Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 25:22 - ಪರಿಶುದ್ದ ಬೈಬಲ್‌

22 ತೂರಿನ ಮತ್ತು ಚೀದೋನಿನ ಎಲ್ಲಾ ರಾಜರು ಈ ಪಾತ್ರೆಯಿಂದ ಕುಡಿಯುವಂತೆ ಮಾಡಿದೆ. ಬಹಳ ದೂರದೇಶದ ರಾಜರು ಸಹ ಈ ಪಾತ್ರೆಯಿಂದ ಕುಡಿಯುವಂತೆ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ತೂರಿನ ಎಲ್ಲಾ ಅರಸರು, ಚೀದೋನಿನ ಎಲ್ಲಾ ಅರಸರು, ಸಮುದ್ರದ ಆಚೆಯ ಕರಾವಳಿಯ ಅರಸರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಟೈರ್ ಮತ್ತು ಸಿದೋನ್ ಇವುಗಳ ಅರಸರೆಲ್ಲರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅಮ್ಮೋನ್ಯರು, ತೂರಿನ ಎಲ್ಲಾ ಅರಸರು, ಚೀದೋನಿನ ಎಲ್ಲಾ ಅರಸರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಟೈರಿನ ಅರಸರೆಲ್ಲರಿಗೂ, ಸೀದೋನಿನ ಅರಸರೆಲ್ಲರಿಗೂ, ಸಮುದ್ರದ ಆಚೆಯಲ್ಲಿರುವ ದ್ವೀಪದ ಅರಸರಿಗೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 25:22
20 ತಿಳಿವುಗಳ ಹೋಲಿಕೆ  

ಎಲ್ಲಾ ಫಿಲಿಷ್ಟಿಯರ ವಿನಾಶನದ ಕಾಲ ಬಂದಿದೆ. ತೂರಿನ ಮತ್ತು ಚೀದೋನಿನ ಸಹಾಯಕರಲ್ಲಿ ಅಳಿದುಳಿದವರನ್ನೆಲ್ಲ ನಾಶಮಾಡುವ ಕಾಲ ಬಂದಿದೆ. ಯೆಹೋವನು ಬಹುಬೇಗ ಫಿಲಿಷ್ಟಿಯರನ್ನು ನಾಶಮಾಡುವನು. ಕಪ್ತೋರ್ ದಿಬಪದ ಅಳಿದುಳಿದ ಜನರನ್ನು ಆತನು ನಾಶಮಾಡುವನು.


“ಉತ್ತರ ದೇಶದ ನಾಯಕರೆಲ್ಲಾ ಅಲ್ಲಿದ್ದಾರೆ. ಚೀದೋನಿನ ಸೈನಿಕರೂ ಅಲ್ಲಿದ್ದಾರೆ. ಅವರ ಬಲವು ಜನರನ್ನು ಭಯಗ್ರಸ್ತರನ್ನಾಗಿ ಮಾಡಿತ್ತು. ಅವರೂ ಈಗ ಯುದ್ಧದಲ್ಲಿ ಮಡಿದ ಇತರರೊಂದಿಗೆ ಬಿದ್ದುಕೊಂಡಿದ್ದಾರೆ. ತಮ್ಮ ನಾಚಿಕೆಯೊಂದಿಗೆ ಪಾತಾಳವನ್ನು ಸೇರಿದ್ದಾರೆ.


“ನರಪುತ್ರನೇ, ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ತನ್ನ ಸೈನ್ಯವು ತೂರ್ ದೇಶದವರೊಂದಿಗೆ ಉಗ್ರವಾಗಿ ಹೋರಾಡುವಂತೆ ನಡೆಸಿದನು. ಪ್ರತಿ ಸೈನಿಕನ ತಲೆಯನ್ನು ಬೋಳಿಸಿದರು. ಪ್ರತಿಯೊಬ್ಬನ ಭುಜಗಳು ಭಾರ ಹೊತ್ತುಹೊತ್ತು ಸವೆದುಹೋಗಿದ್ದವು. ನೆಬೂಕದ್ನೆಚ್ಚರ್ ಮತ್ತು ಅವನ ಸೈನ್ಯವು ತೂರ್ ದೇಶವನ್ನು ಸೋಲಿಸಲು ಬಹಳವಾಗಿ ಪ್ರಯಾಸಪಡಬೇಕಾಗಿ ಬಂತು. ಆದರೆ ಅವರ ಪ್ರಯಾಸದ ಪ್ರತಿಫಲವಾಗಿ ಏನೂ ದೊರಕಲಿಲ್ಲ.”


“ಜನಾಂಗಗಳೇ, ಯೆಹೋವನ ಈ ಸಂದೇಶವನ್ನು ಕೇಳಿರಿ. ಈ ಸಂದೇಶವನ್ನು ಸಮುದ್ರದಡದ ದೂರದೂರದ ಪ್ರದೇಶಗಳಲ್ಲಿ ತಿಳಿಸಿರಿ. ‘ಇಸ್ರೇಲರನ್ನು ಚದರಿಸಿದಾತನು ಅವರನ್ನು ಮತ್ತೆ ಒಟ್ಟುಗೂಡಿಸುವನು. ಆತನು ತನ್ನ ಹಿಂಡನ್ನು ಕುರುಬನಂತೆ ನೋಡಿಕೊಳ್ಳುವನು’ ಎಂದು ಹೇಳಿರಿ.


ತರುವಾಯ ಎದೋಮಿನ ರಾಜ, ಮೋವಾಬಿನ ರಾಜ, ಅಮ್ಮೋನಿನ ರಾಜ, ತೂರಿನ ರಾಜ, ಚೀದೋನಿನ ರಾಜ ಇವರುಗಳಿಗೆ ಅವುಗಳನ್ನು ಕಳಿಸು. ಯೆಹೂದದ ರಾಜನಾದ ಚಿದ್ಕೀಯನನ್ನು ನೋಡಲು ಬಂದ ಈ ರಾಜರ ರಾಯಭಾರಿಗಳ ಮೂಲಕ ಸಂದೇಶವನ್ನು ಕಳಿಸು.


ತೂರಿನ ವಿಷಯವಾಗಿ ದುಃಖಕರವಾದ ಸಂದೇಶ: “ತಾರ್ಷೀಷಿನ ಹಡಗುಗಳೇ, ದುಃಖಿಸಿರಿ! ನಿಮ್ಮ ರೇವು ಕೆಡವಲ್ಪಟ್ಟಿದೆ.” ಕಿತ್ತಿಮಿನಿಂದ ಹೊರಟ ಹಡಗುಗಳಿಗೆ ಈ ವಾರ್ತೆಯು ತಲುಪಿತು.


ಚೀದೋನೇ, ನೀನು ತುಂಬಾ ದುಃಖದಿಂದಿರಬೇಕು. ಯಾಕೆಂದರೆ ಸಮುದ್ರವೂ ಸಮುದ್ರದ ಕೋಟೆಯೂ ಹೇಳುವುದೇನೆಂದರೆ, “ನನಗೆ ಮಕ್ಕಳಿಲ್ಲ, ನಾನು ಪ್ರಸವವೇದನೆ ಅನುಭವಿಸಲಿಲ್ಲ. ನಾನು ಮಕ್ಕಳನ್ನು ಹೆರಲಿಲ್ಲ. ನಾನು ಗಂಡುಮಕ್ಕಳನ್ನಾಗಲಿ ಹೆಣ್ಣುಮಕ್ಕಳನ್ನಾಗಲಿ ಬೆಳೆಸಲಿಲ್ಲ.”


ಎಪ್ಪತ್ತು ವರ್ಷಗಳ ತನಕ ಜನರಿಗೆ ತೂರಿನ ಜ್ಞಾಪಕವಿರುವದಿಲ್ಲ. ಇದು ಒಬ್ಬ ಅರಸನು ಆಳುವ ಕಾಲ. ಎಪ್ಪತ್ತು ವರ್ಷಗಳ ತರುವಾಯ ತೂರ್ ಈ ಹಾಡಿನಲ್ಲಿರುವ ವೇಶ್ಯೆಯಂತಿರುವದು:


ದೇವರು ಹೇಳಿದ್ದೇನೆಂದರೆ, “ನಾನು ಮಾಗೋಗ್ ಮತ್ತು ಕಡಲ ತೀರದಲ್ಲಿ ವಾಸಿಸುವ ಜನರ ಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ. ತಾವು ಸುರಕ್ಷಿತವಾಗಿದ್ದೇವೆ ಎಂದು ಅವರು ನೆನಸುತ್ತಾರೆ. ಆದರೆ ನಾನು ಯೆಹೋವನು ಎಂದು ಅವರಿಗೆ ತಿಳಿಯುವದು.


ನಿನ್ನ ಎಲ್ಲಾ ಐಶ್ವರ್ಯವು, ನಿನ್ನ ದಿನಸುಗಳು, ನಿನ್ನ ಸರಕುಗಳು, ನಿನ್ನ ನಾವಿಕರು, ನಿನ್ನ ಅಂಬಿಗರು, ನಿನ್ನ ಕಿಂಡಿಗಳನ್ನು ಭದ್ರಪಡಿಸುವವರು, ನಿನ್ನ ವ್ಯಾಪಾರಿಗಳು, ನಿನ್ನ ಎಲ್ಲಾ ಸೈನಿಕರು, ನಿನ್ನ ಎಲ್ಲಾ ಸಿಬ್ಬಂದಿ ವರ್ಗದವರು ನಾಶನದ ದಿನದಲ್ಲಿ ಸಮುದ್ರದೊಳಗೆ ಮುಳುಗಿಹೋಗುವರು.


ಯೆಹೋವನ ನುಡಿಯು ನನಗೆ ಬಂತು. ಆತನು ಹೇಳಿದ್ದೇನೆಂದರೆ,


ಯೆಹೋವನ ಸಂದೇಶ ನನಗೆ ಬಂದಿತು. ಆತನು ಹೀಗೆ ಹೇಳಿದನು:


“ನರಪುತ್ರನೇ, ಚೀದೋನಿನ ಕಡೆಗೆ ನೋಡಿ ನನ್ನ ಪರವಾಗಿ ನೀನೇ ಅದರ ವಿರುದ್ಧವಾಗಿ ಮಾತನಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು