Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 25:4 - ಪರಿಶುದ್ದ ಬೈಬಲ್‌

4 ಯೆಹೋವನು ತನ್ನ ಸೇವಕರಾದ ಪ್ರವಾದಿಗಳನ್ನು ಮತ್ತೆಮತ್ತೆ ನಿಮ್ಮಲ್ಲಿಗೆ ಕಳುಹಿಸಿದ್ದಾನೆ. ಆದರೆ ನೀವು ಅವರ ಮಾತುಗಳನ್ನು ಕಿವಿಗೆ ಹಾಕಿಕೊಂಡಿಲ್ಲ. ನೀವು ಅವರ ಕಡೆಗೆ ಸ್ವಲ್ಪವೂ ಗಮನಕೊಟ್ಟಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನು ತನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ತಪ್ಪದೆ ಕಳುಹಿಸುತ್ತಿದ್ದರೂ ನೀವು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸರ್ವೇಶ್ವರ ತಮ್ಮ ದಾಸರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿರಂತರವಾಗಿ ಕಳಿಸುತ್ತಿದ್ದರು. ಆದರೂ ನೀವು ಗಮನಿಸಲಿಲ್ಲ; ಕಿವಿಗೊಡಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋವನು ತನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ಸಾವಕಾಶಮಾಡದೆ ಕಳುಹಿಸುತ್ತಿದ್ದರೂ ನೀವು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಇದಲ್ಲದೆ ಯೆಹೋವ ದೇವರು ತಮ್ಮ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ಕಳುಹಿಸಿದ್ದಾರೆ. ಬೆಳಿಗ್ಗೆ ಎದ್ದು ಕಳುಹಿಸಿದ್ದಾರೆ. ಆದರೆ ನೀವು ಕೇಳಲಿಲ್ಲ. ಕೇಳುವುದಕ್ಕೆ ನಿಮ್ಮ ಕಿವಿ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 25:4
24 ತಿಳಿವುಗಳ ಹೋಲಿಕೆ  

ಕಳೆದ ಇಪ್ಪತ್ಮೂರು ವರ್ಷಗಳಿಂದ ನಾನು ನಿಮಗೆ ಮತ್ತೆಮತ್ತೆ ಯೆಹೋವನ ಸಂದೇಶವನ್ನು ಕೊಡುತ್ತಿದ್ದೇನೆ. ಅಮೋನನ ಮಗನಾದ ಯೋಷೀಯನು ಯೆಹೂದದ ರಾಜನಾದ ಹದಿಮೂರನೆ ವರ್ಷದಿಂದ ನಾನು ಪ್ರವಾದಿಯಾಗಿದ್ದೇನೆ. ಅಂದಿನಿಂದ ಇಂದಿನವರೆಗೆ ನಾನು ಯೆಹೋವನ ಸಂದೇಶಗಳನ್ನು ನಿಮಗೆ ತಿಳಿಸುತ್ತಾ ಬಂದಿದ್ದೇನೆ. ಆದರೆ ನೀವು ಕಿವಿಗೆ ಹಾಕಿಕೊಂಡಿಲ್ಲ.


ನನ್ನ ಸೇವಕರು ಹೇಳುವುದನ್ನು ನೀವು ಕೇಳಬೇಕು. ಪ್ರವಾದಿಗಳು ನನ್ನ ಸೇವಕರಾಗಿದ್ದಾರೆ. ನಾನು ಮತ್ತೆಮತ್ತೆ ನನ್ನ ಪ್ರವಾದಿಗಳನ್ನು ನಿಮ್ಮಲ್ಲಿಗೆ ಕಳುಹಿಸಿದೆನು. ಆದರೆ ನೀವು ಅವರ ಮಾತುಗಳಿಗೆ ಕಿವಿಗೊಡಲಿಲ್ಲ.


ದೇವರು ಮಾತನಾಡುವಾಗ ಆಲಿಸದೆ ಇರಬೇಡಿ. ಆತನು ಇಸ್ರೇಲರಿಗೆ ಈ ಲೋಕದಲ್ಲಿ ಎಚ್ಚರಿಕೆ ನೀಡಿದಾಗ, ಅವರು ಆತನ ಮಾತನ್ನು ಕೇಳಲಿಲ್ಲ. ಆದರೆ ಅವರು ತಪ್ಪಿಸಿಕೊಳ್ಳಲಾಗಲಿಲ್ಲ. ಈಗ ದೇವರು ಪರಲೋಕದಿಂದ ಮಾತಾಡುತ್ತಿದ್ದಾನೆ. ಆತನ ಮಾತನ್ನು ಆಲಿಸದ ಜನರು ಹೇಗೆ ತಪ್ಪಿಸಿಕೊಳ್ಳಲಾದೀತು?


ಯೆಹೋವನಾದ ನಾನು ಯೆಹೋಯಾಕೀಮ ಮತ್ತು ಅವನ ಮಕ್ಕಳನ್ನು ದಂಡಿಸುವೆನು. ನಾನು ಅವನ ಅಧಿಕಾರಿಗಳನ್ನೂ ದಂಡಿಸುವೆನು. ಅವರು ದುಷ್ಟರಾದುದರಿಂದ ಹೀಗೆ ಮಾಡುವೆನು. ನಾನು ಅವರ ಮೇಲೂ ಜೆರುಸಲೇಮಿನಲ್ಲಿ ವಾಸಮಾಡುವ ಜನರೆಲ್ಲರ ಮೇಲೂ ಮತ್ತು ಯೆಹೂದದ ಜನರ ಮೇಲೂ ಭಯಂಕರವಾದ ಕೇಡನ್ನು ತರಲು ನಿಶ್ಚಯಿಸಿದ್ದೇನೆ. ನಾನು ಹೇಳಿದಂತೆ ಅವರಿಗೆ ಎಲ್ಲಾ ಕೆಡುಕನ್ನು ಉಂಟುಮಾಡುವೆನು. ಏಕೆಂದರೆ ಅವರು ನನ್ನ ಮಾತನ್ನು ಕೇಳಲಿಲ್ಲ.’”


“ಆ ಜನರು ಸಹಾಯಕೋರಿ ನನ್ನಲ್ಲಿಗೆ ಬರಬೇಕಾಗಿತ್ತು. ಆದರೆ ಅವರು ನನಗೆ ವಿಮುಖರಾದರು. ನಾನು ಮತ್ತೆಮತ್ತೆ ಅವರಿಗೆ ಬುದ್ಧಿಕಲಿಸುವ ಪ್ರಯತ್ನ ಮಾಡಿದೆ. ಆದರೆ ಅವರು ನನ್ನ ಮಾತನ್ನು ಕೇಳಲಿಲ್ಲ. ನಾನು ಅವರನ್ನು ತಿದ್ದುವ ಪ್ರಯತ್ನ ಮಾಡಿದೆ, ಆದರೆ ಅವರು ನನ್ನ ಮಾತನ್ನು ಕೇಳಲಿಲ್ಲ.


ಜೆರುಸಲೇಮಿನವರು ನನ್ನ ಸಂದೇಶಕ್ಕೆ ಕಿವಿಗೊಟ್ಟಿಲ್ಲವಾದ ಕಾರಣ ನಾನು ಹಾಗೆಲ್ಲ ನಡೆಯುವಂತೆ ಮಾಡುವೆನು” ಇದು ಯೆಹೋವನ ನುಡಿ. “ನಾನು ಮತ್ತೆಮತ್ತೆ ನನ್ನ ಸಂದೇಶವನ್ನು ಅವರಿಗೆ ಕೊಟ್ಟೆ. ಆ ಜನರಿಗೆ ಸಂದೇಶಗಳನ್ನು ಕೊಡುವದಕ್ಕಾಗಿ ನನ್ನ ಸೇವಕರಾದ ಪ್ರವಾದಿಗಳನ್ನು ಉಪಯೋಗಿಸಿಕೊಂಡೆ. ಆದರೆ ಆ ಜನರು ಕೇಳಲಿಲ್ಲ.” ಇದು ಯೆಹೋವನ ನುಡಿ.


“ಯೆಹೂದವೇ, ನೀನು ಸುರಕ್ಷಿತಳಾಗಿರುವೆ ಎಂದು ನೀನು ಭಾವಿಸಿಕೊಂಡಿರುವೆ. ಆದರೆ ನಾನು ನಿನಗೆ ಎಚ್ಚರಿಕೆಯನ್ನು ಕೊಟ್ಟೆ. ಹೌದು, ನಾನೇ ಎಚ್ಚರಿಕೆಯನ್ನು ಕೊಟ್ಟೆ, ಆದರೆ ನೀನು ಅದನ್ನು ಕಿವಿಗೆ ಹಾಕಿಕೊಳ್ಳಲು ಒಪ್ಪಲಿಲ್ಲ. ನಿನ್ನ ಬಾಲ್ಯದಿಂದಲೂ ನೀನು ಹೀಗೆಯೇ ಮಾಡಿದೆ. ಯೆಹೂದವೇ, ನಿನ್ನ ಬಾಲ್ಯದಿಂದಲೂ ನೀನು ನನ್ನ ಆಜ್ಞೆಯನ್ನು ಪಾಲಿಸಲಿಲ್ಲ.


“ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುವನು: ‘ನಾನು ಜೆರುಸಲೇಮಿಗೂ ಅದರ ಸುತ್ತಲಿನ ಹಳ್ಳಿಗಳಿಗೂ ಅನೇಕ ವಿಪತ್ತುಗಳನ್ನು ಬರಮಾಡುವುದಾಗಿ ಹೇಳಿದೆನು. ಅವುಗಳನ್ನು ಬೇಗನೆ ಬರಮಾಡುತ್ತೇನೆ. ಏಕೆಂದರೆ ಜನರು ಬಹಳ ಮೊಂಡರಾಗಿದ್ದಾರೆ. ನಾನು ಹೇಳಿದ್ದನ್ನು ಅವರು ಕೇಳುವುದೂ ಇಲ್ಲ, ಅನುಸರಿಸುವುದೂ ಇಲ್ಲ.’”


ಆದರೆ ಯೆಹೂದದ ಜನರು, ‘ಪ್ರಯತ್ನ ಮಾಡುವದರಿಂದ ಏನೂ ಪ್ರಯೋಜನವಿಲ್ಲ. ನಮ್ಮ ಮನಸ್ಸಿಗೆ ಬಂದಂತೆ ನಾವು ಮಾಡುತ್ತಿದ್ದೇವೆ. ನಮ್ಮಲ್ಲಿ ಪ್ರತಿಯೊಬ್ಬರೂ ನಮ್ಮ ದುಷ್ಟ ಮತ್ತು ಮೊಂಡುಮನಸ್ಸು ಹೇಳಿದಂತೆ ನಡೆಯುವೆವು’ ಎಂಬುದಾಗಿ ಉತ್ತರಿಸುವರು” ಎಂದನು.


ಆದರೆ ನಿಮ್ಮ ಪೂರ್ವಿಕರು ನನ್ನ ಆಜ್ಞೆಯನ್ನು ಪಾಲಿಸಲಿಲ್ಲ. ಅವರು ನನಗೆ ಗಮನಕೊಡಲಿಲ್ಲ. ನಿಮ್ಮ ಪೂರ್ವಿಕರು ತುಂಬಾ ಮೊಂಡರಾಗಿದ್ದರು. ನಾನು ಅವರನ್ನು ದಂಡಿಸಿದೆ. ಆದರೆ ಅದರಿಂದ ಏನೂ ಪ್ರಯೋಜನವಾಗಲಿಲ್ಲ. ಅವರು ನನ್ನ ಮಾತನ್ನು ಕೇಳಲಿಲ್ಲ.


ನೀವು ನಿಮ್ಮ ಪೂರ್ವಿಕರಿಗಿಂತ ಭಯಂಕರವಾದ ಪಾಪವನ್ನು ಮಾಡಿದ್ದೀರಿ. ನೀವು ಬಹಳ ಮೊಂಡರಾಗಿದ್ದೀರಿ. ನೀವು ನಿಮ್ಮ ಮನಸ್ಸಿಗೆ ಬಂದಂತೆ ಮಾಡುತ್ತಿದ್ದೀರಿ. ನೀವು ನನ್ನ ಆಜ್ಞೆಯನ್ನು ಪಾಲಿಸುತ್ತಿಲ್ಲ.


“ನೀವು ನನ್ನ ಮಾತನ್ನು ಕೇಳಲಿಲ್ಲ.” ಇದು ಯೆಹೋವನ ನುಡಿ. “ನೀವು ಮನುಷ್ಯನು ಮಾಡಿದ ವಿಗ್ರಹಗಳನ್ನು ಪೂಜಿಸಿದಿರಿ. ಅದೇ ನನಗೆ ಕೋಪ ತಂದಿತು. ಅದು ನಿಮಗೇ ಕೇಡನ್ನು ಉಂಟುಮಾಡಿತು.”


ಯೆಹೋವನು ಮನಸ್ಸೆಯ ಮತ್ತು ಅವನ ಜನರ ಸಂಗಡ ಮಾತಾಡಿದರೂ ಅವರು ಆತನ ಮಾತನ್ನು ಕೇಳಲಿಲ್ಲ.


ನಾನು ನಿಮ್ಮನ್ನು ನೋಡಿಕೊಳ್ಳುವುದಕ್ಕೆ ಕಾವಲುಗಾರರನ್ನು ನೇಮಿಸಿದೆ. ನಾನು ಅವರಿಗೆ ‘ಯುದ್ಧದ ತುತ್ತೂರಿಯ ನಾದವನ್ನು ಕೇಳಿರಿ’ ಎಂದು ಹೇಳಿದೆ. ಆದರೆ ಅವರು ‘ನಾವು ಕೇಳುವುದಿಲ್ಲ’ ಅಂದರು.


ಆತನು ಅವರನ್ನು ತನ್ನ ಕಡೆಗೆ ತಿರುಗಿಕೊಳ್ಳುವಂತೆ ಪ್ರವಾದಿಗಳನ್ನು ಅವರ ಬಳಿಗೆ ಕಳುಹಿಸಿದನು. ಪ್ರವಾದಿಗಳು ಜನರನ್ನು ಎಚ್ಚರಿಸಿದರೂ ಅವರ ಮಾತುಗಳಿಗೆ ಅವರು ಗಮನಕೊಡಲಿಲ್ಲ.


ಯೆಹೋವನು ಹೀಗೆನ್ನುತ್ತಾನೆ: “ನಿಮ್ಮ ಪೂರ್ವಿಕರಂತೆ ಆಗಬೇಡಿರಿ. ಹಿಂದಿನ ಕಾಲದಲ್ಲಿ ಪ್ರವಾದಿಗಳು ಅವರ ಸಂಗಡ ಮಾತನಾಡಿದರು. ಅವರು, ‘ಸರ್ವಶಕ್ತನಾದ ಯೆಹೋವನು ನಿಮ್ಮ ಕೆಟ್ಟಜೀವಿತವನ್ನು ಬದಲಾಯಿಸಲು ಇಷ್ಟಪಡುತ್ತಾನೆ. ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಿರಿ.’ ಆದರೆ ನಿಮ್ಮ ಪೂರ್ವಿಕರು ನನ್ನ ಮಾತುಗಳನ್ನು ಕೇಳಲಿಲ್ಲ.” ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು