Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 25:30 - ಪರಿಶುದ್ದ ಬೈಬಲ್‌

30 “ಯೆರೆಮೀಯನೇ, ನೀನು ಅವರಿಗೆ ಈ ಸಂದೇಶವನ್ನು ಕೊಡು: ‘ಉನ್ನತವಾದ ಮತ್ತು ಪವಿತ್ರವಾದ ಆಲಯದಿಂದ ಯೆಹೋವನು ಗರ್ಜಿಸುವನು. ಯೆಹೋವನು ಗಟ್ಟಿಯಾಗಿ ಗರ್ಜಿಸಿ ತನ್ನ ಹುಲ್ಲುಗಾವಲಿನ ಮಂದೆಯನ್ನು ಬೆದರಿಸುವನು. ದ್ರಾಕ್ಷಾರಸವನ್ನು ತಯಾರಿಸುವಾಗ ದ್ರಾಕ್ಷೆಯ ಹಣ್ಣನ್ನು ತುಳಿಯುವವರು ಕೂಗಾಡುವಂತೆ ಭಯಂಕರವಾಗಿ ಕೂಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಇಂತಿರಲು ನೀನು ಪ್ರವಾದಿಸುತ್ತಾ ಈ ಮಾತುಗಳನ್ನೆಲ್ಲಾ ಅವರಿಗೆ ಹೇಳು, “ಯೆಹೋವನು ಉನ್ನತಲೋಕದಿಂದ ಗರ್ಜಿಸುವನು, ತನ್ನ ಘನನಿವಾಸದಿಂದ ಧ್ವನಿಗೈಯುವನು. ಆತನು ಗಟ್ಟಿಯಾಗಿ ಗರ್ಜಿಸಿ, ತನ್ನ ಹುಲ್ಗಾವಲಿನ ಮಂದೆಯನ್ನು ಬೆದರಿಸುವನು. ದ್ರಾಕ್ಷಿಯ ಹಣ್ಣನ್ನು ತುಳಿಯುವವರು ಕೂಗಾಡುವಂತೆ ಭೂನಿವಾಸಿಗಳೆಲ್ಲರಿಗೂ ಭಯಂಕರನಾಗಿ ಕೂಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 “(ಯೆರೆಮೀಯನೇ), ನೀನು ಪ್ರವಾದಿಸುತ್ತಾ ಅವರಿಗೆ ಈ ಮಾತುಗಳನ್ನು ಹೇಳು: ‘ಸರ್ವೇಶ್ವರ ಗರ್ಜಿಸುವನು ಮೇಲಣಲೋಕದಿಂದ ದನಿಗೈವನು ತನ್ನ ಘನ ನಿವಾಸದಿಂದ ಗಟ್ಟಿಯಾಗಿ ಕೂಗುವನು ತನ್ನ ಹುಲ್ಲುಗಾವಲಿನ ಮಂದೆಯ ವಿರುದ್ಧ ಕೂಗಾಡುವನು ದ್ರಾಕ್ಷೆಯ ಹಣ್ಣನ್ನು ತುಳಿಯುವವರಂತೆ ಭೂನಿವಾಸಿಗಳೆಲ್ಲರು ಭಯಭ್ರಾಂತರಾಗುವಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಇಂತಿರಲು ನೀನು ಪ್ರವಾದಿಸುತ್ತಾ ಈ ಮಾತುಗಳನ್ನೆಲ್ಲಾ ಅವರಿಗೆ ಹೇಳು - ಯೆಹೋವನು ಉನ್ನತಲೋಕದಿಂದ ಗರ್ಜಿಸುವನು, ತನ್ನ ಘನನಿವಾಸದಿಂದ ದನಿಗೈಯುವನು; ಆತನು ಗಟ್ಟಿಯಾಗಿ ಗರ್ಜಿಸಿ ತನ್ನ ಹುಲ್ಗಾವಲಿನ ಮಂದೆಯನ್ನು ಬೆದರಿಸುವನು; ದ್ರಾಕ್ಷೆಯ ಹಣ್ಣನ್ನು ತುಳಿಯುವವರು ಕೂಗಾಡುವಂತೆ ಭೂನಿವಾಸಿಗಳೆಲ್ಲರಿಗೂ ಭಯಂಕರನಾಗಿ ಕೂಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 “ಆದ್ದರಿಂದ ನೀನು ಅವರಿಗೆ ವಿರೋಧವಾಗಿ ಈ ವಾಕ್ಯಗಳನ್ನೆಲ್ಲಾ ಪ್ರವಾದಿಸಿ, ಅವರಿಗೆ ಹೇಳತಕ್ಕದ್ದೇನೆಂದರೆ, “ ‘ಯೆಹೋವ ದೇವರು ಉನ್ನತದಿಂದ ಗರ್ಜಿಸಿ, ತಮ್ಮ ಪರಿಶುದ್ಧ ನಿವಾಸದೊಳಗಿಂದ ತಮ್ಮ ಶಬ್ದವನ್ನು ಕೊಡುವರು. ತಮ್ಮ ನಿವಾಸದ ಮೇಲೆ ಗಟ್ಟಿಯಾಗಿ ಗರ್ಜಿಸಿ, ದ್ರಾಕ್ಷಿ ತುಳಿಯುವವರ ಹಾಗೆ ಆರ್ಭಟವನ್ನು ಭೂನಿವಾಸಿಗಳೆಲ್ಲರಿಗೆ ವಿರೋಧವಾಗಿ ಎತ್ತುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 25:30
25 ತಿಳಿವುಗಳ ಹೋಲಿಕೆ  

ಆಮೋಸನು ಹೇಳಿದ್ದೇನೆಂದರೆ, “ಚೀಯೋನಿನಲ್ಲಿ ಯೆಹೋವನು ಸಿಂಹದಂತೆ ಗರ್ಜಿಸುವನು. ಜೆರುಸಲೇಮಿನಿಂದ ಆರ್ಭಟಿಸುತ್ತಾನೆ. ಆಗ ಕುರುಬರ ಹಸಿರು ಹುಲ್ಲುಗಾವಲು ಕಂದುಬಣ್ಣವಾಗಿ ಸಾಯುವುದು. ಕರ್ಮೆಲ್ ಬೆಟ್ಟವು ಒಣಗಿ ಬರಡಾಗುವುದು.”


ಚೀಯೋನಿನಿಂದ ದೇವರಾದ ಯೆಹೋವನು ಆರ್ಭಟಿಸುವನು. ಜೆರುಸಲೇಮಿನಿಂದ ಆತನು ಗರ್ಜಿಸುವನು. ಆಗ ಭೂಮ್ಯಾಕಾಶಗಳು ನಡುಗುವವು. ಆದರೆ ಯೆಹೋವನ ಜನರಿಗೆ ಆತನೇ ಆಶ್ರಯ ಸ್ಥಳವಾಗುವನು. ಆತನು ಇಸ್ರೇಲರಿಗೆ ಸುರಕ್ಷಿತ ಸ್ಥಳವಾಗುವನು.


ಯೆಹೋವನು ಯುದ್ಧವೀರನಂತೆ ಹೊರಡುವನು. ಆತನು ಯುದ್ಧಮಾಡಲು ತಯಾರಾಗಿರುವ ಶೂರನಂತಿದ್ದಾನೆ. ಆತನು ಉತ್ಸಾಹದಿಂದ ಗಟ್ಟಿಯಾಗಿ ಕೂಗುತ್ತಾ ತನ್ನ ವೈರಿಗಳನ್ನು ಸೋಲಿಸುವನು.


ದ್ರಾಕ್ಷಾಫಲವು ನಾಶವಾಗಿರುವದಕ್ಕಾಗಿ ನಾನು ಯೆಜ್ಜೇರ್ ಮತ್ತು ಸಿಬ್ಮದವರೊಂದಿಗೆ ಅಳುವೆನು. ಸುಗ್ಗಿ ಇಲ್ಲದಿರುವದಕ್ಕಾಗಿ ನಾನು ಹೆಷ್ಬೋನ್ ಮತ್ತು ಎಲೆಯಾಲೆಯ ಜನರೊಂದಿಗೆ ಅಳುವೆನು. ಬೇಸಿಗೆ ಕಾಲದ ಹಣ್ಣುಗಳಿರದು; ಹರ್ಷಧ್ವನಿಯೂ ಇರದು.


ಕುದುರೆಯ ಮೇಲೆ ಕುಳಿತಿದ್ದಾತನ ಬಾಯಿಂದ ಹರಿತವಾದ ಕತ್ತಿಯೊಂದು ಹೊರಗೆ ಬರುತ್ತಿತ್ತು. ಆತನು ಜನಾಂಗಗಳನ್ನು ಸೋಲಿಸಲು ಈ ಕತ್ತಿಯನ್ನು ಬಳಸುತ್ತಾನೆ. ಆತನು ಕಬ್ಬಿಣದ ಕೋಲಿನಿಂದ ಜನಾಂಗಗಳನ್ನು ಆಳುತ್ತಾನೆ. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ಆಲೆಯಲ್ಲಿ ದ್ರಾಕ್ಷಿಯನ್ನು ಕಿವುಚಿ ಹಾಕುತ್ತಾನೆ.


ಎಲ್ಲರೂ ಮೌನವಾಗಿರಿ. ಯೆಹೋವನು ತನ್ನ ಪರಿಶುದ್ಧ ನಿವಾಸದಿಂದ ಹೊರಬರುತ್ತಿದ್ದಾನೆ.


ಸಿಂಹವು ಗರ್ಜಿಸಿದಾಗ ಜನರಿಗೆ ಭಯವಾಗುವುದು. ಯೆಹೋವನು ಮಾತನಾಡಿದಾಗ ಪ್ರವಾದಿಗಳು ಪ್ರವಾದಿಸುವರು.


ಯಾಕೆಂದರೆ ನಾನು ಎಫ್ರಾಯೀಮನಿಗೆ ಸಿಂಹದಂತಿರುವೆನು. ಯೆಹೂದ ಜನಾಂಗದವರಿಗೆ ನಾನು ಪ್ರಾಯದ ಸಿಂಹದಂತಿರುವೆನು. ಹೌದು, ಯೆಹೋವನಾದ ನಾನು ಅವರನ್ನು ಹರಿದು ಚೂರುಚೂರಾಗಿ ಮಾಡುವೆನು. ನಾನು ಅವರನ್ನು ಎತ್ತಿಕೊಂಡು ಹೋಗುವೆನು. ಯಾರೂ ಅವರನ್ನು ನನ್ನಿಂದ ರಕ್ಷಿಸಲಾರರು.


ಮೋವಾಬಿನ ದೊಡ್ಡದೊಡ್ಡ ದ್ರಾಕ್ಷಿತೋಟಗಳಿಂದ ಹರ್ಷವೂ ಆನಂದವೂ ಕಣ್ಮರೆಯಾಗಿವೆ. ದ್ರಾಕ್ಷಿಗಾಣದಿಂದ ದ್ರಾಕ್ಷಾರಸ ಹರಿಯುವದನ್ನು ನಾನು ನಿಲ್ಲಿಸಿದ್ದೇನೆ. ದ್ರಾಕ್ಷಾರಸವನ್ನು ಮಾಡಲು ದ್ರಾಕ್ಷಿಯನ್ನು ತುಳಿಯುವ ಜನರ ಹಾಡು ಮತ್ತು ನೃತ್ಯ ಕಂಡುಬರುವದಿಲ್ಲ. ಸಂತೋಷದ ಧ್ವನಿ ಕೇಳಿಬರುತ್ತಿಲ್ಲ.


ಆದಿಯಿಂದ ನಮ್ಮ ಪವಿತ್ರಾಲಯವು ಯೆಹೋವನ ಮಹತ್ವದ ಸಿಂಹಾಸವಾಗಿದೆ. ಅದೊಂದು ಬಹಳ ಪ್ರಮುಖವಾದ ಸ್ಥಳವಾಗಿದೆ.


“ಇದು ನನ್ನ ಶಾಶ್ವತ ನಿವಾಸಸ್ಥಾನ. ನಾನು ಇಲ್ಲೇ ಆಸನಾರೂಢನಾಗಿರುವೆನು. ಇದೇ ನನಗೆ ಇಷ್ಟವಾದ ಸ್ಥಳ.


ಕೊನೆಗೆ, ನಿದ್ದೆಯಿಂದ ಎಚ್ಚರಗೊಳ್ಳುತ್ತಿರುವ ಮನುಷ್ಯನಂತೆಯೂ ಅಮಲಿಳಿದು ಎಚ್ಚರಗೊಳ್ಳುತ್ತಿರುವ ಸೈನಿಕನಂತೆಯೂ ನಮ್ಮ ಯೆಹೋವನು ಎದ್ದನು.


ಕಿವುಡು ನಾಗರಹಾವುಗಳು ಹಾವಾಡಿಗರ ಕೊಳಲ ನಾದವನ್ನು ಕೇಳಲಾರವು. ಆ ದುಷ್ಟರು ದುಷ್ಟಾಲೋಚನೆಗಳನ್ನು ಮಾಡುವಾಗ ಕಿವುಡು ನಾಗರಹಾವುಗಳಂತಿರುವರು.


ಯೆಹೋವನು ತನ್ನ ಪವಿತ್ರ ಆಲಯದಲ್ಲಿದ್ದಾನೆ. ಆತನು ಪರಲೋಕದಲ್ಲಿ ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ಮನುಷ್ಯರ ಕಾರ್ಯಗಳನ್ನು ಗಮನಿಸುತ್ತಿದ್ದಾನೆ. ಆತನ ಕಣ್ಣುಗಳು ಅವರನ್ನು ಪರಿಶೋಧಿಸುತ್ತಿವೆ.


ಯಾಜಕರು ಮತ್ತು ಲೇವಿಯರು ಎದ್ದುನಿಂತು ಜನರನ್ನು ಯೆಹೋವನು ಆಶೀರ್ವದಿಸುವಂತೆ ಕೇಳಿಕೊಂಡರು. ದೇವರು ಪರಲೋಕದ ತನ್ನ ಪವಿತ್ರ ನಿವಾಸಕ್ಕೆ ಬಂದ ಆ ಪ್ರಾರ್ಥನೆಗೆ ಕಿವಿಗೊಟ್ಟನು.


ಯೆಹೋವನು ಅವನಿಗೆ ಹೀಗೆ ಹೇಳಿದನು: “ನಿನ್ನ ಪ್ರಾರ್ಥನೆಯು ನನಗೆ ಕೇಳಿಸಿತು. ನಿನ್ನ ಬಿನ್ನಹಗಳನ್ನು ಆಲಿಸಿದೆನು. ಈ ಆಲಯವನ್ನು ನೀನು ಕಟ್ಟಿಸಿದೆ. ನಾನು ಅದನ್ನು ಪವಿತ್ರಸ್ಥಳವನ್ನಾಗಿ ಮಾಡಿದೆ. ಆದ್ದರಿಂದ ನಾನಿಲ್ಲಿ ಸದಾಕಾಲ ಸನ್ಮಾನಿಸಲ್ಪಡುವೆನು. ನನ್ನ ದೃಷ್ಟಿಯೂ ಮನಸ್ಸೂ ಸದಾ ಅದರ ಮೇಲಿರುತ್ತದೆ.


ನಿನ್ನ ಪರಿಶುದ್ಧ ನಿವಾಸದಿಂದ ನನ್ನನ್ನು ನೋಡು. ನಿನ್ನ ಜನಾಂಗವಾದ ಇಸ್ರೇಲನ್ನು ಆಶೀರ್ವದಿಸು. ನೀನು ನಮಗೆ ಕೊಟ್ಟಿರುವ ದೇಶವನ್ನು ಆಶೀರ್ವದಿಸು. ಸಮೃದ್ಧಿಯಿಂದ ಕೂಡಿದ ಈ ದೇಶವನ್ನು ನಮಗೆ ಕೊಡುವೆ ಎಂದು ನಮ್ಮ ಪೂರ್ವಿಕರಿಗೆ ನೀನು ವಾಗ್ದಾನ ಮಾಡಿರುವೆ.’


ರಾಜನಾದ ದಾವೀದನು ಚಾದೋಕನಿಗೆ, “ದೇವರ ಪವಿತ್ರ ಪೆಟ್ಟಿಗೆಯನ್ನು ಜೆರುಸಲೇಮಿಗೆ ಮತ್ತೆ ತೆಗೆದುಕೊಂಡು ಹೋಗು. ಯೆಹೋವನು ನನಗೆ ದಯಾಪರನಾಗಿದ್ದರೆ, ನನ್ನನ್ನು ಮತ್ತೆ ಬರಮಾಡುತ್ತಾನೆ. ಜೆರುಸಲೇಮನ್ನು ಮತ್ತು ಆತನ ಆಲಯವನ್ನು ಮತ್ತೆ ನಾನು ನೋಡುವ ಹಾಗೆ ಯೆಹೋವನು ಮಾಡುತ್ತಾನೆ.


ಆತನು ಗರ್ಜಿಸಲು, ಜನಾಂಗಗಳು ಭಯದಿಂದ ನಡುಗುತ್ತವೆ, ರಾಷ್ಟ್ರಗಳು ಬಿದ್ದುಹೋಗುತ್ತವೆ; ಭೂಮಿಯು ಕರಗಿಹೋಗುವುದು.


ನಿನ್ನ ಬಲಯುತವಾದ ಸ್ವರವು ಜನರಿಗೆ ಹೆದರಿಕೆಯನ್ನು ಉಂಟುಮಾಡುತ್ತದೆ, ಅವರು ನಿನ್ನಿಂದ ಓಡಿಹೋಗುವರು. ನಿನ್ನ ಮಹೋನ್ನತೆಯು ಜನಾಂಗಗಳನ್ನು ದಿಕ್ಕಾಪಾಲಾಗಿ ಮಾಡುತ್ತದೆ.”


ಯೆಹೋವನು, ತನ್ನ ಗುಹೆಯಿಂದ ಹೊರಬರುತ್ತಿರುವ ಭಯಂಕರವಾದ ಸಿಂಹದಂತಿದ್ದಾನೆ. ಯೆಹೋವನು ಕೋಪಗೊಂಡಿದ್ದಾನೆ. ಯೆಹೋವನ ಕೋಪವು ಆ ಜನರನ್ನು ಪೀಡಿಸುವುದು. ಅವರ ದೇಶವು ಬರಿದಾದ ಮರುಭೂಮಿಯಾಗುವುದು.


ನಾನು ಸಿಂಹದಂತೆ ಗರ್ಜಿಸುವೆನು. ನಾನು ಗರ್ಜಿಸುವಾಗ ನನ್ನ ಮಕ್ಕಳು ಬರುವರು ಮತ್ತು ನನ್ನನ್ನು ಹಿಂಬಾಲಿಸುವರು. ಪಶ್ಚಿಮದಿಂದ ನನ್ನ ಮಕ್ಕಳು ಹೆದರಿ ನಡುಗುತ್ತಾ ಬರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು