Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 25:11 - ಪರಿಶುದ್ದ ಬೈಬಲ್‌

11 ಆ ಇಡೀ ಪ್ರದೇಶವು ಒಂದು ಮರುಭೂಮಿಯಾಗುವುದು. ಆ ಜನಾಂಗಗಳೆಲ್ಲ ಎಪ್ಪತ್ತು ವರ್ಷಗಳವರೆಗೆ ಬಾಬಿಲೋನಿನ ರಾಜನ ಗುಲಾಮರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಈ ದೇಶವೆಲ್ಲಾ ಹಾಳಾಗಿ ಬೆರಗಿಗೆ ಈಡಾಗುವುದು; ಮತ್ತು ಈ ಜನಾಂಗಗಳು ಎಪ್ಪತ್ತು ವರ್ಷ ಬಾಬೆಲಿನ ಅರಸನ ಅಡಿಯಾಳಾಗಿ ಬಿದ್ದಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಈ ನಾಡೆಲ್ಲ ಹಾಳಾಗಿ ಇದನ್ನು ನೋಡುವವರು ನಿಬ್ಬೆರಗಾಗುವರು. ಇದರ ಜನರು ಎಪ್ಪತ್ತು ವರ್ಷ ಕಾಲ ಬಾಬಿಲೋನಿನ ಅರಸನಿಗೆ ಗುಲಾಮರಾಗಿ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಈ ದೇಶವೆಲ್ಲಾ ಹಾಳಾಗಿ ಬೆರಗಿಗೆ ಈಡಾಗುವದು; ಮತ್ತು ಈ ಜನಾಂಗಗಳು ಎಪ್ಪತ್ತು ವರುಷ ಬಾಬೆಲಿನ ಅರಸನ ಅಡಿಯಾಳಾಗಿ ಬಿದ್ದಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಈ ದೇಶವೆಲ್ಲಾ ಹಾಳಾಗಿ ಭಯಕ್ಕೆ ಗುರಿಯಾಗುವುದು. ಈ ಜನಾಂಗಗಳು ಬಾಬಿಲೋನಿನ ಅರಸನನ್ನು ಎಪ್ಪತ್ತು ವರ್ಷ ಸೇವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 25:11
23 ತಿಳಿವುಗಳ ಹೋಲಿಕೆ  

ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷ ದಾನಿಯೇಲನೆಂಬ ನಾನು ಕೆಲವು ಧರ್ಮಗ್ರಂಥಗಳನ್ನು ಓದುತ್ತಿದ್ದೆ. ಎಪ್ಪತ್ತು ವರ್ಷಗಳ ತರುವಾಯ ಜೆರುಸಲೇಮಿನ ಪುನರ್ನಿರ್ಮಾಣವಾಗುವದೆಂದು ಯೆಹೋವನು ಯೆರೆಮೀಯನಿಗೆ ಹೇಳಿದ್ದು ನನಗೆ ಈ ಧರ್ಮಗ್ರಂಥಗಳಿಂದ ತಿಳಿಯಿತು.


ಆಗ ಯೆಹೋವನ ದೂತನು, “ಯೆಹೋವನೇ, ಜೆರುಸಲೇಮನ್ನೂ ಯೆಹೂದದ ಇತರ ನಗರಗಳನ್ನೂ ಸಂತೈಸಲು ಇನ್ನೆಷ್ಟು ಕಾಲಬೇಕು? ಈ ಪಟ್ಟಣಗಳ ಮೇಲೆ ಈಗಾಗಲೇ ಎಪ್ಪತ್ತು ವರ್ಷಗಳ ಕಾಲ ನಿನ್ನ ಕೋಪವನ್ನು ಪ್ರದರ್ಶಿಸಿರುವೆ” ಎಂದು ಹೇಳಿದನು.


“ಯಾಜಕರಿಗೂ, ದೇಶದ ಇತರ ಜನರಿಗೂ ಇದನ್ನು ಹೇಳು, ಎಪ್ಪತ್ತು ವರ್ಷಗಳ ತನಕ ನೀವು ಐದನೇ ಮತ್ತು ಏಳನೇ ತಿಂಗಳಿನಲ್ಲಿ ನಿಮ್ಮ ದುಃಖವನ್ನು ಉಪವಾಸ ಮಾಡವದರಲ್ಲಿ ತೋರಿಸಿದಿರಿ. ಆದರೆ ಮಾಡಿದ ಆ ಉಪವಾಸವು ನಿಜವಾಗಿಯೂ ನನಗಾಗಿಯೋ? ಇಲ್ಲ!


“ಆದರೆ ಎಪ್ಪತ್ತು ವರ್ಷಗಳಾದ ಮೇಲೆ ನಾನು ಬಾಬಿಲೋನಿನ ರಾಜನನ್ನೂ ಜನರನ್ನೂ ದಂಡಿಸುವೆನು.” ಇದು ಯೆಹೋವನಿಂದ ಬಂದ ಸಂದೇಶ. “ಅವರ ಪಾಪಗಳಿಗಾಗಿ ನಾನು ಬಾಬಿಲೋನ್ ದೇಶವನ್ನು ದಂಡಿಸುವೆನು. ನಾನು ಶಾಶ್ವತವಾಗಿ ಆ ಭೂಮಿಯನ್ನು ಮರುಭೂಮಿಯನ್ನಾಗಿ ಮಾಡುವೆನು.


ಯೆಹೋವನು ಹೀಗೆ ಹೇಳುತ್ತಾನೆ: “ಇಡೀ ದೇಶವು ಹಾಳಾಗುವುದು. ಆದರೆ ನಾನು ಭೂಮಿಯನ್ನು ಸಂಪೂರ್ಣವಾಗಿ ನಾಶಮಾಡುವದಿಲ್ಲ.


ನಿಮ್ಮ ಭೂಮಿಯನ್ನು ಬರಿದುಮಾಡುವೆ. ಅದರಲ್ಲಿ ವಾಸಿಸಲು ಬರುವ ನಿಮ್ಮ ವೈರಿಗಳೂ ಅದನ್ನು ನೋಡಿ ಆಶ್ಚರ್ಯಪಡುವರು.


ನಾನು ಅದನ್ನು ಬೆಂಗಾಡಾಗಿ ಮಾಡುವೆನು. ಅದರಲ್ಲಿರುವ ಸಸಿಗಳನ್ನು ಯಾರೂ ಲಕ್ಷಿಸರು. ತೋಟದಲ್ಲಿ ಯಾರೂ ಕೆಲಸ ಮಾಡುವದಿಲ್ಲ. ಮುಳ್ಳುಗಳೂ ಹಣಜಿಗಳೂ ಅಲ್ಲಿ ಬೆಳೆಯುವವು. ಅಲ್ಲಿ ಮಳೆಗರೆಯದಂತೆ ಮೋಡಗಳಿಗೆ ಆಜ್ಞಾಪಿಸುವೆನು.”


ಆ ವಸ್ತುಗಳು ಬಾಬಿಲೋನಿಗೆ ಒಯ್ಯಲ್ಪಟ್ಟು ನಾನು ಅವುಗಳನ್ನು ಅಲ್ಲಿಂದ ತರುವ ದಿವಸಗಳವರೆಗೆ ಅಲ್ಲಿಯೇ ಇರುವವು, ಆಮೇಲೆ ನಾನು ಆ ವಸ್ತುಗಳನ್ನು ತರುವೆನು. ನಾನು ಆ ವಸ್ತುಗಳನ್ನು ಮತ್ತೆ ಈ ಸ್ಥಳದಲ್ಲಿ ಇಡುವೆನು.’” ಇದು ಯೆಹೋವನ ನುಡಿ.


ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೇಳುವುದೇನೆಂದರೆ, ನಾನು ಕಬ್ಬಿಣದ ನೊಗವನ್ನು ಈ ಎಲ್ಲಾ ಜನಾಂಗಗಳ ಹೆಗಲಿನ ಮೇಲೆ ಹೊರಿಸುವೆನು. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನ ಸೇವೆಯನ್ನು ಮಾಡುವಂತೆ ಮಾಡುತ್ತೇನೆ. ಅವರು ಅವನಿಗೆ ಗುಲಾಮರಾಗಿರುವರು. ನಾನು ನೆಬೂಕದ್ನೆಚ್ಚರನಿಗೆ ಕಾಡುಪ್ರಾಣಿಗಳ ಮೇಲೂ ಅಧಿಕಾರವನ್ನು ದಯಪಾಲಿಸುವೆನು.’”


ಯೆಹೋವನು ಹೀಗೆನ್ನುತ್ತಾನೆ: “ಬಾಬಿಲೋನ್ ಎಪ್ಪತ್ತು ವರ್ಷಗಳವರೆಗೆ ಬಲಿಷ್ಠವಾಗಿರುವುದು. ಅನಂತರ ನಾನು ಬಾಬಿಲೋನಿನಲ್ಲಿ ವಾಸಮಾಡುತ್ತಿರುವ ನಿಮ್ಮ ಬಳಿಗೆ ಬಂದು ನನ್ನ ವಾಗ್ದಾನದಂತೆ ನಿಮ್ಮನ್ನು ಜೆರುಸಲೇಮಿಗೆ ಮತ್ತೆ ಕರೆದುಕೊಂಡು ಬರುವೆನು.


ನಿನ್ನನ್ನು ನೋಡುತ್ತಿದ್ದ ಆ ಯೆಹೂದ್ಯರಿಗೆ ಹೀಗೆ ಹೇಳು: ‘ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಇಲ್ಲಿಗೆ ಕರೆಸುತ್ತೇನೆ. ಅವನು ನನ್ನ ಸೇವಕನಾಗಿದ್ದಾನೆ. ನಾನು ಈ ಸ್ಥಳದಲ್ಲಿ ಹೂಳಿದ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಸ್ಥಾಪಿಸುತ್ತೇನೆ. ನೆಬೂಕದ್ನೆಚ್ಚರನು ಈ ಕಲ್ಲುಗಳ ಮೇಲೆ ತನ್ನ ಗುಡಾರವನ್ನು ಹಾಕುವನು.


ಯೆಹೋವನು ಇನ್ನು ಮುಂದೆ ತಾಳ್ಮೆಯಿಂದ ಇರಲಾರನು. ನೀವು ಮಾಡಿದ ಅಸಹ್ಯಕೃತ್ಯಗಳನ್ನು ಯೆಹೋವನು ದ್ವೇಷಿಸುತ್ತಾನೆ. ಆದ್ದರಿಂದ ಆತನು ನಿಮ್ಮ ದೇಶವನ್ನು ಬರಿದಾದ ಮರುಭೂಮಿಯನ್ನಾಗಿ ಮಾಡಿದ್ದಾನೆ, ಈಗ ಅಲ್ಲಿ ಯಾರೂ ವಾಸಿಸುವದಿಲ್ಲ. ಬೇರೆಯವರು ಆ ದೇಶದ ಬಗ್ಗೆ ಕೆಟ್ಟ ಮಾತುಗಳನ್ನಾಡುತ್ತಾರೆ.


ದೇಶದಲ್ಲಿ ವಾಸಿಸಿದ್ದ ಜನರಿಂದಲೂ ಅವರು ಮಾಡಿದ್ದ ಕೆಲಸಗಳಿಂದಲೂ ದೇಶವು ಹಾಳಾಗಿಹೋಗಿತ್ತು.


ಜೀವದಿಂದುಳಿದ ಜನರನ್ನು ಸೆರೆಹಿಡಿದು ಬಾಬಿಲೋನಿನಗೆ ತೆಗೆದುಕೊಂಡು ಹೋಗಿ ತಮ್ಮ ಗುಲಾಮರನ್ನಾಗಿ ಮಾಡಿಕೊಂಡರು. ಪಾರಸಿಯ ಸಾಮ್ರಾಜ್ಯ ಸ್ಥಾಪನೆಯಾಗುವ ತನಕ ಅವರು ಅಲ್ಲಿ ಗುಲಾಮರಾಗಿದ್ದರು.


ನಾನು ನೋಡಿದಾಗ ಫಲವತ್ತಾದ ಭೂಮಿಯು ಮರಳುಗಾಡಾಗಿತ್ತು. ಆ ಪ್ರದೇಶದ ಎಲ್ಲಾ ನಗರಗಳು ಹಾಳಾಗಿ ಹೋಗಿದ್ದವು. ಯೆಹೋವನು ತನ್ನ ಭಯಂಕರವಾದ ಕೋಪದಿಂದ ಇದನ್ನು ಮಾಡಿದನು.


ಯೆಹೋವನು, ತನ್ನ ಗುಹೆಯಿಂದ ಹೊರಬರುತ್ತಿರುವ ಭಯಂಕರವಾದ ಸಿಂಹದಂತಿದ್ದಾನೆ. ಯೆಹೋವನು ಕೋಪಗೊಂಡಿದ್ದಾನೆ. ಯೆಹೋವನ ಕೋಪವು ಆ ಜನರನ್ನು ಪೀಡಿಸುವುದು. ಅವರ ದೇಶವು ಬರಿದಾದ ಮರುಭೂಮಿಯಾಗುವುದು.


ಎಲ್ಲಾ ಜನಾಂಗಗಳು ನೆಬೂಕದ್ನೆಚ್ಚರನ, ಅವನ ಮಗನ ಮತ್ತು ಅವನ ಮೊಮ್ಮಗನ ಸೇವೆಮಾಡುವವು. ಆಮೇಲೆ ಬಾಬಿಲೋನನ್ನು ಸೋಲಿಸುವ ಸಮಯ ಬರುತ್ತದೆ. ಅನೇಕ ಜನಾಂಗಗಳು ಮತ್ತು ದೊಡ್ಡ ರಾಜರು ಬಾಬಿಲೋನನ್ನು ತಮ್ಮ ಸೇವಕನನ್ನಾಗಿ ಮಾಡಿಕೊಳ್ಳುವರು.


ನಾನು ಅವರ ಮೇಲೆ ನನ್ನ ಕೈಯೆತ್ತಿ ಅವರನ್ನು ದಂಡಿಸುವೆನು ಮತ್ತು ಮರುಭೂಮಿಯಿಂದ ದಿಬ್ಲದವರೆಗೆ ಅವರು ಯಾವುದೇ ದೇಶದಲ್ಲಿ ವಾಸವಾಗಿದ್ದರೂ ನಾಶಮಾಡುವೆನು. ಆಗ ನಾನೇ ಯೆಹೋವನೆಂಬುದು ಅವರಿಗೆ ತಿಳಿಯುವುದು.”


ಇದನ್ನು ನೀನು ಸಾಮಾನ್ಯ ಜನರಿಗೆ ತಿಳಿಸಬೇಕು. ನೀನು ಹೀಗೆ ಹೇಳಬೇಕು, ‘ಇನ್ನೂ ಇಸ್ರೇಲ್ ದೇಶದಲ್ಲಿರುವ ಜೆರುಸಲೇಮಿನ ನಿವಾಸಿಗಳ ಬಗ್ಗೆ ನಮ್ಮ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ಅವರು ಊಟಮಾಡುವಾಗ ಉದ್ವೇಗದಿಂದಿರುವರು; ಅವರು ಕುಡಿಯುವಾಗ ಭಯದಿಂದಿರುವರು. ಯಾಕೆಂದರೆ ಅವರ ದೇಶದಲ್ಲಿರುವ ಸಮಸ್ತವು ನಾಶವಾಗುತ್ತದೆ, ಯಾಕೆಂದರೆ ಅಲ್ಲಿ ವಾಸಿಸುವವರೆಲ್ಲರೂ ಹಿಂಸಕರಾಗಿದ್ದಾರೆ.


ಯಾವನೂ, ಯಾವ ಪ್ರಾಣಿಯೂ ಈಜಿಪ್ಟ್ ದೇಶವನ್ನು ದಾಟುವುದಿಲ್ಲ. ನಲವತ್ತು ವರ್ಷದ ತನಕ ಯಾರೂ ಅಲ್ಲಿ ನೆಲೆಸುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು