Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 25:31 - ಪರಿಶುದ್ದ ಬೈಬಲ್‌

31 ಆ ಧ್ವನಿಯು ಭೂಲೋಕದ ಎಲ್ಲಾ ಕಡೆಗೂ ಹಬ್ಬುತ್ತದೆ. ಈ ಧ್ವನಿಯೆಲ್ಲಾ ಏತಕ್ಕೆ? ಯೆಹೋವನು ಎಲ್ಲಾ ಜನಾಂಗದ ಜನರನ್ನು ದಂಡಿಸುತ್ತಿದ್ದಾನೆ. ಯೆಹೋವನು ಜನರ ವಿರುದ್ಧ ತನ್ನ ವಾದವನ್ನು ಹೇಳಿದನು. ಜನರ ಬಗ್ಗೆ ತೀರ್ಪನ್ನು ಕೊಟ್ಟನು. ಆತನು ದುಷ್ಟರನ್ನು ಖಡ್ಗದಿಂದ ಕೊಲ್ಲುತ್ತಿದ್ದಾನೆ.’” ಈ ಸಂದೇಶವು ಯೆಹೋವನಿಂದ ಬಂದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆ ಶಬ್ದವು ಭೂಮಿಯ ಕಟ್ಟಕಡೆಯವರೆಗೆ ವ್ಯಾಪಿಸುವುದು, ಯೆಹೋವನಿಗೂ ಜನಾಂಗಗಳಿಗೂ ವ್ಯಾಜ್ಯವುಂಟಷ್ಟೆ, ಅವನು ನರಜನ್ಮದವರೆಲ್ಲರ ಸಂಗಡ ನ್ಯಾಯಕ್ಕೆ ನಿಲ್ಲುವನು, ದುಷ್ಟರನ್ನು ಖಡ್ಗಕ್ಕೆ ಗುರಿಮಾಡುವನು” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಆತನ ಶಬ್ದ ವ್ಯಾಪಿಸುವುದು ಭೂಮಿಯ ಕಟ್ಟಕಡೆಗೆ ಸರ್ವೇಶ್ವರನೆ ಆಪಾದನೆ ಹೊರಿಸುವನು ಜನಾಂಗಗಳ ಮೇಲೆ ನರಮಾನವರನ್ನೆಲ್ಲ ಗುರಿಮಾಡುವನು ತೀರ್ಪಿಗೆ ದುರುಳರನ್ನು ತುತ್ತಾಗಿಸುವನು ಕತ್ತಿಗೆ - ಇದು ಸರ್ವೇಶ್ವರನ ನುಡಿ’.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಶಬ್ದವು ಭೂವಿುಯ ಕಟ್ಟ ಕಡೆಯವರೆಗೆ ವ್ಯಾಪಿಸುವದು; ಯೆಹೋವನಿಗೂ ಜನಾಂಗಗಳಿಗೂ ವ್ಯಾಜ್ಯವುಂಟಷ್ಟೆ; ನರಜನ್ಮದವರೆಲ್ಲರ ಸಂಗಡ ನ್ಯಾಯಕ್ಕೆ ನಿಲ್ಲುವನು; ದುಷ್ಟರನ್ನು ಖಡ್ಗಕ್ಕೆ ಗುರಿಮಾಡುವನು. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಭೂಮಿಯ ಅಂತ್ಯಗಳವರೆಗೆ ಘೋಷವು ಬರುವುದು. ಯೆಹೋವ ದೇವರಿಗೆ ಜನಾಂಗಗಳ ಸಂಗಡ ವ್ಯಾಜ್ಯವಿದೆ. ಅವರು ಎಲ್ಲಾ ಮನುಷ್ಯರ ಸಂಗಡ ನ್ಯಾಯಕ್ಕೆ ನಿಲ್ಲುವರು. ದುಷ್ಟರನ್ನು ಖಡ್ಗಕ್ಕೆ ಒಪ್ಪಿಸುವರು,’ ” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 25:31
14 ತಿಳಿವುಗಳ ಹೋಲಿಕೆ  

ಇಸ್ರೇಲ್ ಜನರೇ, ಯೆಹೋವನ ಮಾತಿಗೆ ಕಿವಿಗೊಡಿರಿ! ಈ ದೇಶದಲ್ಲಿ ವಾಸಿಸುವ ಜನರ ವಿರುದ್ಧವಾಗಿ ಯೆಹೋವನು ತನ್ನ ವಾದವನ್ನು ಅವರ ಮುಂದಿಡುತ್ತಾನೆ. “ಈ ದೇಶದಲ್ಲಿರುವ ಜನರು ಯೆಹೋವನನ್ನು ನಿಜವಾಗಿಯೂ ತಿಳಿದಿಲ್ಲ. ಅವರು ಯೆಹೋವನಿಗೆ ಸತ್ಯವಂತರೂ ಅಲ್ಲ. ನಿಷ್ಠಾವಂತರೂ ಅಲ್ಲ.


ಮತ್ತು ಎಲ್ಲಾ ಜನಾಂಗಗಳನ್ನು ನಾನು ಒಟ್ಟುಗೂಡಿಸುವೆನು. ಆ ದೇಶಗಳನ್ನು ಯೆಹೋಷಾಫಾಟ್ ತಗ್ಗಿಗೆ ಕರೆತರುವೆನು. ಅಲ್ಲಿ ಅವರಿಗೆ ನ್ಯಾಯತೀರಿಸುವೆನು. ಆ ದೇಶಗಳವರು ನನ್ನ ಜನರಾದ ಇಸ್ರೇಲರನ್ನು ಚದರಿಸಿದ್ದರು. ಅವರನ್ನು ಪರದೇಶಗಳಲ್ಲಿ ವಾಸಿಸುವಂತೆ ಮಾಡಿದರು. ಆದ್ದರಿಂದ ಆ ದೇಶಗಳವರನ್ನು ನಾನು ಶಿಕ್ಷಿಸುವೆನು. ಆ ದೇಶದವರು ನನ್ನ ದೇಶವನ್ನು ವಿಭಜಿಸಿದರು.


ಯೆಹೋವನಿಗೆ ತನ್ನ ಜನರ ವಿರುದ್ಧವಾಗಿ ವ್ಯಾಜ್ಯವಿದೆ. ಪರ್ವತಗಳೇ, ಭೂಮಿಯ ಅಸ್ತಿವಾರಗಳೇ ಯೆಹೋವನ ದೂರುಗಳನ್ನು ಕೇಳಿರಿ. ಇಸ್ರೇಲ್ ತಪ್ಪಿತಸ್ಥನೆಂದು ಆತನು ಧೃಡಪಡಿಸುವನು.”


ಯೆಹೋವನು ಜನರಿಗೆ ನ್ಯಾಯತೀರ್ಪು ಮಾಡುವನು. ಆ ಬಳಿಕ ಯೆಹೋವನು ಜನರನ್ನು ಬೆಂಕಿಯಿಂದಲೂ ಖಡ್ಗದಿಂದಲೂ ನಾಶಮಾಡುವನು. ಯೆಹೋವನು ಅನೇಕಾನೇಕ ಜನರನ್ನು ನಾಶಮಾಡುವನು.


ಯೆಹೋವನು ಹೇಳುವುದೇನೆಂದರೆ, “ಇಸ್ರೇಲಿಗೆ ವಿರುದ್ಧವಾಗಿ ನಾನು ವಾದ ಮಾಡುತ್ತೇನೆ. ತಾನು ಮಾಡಿದ ಸಂಗತಿಗಳಿಗಾಗಿ ಯಾಕೋಬನು ಶಿಕ್ಷೆ ಅನುಭವಿಸಬೇಕು.


ಇದು ನೆರವೇರುವುದು, ಯಾಕೆಂದರೆ ದೇವರು ದಂಡನೆಗಾಗಿ ಸಮಯವನ್ನು ಆರಿಸಿಕೊಂಡಿದ್ದಾನೆ. ಜನರು ಚೀಯೋನಿನಲ್ಲಿ ಮಾಡಿದ ಕಾರ್ಯಗಳಿಗೆ ದಂಡನೆಯನ್ನು ಅನುಭವಿಸುವುದಕ್ಕಾಗಿ ಆತನು ಒಂದು ವರ್ಷವನ್ನು ಆರಿಸಿಕೊಂಡಿದ್ದಾನೆ.


ನಾನು ಗೋಗನನ್ನು ರೋಗಮರಣಗಳಿಂದ ಶಿಕ್ಷಿಸುವೆನು. ಅವನ ಮೇಲೆಯೂ ಅವನೊಂದಿಗೆ ಬಂದ ಬಹುದೇಶದ ಸೈನಿಕರ ಮೇಲೆಯೂ ಆಲಿಕಲ್ಲು, ಬೆಂಕಿ, ಗಂಧಕದ ಮಳೆಯಿಂದ ಶಿಕ್ಷಿಸುವೆನು.


ಬಾರೂಕನೇ, ನೀನು ದೊಡ್ಡ ಪದವಿಯನ್ನು ನಿರೀಕ್ಷಿಸುತ್ತಿರುವೆ. ಆದರೆ ನೀನು ಅದನ್ನು ನಿರೀಕ್ಷಿಸಬೇಡ. ಏಕೆಂದರೆ ನಾನು ಎಲ್ಲರಿಗೆ ಭಯಂಕರವಾದ ಸಂಗತಿಗಳನ್ನು ಬರಮಾಡುವೆನು.”’ ಯೆಹೋವನು ಹೀಗೆ ಹೇಳಿದನು, ‘ನೀನು ಅನೇಕ ಸ್ಥಳಗಳಿಗೆ ಹೋಗಬೇಕಾಗಬಹುದು. ಅದರೆ ನೀನು ಎಲ್ಲಿ ಹೋದರೂ ಪ್ರಾಣ ಉಳಿಸಿಕೊಂಡು ಪಾರಾಗುವಂತೆ ನಾನು ಮಾಡುತ್ತೇನೆ.’”


ನಿನ್ನ ಬಲಯುತವಾದ ಸ್ವರವು ಜನರಿಗೆ ಹೆದರಿಕೆಯನ್ನು ಉಂಟುಮಾಡುತ್ತದೆ, ಅವರು ನಿನ್ನಿಂದ ಓಡಿಹೋಗುವರು. ನಿನ್ನ ಮಹೋನ್ನತೆಯು ಜನಾಂಗಗಳನ್ನು ದಿಕ್ಕಾಪಾಲಾಗಿ ಮಾಡುತ್ತದೆ.”


ಆದರೆ ನೀನು, ‘ನಾನು ತಪ್ಪು ಮಾಡಿಲ್ಲ. ದೇವರು ನನ್ನ ಮೇಲೆ ಕೋಪಗೊಂಡಿಲ್ಲ’ ಎಂದು ಹೇಳುತ್ತಿರುವೆ. ಆದ್ದರಿಂದ ನೀನು ಸುಳ್ಳು ಹೇಳಿದ ಅಪರಾಧಿಯೆಂದು ನಾನು ನಿನಗೆ ತೀರ್ಪುನೀಡುತ್ತೇನೆ. ಏಕೆಂದರೆ ‘ನಾನು ಯಾವ ತಪ್ಪೂ ಮಾಡಿಲ್ಲ’ ಎಂದು ನೀನು ಹೇಳಿಕೊಳ್ಳುತ್ತಿರುವೆ.


ಯೆಹೋವನು ಎಲ್ಲಾ ದೇಶಗಳವರ ಮೇಲೆಯೂ ಅವುಗಳ ಸೈನ್ಯದ ಮೇಲೆಯೂ ಕೋಪಗೊಂಡಿದ್ದಾನೆ. ಯೆಹೋವನು ಅವರೆಲ್ಲರನ್ನು ನಾಶಮಾಡುತ್ತಾನೆ. ಅವರೆಲ್ಲರೂ ಕೊಲ್ಲಲ್ಪಡುವಂತೆ ಮಾಡುತ್ತಾನೆ.


ಈಗ ಯೆಹೋವನಿಂದ ದಂಡನೆಯು ಬಿರುಗಾಳಿಯಂತೆ ಬರುವುದು. ಯೆಹೋವನ ಕೋಪವು ತೂಫಾನಿನಂತೆ ದುಷ್ಟರ ತಲೆಯ ಮೇಲೆ ಆರ್ಭಟಿಸಿ ಬೀಳುವುದು.


ಆ ದಿನವು ಹತ್ತಿರ ಬಂತು! ಹೌದು, ದೇವರು ನ್ಯಾಯತೀರಿಸುವ ದಿನ ಹತ್ತಿರ ಬಂತು. ಅದು ಮೋಡ ಕವಿದ ದಿನವಾಗಿರುವುದು. ಅದು ಜನಾಂಗಗಳಿಗೆ ನ್ಯಾಯತೀರಿಸುವ ಸಮಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು