ಯೆರೆಮೀಯ 25:14 - ಪರಿಶುದ್ದ ಬೈಬಲ್14 ಹೌದು, ಬಾಬಿಲೋನಿನ ಜನರು ಅನೇಕ ಜನಾಂಗಗಳ ಮತ್ತು ಅನೇಕ ಮಹಾರಾಜರ ಸೇವೆ ಮಾಡಬೇಕಾಗುವುದು. ಅವರು ಮಾಡಲಿರುವ ದುಷ್ಕೃತ್ಯಗಳಿಗೆಲ್ಲ ತಕ್ಕ ಶಿಕ್ಷೆಯನ್ನು ನಾನು ಅವರಿಗೆ ಕೊಡುವೆನು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅನೇಕ ಜನಾಂಗಗಳೂ ಮತ್ತು ಮಹಾರಾಜರೂ ಅವರನ್ನೇ ಅಡಿಯಾಳಾಗಿ ಮಾಡಿಕೊಳ್ಳುವರು; ಅವರ ಕೃತ್ಯಗಳಿಗೂ ಮತ್ತು ಕೈಕೆಲಸಗಳಿಗೂ ತಕ್ಕಂತೆ ಅವರಿಗೆ ಮುಯ್ಯಿತೀರಿಸುವೆನು” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅನೇಕ ರಾಷ್ಟ್ರಗಳೂ ಮಹಾರಾಜರೂ ಅವರನ್ನು ಗುಲಾಮರನ್ನಾಗಿಸಿಕೊಳ್ಳುವರು. ಅವರ ಕೃತ್ಯಗಳಿಗೂ ಕೈಕೆಲಸಗಳಿಗೂ ತಕ್ಕಂತೆ ಅವರಿಗೆ ಮುಯ್ಯಿ ತೀರಿಸುವೆನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅನೇಕ ಜನಾಂಗಗಳೂ ಮಹಾರಾಜರೂ ಅವರನ್ನೇ ಅಡಿಯಾಳಾಗಿ ಮಾಡಿಕೊಳ್ಳುವರು; ಅವರ ಕೃತ್ಯಗಳಿಗೂ ಕೈಕೆಲಸಗಳಿಗೂ ತಕ್ಕಂತೆ ಅವರಿಗೆ ಮುಯ್ಯಿತೀರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅನೇಕ ಜನಾಂಗಗಳೂ, ದೊಡ್ಡ ಅರಸರೂ ಅವರಿಂದ ಸೇವೆ ಮಾಡಿಸಿಕೊಳ್ಳುವರು. ಅವರ ಕ್ರಿಯೆಗಳ ಪ್ರಕಾರವೂ, ಅವರ ಕೈಕೆಲಸದ ಪ್ರಕಾರವೂ ನಾನು ಅವರಿಗೆ ಪ್ರತಿಫಲ ಕೊಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |
ಪ್ರವಾದಿಯು ಹೀಗೆ ಹೇಳುತ್ತಾನೆ, “ಇಸ್ರೇಲೇ, ಇದನ್ನು ಕಲಿತುಕೋ. ಶಿಕ್ಷೆಯ ಸಮಯವು ಬಂದದೆ. ನೀನು ಮಾಡಿದ ದುಷ್ಟತನಕ್ಕೆ ಪ್ರತಿಯಾಗಿ ದೊರಕಬೇಕಾದ ಸಂಬಳ (ಫಲ)ದ ಸಮಯವು ಬಂತು.” ಆದರೆ ಇಸ್ರೇಲ್ ಜನರು ಹೀಗೆ ಹೇಳುತ್ತಾರೆ: “ಪ್ರವಾದಿಯು ಮೂರ್ಖನಾಗಿದ್ದಾನೆ. ದೇವರಾತ್ಮನುಳ್ಳ ಈ ಮನುಷ್ಯನು ಹುಚ್ಚನಾಗಿದ್ದಾನೆ.” ಪ್ರವಾದಿಯು ಹೀಗೆ ಹೇಳಿದನು, “ನಿನ್ನ ಕೆಟ್ಟ ಪಾಪಗಳಿಗಾಗಿ ನೀನು ಶಿಕ್ಷಿಸಲ್ಪಡುವೆ. ನೀನು ಹಗೆ ಮಾಡಿದುದಕ್ಕೆ ನೀನು ಶಿಕ್ಷೆ ಅನುಭವಿಸುವೆ.”