Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 25:24 - ಪರಿಶುದ್ದ ಬೈಬಲ್‌

24 ಅರಬೀಯರ ಎಲ್ಲಾ ರಾಜರು ಈ ಪಾತ್ರೆಯಿಂದ ಕುಡಿಯುವಂತೆ ಮಾಡಿದೆ. ಈ ರಾಜರು ಮರುಭೂಮಿಯಲ್ಲಿ ವಾಸಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅರಬಿಯದ ಎಲ್ಲಾ ಅರಸರು, ಅರಣ್ಯವಾಸಿಗಳಾದ ಮಿಶ್ರಜಾತಿಯವರ ಎಲ್ಲಾ ಅರಸರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅರಬೀಯದ ಎಲ್ಲ ಅರಸರು, ಅರಣ್ಯವಾಸಿಗಳಾದ ಮಿಶ್ರಜಾತಿಯ ಎಲ್ಲ ನಾಯಕರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅರಬಿಯ ಎಲ್ಲಾ ಅರಸರು, ಅರಣ್ಯವಾಸಿಗಳಾದ ವಿುಶ್ರಜಾತಿಯವರ ಎಲ್ಲಾ ಅರಸರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅರೇಬಿಯದ ಅರಸರೆಲ್ಲರಿಗೂ, ಮರುಭೂಮಿಯಲ್ಲಿ ವಾಸಿಸುವ ಮಿಶ್ರವಾದ ಜನರ ಅರಸರೆಲ್ಲರಿಗೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 25:24
11 ತಿಳಿವುಗಳ ಹೋಲಿಕೆ  

ಇತರ ದೇಶಗಳ ವ್ಯಾಪಾರಸ್ಥರು, ಅರೇಬಿಯದ ಎಲ್ಲಾ ರಾಜರುಗಳು ಮತ್ತು ದೇಶಾಧಿಪತಿಗಳು ಸೊಲೊಮೋನನಿಗೆ ಬೆಳ್ಳಿಬಂಗಾರಗಳನ್ನು ತಂದುಕೊಡುತ್ತಿದ್ದರು.


ಎಲ್ಲಾ ಅರಬೀಯರು ಮತ್ತು ಧಿಚ್ ದೇಶದ ಎಲ್ಲಾ ರಾಜರು ಪಾನಪಾತ್ರೆಯಿಂದ ಕುಡಿಯುವಂತೆ ಮಾಡಿದೆ. ಫಿಲಿಷ್ಟಿಯ ದೇಶದ ಎಲ್ಲಾ ರಾಜರು ಅಂದರೆ ಅಷ್ಕೆಲೋನ್, ಗಾಜಾ, ಎಕ್ರೋನ್ ಮತ್ತು ಅಷ್ಡೋದಿನ ಶೇಷಭಾಗದ ರಾಜರು ಈ ಪಾನಪಾತ್ರೆಯಿಂದ ಕುಡಿಯುವಂತೆ ಮಾಡಿದೆನು.


“‘ಅನೇಕ ದೇಶಗಳವರು ಈಜಿಪ್ಟಿನವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು. ಆದರೆ ಇಥಿಯೋಪ್ಯ, ಪೂಟ್, ಲೂದ್, ಅರೇಬಿಯ, ಲಿಬ್ಯ ಮತ್ತು ಇಸ್ರೇಲಿನ ಜನರು ಇವರೆಲ್ಲರೂ ನಾಶವಾಗುವರು.


ಖಡ್ಗವೇ, ಬಾಬಿಲೋನಿನ ಕುದುರೆಗಳನ್ನು ಮತ್ತು ರಥಗಳನ್ನು ಧ್ವಂಸಮಾಡು! ಖಡ್ಗವೇ, ಪರದೇಶಗಳಿಂದ ಕರೆಸಿದ ಸೈನಿಕರನ್ನು ಕೊಂದುಹಾಕು! ಆ ಸೈನಿಕರು ಹೆದರಿದ ಹೆಂಗಸರಂತಾಗಿರುವರು. ಖಡ್ಗವೇ, ಬಾಬಿಲೋನಿನ ಭಂಡಾರಗಳನ್ನು ನಾಶಮಾಡು! ಆ ಐಶ್ವರ್ಯವು ಸೂರೆಗೊಳ್ಳುವುದು.


ಅರಾಬ್ಯರು ಮತ್ತು ಕೇದಾರಿನವರು ಕುರಿಮರಿಗಳನ್ನು, ಟಗರು ಮತ್ತು ಆಡುಗಳನ್ನು ಕೊಟ್ಟು ವ್ಯಾಪಾರ ಮಾಡಿದರು.


ಅರೇಬಿಯದ ಬಗ್ಗೆ ದುಃಖಕರವಾದ ಸಂದೇಶ: ದೇದಾನಿನಿಂದ ಬಂದ ಪ್ರಯಾಣಿಕರು ಅರೇಬಿಯ ಮರುಭೂಮಿಯಲ್ಲಿನ ಪೊದೆಗಳಲ್ಲಿ ರಾತ್ರಿ ತಂಗಿದರು.


ಹಡಗುಗಳಿಂದ ಸಿಗುತ್ತಿದ್ದ ಬಂಗಾರವಲ್ಲದೆ ವ್ಯಾಪಾರಿಗಳಿಂದಲೂ ಅರೇಬಿಯಾದ ರಾಜರಿಂದಲೂ ರಾಜ್ಯಪಾಲರುಗಳಿಂದಲೂ ಬಂಗಾರವನ್ನು ಅವನು ಪಡೆಯುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು