Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 25:27 - ಪರಿಶುದ್ದ ಬೈಬಲ್‌

27 “ಯೆರೆಮೀಯನೇ, ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆಂದು ಆ ಜನಾಂಗಗಳಿಗೆ ಹೇಳು: ‘ನನ್ನ ರೋಷದ ಈ ಪಾತ್ರೆಯಿಂದ ಕುಡಿಯಿರಿ, ಕುಡಿದು ಅಮಲೇರಿ ವಾಂತಿಮಾಡಿಕೊಳ್ಳಿ, ಕೆಳಗೆ ಬಿದ್ದು ಮೇಲಕ್ಕೆ ಏಳದಿರಿ, ಏಕೆಂದರೆ ನಾನು ನಿಮ್ಮನ್ನು ಕೊಲ್ಲಲು ಒಂದು ಖಡ್ಗವನ್ನು ಕಳುಹಿಸುತ್ತಿದ್ದೇನೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಇದಲ್ಲದೆ ನನಗೆ ಈ ಅಪ್ಪಣೆಯಾಯಿತು, ನೀನು ಅವರಿಗೆ ನುಡಿಯತಕ್ಕದ್ದೇನೆಂದರೆ, “ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಾನು ನಿಮ್ಮಲ್ಲಿಗೆ ಖಡ್ಗವನ್ನು ಕಳುಹಿಸುವೆನು; ಆ ನನ್ನ ರೋಷವನ್ನು ಕುಡಿದು ಅಮಲೇರಿದವರಾಗಿ ಕಕ್ಕಿ ಬಿದ್ದು ಏಳದಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಸರ್ವೇಶ್ವರಾ: “ನೀನು ಅವರಿಗೆ ಹೀಗೆಂದು ಹೇಳು: ‘ಇಸ್ರಯೇಲಿನ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರ ಹೇಳಿದ್ದಾರೆ - ನೀವು ಕುಡಿಯಬೇಕು, ಕುಡಿದು ಕಕ್ಕಬೇಕು. ನಾನು ಕಳಿಸುವ ಖಡ್ಗಕ್ಕೆ ತುತ್ತಾಗಿ ಬೀಳಬೇಕು, ಬಿದ್ದು ಏಳಬಾರದು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 [ಇದಲ್ಲದೆ ಈ ಅಪ್ಪಣೆಯಾಯಿತು] - ನೀನು ಅವರಿಗೆ ನುಡಿಯತಕ್ಕದ್ದೇನಂದರೆ - ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನಾನು ನಿಮ್ಮಲ್ಲಿಗೆ ಖಡ್ಗವನ್ನು ಕಳುಹಿಸುವೆನು; [ಆ ನನ್ನ ರೋಷವನ್ನು] ಕುಡಿದು ಅಮಲೇರಿದವರಾಗಿ ಕಕ್ಕಿ ಬಿದ್ದು ಏಳದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 “ಆದ್ದರಿಂದ ನೀನು ಅವರಿಗೆ ಹೇಳಬೇಕಾದದ್ದೇನೆಂದರೆ: ‘ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, ನಾನು ನಿಮ್ಮ ಮಧ್ಯದಲ್ಲಿ ಕಳುಹಿಸುವ ಖಡ್ಗದ ನಿಮಿತ್ತವೇ ಕುಡಿಯಿರಿ, ಮತ್ತರಾಗಿರಿ, ಕಾರಿರಿ, ಬೀಳಿರಿ, ಇನ್ನು ಮೇಲೆ ತಿರುಗಿ ಏಳದಿರಿ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 25:27
20 ತಿಳಿವುಗಳ ಹೋಲಿಕೆ  

“ಆದರೆ ಅವನು ಯೆಹೋವನ ಕೋಪವನ್ನು ತಿಳಿದುಕೊಳ್ಳುವನು. ಆ ಕೋಪವು ಯೆಹೋವನ ಬಲಗೈಯಲ್ಲಿರುವ ವಿಷದ ಪಾತ್ರೆಯಂತಿರುವುದು. ಆ ವ್ಯಕ್ತಿಯು ಆ ಕೋಪವನ್ನು ರುಚಿನೋಡುವನು ಮತ್ತು ಅಮಲೇರಿದವನಂತೆ ನೆಲದ ಮೇಲೆ ಕುಸಿದುಬೀಳುವನು. “ದುಷ್ಟ ಅಧಿಪತಿಯೇ, ನೀನು ಆ ಪಾತ್ರೆಯಿಂದ ಕುಡಿಯುವೆ. ನಿನಗೆ ಅವಮಾನವೇ ಹೊರತು, ಮಾನ ಸಿಗುವುದಿಲ್ಲ.


ಅವರು ಈ ದ್ರಾಕ್ಷಾರಸವನ್ನು ಕುಡಿಯುವರು. ಆಮೇಲೆ ಅವರು ವಾಂತಿ ಮಾಡಿಕೊಳ್ಳುವರು ಮತ್ತು ಹುಚ್ಚರಂತೆ ವರ್ತಿಸುವರು. ನಾನು ಬೇಗನೆ ಅವರ ವಿರುದ್ಧ ಖಡ್ಗವನ್ನು ಕಳುಹಿಸುತ್ತಿರುವುದರಿಂದ ಅವರು ಹೀಗೆ ಮಾಡುವರು.”


ಎದೋಮಿನ ಜನರೇ, ಸಂತೋಷವಾಗಿರಿ. ಊಚ್ ದೇಶದಲ್ಲಿ ವಾಸವಾಗಿರುವ ಜನರೇ, ಸಂತೋಷವಾಗಿರಿ. ಆದರೆ ಜ್ಞಾಪಕದಲ್ಲಿಟ್ಟುಕೊಂಡಿರಿ, ಯೆಹೋವನ ಕೋಪದ ಪಾತ್ರೆಯು ನಿಮ್ಮ ಬಳಿಗೂ ಬರುವುದು. ನೀವು ಆ ಪಾತ್ರೆಯಿಂದ ಕುಡಿಯುವಾಗ ಮತ್ತೇರಿದವರಾಗಿ ನಿಮ್ಮನ್ನು ನೀವೇ ಬೆತ್ತಲು ಮಾಡಿಕೊಳ್ಳುವಿರಿ.


ಜೆರುಸಲೇಮೇ, ನನಗೆ ಕಿವಿಗೊಡು. ನೀನು ಅಮಲೇರಿದವಳಂತೆ ಶಕ್ತಿಹೀನಳಾಗಿರುವೆ. ನೀನು ಕುಡಿದು ಅಮಲೇರುವುದು ದ್ರಾಕ್ಷಾರಸದಿಂದಲ್ಲ, “ವಿಷದಿಂದಷ್ಟೇ.”


ಯೆಹೋವನು ಹೀಗೆನ್ನುತ್ತಾನೆ: “ಖಡ್ಗವೇ, ಬಾಬಿಲೋನಿನಲ್ಲಿ ವಾಸಮಾಡುತ್ತಿರುವ ಜನರನ್ನು ನಾಶಮಾಡು! ಖಡ್ಗವೇ, ಬಾಬಿಲೋನಿನ ಸಾಮಾನ್ಯ ಜನರನ್ನು, ಅಧಿಕಾರಿಗಳನ್ನು ಮತ್ತು ಪಂಡಿತರನ್ನು ಕೊಂದುಹಾಕು!


“ಈಜಿಪ್ಟಿನಲ್ಲಿ ಈ ಸಂದೇಶವನ್ನು ಪ್ರಕಟಿಸು, ಮಿಗ್ದೋಲ್ ನಗರದಲ್ಲಿ ಇದನ್ನು ಪ್ರಚುರಪಡಿಸು. ನೋಫ್ ಮತ್ತು ತಹಪನೇಸ್‌ಗಳಲ್ಲಿ ಪ್ರಚುರಪಡಿಸಿರಿ, ‘ಯುದ್ಧಕ್ಕೆ ಸಿದ್ಧರಾಗಿರಿ, ಏಕೆಂದರೆ ನಿಮ್ಮ ಸುತ್ತಲೂ ಜನರು ಖಡ್ಗಕ್ಕೆ ಆಹುತಿಯಾಗಿದ್ದಾರೆ.’


“ಆದರೆ ಆ ದಿನ ನಮ್ಮ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನು ಗೆಲ್ಲುವನು. ಆಗ ಆ ಜನರಿಗೆ ತಕ್ಕ ಶಿಕ್ಷೆಯನ್ನು ಕೊಡುವನು. ಯೆಹೋವನ ವೈರಿಗಳು ತಕ್ಕ ಶಿಕ್ಷೆಯನ್ನು ಅನುಭವಿಸುವರು. ಖಡ್ಗವು ಸರ್ವರನ್ನು ಕೊಲೆ ಮಾಡುವುದು. ಖಡ್ಗವು ತನ್ನ ರಕ್ತದ ದಾಹ ತೀರುವವರೆಗೂ ಕೊಲೆ ಮಾಡುವುದು. ನಮ್ಮ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಗೆ ಬಲಿ ನಡೆಯಬೇಕಾಗಿರುವುದರಿಂದ ಹೀಗೆಲ್ಲ ಆಗುವುದು. ಈಜಿಪ್ಟಿನ ಸೈನ್ಯವನ್ನು ಉತ್ತರದಲ್ಲಿ ಯೂಫ್ರೇಟೀಸ್ ನದಿಯ ಹತ್ತಿರ ಬಲಿಯಾಗಿ ಕೊಡಲಾಗುವುದು.


ಅನೇಕ ಸೈನಿಕರು ಆ ಬೋಳುಬೆಟ್ಟಗಳನ್ನು ತುಳಿದುಕೊಂಡು ಹೋದರು. ಆ ಸೈನ್ಯಗಳಿಂದ ಯೆಹೋವನು ಆ ದೇಶವನ್ನು ದಂಡಿಸಿದನು. ಆ ದೇಶದ ಒಂದು ತುದಿಯಿಂದ ಇನ್ನೊಂದು ತುದಿಯವರೆಗೆ ವಾಸಿಸಿದ ಎಲ್ಲಾ ಜನರನ್ನು ದಂಡಿಸಲಾಯಿತು. ಯಾರೂ ಸುರಕ್ಷಿತವಾಗಿ ಉಳಿಯಲಿಲ್ಲ.


ನಾನು ಕೋಪಗೊಂಡಾಗ ಜನಾಂಗಗಳ ಮೇಲೆ ತುಳಿದಾಡಿದೆನು. ನಾನು ಸಿಟ್ಟುಗೊಂಡಾಗ ಅವರನ್ನು ಶಿಕ್ಷಿಸಿದೆನು. ಅವರ ರಕ್ತವನ್ನು ನೆಲದ ಮೇಲೆ ಚೆಲ್ಲಿದೆನು.”


ನನ್ನ ವೈರಿಗಳು ಕೊಲ್ಲಲ್ಪಡುವರು ಮತ್ತು ಸೆರೆಯಾಳುಗಳಾಗಿ ಒಯ್ಯಲ್ಪಡುವರು. ನನ್ನ ಬಾಣಗಳು ಅವರ ರಕ್ತದಿಂದ ಮುಚ್ಚಲ್ಪಟ್ಟಿವೆ. ನನ್ನ ಖಡ್ಗವು ಅವರ ಸೈನಿಕರ ತಲೆಯನ್ನು ಕತ್ತರಿಸುವುದು.’”


ಅವನು ದೇವರ ಕೋಪವೆಂಬ ದ್ರಾಕ್ಷಾರಸವನ್ನು ಕುಡಿಯುತ್ತಾನೆ. ದೇವರ ಕೋಪವೆಂಬ ಬಟ್ಟಲಿನಲ್ಲಿ ಈ ದ್ರಾಕ್ಷಾರಸವನ್ನು ಅದರ ಪೂರ್ಣಶಕ್ತಿಯ ಸಮೇತವಾಗಿ ತಯಾರಿಸಲಾಗಿದೆ. ಅವನನ್ನು ಪರಿಶುದ್ಧ ದೇವದೂತರ ಮತ್ತು ಕುರಿಮರಿಯಾದಾತನ ಮುಂದೆ ಉರಿಯುವ ಗಂಧಕದಿಂದ ಯಾತನೆಪಡಿಸಲಾಗುವುದು.


ಆಗ ನೀನು ಅವರಿಗೆ, ‘ಯೆಹೋವನು ಹೀಗೆ ಹೇಳುತ್ತಾನೆ ಎಂದು ಹೇಳು. ಈ ಪ್ರದೇಶದಲ್ಲಿ ವಾಸಮಾಡುವ ಪ್ರತಿಯೊಬ್ಬ ಮನುಷ್ಯನನ್ನು ಕುಡಿದು ಮತ್ತನಾದವನಂತೆ ಅಸಹಾಯಕನನ್ನಾಗಿ ಮಾಡುತ್ತೇನೆ. ನಾನು ದಾವೀದನ ಸಿಂಹಾಸನದ ಮೇಲೆ ಕುಳಿತುಕೊಳ್ಳುವ ರಾಜರ ಬಗ್ಗೆ ಹೇಳುತ್ತಿದ್ದೇನೆ. ನಾನು ಯಾಜಕರ, ಪ್ರವಾದಿಗಳ ಮತ್ತು ಜೆರುಸಲೇಮಿನಲ್ಲಿ ವಾಸಿಸುವ ಎಲ್ಲಾ ಜನರ ಬಗ್ಗೆಯೂ ಹೇಳುತ್ತಿದ್ದೇನೆ.


ಸತ್ತ ರಾಜನ ಬಗ್ಗೆ ಅಳಬೇಡಿ. ಅವನಿಗೋಸ್ಕರ ಅಳಬೇಡಿ. ಆದರೆ ಇಲ್ಲಿಂದ ಹೋಗುತ್ತಿರುವ ರಾಜನ ಬಗ್ಗೆ ಗಟ್ಟಿಯಾಗಿ ರೋಧಿಸಿರಿ. ಅವನು ಮತ್ತೆ ಇಲ್ಲಿಗೆ ಬರುವದಿಲ್ಲ. ಆದ್ದರಿಂದ ಅವನಿಗೋಸ್ಕರ ರೋಧಿಸಿರಿ. ಯೋಹಾಜನು ತನ್ನ ಜನ್ಮಭೂಮಿಯನ್ನು ಮತ್ತೆಂದಿಗೂ ನೋಡುವುದಿಲ್ಲ.


ಆ ಜನರು ಬಲಶಾಲಿಗಳಾದ ಸಿಂಹಗಳಂತೆ ವರ್ತಿಸುತ್ತಿದ್ದಾರೆ. ನಾನು ಅವರಿಗೊಂದು ಔತಣವನ್ನೇರ್ಪಡಿಸುವೆನು. ಅವರಿಗೆ ಮತ್ತೇರುವಂತೆ ಕುಡಿಸುವೆನು. ಅವರು ನಗುನಗುತ್ತಾ ಸಂತೋಷದಿಂದ ಕಾಲ ಕಳೆಯುವರು. ಆಮೇಲೆ ಅವರು ಶಾಶ್ವತವಾಗಿ ಮಲಗುವರು. ಅವರು ಮತ್ತೆ ಏಳಲಾರರು.” ಇದು ಯೆಹೋವನ ನುಡಿ.


ಬಾಬಿಲೋನಿನ ಮುಖ್ಯ ಅಧಿಕಾರಿಗಳಿಗೂ ಪಂಡಿತರಿಗೂ ದ್ರಾಕ್ಷಾರಸ ಕುಡಿಯುವಂತೆ ಮಾಡುತ್ತೇನೆ. ಅಲ್ಲಿಯ ಅಧಿಪತಿಗಳಿಗೂ ಅಧಿಕಾರಿಗಳಿಗೂ ಸೈನಿಕರಿಗೂ ದ್ರಾಕ್ಷಾರಸ ಕುಡಿಸುತ್ತೇನೆ. ಆಮೇಲೆ ಅವರು ಶಾಶ್ವತವಾಗಿ ಮಲಗಿಬಿಡುತ್ತಾರೆ. ಅವರು ಎಚ್ಚರಗೊಳ್ಳುವುದೇ ಇಲ್ಲ.” ಸರ್ವಶಕ್ತನಾದ ಯೆಹೋವನೆಂಬ ನಾಮಧೇಯದ ರಾಜಾಧಿರಾಜನ ನುಡಿಯಿದು.


ಆದ್ದರಿಂದ ನಿನೆವೆಯೇ, ನೀನು ಸಹ ಕುಡಿದು ಅಮಲೇರಿದವನಂತೆ ಕೆಳಗೆ ಬಿದ್ದುಬಿಡುವೆ. ನೀನು ಅಡಗಿಕೊಳ್ಳಲು ಪ್ರಯತ್ನಿಸುವೆ. ವೈರಿಯಿಂದ ತಪ್ಪಿಸಿಕೊಳ್ಳಲು ಸುರಕ್ಷಿತವಾದ ಸ್ಥಳವನ್ನು ಹುಡುಕುವೆ.


ಆ ಜನರು ಸಮಾರ್ಯದ ಪಾಪದ ಮೇಲೆ ಆಣೆಯಿಡುವರು, ‘ದಾನೇ, ನಿನ್ನ ದೇವರಾಣೆ ….’ ‘ಬೇರ್ಷೆಬದ ದೇವರಾಣೆ ….’ ಎಂಬುದಾಗಿ ಹೇಳುವರು. ಆದರೆ ಆ ಜನರು ಬಿದ್ದುಹೋಗುವರು. ಅಲ್ಲಿಂದ ತಿರುಗಿ ಏಳುವದೇ ಇಲ್ಲ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು