ಯೆರೆಮೀಯ 25:3 - ಪರಿಶುದ್ದ ಬೈಬಲ್3 ಕಳೆದ ಇಪ್ಪತ್ಮೂರು ವರ್ಷಗಳಿಂದ ನಾನು ನಿಮಗೆ ಮತ್ತೆಮತ್ತೆ ಯೆಹೋವನ ಸಂದೇಶವನ್ನು ಕೊಡುತ್ತಿದ್ದೇನೆ. ಅಮೋನನ ಮಗನಾದ ಯೋಷೀಯನು ಯೆಹೂದದ ರಾಜನಾದ ಹದಿಮೂರನೆ ವರ್ಷದಿಂದ ನಾನು ಪ್ರವಾದಿಯಾಗಿದ್ದೇನೆ. ಅಂದಿನಿಂದ ಇಂದಿನವರೆಗೆ ನಾನು ಯೆಹೋವನ ಸಂದೇಶಗಳನ್ನು ನಿಮಗೆ ತಿಳಿಸುತ್ತಾ ಬಂದಿದ್ದೇನೆ. ಆದರೆ ನೀವು ಕಿವಿಗೆ ಹಾಕಿಕೊಂಡಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆತನು, “ಆಮೋನನ ಮಗನೂ ಯೆಹೂದದ ಅರಸನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಿಂದ ಈ ದಿನದವರೆಗೆ, ಇಪ್ಪತ್ತಮೂರು ವರ್ಷಗಳಿಂದಲೂ ಯೆಹೋವನು ತನ್ನ ವಾಕ್ಯವನ್ನು ನನಗೆ ದಯಪಾಲಿಸಿದ್ದಾನೆ; ಅದನ್ನು ನಿಮಗೆ ಪ್ರಕಟಿಸುತ್ತಲೇ ಬಂದಿದ್ದೇನೆ; ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 “ಆಮೋನನ ಮಗನೂ ಜುದೇಯದ ಅರಸನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೇ ವರ್ಷದಿಂದ ಈ ದಿನದವರೆಗೆ, ಅಂದರೆ ಕಳೆದ ಇಪ್ಪತ್ತು ಮೂರು ವರ್ಷಗಳಿಂದ ಸರ್ವೇಶ್ವರ ಸ್ವಾಮಿ ತಮ್ಮ ವಾಕ್ಯವನ್ನು ನನಗೆ ತಿಳಿಸಿದ್ದಾರೆ. ಅದನ್ನು ನಾನು ನಿಮಗೆ ತಡಮಾಡದೆ ಪ್ರಕಟಿಸುತ್ತಾ ಬಂದಿದ್ದೇನೆ. ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆಮೋನನ ಮಗನೂ ಯೆಹೂದದ ಅರಸನೂ ಆದ ಯೋಷೀಯನ ಆಳಿಕೆಯ ಹದಿಮೂರನೆಯ ವರುಷದಿಂದ ಈ ದಿನದವರೆಗೆ, ಇಪ್ಪತ್ತುಮೂರು ವರುಷಗಳಿಂದಲೂ ಯೆಹೋವನು ತನ್ನ ವಾಕ್ಯವನ್ನು ನನಗೆ ದಯಪಾಲಿಸುತ್ತಿದ್ದಾನೆ; ಅದನ್ನು ನಿಮಗೆ ಸಾವಕಾಶಮಾಡದೆ ಪ್ರಕಟಿಸುತ್ತಾ ಬಂದಿದ್ದೇನೆ; ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಮೋನನ ಮಗನೂ, ಯೆಹೂದದ ಅರಸನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಿಂದ ಈ ದಿವಸದವರೆಗೆ ಅಂದರೆ, ಕಳೆದ ಇಪ್ಪತ್ತಮೂರು ವರ್ಷಗಳಿಂದ ಯೆಹೋವ ದೇವರು ತಮ್ಮ ವಾಕ್ಯವನ್ನು ನನಗೆ ತಿಳಿಸಿದ್ದಾರೆ. ಅದನ್ನು ನಾನು ನಿಮಗೆ ತಡಮಾಡದೆ ಪ್ರಕಟಿಸುತ್ತಾ ಬಂದಿದ್ದೇನೆ. ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ. ಅಧ್ಯಾಯವನ್ನು ನೋಡಿ |
ತನ್ನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಯೋಷೀಯನು ಶಾಫಾನ್, ಮಾಸೇಯ ಮತ್ತು ಯೋವಾಹ ಇವರನ್ನು ತನ್ನ ದೇವರಾದ ಯೆಹೋವನ ಆಲಯವನ್ನು ಸರಿಪಡಿಸಲು ಕಳುಹಿಸಿದನು. ಶಾಫಾನನ ತಂದೆಯ ಹೆಸರು ಅಚಲ್ಯ. ಮಾಸೇಯನು ನಗರದ ನಾಯಕನಾಗಿದ್ದನು. ಯೋವಾಹನ ತಂದೆಯ ಹೆಸರು ಯೆಹೋವಾಹಾಜ್. ಯೋವಾಹನು ರಾಜಲೇಖಕನೂ ಆಗಿದ್ದನು. ಯೆಹೂದವನ್ನು ಮತ್ತು ದೇವಾಲಯವನ್ನು ಶುಚಿಮಾಡುವ ಉದ್ದೇಶದಿಂದ ಯೋಷೀಯನು ದೇವಾಲಯದ ದುರಸ್ತಿಕಾರ್ಯಕ್ಕೆ ಕೈ ಹಾಕಿದನು.
ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಇಸ್ರೇಲಿಗೆ ಮತ್ತು ಯೆಹೂದಕ್ಕೆ ಕಳುಹಿಸಿಕೊಟ್ಟೆ. ನಾನು ಅವರನ್ನು ನಿಮ್ಮಲ್ಲಿಗೆ ಪುನಃಪುನಃ ಕಳುಹಿಸಿಕೊಟ್ಟೆ. ಆ ಪ್ರವಾದಿಗಳು, “ಇಸ್ರೇಲಿನ ಮತ್ತು ಯೆಹೂದದ ಪ್ರತಿಯೊಬ್ಬರೂ ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಬೇಕು. ನೀವು ಒಳ್ಳೆಯವರಾಗಿರಬೇಕು. ಬೇರೆ ದೇವರುಗಳನ್ನು ಅನುಸರಿಸಬಾರದು. ಅವುಗಳನ್ನು ಪೂಜಿಸಬಾರದು. ಅವುಗಳ ಸೇವೆಮಾಡಬಾರದು ಎಂದು ಹೇಳಿದರು. ನನ್ನ ಆಜ್ಞೆಯನ್ನು ಪಾಲಿಸಿದರೆ ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಕೊಟ್ಟ ಪ್ರದೇಶದಲ್ಲಿ ನೀವು ವಾಸಿಸಬಹುದು” ಎಂದು ಹೇಳಿದ್ದೆ. ಆದರೆ ನೀವು ನನ್ನ ಸಂದೇಶದ ಕಡೆಗೆ ಗಮನ ಕೊಡಲಿಲ್ಲ.
‘ರೇಕಾಬನ ಮಗನಾದ ಯೋನಾದಾಬನು ತನ್ನ ಮಕ್ಕಳಿಗೆ ದ್ರಾಕ್ಷಾರಸವನ್ನು ಕುಡಿಯಬೇಡಿರೆಂದು ಹೇಳಿದನು. ಅವನ ಆಜ್ಞೆಯನ್ನು ಪಾಲಿಸಲಾಗಿದೆ. ಇಂದಿನವರೆಗೂ ಯೋನಾದಾಬನ ಸಂತಾನದವರು ತಮ್ಮ ಪೂರ್ವಿಕರ ಆಜ್ಞೆಯನ್ನು ಪಾಲಿಸಿದ್ದಾರೆ. ಅವರು ದ್ರಾಕ್ಷಾರಸವನ್ನು ಕುಡಿಯುವುದಿಲ್ಲ. ನಾನೇ ನಿಮ್ಮ ದೇವರಾದ ಯೆಹೋವನು. ನಾನು ಯೆಹೂದದ ಜನರಾದ ನಿಮಗೆ ಮತ್ತೆಮತ್ತೆ ಸಂದೇಶಗಳನ್ನು ಕೊಟ್ಟಿದ್ದೇನೆ. ಆದರೆ ನೀವು ನನ್ನ ಆಜ್ಞೆಗಳನ್ನು ಪಾಲಿಸಲಿಲ್ಲ.
ಇಸ್ರೇಲ್ ಮತ್ತು ಯೆಹೂದಗಳನ್ನು ಎಚ್ಚರಿಸಲು ಯೆಹೋವನು ಪ್ರತಿಯೊಬ್ಬ ಪ್ರವಾದಿಯನ್ನು ಮತ್ತು ದೇವದರ್ಶಿಯನ್ನು ಬಳಸಿಕೊಂಡನು. ಯೆಹೋವನು, “ನಿಮ್ಮ ಕೆಟ್ಟಕಾರ್ಯಗಳಿಂದ ದೂರವಾಗಿ! ನನ್ನ ಆಜ್ಞೆಗಳಿಗೆ ಮತ್ತು ಧರ್ಮಶಾಸ್ತ್ರಗಳಿಗೆ ವಿಧೇಯತೆಯಿಂದಿರಿ. ನಿಮ್ಮ ಪೂರ್ವಿಕರಿಗೆ ನಾನು ನೀಡಿದ ಕಟ್ಟಳೆಗಳನ್ನೆಲ್ಲಾ ಅನುಸರಿಸಿ. ನಾನು ನನ್ನ ಸೇವಕರಾದ ಪ್ರವಾದಿಗಳ ಮೂಲಕ ಇವುಗಳನ್ನು ನೀಡಿದ್ದೇನೆ” ಎಂದು ಹೇಳಿದ್ದನು.