ಯೆರೆಮೀಯ 25:38 - ಪರಿಶುದ್ದ ಬೈಬಲ್38 ಯೆಹೋವನು, ತನ್ನ ಗುಹೆಯಿಂದ ಹೊರಬರುತ್ತಿರುವ ಭಯಂಕರವಾದ ಸಿಂಹದಂತಿದ್ದಾನೆ. ಯೆಹೋವನು ಕೋಪಗೊಂಡಿದ್ದಾನೆ. ಯೆಹೋವನ ಕೋಪವು ಆ ಜನರನ್ನು ಪೀಡಿಸುವುದು. ಅವರ ದೇಶವು ಬರಿದಾದ ಮರುಭೂಮಿಯಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಆತನು ಸಿಂಹದಂತೆ ತನ್ನ ಗವಿಯನ್ನು ಬಿಟ್ಟು ಬಂದಿದ್ದಾನೆ. ಹಿಂಸಿಸುವ ಖಡ್ಗದಿಂದಲೂ ಆತನ ರೋಷಾಗ್ನಿಯಿಂದಲೂ ಅವರ ದೇಶವು ಬೆರಗಿಗೆ ಈಡಾಗಿದೆ” ಎಂದು ನುಡಿಯುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಗುಹೆಬಿಟ್ಟು ಬಂದ ಸಿಂಹದಂತೆ ಬಂದಿರುವನಾತ. ಆತನ ಕೋಪಾಗ್ನಿಯ ನಿಮಿತ್ತ ತುಂಡರಿಸುವಾ ಖಡ್ಗದ ಪ್ರಯುಕ್ತ ಅವರ ನಾಡಾಗಿದೆ ಬೆಂಗಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಆತನು ಸಿಂಹದಂತೆ ತನ್ನ ಹಕ್ಕೆಯನ್ನು ಬಿಟ್ಟುಬಂದಿದ್ದಾನೆ; ಹಿಂಸಿಸುವ ಖಡ್ಗದಿಂದಲೂ ಆತನ ರೋಷಾಗ್ನಿಯಿಂದಲೂ ಅವರ ದೇಶವು ಬೆರಗಿಗೆ ಈಡಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಅವರು ಸಿಂಹದಂತೆ ತಮ್ಮ ಗವಿಯನ್ನು ತೊರೆದುಬಿಟ್ಟಿದ್ದಾರೆ. ಏಕೆಂದರೆ ಉಪದ್ರವ ಪಡಿಸುವವನ ಉರಿಯ ನಿಮಿತ್ತವೂ, ಅವರ ಕೋಪದ ಉರಿಯ ನಿಮಿತ್ತವೂ ಅವರ ದೇಶವು ಹಾಳಾಯಿತು. ಅಧ್ಯಾಯವನ್ನು ನೋಡಿ |
ಯೆಹೋವನು ಹೀಗೆನ್ನುತ್ತಾನೆ: “ಜೋರ್ಡನ್ ನದಿಯ ಸಮೀಪದ ದಟ್ಟವಾದ ಅರಣ್ಯದಿಂದ ಒಮ್ಮೆ ಒಂದು ಸಿಂಹವು ಬರುವುದು. ಆ ಸಿಂಹವು ಜನರ ಸಾಕುಪ್ರಾಣಿಗಳಿದ್ದ ಹೊಲಗಳಿಗೆ ನುಗ್ಗುವುದು. ಆ ಪ್ರಾಣಿಗಳೆಲ್ಲ ಓಡಿಹೋಗುವವು. ನಾನು ಆ ಸಿಂಹದಂತಾಗುವೆನು. ನಾನು ಬಾಬಿಲೋನನ್ನು ಅದರ ಪ್ರದೇಶದಿಂದ ಓಡಿಸಿಬಿಡುವೆನು. ಈ ಕಾರ್ಯ ಮಾಡಲು ನಾನು ಯಾರನ್ನು ಆರಿಸಲಿ? ನನ್ನತೆ ಯಾರೂ ಇಲ್ಲ. ನನ್ನನ್ನು ಪ್ರತಿಭಟಿಸುವವರು ಯಾರೂ ಇಲ್ಲ. ಆದ್ದರಿಂದ ನಾನೇ ಅದನ್ನು ಮಾಡುತ್ತೇನೆ. ನನ್ನನ್ನು ಓಡಿಸಲು ಯಾವ ಕುರುಬನೂ ಬರಲಾರನು. ನಾನು ಬಾಬಿಲೋನಿನ ಜನರನ್ನು ಓಡಿಸಿಬಿಡುವೆನು.”
“ಜೋರ್ಡನ್ ನದಿಯ ಸಮೀಪದ ದಟ್ಟವಾದ ಕಾಡಿನಿಂದ ಫಕ್ಕನೆ ಒಂದು ಸಿಂಹ ಬರುವದು. ಅದು ಹೊಲಗಳಲ್ಲಿದ್ದ ಜನರ ದನಕುರಿಗಳ ಹಟ್ಟಿಗಳಿಗೆ ನುಗ್ಗುವುದು. ನಾನು ಆ ಸಿಂಹದಂತೆ ಇದ್ದೇನೆ. ನಾನು ಎದೋಮ್ ನಗರಕ್ಕೆ ಹೋಗಿ ಆ ಜನರನ್ನು ಹೆದರಿಸುವೆನು; ಅವರು ಓಡಿಹೋಗುವಂತೆ ಮಾಡುವೆನು. ಅವರ ತರುಣರಲ್ಲಿ ಯಾರೂ ನನ್ನನ್ನು ತಡೆಯಲಾರರು. ನನ್ನತೆ ಯಾರೂ ಇಲ್ಲ. ಯಾರೂ ನನ್ನನ್ನು ಪ್ರತಿಭಟಿಸುವದಿಲ್ಲ. ಅವರ ನಾಯಕರಲ್ಲಿ ಯಾರೂ ನನ್ನ ವಿರುದ್ಧ ನಿಲ್ಲುವದಿಲ್ಲ.”