋಯಾಕೀಮನು ಯೋಷೀಯನ ಮಗ. ಅವನ ಆಳ್ವಿಕೆಯ ನಾಲ್ಕನೇ ವರ್ಷದಲ್ಲಿ ಅಂದರೆ ಬಾಬಿಲೋನಿನಲ್ಲಿ ನೆಬೂಕದ್ನೆಚ್ಚರನ ಆಳ್ವಿಕೆಯ ಮೊದಲನೇ ವರ್ಷದಲ್ಲಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ, ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಮೊದಲನೇ ವರ್ಷದಲ್ಲಿ ಅಂದರೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಮೊದಲನೇ ವರ್ಷದಲ್ಲಿ, ಪ್ರವಾದಿ ಯೆರೆಮೀಯನಿಗೆ ಯೆಹೂದ್ಯರೆಲ್ಲರ ವಿಷಯವಾಗಿ ದೈವೋಕ್ತಿಯೊಂದು ಉಂಟಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳಿಕೆಯ ನಾಲ್ಕನೆಯ ವರುಷದಲ್ಲಿ, ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳಿಕೆಯ ಮೊದಲನೆಯ ವರುಷದಲ್ಲಿ ಪ್ರವಾದಿಯಾದ ಯೆರೆಮೀಯನು ಯೆಹೂದ್ಯರೆಲ್ಲರ ವಿಷಯವಾಗಿ ತನಗೆ ಉಂಟಾದ ಈ ದೈವೋಕ್ತಿಯನ್ನು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೋಷೀಯನ ಮಗನೂ, ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಅಂದರೆ, ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ, ಪ್ರವಾದಿ ಯೆರೆಮೀಯನಿಗೆ ಯೆಹೂದ್ಯರೆಲ್ಲರ ವಿಷಯವಾಗಿ ದೈವೋಕ್ತಿಯೊಂದು ಉಂಟಾಯಿತು. ಅಧ್ಯಾಯವನ್ನು ನೋಡಿ |
ಈ ಸಂದೇಶವು ಈಜಿಪ್ಟ್ ಜನಾಂಗದ ಬಗ್ಗೆ ಇದೆ. ಈ ಸಂದೇಶವು ಫರೋಹನೆಕೋವಿನ ಸೈನ್ಯದ ಬಗ್ಗೆ ಇದೆ. ಫರೋಹನೆಕೋವು ಈಜಿಪ್ಟಿನ ರಾಜನಾಗಿದ್ದನು. ಅವನ ಸೈನ್ಯವನ್ನು ಕರ್ಕೆಮೀಷ್ ಪಟ್ಟಣದಲ್ಲಿ ಸೋಲಿಸಲಾಯಿತು. ಕರ್ಕೆಮೀಷ್ ಪಟ್ಟಣವು ಯೂಫ್ರೇಟೀಸ್ ನದಿಯ ದಂಡೆಯ ಮೇಲಿದೆ. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಹೂದದಲ್ಲಿ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಫರೋಹನೆಕೋವಿನ ಸೈನ್ಯವನ್ನು ಕರ್ಕೆಮೀಷಿನಲ್ಲಿ ಸೋಲಿಸಿದನು. ಯೆಹೋಯಾಕೀಮನು ರಾಜನಾದ ಯೋಷೀಯನ ಮಗನಾಗಿದ್ದನು. ಈಜಿಪ್ಟಿಗೆ ಯೆಹೋವನ ಸಂದೇಶ ಹೀಗಿತ್ತು:
ಯೆಹೋಯಾಕೀಮನು ಯೆಹೂದದಲ್ಲಿ ಆಳುವಾಗಲೂ ಯೆಹೋವನು ಯೆರೆಮೀಯನೊಂದಿಗೆ ಮಾತನಾಡುವದನ್ನು ಮುಂದುವರೆಸಿದನು. ಯೆಹೋಯಾಕೀಮನು ಯೋಷೀಯನ ಮಗನು. ಯೆಹೂದದಲ್ಲಿ ಚಿದ್ಕೀಯನು ಆಳಿದ ಹನ್ನೊಂದು ವರ್ಷ ಐದು ತಿಂಗಳ ಕಾಲ ಯೆಹೋವನು ಯೆರೆಮೀಯನೊಂದಿಗೆ ಮಾತನಾಡುವದನ್ನು ಮುಂದುವರೆಸಿದನು. ಚಿದ್ಕೀಯನು ಸಹ ಯೋಷೀಯನ ಮಗನಾಗಿದ್ದನು. ಚಿದ್ಕೀಯನ ಆಳ್ವಿಕೆಯ ಹನ್ನೊಂದನೇ ವರ್ಷದ ಐದನೆಯ ತಿಂಗಳಿನಲ್ಲಿ ಜೆರುಸಲೇಮಿನ ನಿವಾಸಿಗಳು ಸೆರೆ ಒಯ್ಯಲ್ಪಟ್ಟರು.