ಯೆರೆಮೀಯ 25:18 - ಪರಿಶುದ್ದ ಬೈಬಲ್18 ನಾನು ಈ ದ್ರಾಕ್ಷಾರಸವನ್ನು ಜೆರುಸಲೇಮಿನ ಮತ್ತು ಯೆಹೂದದ ಜನರಿಗೆ ಸುರಿದೆನು. ನಾನು ರಾಜನನ್ನು ಮತ್ತು ಯೆಹೂದದ ನಾಯಕರನ್ನು ಈ ಪಾತ್ರೆಯಲ್ಲಿಯ ದ್ರಾಕ್ಷಾರಸವನ್ನು ಕುಡಿಯುವಂತೆ ಮಾಡಿದೆನು. ಅವರು ಬರಿದಾದ ಮರುಭೂಮಿಯಂತಾಗಲೆಂದು ಹೀಗೆ ಮಾಡಿದೆನು. ಆ ಸ್ಥಳವು ತುಂಬಾ ಹಾಳಾಗಲಿ, ಜನರು ಅದರ ಬಗ್ಗೆ ಸಿಳ್ಳುಹಾಕಲಿ, ಶಾಪಹಾಕಲಿ ಎಂಬ ಉದ್ದೇಶದಿಂದ ನಾನು ಹಾಗೆ ಮಾಡಿದೆನು. ಹಾಗೆಯೇ ಆಯಿತು. ಯೆಹೂದವು ಈಗ ಹಾಗೆಯೇ ಇದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅದನ್ನು ಯೆರೂಸಲೇಮಿಗೂ, ಯೆಹೂದದ ಪಟ್ಟಣಗಳಿಗೂ, ಅರಸರಿಗೂ ಮತ್ತು ಪ್ರಧಾನರಿಗೂ ಕುಡಿಸಿದೆನು. ಇದರಿಂದ ಅವರು ಹಾಳಾಗಿ ಪರಿಹಾಸ್ಯಕ್ಕೂ ಮತ್ತು ಶಾಪಕ್ಕೂ ಗುರಿಯಾಗುವುದಕ್ಕೆ ಆಸ್ಪದವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಜೆರುಸಲೇಮಿಗೂ ಜುದೇಯದ ನಗರಗಳಿಗೂ, ಅರಸರುಗಳಿಗೂ ಕುಡಿಸಿದೆ. ಇದರಿಂದ ಅವರು ಹಾಳಾಗಿ ಇಂದು ಪರಿಹಾಸ್ಯಕ್ಕೂ ಶಾಪಕ್ಕೂ ಗುರಿಯಾಗುವಂತಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಯೆರೂಸಲೇವಿುಗೂ ಯೆಹೂದದ ಪಟ್ಟಣಗಳಿಗೂ ಅರಸರಿಗೂ ಪ್ರಧಾನರಿಗೂ ಕುಡಿಸಿದೆನು; ಇದರಿಂದ ಅವರು ಹಾಳಾಗಿ ಬೆರಗಿನ ಸಿಳ್ಳಿಗೂ ಶಾಪಕ್ಕೂ ಗುರಿಯಾಗುವದಕ್ಕೆ ಆಸ್ಪದವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಯೆರೂಸಲೇಮಿಗೂ, ಯೆಹೂದದ ಪಟ್ಟಣಗಳಿಗೂ, ಅದರ ಅರಸುಗಳಿಗೂ, ಅಧಿಕಾರಿಗಳಿಗೂ ಅವರನ್ನು ಇಂದಿನ ಪ್ರಕಾರ ಹಾಳು ಮಾಡಿ, ಭಯಕ್ಕೂ, ಪರಿಹಾಸ್ಯಕ್ಕೂ, ಶಾಪಕ್ಕೂ ಗುರಿ ಮಾಡುವ ಹಾಗೆ ಕುಡಿಸಿದೆನು. ಅಧ್ಯಾಯವನ್ನು ನೋಡಿ |
ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.
ಯಾಕೆಂದರೆ ನೀವು ಒಮ್ರಿಯ ಆಜ್ಞೆಯನ್ನು ಪರಿಪಾಲಿಸಿದಿರಿ. ಅಹಾಬನ ಮನೆಯವರು ಮಾಡುತ್ತಿದ್ದ ದುಷ್ಕೃತ್ಯಗಳನ್ನು ನೀವು ಮಾಡುತ್ತೀರಿ. ನೀವು ಅವರ ಬೋಧನೆಯನ್ನು ಅನುಸರಿಸುತ್ತೀರಿ. ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. ಕೆಡವಲ್ಪಟ್ಟ ನಿಮ್ಮ ನಗರವನ್ನು ನೋಡಿದ ಜನರು ಆಶ್ಚರ್ಯದಿಂದ ಸಿಳ್ಳುಹಾಕುವರು. ಆಗ ಬೇರೆ ಜನಾಂಗದವರು ನಿಮ್ಮ ಮೇಲೆ ಹೊರಿಸಿದ ಅವಮಾನವನ್ನು ನೀವು ಸಹಿಸಿಕೊಳ್ಳುವಿರಿ.”