Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 25:29 - ಪರಿಶುದ್ದ ಬೈಬಲ್‌

29 ಈಗಾಗಲೆ ನನ್ನ ಹೆಸರುಗೊಂಡಿರುವ ಜೆರುಸಲೇಮ್ ನಗರಕ್ಕೆ ಕೇಡಾಗುವಂತೆ ಮಾಡುತ್ತಿದ್ದೇನೆ. ನಿಮ್ಮನ್ನು ದಂಡನೆಗೆ ಗುರಿ ಮಾಡಲಾಗುವುದಿಲ್ಲವೆಂದು ನೀವು ಯೋಚಿಸುತ್ತಿರಬಹುದು. ಆದರೆ ನಿಮ್ಮ ಯೋಚನೆ ತಪ್ಪು. ನಿಮ್ಮನ್ನು ದಂಡಿಸಲಾಗುವುದು. ಈ ಭೂಮಿಯ ಮೇಲಿನ ಜನರೆಲ್ಲರ ಮೇಲೆ ಆಕ್ರಮಣಮಾಡಲು ನಾನು ಒಂದು ಖಡ್ಗವನ್ನು ಕರೆಯುತ್ತಿದ್ದೇನೆ.’” ಇದು ಯೆಹೋವನ ಸಂದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಇಗೋ, ನನ್ನ ಹೆಸರುಗೊಂಡಿರುವ ಪಟ್ಟಣದಲ್ಲಿ ಬಾಧಿಸಲು ಪ್ರಾರಂಭಿಸುತ್ತೇನೆ. ನೀವು ಆ ದಂಡನೆಗೆ ತಪ್ಪಿಸಿಕೊಂಡೀರೋ? ಆಗುವುದೇ ಇಲ್ಲ. ಖಡ್ಗವೇ, ಭೂನಿವಾಸಿಗಳನ್ನೆಲ್ಲ ಸಂಹರಿಸಲಿಕ್ಕೆ ಬಾ” ಎಂದು ಕೂಗುವೆನು. ಇದು ಸೇನಾಧೀಶ್ವರನಾದ ಯೆಹೋವನೆಂಬ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಇಗೋ, ನನ್ನ ಹೆಸರುಗೊಂಡಿರುವ ನಗರದಲ್ಲಿ ಬಾಧಿಸಲು ಪ್ರಾರಂಭಿಸುತ್ತೇನೆ. ನೀವು ಆ ದಂಡನೆಗೆ ತಪ್ಪಿಸಿಕೊಳ್ಳುವಿರೊ? ಆಗುವುದೇ ಇಲ್ಲ. ಏಕೆಂದರೆ ಭೂನಿವಾಸಿಗಳೆಲ್ಲರಿಗೆ ವಿರುದ್ಧವಾಗಿ ಖಡ್ಗವನ್ನು ಬರಮಾಡುವೆನು. ಇದು ಸರ್ವಶಕ್ತ ಸರ್ವೇಶ್ವರನ ನುಡಿ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಇಗೋ, ನನ್ನ ಹೆಸರುಗೊಂಡಿರುವ ಪಟ್ಟಣದಲ್ಲಿ ಬಾಧಿಸಲು ಪ್ರಾರಂಭಿಸುತ್ತೇನೆ. ನೀವು ಆ ದಂಡನೆಗೆ ತಪ್ಪಿಸಿಕೊಂಡೀರೋ? ಆಗುವದೇ ಇಲ್ಲ. ಖಡ್ಗವೇ, ಭೂನಿವಾಸಿಗಳನ್ನೆಲ್ಲ ಸಂಹರಿಸಲಿಕ್ಕೆ ಬಾ ಎಂದು ಕೂಗುವೆನು. ಇದು ಸೇನಾಧೀಶ್ವರನಾದ ಯೆಹೋವನೆಂಬ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಏಕೆಂದರೆ ಇಗೋ, ನನ್ನ ಹೆಸರಿನಿಂದ ಕರೆಯಲಾಗಿರುವ ಪಟ್ಟಣದ ಮೇಲೆ ನಾನು ಕೇಡನ್ನು ತರಿಸುವುದಕ್ಕೆ ಆರಂಭ ಮಾಡುತ್ತೇನೆ. ಹಾಗಾದರೆ ನೀವು ಸಂಪೂರ್ಣ ದಂಡನೆಗೆ ತಪ್ಪಿಸಿಕೊಂಡೀರೋ? ತಪ್ಪಿಸಿಕೊಳ್ಳುವುದಿಲ್ಲ. ಏಕೆಂದರೆ ನಾನು ಭೂನಿವಾಸಿಗಳೆಲ್ಲರ ಮೇಲೆ ಖಡ್ಗವನ್ನು ಕರೆಯುತ್ತೇನೆಂದು ಸೇನಾಧೀಶ್ವರ ಯೆಹೋವ ದೇವರು ನುಡಿಯುತ್ತಾರೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 25:29
19 ತಿಳಿವುಗಳ ಹೋಲಿಕೆ  

ನಿಮ್ಮ ನ್ಯಾಯನಿರ್ಣಯದ ಕಾಲ ಬಂದಿದೆ. ಅದು ದೇವರ ಕುಟುಂಬದಿಂದಲೇ ಆರಂಭವಾಗುವುದು. ನಮ್ಮಲ್ಲಿಯೇ ಅದು ಆರಂಭವಾದರೆ, ದೇವರ ಸುವಾರ್ತೆಗೆ ವಿಧೇಯರಾಗದ ಜನರಿಗೆ ಏನಾಗಬಹುದು?


ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ಇಸ್ರೇಲಿನ ಪರ್ವತಗಳಲ್ಲಿ ಗೋಗನಿಗೆ ಭಯಂಕರ ಪರಿಸ್ಥಿತಿ ಉಂಟಾಗುವಂತೆ ಮಾಡುವೆನು. ಅವನ ಸೈನಿಕರು ಭಯಗೊಂಡು ಒಬ್ಬರನ್ನೊಬ್ಬರು ಕತ್ತಿಯಿಂದ ಕೊಲ್ಲುವರು.


ಶಿಷ್ಟರು ಭೂಮಿಯ ಮೇಲೆ ಪ್ರತಿಫಲವನ್ನು ಹೊಂದುವುದಾದರೆ ಕೆಡುಕರು ಸಹ ತಮಗೆ ಬರತಕ್ಕ ದಂಡನೆಯನ್ನು ಹೊಂದುವುದು ನಿಶ್ಚಯ.


ನಿನ್ನ ನಿವಾಸವಾದ ಪರಲೋಕದಿಂದಲೇ ಅವರ ಪ್ರಾರ್ಥನೆಗಳನ್ನು ದಯವಿಟ್ಟು ಆಲಿಸು, ಅನ್ಯ ಸ್ಥಳದವರಾದ ಆ ಜನರು ನಿನ್ನಲ್ಲಿ ಬೇಡುವುದನ್ನೆಲ್ಲ ದಯವಿಟ್ಟು ಈಡೇರಿಸು. ಆಗ, ಇಸ್ರೇಲಿನ ಜನರಂತೆ ಭೂಲೋಕದವರೆಲ್ಲರಿಗೂ ನಿನ್ನ ಹೆಸರು ಗೊತ್ತಾಗುವುದು ಮತ್ತು ಅವರು ನಿನಗೆ ಭಯಪಡುವರು. ಈ ಆಲಯವನ್ನು ನಿನ್ನ ಗೌರವಕ್ಕಾಗಿ ನಾನು ಕಟ್ಟಿಸಿದೆನೆಂಬುದು ಆಗ ಎಲ್ಲಾ ಕಡೆಯ ಜನರಿಗೂ ತಿಳಿಯುವುದು.


ಯಾಕೆಂದರೆ ನನ್ನ ಪರಿಶುದ್ಧ ಪರ್ವತದಲ್ಲಿ ರಕ್ತವನ್ನು ಸುರಿಸಿದೆ. ನೀನು ಹುಟ್ಟಲೇ ಇಲ್ಲ ಎಂಬುದಾಗಿ ಅನಿಸುವದು. ಆದ್ದರಿಂದ ಇತರ ಜನಾಂಗಗಳು ನಿನ್ನ ರಕ್ತವನ್ನು ಸುರಿಸುತ್ತವೆ. ನೀನು ಕೊನೆಗೊಳ್ಳುವೆ.


ಯೆಹೋವನು ಹೀಗೆನ್ನುತ್ತಾನೆ: “ಕೆಲವು ಜನರು ದಂಡನೆಗೆ ಅರ್ಹರಾಗಿರುವದಿಲ್ಲ. ಆದರೂ ಅವರು ಕಷ್ಟ ಅನುಭವಿಸುವರು. ಎದೋಮೇ, ನೀನು ದಂಡನೆಗೆ ಯೋಗ್ಯಳಾಗಿರುವೆ. ಆದ್ದರಿಂದ ನಿಜವಾಗಿಯೂ ನಿನ್ನನ್ನು ದಂಡಿಸಲಾಗುವುದು. ನಿನಗೆ ಸಿಗಬೇಕಾದ ದಂಡನೆಯಿಂದ ನೀನು ತಪ್ಪಿಸಿಕೊಳ್ಳಲಾರೆ. ನಿನ್ನನ್ನು ದಂಡಿಸಲಾಗುವುದು.”


ಜೀವನ ಸುಖಕರವಾಗಿರುವಾಗ ಜನರು ಈ ರೀತಿ ವರ್ತಿಸಿದರೆ, ಜೀವನ ಕಷ್ಟಕರವಾದಾಗ ಏನು ಮಾಡುವರು?” ಎಂದು ಹೇಳಿದನು.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ: “ಖಡ್ಗವೇ, ಕುರುಬನನ್ನು ಹೊಡೆ. ನನ್ನ ಸ್ನೇಹಿತನಿಗೆ ಹೊಡೆ. ಕುರುಬನನ್ನು ಹೊಡೆ. ಆಗ ಕುರಿಗಳು ಚದರಿಹೋಗುವವು. ಮತ್ತು ನಾನು ಆ ಚಿಕ್ಕವುಗಳನ್ನು ಶಿಕ್ಷಿಸುವೆನು.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಭಯಂಕರವಾದ ನಾಲ್ಕು ದಂಡನೆಗಳನ್ನು ನಾನು ಜೆರುಸಲೇಮ್ ಪಟ್ಟಣದ ಮೇಲೆ ಕಳುಹಿಸುವೆನು. ಆದ್ದರಿಂದ ಜೆರುಸಲೇಮಿಗೆ ಇನ್ನೂ ಎಷ್ಟು ಹೆಚ್ಚಾಗಿ ಕಷ್ಟಕರವಾಗಬಹುದೆಂದು ಯೋಚಿಸಿರಿ. ನಾನು ಆ ನಗರದ ವಿರುದ್ಧವಾಗಿ ಶತ್ರು ಸೈನಿಕರನ್ನು, ಹಸಿವೆ, ರೋಗ ಮತ್ತು ಕ್ರೂರಜಂತುಗಳನ್ನು ಕಳುಹಿಸುತ್ತೇನೆ. ದೇಶದಲ್ಲಿರುವ ಎಲ್ಲಾ ಜನರನ್ನೂ ಪಶುಗಳನ್ನೂ ನಿರ್ಮೂಲ ಮಾಡುವೆನು.


ದೇವರು ಹೇಳಿದ್ದೇನೆಂದರೆ, “ಒಂದುವೇಳೆ, ಅವರ ವಿರುದ್ಧ ಹೋರಾಡಲು ನಾನು ಶತ್ರುಸೈನ್ಯವೊಂದನ್ನು ಕಳುಹಿಸಿದರೆ, ಎಲ್ಲಾ ಜನರು ಮತ್ತು ಎಲ್ಲಾ ಪ್ರಾಣಿಗಳು ನಾಶವಾಗುತ್ತಿದ್ದವು.


ಯೆಹೋವನು ಹೀಗೆನ್ನುತ್ತಾನೆ: “ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ. ನಾನು ನಿನ್ನ ಜೊತೆಯಲ್ಲಿದ್ದೇನೆ. ನಾನು ನಿನ್ನನ್ನು ಅನೇಕ ಸ್ಥಳಗಳಿಗೆ ಕಳುಹಿಸಿದೆ. ನಾನು ಆ ಜನಾಂಗಗಳನ್ನೆಲ್ಲ ಸಂಪೂರ್ಣವಾಗಿ ನಾಶಮಾಡುತ್ತೇನೆ. ಆದರೆ ನಿನ್ನನ್ನು ನಾನು ಸಂಪೂರ್ಣವಾಗಿ ನಾಶಮಾಡುವದಿಲ್ಲ. ನೀನು ಮಾಡಿದ ದುಷ್ಕೃತ್ಯಗಳಿಗಾಗಿ ನಿನಗೆ ಶಿಕ್ಷೆ ಆಗಲೇಬೇಕು. ಆದ್ದರಿಂದ ನೀನು ದಂಡನೆಯಿಂದ ತಪ್ಪಿಸಿಕೊಳ್ಳಲು ನಾನು ಬಿಡುವದಿಲ್ಲ. ನಾನು ನಿನಗೆ ಸರಿಯಾಗಿ ಬುದ್ಧಿ ಕಲಿಸುತ್ತೇನೆ, ಆದರೆ ನ್ಯಾಯವಂತನಾಗಿರುವೆನು.”


“ಇಸ್ರೇಲರೇ, ಯೆಹೂದ್ಯರೇ ನಾನು ನಿಮ್ಮೊಂದಿಗಿದ್ದೇನೆ. ನಾನು ನಿಮ್ಮನ್ನು ರಕ್ಷಿಸುತ್ತೇನೆ. ನಾನು ನಿಮ್ಮನ್ನು ಆ ಜನಾಂಗಗಳ ಬಳಿಗೆ ಕಳುಹಿಸಿದೆ. ಆದರೆ ನಾನು ಆ ಎಲ್ಲಾ ಜನಾಂಗಗಳನ್ನು ಸಂಪೂರ್ಣವಾಗಿ ನಾಶಮಾಡುವೆನು. ಇದು ನಿಜ. ನಾನು ಆ ಜನಾಂಗಗಳನ್ನು ನಾಶಮಾಡುವೆನು. ಆದರೆ ನಾನು ನಿಮ್ಮನ್ನು ನಾಶಮಾಡುವದಿಲ್ಲ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಿಮಗೆ ದಂಡನೆಯಾಗಲೇಬೇಕು. ನಾನು ನಿಮ್ಮನ್ನು ಸರಿಯಾಗಿ ಶಿಕ್ಷಿಸುತ್ತೇನೆ.”


ಆಗ ನೀನು ಅವರಿಗೆ, ‘ಯೆಹೋವನು ಹೀಗೆ ಹೇಳುತ್ತಾನೆ ಎಂದು ಹೇಳು. ಈ ಪ್ರದೇಶದಲ್ಲಿ ವಾಸಮಾಡುವ ಪ್ರತಿಯೊಬ್ಬ ಮನುಷ್ಯನನ್ನು ಕುಡಿದು ಮತ್ತನಾದವನಂತೆ ಅಸಹಾಯಕನನ್ನಾಗಿ ಮಾಡುತ್ತೇನೆ. ನಾನು ದಾವೀದನ ಸಿಂಹಾಸನದ ಮೇಲೆ ಕುಳಿತುಕೊಳ್ಳುವ ರಾಜರ ಬಗ್ಗೆ ಹೇಳುತ್ತಿದ್ದೇನೆ. ನಾನು ಯಾಜಕರ, ಪ್ರವಾದಿಗಳ ಮತ್ತು ಜೆರುಸಲೇಮಿನಲ್ಲಿ ವಾಸಿಸುವ ಎಲ್ಲಾ ಜನರ ಬಗ್ಗೆಯೂ ಹೇಳುತ್ತಿದ್ದೇನೆ.


ಜೆರುಸಲೇಮಿಗೂ ಚೀಯೋನ್ ಪರ್ವತಕ್ಕೂ ಮಾಡಬೇಕೆಂದಿರುವ ಕಾರ್ಯಗಳನ್ನು ನನ್ನ ಒಡೆಯನು ಮಾಡಿ ತೀರಿಸುವನು. ಆ ಬಳಿಕ ಯೆಹೋವನು ಅಶ್ಶೂರವನ್ನು ಶಿಕ್ಷಿಸುವನು. ಅಶ್ಶೂರದ ಅರಸನು ಬಹಳವಾಗಿ ಉಬ್ಬಿಕೊಂಡಿರುತ್ತಾನೆ. ಅವನ ಗರ್ವವು ಅನೇಕ ದುಷ್ಕೃತ್ಯಗಳನ್ನು ನಡೆಸಿದೆ. ಅದಕ್ಕಾಗಿ ದೇವರು ಅವನನ್ನು ಶಿಕ್ಷಿಸುವನು.


ಬಡವನನ್ನು ಗೇಲಿಮಾಡಿದರೆ ಅವನನ್ನು ನಿರ್ಮಿಸಿದ ದೇವರಿಗೇ ಅವಮಾನಮಾಡಿದಂತಾಗುವುದು. ಬೇರೊಬ್ಬನ ದುರಾವಸ್ಥೆಯಲ್ಲಿ ಸಂತೋಷಪಡುವವರಿಗೆ ದಂಡನೆಯು ಖಂಡಿತ.


ದುಷ್ಟರಿಗೆ ದಂಡನೆ ಖಂಡಿತ. ಶಿಷ್ಟರಿಗೆ ಬಿಡುಗಡೆ ನಿಶ್ಚಯ.


ನಿನ್ನ ಜೊತೆಯಲ್ಲಿದ್ದ ಜನರಿಗೆ ಹೇಳು, ‘ಯೆಹೂದದ ರಾಜನೇ, ಜೆರುಸಲೇಮಿನ ಜನರೇ, ಯೆಹೋವನ ಈ ಸಂದೇಶವನ್ನು ಕೇಳಿರಿ. ಇಸ್ರೇಲರ ದೇವರೂ ಸರ್ವಶಕ್ತನಾದ ಯೆಹೋವನೂ ಹೀಗೆ ಹೇಳುತ್ತಾನೆ: ನಾನು ಈ ಸ್ಥಳಕ್ಕೆ ಒಂದು ಭಯಂಕರವಾದ ಕೇಡನ್ನು ಉಂಟುಮಾಡುವೆನು. ಅದರ ಬಗ್ಗೆ ಕೇಳಿದ ಪ್ರತಿಯೊಬ್ಬ ವ್ಯಕ್ತಿಯು ವಿಸ್ಮಯಪಡುವನು ಮತ್ತು ಭಯಪಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು