Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 25:12 - ಪರಿಶುದ್ದ ಬೈಬಲ್‌

12 “ಆದರೆ ಎಪ್ಪತ್ತು ವರ್ಷಗಳಾದ ಮೇಲೆ ನಾನು ಬಾಬಿಲೋನಿನ ರಾಜನನ್ನೂ ಜನರನ್ನೂ ದಂಡಿಸುವೆನು.” ಇದು ಯೆಹೋವನಿಂದ ಬಂದ ಸಂದೇಶ. “ಅವರ ಪಾಪಗಳಿಗಾಗಿ ನಾನು ಬಾಬಿಲೋನ್ ದೇಶವನ್ನು ದಂಡಿಸುವೆನು. ನಾನು ಶಾಶ್ವತವಾಗಿ ಆ ಭೂಮಿಯನ್ನು ಮರುಭೂಮಿಯನ್ನಾಗಿ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಎಪ್ಪತ್ತು ವರ್ಷಗಳ ತರುವಾಯ ನಾನು ಬಾಬೆಲಿನ ಅರಸನನ್ನೂ, ಕಸ್ದೀಯರ ದೇಶವನ್ನೂ, ಆ ಜನಾಂಗದವರನ್ನೂ ಅವರ ದ್ರೋಹಕ್ಕಾಗಿ ದಂಡಿಸಿ, ಆ ದೇಶವನ್ನು ನಿತ್ಯನಾಶನಕ್ಕೆ ಗುರಿಮಾಡುವೆನು. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆ ಅವಧಿಯ ತರುವಾಯ ನಾನು ಬಾಬಿಲೋನನ್ನೂ ಅದರ ಅರಸನನ್ನೂ ದಂಡಿಸುವೆನು. ಅದರ ದ್ರೋಹದ ನಿಮಿತ್ತ ಆ ಬಾಬಿಲೋನಿನ ನಾಡನ್ನು ನಿತ್ಯ ವಿನಾಶಕ್ಕೆ ಗುರಿಪಡಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಎಪ್ಪತ್ತು ವರುಷಗಳ ತರುವಾಯ ನಾನು ಬಾಬೆಲಿನ ಅರಸನನ್ನೂ ಕಸ್ದೀಯರ ದೇಶವನ್ನೂ ಆ ಜನಾಂಗದವರನ್ನೂ ಅವರ ದ್ರೋಹಕ್ಕಾಗಿ ದಂಡಿಸಿ ಆ ದೇಶವನ್ನು ನಿತ್ಯನಾಶನಕ್ಕೆ ಗುರಿಮಾಡುವೆನು. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ಎಪ್ಪತ್ತು ವರ್ಷ ತುಂಬಿದ ಮೇಲೆ ನಾನು ಬಾಬಿಲೋನಿನ ಅರಸನನ್ನೂ, ಆ ಜನಾಂಗವನ್ನೂ, ಕಸ್ದೀಯರ ದೇಶವನ್ನೂ ಅವರ ಅಕ್ರಮಕ್ಕಾಗಿ ವಿಚಾರಿಸಿ ದಂಡಿಸುವೆನು. ಅದನ್ನು ನಿತ್ಯವಾಗಿ ಹಾಳುಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 25:12
26 ತಿಳಿವುಗಳ ಹೋಲಿಕೆ  

ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷ ದಾನಿಯೇಲನೆಂಬ ನಾನು ಕೆಲವು ಧರ್ಮಗ್ರಂಥಗಳನ್ನು ಓದುತ್ತಿದ್ದೆ. ಎಪ್ಪತ್ತು ವರ್ಷಗಳ ತರುವಾಯ ಜೆರುಸಲೇಮಿನ ಪುನರ್ನಿರ್ಮಾಣವಾಗುವದೆಂದು ಯೆಹೋವನು ಯೆರೆಮೀಯನಿಗೆ ಹೇಳಿದ್ದು ನನಗೆ ಈ ಧರ್ಮಗ್ರಂಥಗಳಿಂದ ತಿಳಿಯಿತು.


ಬಾಬಿಲೋನು ಸೊದೋಮ್ ಗೊಮೋರಗಳಂತೆ ನಾಶವಾಗುವದು. ದೇವರೇ ಇದನ್ನು ಮಾಡುವನು. ಆಗ ಅಲ್ಲಿ ಏನೂ ಉಳಿಯದು. “ಎಲ್ಲಾ ರಾಜ್ಯಗಳಿಗಿಂತ ಬಾಬಿಲೋನ್ ಬಹಳ ಸುಂದರವಾಗಿದೆ. ಬಾಬಿಲೋನಿಯರು ತಮ್ಮ ನಗರದ ಬಗ್ಗೆ ತುಂಬಾ ಹೆಚ್ಚಳಪಡುತ್ತಾರೆ.


ಯೆಹೋವನು ಹೀಗೆನ್ನುತ್ತಾನೆ: “ಬಾಬಿಲೋನ್ ಎಪ್ಪತ್ತು ವರ್ಷಗಳವರೆಗೆ ಬಲಿಷ್ಠವಾಗಿರುವುದು. ಅನಂತರ ನಾನು ಬಾಬಿಲೋನಿನಲ್ಲಿ ವಾಸಮಾಡುತ್ತಿರುವ ನಿಮ್ಮ ಬಳಿಗೆ ಬಂದು ನನ್ನ ವಾಗ್ದಾನದಂತೆ ನಿಮ್ಮನ್ನು ಜೆರುಸಲೇಮಿಗೆ ಮತ್ತೆ ಕರೆದುಕೊಂಡು ಬರುವೆನು.


ಯೆಹೋವನು ಹೇಳುವುದೇನೆಂದರೆ: “ನಾನು ಬಾಬಿಲೋನನ್ನು ಪ್ರಾಣಿಗಳ ವಾಸಸ್ಥಳವನ್ನಾಗಿ ಬದಲಾಯಿಸುವೆನು. ಆ ಸ್ಥಳವು ಜವುಗು ನೆಲವಾಗಿರುವುದು. ‘ನಾಶನವೆಂಬ ಪೊರಕೆಯಿಂದ’ ಅದನ್ನು ಗುಡಿಸುವೆನು.” ಇದು ಸರ್ವಶಕ್ತನಾದ ಯೆಹೋವನ ನುಡಿ.


ನೀನು ನಿತ್ಯಕಾಲಕ್ಕೂ ಬರಿದಾಗಿರು. ಯಾರೂ ನಿನ್ನ ಪಟ್ಟಣಗಳಲ್ಲಿ ವಾಸಿಸರು. ಆಗ ನೀನು, ದೇವರಾದ ಯೆಹೋವನು ನಾನೇ ಎಂದು ತಿಳಿದುಕೊಳ್ಳುತ್ತಿ.”


ಹೌದು, ಬಾಬಿಲೋನಿನ ಜನರು ಅನೇಕ ಜನಾಂಗಗಳ ಮತ್ತು ಅನೇಕ ಮಹಾರಾಜರ ಸೇವೆ ಮಾಡಬೇಕಾಗುವುದು. ಅವರು ಮಾಡಲಿರುವ ದುಷ್ಕೃತ್ಯಗಳಿಗೆಲ್ಲ ತಕ್ಕ ಶಿಕ್ಷೆಯನ್ನು ನಾನು ಅವರಿಗೆ ಕೊಡುವೆನು.”


ಆ ಕುರುಬರು ನನ್ನ ಜನರಿಗೆ ಹೊಣೆಗಾರರಾಗಿದ್ದಾರೆ. ಇಸ್ರೇಲಿನ ದೇವರಾದ ಯೆಹೋವನು ಆ ಕುರುಬರಿಗೆ ಹೀಗೆ ಹೇಳುತ್ತಾನೆ, “ನನ್ನ ಕುರಿಗಳು ಎಲ್ಲಾ ದಿಕ್ಕುಗಳಿಗೂ ಚದರುವಂತೆ ನೀವು ಮಾಡಿರುವಿರಿ. ನೀವು ಅವುಗಳನ್ನು ಓಡಿಸಿಬಿಟ್ಟಿದ್ದೀರಿ. ನೀವು ಅವುಗಳ ಯೋಗಕ್ಷೇಮವನ್ನು ನೋಡಿಕೊಳ್ಳಲಿಲ್ಲ. ಈಗ ನಾನು ನಿಮ್ಮನ್ನು ವಿಚಾರಿಸಿಕೊಳ್ಳುತ್ತೇನೆ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಿಮ್ಮನ್ನು ದಂಡಿಸುತ್ತೇನೆ.” ಯೆಹೋವನು ಹೀಗೆ ಹೇಳಿದನು.


ಬೇಲ್ ಮತ್ತು ನೆಬೋ ನನ್ನ ಮುಂದೆ ಅಡ್ಡಬೀಳುವವು. ಒಡೆಯನು ಹೀಗೆನ್ನುತ್ತಾನೆ, “ಆ ಸುಳ್ಳುದೇವರುಗಳು ಕೇವಲ ವಿಗ್ರಹಗಳೇ. ಜನರು ಭಾರವಾದ ವಿಗ್ರಹಗಳನ್ನು ಪಶುಗಳ ಮೇಲೆ ಹೊರಿಸುವರು. ಅವು ಕೇವಲ ಹೊತ್ತುಕೊಂಡು ಹೋಗಬೇಕಾದ ಹೊರೆಗಳಾಗಿವೆ. ಆ ಸುಳ್ಳುದೇವರುಗಳು ಜನರನ್ನು ದಣಿಸುವುದೊಂದನ್ನು ಬಿಟ್ಟು ಬೇರೆ ಯಾವ ಕೆಲಸವನ್ನೂ ಮಾಡುವದಿಲ್ಲ.


ಸರ್ಗೋನ್ ಅಶ್ಶೂರದ ರಾಜನಾಗಿದ್ದನು. ಇವನು ತರ್ತಾನನ್ನು ಅಷ್ಡೋದಿಗೆ ವಿರುದ್ಧವಾಗಿ ಯುದ್ಧಮಾಡಲು ಕಳುಹಿಸಿದನು. ತರ್ತಾನ್ ಎಂಬವನು ಅಷ್ಡೋದ್ ನಗರಕ್ಕೆ ಹೋಗಿ ಅದನ್ನು ವಶಪಡಿಸಿಕೊಂಡನು.


ಆದರೆ ನಿಮ್ರೀಮ್ ಹಳ್ಳವು ಒಣಗಿಹೋಗಿ ಮರುಭೂಮಿಗೆ ಸಮಾನವಾಗಿದೆ. ಹಸಿಹುಲ್ಲುಗಳೆಲ್ಲಾ ಬಾಡಿವೆ; ಸಸಿಗಳೆಲ್ಲಾ ಸತ್ತಿವೆ; ಎಲ್ಲಿಯೂ ಹಸಿರು ಕಾಣಿಸುವದಿಲ್ಲ.


ಯೆಹೋಯಾಕೀಮನ ಕಾಲದಲ್ಲಿ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಹೂದ ದೇಶಕ್ಕೆ ಬಂದನು. ಯೆಹೋಯಾಕೀಮನು ಮೂರು ವರ್ಷಗಳವರೆಗೆ ನೆಬೂಕದ್ನೆಚ್ಚರನ ಸೇವೆಮಾಡಿದನು. ನಂತರ ಯೆಹೋಯಾಕೀಮನು ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ದಂಗೆ ಎದ್ದು ಅವನ ಆಳ್ವಿಕೆಯಿಂದ ದೂರವಾದನು.


ಪಾರಸಿ ರಾಜನಾದ ಕೋರೆಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಯೆಹೋವನು ಅವನಿಂದ ಒಂದು ವಿಶೇಷ ಪ್ರಕಟನೆಯನ್ನು ಹೊರಡಿಸಿದನು. ಯೆರೆಮೀಯನು ಹೇಳಿದ ಮಾತು ನೆರವೇರುವಂತೆ ಇದಾಯಿತು. ಕೊರೇಷನು ತನ್ನ ಸಾಮ್ರಾಜ್ಯದ ಮೂಲೆಮೂಲೆಗಳಿಗೆ ಜನರನ್ನು ಕಳುಹಿಸಿ ಈ ಸಂದೇಶವನ್ನು ಕೊಟ್ಟನು:


ಬಾಬಿಲೋನೇ, ನೀನು ನಾಶವಾಗುವೆ! ನಿನಗೆ ತಕ್ಕ ದಂಡನೆಯನ್ನು ಕೊಡುವವನು ಧನ್ಯನು. ನೀನು ನಮ್ಮನ್ನು ನೋಯಿಸಿದಂತೆ ನಿನ್ನನ್ನೂ ನೋಯಿಸುವವನು ಧನ್ಯನು.


ನೀವು ಯುದ್ಧಮಾಡಿ ಇತರರಿಂದ ಸುಲಿದುಕೊಳ್ಳುತ್ತೀರಿ. ಆದರೆ ಅವರು ನಿಮ್ಮಿಂದ ಏನೂ ಕದ್ದುಕೊಳ್ಳಲಿಲ್ಲ. ನೀವು ಜನರಿಗೆ ವಿರುದ್ಧವಾಗಿ ತಿರುಗುತ್ತೀರಿ. ಆದರೆ ಅವರು ನಿಮಗೆ ವಿರುದ್ಧವಾಗಲಿಲ್ಲ. ಆದ್ದರಿಂದ ನೀವು ಕದ್ದುಕೊಳ್ಳುವದನ್ನು ಬಿಟ್ಟಾಗ ಇತರರು ನಿಮ್ಮದನ್ನು ಕದ್ದುಕೊಳ್ಳುತ್ತಾರೆ. ನೀವು ಇತರರಿಗೆ ಹಾನಿ ಮಾಡುವದನ್ನು ನಿಲ್ಲಿಸಿದಾಗ ಇತರರು ನಿಮಗೆ ಹಾನಿ ಮಾಡುವರು. ಆಗ ನೀವು ಹೀಗೆ ಹೇಳುವಿರಿ:


ಎಲ್ಲಾ ಜನಾಂಗಗಳು ನೆಬೂಕದ್ನೆಚ್ಚರನ, ಅವನ ಮಗನ ಮತ್ತು ಅವನ ಮೊಮ್ಮಗನ ಸೇವೆಮಾಡುವವು. ಆಮೇಲೆ ಬಾಬಿಲೋನನ್ನು ಸೋಲಿಸುವ ಸಮಯ ಬರುತ್ತದೆ. ಅನೇಕ ಜನಾಂಗಗಳು ಮತ್ತು ದೊಡ್ಡ ರಾಜರು ಬಾಬಿಲೋನನ್ನು ತಮ್ಮ ಸೇವಕನನ್ನಾಗಿ ಮಾಡಿಕೊಳ್ಳುವರು.


ಆ ವಸ್ತುಗಳು ಬಾಬಿಲೋನಿಗೆ ಒಯ್ಯಲ್ಪಟ್ಟು ನಾನು ಅವುಗಳನ್ನು ಅಲ್ಲಿಂದ ತರುವ ದಿವಸಗಳವರೆಗೆ ಅಲ್ಲಿಯೇ ಇರುವವು, ಆಮೇಲೆ ನಾನು ಆ ವಸ್ತುಗಳನ್ನು ತರುವೆನು. ನಾನು ಆ ವಸ್ತುಗಳನ್ನು ಮತ್ತೆ ಈ ಸ್ಥಳದಲ್ಲಿ ಇಡುವೆನು.’” ಇದು ಯೆಹೋವನ ನುಡಿ.


ಅವನು ತನ್ನ ಬಲೆಯಿಂದ ಐಶ್ವರ್ಯವನ್ನು ಹೊಂದುತ್ತಾ ಮುಂದರಿಯುವನೋ? ನಿರ್ದಯೆಯಿಂದ ಜನರನ್ನು ನಾಶಮಾಡುತ್ತಲೇ ಇರುವನೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು