Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 25:5 - ಪರಿಶುದ್ದ ಬೈಬಲ್‌

5 ಆ ಪ್ರವಾದಿಗಳು, “ನಿಮ್ಮ ಜೀವನಕ್ರಮವನ್ನು ಬದಲಾಯಿಸಿಕೊಳ್ಳಿರಿ. ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಿಬಿಡಿ. ನೀವು ಬದಲಾದರೆ, ಯೆಹೋವನು ನಿಮಗೂ ನಿಮ್ಮ ಪೂರ್ವಿಕರಿಗೂ ಬಹಳ ಹಿಂದೆ ಕೊಟ್ಟ ಭೂಮಿಯಲ್ಲಿ ನೀವು ನೆಲೆಸಬಹುದು. ನೀವು ಶಾಶ್ವತವಾಗಿ ವಾಸಿಸಬೇಕೆಂದು ಆತನು ಈ ಭೂಮಿಯನ್ನು ಕೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆತನು ನಿಮಗೆ ಹೇಳಿದ ಮಾತೇನೆಂದರೆ, ‘ನೀವೆಲ್ಲರು ನಿಮ್ಮ ನಿಮ್ಮ ದುರ್ಮಾರ್ಗದಿಂದಲೂ ಮತ್ತು ದುಷ್ಕೃತ್ಯಗಳಿಂದಲೂ ಹಿಂದಿರುಗಿರಿ. ನಿಮಗೆ ಶಾಶ್ವತ ಸ್ವತ್ತಾಗಿರಲಿ ಎಂದು ಯೆಹೋವನು ಪುರಾತನ ಕಾಲದಲ್ಲಿ ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಅನುಗ್ರಹಿಸಿದ ದೇಶದೊಳಗೆ ನೆಲೆಗೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವರು ತಂದ ಸಮಾಚಾರ ಇದು: ‘ನೀವೆಲ್ಲರು ನಿಮ್ಮನಿಮ್ಮ ದುರ್ಮಾರ್ಗದಿಂದಲೂ ದುಷ್ಕೃತ್ಯಗಳಿಂದಲೂ ಹಿಂದಿರುಗಬೇಕು. ಆಗ, ಸರ್ವೇಶ್ವರ ನಿಮಗೂ ನಿಮ್ಮ ಪೂರ್ವಜರಿಗೂ ಶಾಶ್ವತ ಸೊತ್ತಾಗಿ ಅನುಗ್ರಹಿಸಿದ ನಾಡಿನಲ್ಲಿ ನೀವು ನೆಲೆಗೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆತನು ನಿಮಗೆ ಹೇಳಿಕಳುಹಿಸಿದ ಮಾತೇನಂದರೆ - ನೀವೆಲ್ಲರು ನಿಮ್ಮ ನಿಮ್ಮ ದುರ್ಮಾರ್ಗದಿಂದಲೂ ದುಷ್ಕೃತ್ಯಗಳಿಂದಲೂ ಹಿಂದಿರುಗಿರಿ, ನಿಮಗೆ ಶಾಶ್ವತ ಸ್ವಾಸ್ತ್ಯವಾಗಿರಲಿ ಎಂದು ಯೆಹೋವನು ಪುರಾತನ ಕಾಲದಲ್ಲಿ ನಿಮಗೂ ನಿಮ್ಮ ಪಿತೃಗಳಿಗೂ ಅನುಗ್ರಹಿಸಿದ ದೇಶದೊಳಗೆ ನೆಲೆಗೊಳ್ಳಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವರು ಹೇಳಿದ್ದೇನೆಂದರೆ: “ನಿಮ್ಮ ನಿಮ್ಮ ಕೆಟ್ಟ ಮಾರ್ಗವನ್ನೂ, ನಿಮ್ಮ ಕೆಟ್ಟ ದೃಶ್ಯಗಳ ಕೆಟ್ಟತನವನ್ನೂ ಬಿಟ್ಟು ಮತ್ತೆ ತಿರುಗಿಕೊಳ್ಳಿರಿ. ಆಗ ಯೆಹೋವ ದೇವರು ನಿಮಗೂ, ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 25:5
20 ತಿಳಿವುಗಳ ಹೋಲಿಕೆ  

ನೀವು ನನ್ನ ಆಜ್ಞೆಯನ್ನು ಪಾಲಿಸಿದರೆ ಇಲ್ಲಿರಲು ನಾನು ನಿಮಗೆ ಆಸ್ಪದ ಕೊಡುತ್ತೇನೆ. ನಾನು ಈ ಪ್ರದೇಶವನ್ನು ನಿಮ್ಮ ಪೂರ್ವಿಕರಿಗೆ ಶಾಶ್ವತವಾದ ಸ್ವಾಸ್ತ್ಯವಾಗಿ ಕೊಟ್ಟಿದ್ದೇನೆ.


“‘ನೀವು ಈ ಆಜ್ಞೆಯನ್ನು ಪಾಲಿಸಿದರೆ ದಾವೀದನ ಸಿಂಹಾಸನಾರೂಢರಾದ ರಾಜರು ಜೆರುಸಲೇಮಿನ ದ್ವಾರಗಳಿಂದ ಬರುತ್ತಾರೆ. ಆ ರಾಜರು ರಥಗಳಲ್ಲಿಯೂ ಅಶ್ವಾರೂಢರಾಗಿಯೂ ಬರುವರು. ಯೆಹೂದದ ಮತ್ತು ಜೆರುಸಲೇಮಿನ ಜನನಾಯಕರುಗಳು ಆ ರಾಜರ ಜೊತೆಯಲ್ಲಿ ಬರುವರು. ಜೆರುಸಲೇಮ್ ಪಟ್ಟಣದಲ್ಲಿ ಜನರು ಯಾವಾಗಲೂ ವಾಸವಾಗಿರುವರು.


ನೀನು ಪ್ರಯಾಣ ಮಾಡುತ್ತಿರುವ ಈ ಕಾನಾನ್ ದೇಶವನ್ನೆಲ್ಲ ನಿನಗೂ ನಿನ್ನ ಸಂತತಿಯವರಿಗೂ ಶಾಶ್ವತವಾಗಿ ಕೊಡುವೆನು. ನಾನೇ ನಿಮ್ಮ ದೇವರಾಗಿರುವೆನು” ಎಂದು ಹೇಳಿದನು.


ಇಸ್ರೇಲರೇ, ನಾನು ಪ್ರತಿಯೊಬ್ಬನನ್ನು ಅವನವನ ಕಾರ್ಯಗಳ ಪ್ರಕಾರ ನ್ಯಾಯತೀರಿಸುವೆನು” ಎಂದು ಹೇಳಿದನು. ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಆದ್ದರಿಂದ ನನ್ನ ಬಳಿಗೆ ಬನ್ನಿರಿ, ದುಷ್ಟತನ ಮಾಡುವದನ್ನು ನಿಲ್ಲಿಸಿರಿ, ಪಾಪವು ನಿಮ್ಮ ನಾಶನಕ್ಕೆ ಕಾರಣವಾಗದಂತೆ ಎಚ್ಚರಿಕೆಯಾಗಿರಿ.


ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಇಸ್ರೇಲಿಗೆ ಮತ್ತು ಯೆಹೂದಕ್ಕೆ ಕಳುಹಿಸಿಕೊಟ್ಟೆ. ನಾನು ಅವರನ್ನು ನಿಮ್ಮಲ್ಲಿಗೆ ಪುನಃಪುನಃ ಕಳುಹಿಸಿಕೊಟ್ಟೆ. ಆ ಪ್ರವಾದಿಗಳು, “ಇಸ್ರೇಲಿನ ಮತ್ತು ಯೆಹೂದದ ಪ್ರತಿಯೊಬ್ಬರೂ ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಬೇಕು. ನೀವು ಒಳ್ಳೆಯವರಾಗಿರಬೇಕು. ಬೇರೆ ದೇವರುಗಳನ್ನು ಅನುಸರಿಸಬಾರದು. ಅವುಗಳನ್ನು ಪೂಜಿಸಬಾರದು. ಅವುಗಳ ಸೇವೆಮಾಡಬಾರದು ಎಂದು ಹೇಳಿದರು. ನನ್ನ ಆಜ್ಞೆಯನ್ನು ಪಾಲಿಸಿದರೆ ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಕೊಟ್ಟ ಪ್ರದೇಶದಲ್ಲಿ ನೀವು ವಾಸಿಸಬಹುದು” ಎಂದು ಹೇಳಿದ್ದೆ. ಆದರೆ ನೀವು ನನ್ನ ಸಂದೇಶದ ಕಡೆಗೆ ಗಮನ ಕೊಡಲಿಲ್ಲ.


“ಯೆರೆಮೀಯನೇ, ಯೆಹೂದದ ಜನರಿಗೆ ಮತ್ತು ಜೆರುಸಲೇಮಿನಲ್ಲಿ ವಾಸಿಸುವ ಜನರಿಗೆ ಯೆಹೋವನು ಹೀಗೆನ್ನುವನು: ‘ಈಗಲೇ ನಾನು ನಿಮಗೋಸ್ಕರ ತೊಂದರೆಗಳನ್ನು ಎಬ್ಬಿಸುತ್ತೇನೆ. ನಿಮ್ಮ ವಿರುದ್ಧ ಯೋಜನೆಗಳನ್ನು ಹಾಕುತ್ತಿದ್ದೇನೆ. ಆದ್ದರಿಂದ ನೀವು ಮಾಡುತ್ತಿರುವ ದುಷ್ಕೃತ್ಯಗಳನ್ನು ನಿಲ್ಲಿಸಬೇಕು. ಪ್ರತಿಯೊಬ್ಬನು ಪರಿವರ್ತನೆ ಹೊಂದಿ ಒಳ್ಳೆಯ ಕೆಲಸಗಳನ್ನು ಮಾಡಲು ಪ್ರಾರಂಭಿಸಬೇಕು’ ಎಂದು ಹೇಳು.


ನಾನು ಜನರಿಗೆ, ‘ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ’ ಎಂತಲೂ ಅವರಿಗಾಗಿರುವ ಮಾನಸಾಂತರವನ್ನು ಯೋಗ್ಯವಾದ ಕಾರ್ಯಗಳ ಮೂಲಕ ತೋರ್ಪಡಿಸಬೇಕೆಂತಲೂ ಹೇಳಿದೆನು. ಮೊದಲನೆಯದಾಗಿ ದಮಸ್ಕಕ್ಕೂ ಬಳಿಕ ಜೆರುಸಲೇಮಿಗೂ ಜುದೇಯದ ಪ್ರತಿಯೊಂದು ಭಾಗಕ್ಕೂ ಹೋಗಿ ಅಲ್ಲಿರುವ ಜನರಿಗೆ ಈ ಸಂಗತಿಗಳನ್ನು ತಿಳಿಸಿದೆನು. ಅಲ್ಲದೆ ಯೆಹೂದ್ಯರಲ್ಲದ ಜನರ ಬಳಿಗೂ ಹೋದೆನು.


“ಆಗ ನೀನು ಅವರಿಗೆ ಹೀಗೆ ಹೇಳಬೇಕು, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನನ್ನ ಜೀವದಾಣೆ, ನಾನು ಜನರು ಸಾಯುವುದನ್ನು ನೋಡಲು ಇಷ್ಟಪಡುವದಿಲ್ಲ; ದುಷ್ಟರು ಸಾಯುವದರಲ್ಲಿಯೂ ನನಗೆ ಇಷ್ಟವಿಲ್ಲ. ಆ ದುಷ್ಟರು ನನ್ನ ಕಡೆಗೆ ತಿರುಗಬೇಕೆಂದು ನಾನು ಇಷ್ಟಪಡುತ್ತೇನೆ. ಅವರು ತಮ್ಮ ದುರ್ನಡತೆಯನ್ನು ಬಿಟ್ಟು ನಿಜವಾದ ಜೀವನವನ್ನು ನಡೆಸಬೇಕು. ಆದ್ದರಿಂದ ನನ್ನ ಬಳಿಗೆ ಹಿಂದಿರುಗಿ ಬನ್ನಿರಿ. ದುಷ್ಟತನವನ್ನು ಬಿಟ್ಟುಬಿಡಿರಿ. ಇಸ್ರೇಲ್ ಜನರೇ, ನೀವು ಯಾಕೆ ಸಾಯುತ್ತೀರಿ?’


ನೀನು ಕೆಟ್ಟದ್ದನ್ನು ಮಾಡದೆ ಒಳ್ಳೆಯದನ್ನೇ ಮಾಡಿದರೆ ಸದಾಕಾಲ ಬದುಕುವೆ.


ನನ್ನಲ್ಲಿ ದುರಾಲೋಚನೆಗಳಿದ್ದರೆ ಕಂಡುಕೊ. ನನ್ನನ್ನು ಸನಾತನ ಮಾರ್ಗದಲ್ಲಿ ನಡೆಸು.


“ನಿಮ್ಮನ್ನು ಶುದ್ಧಿಮಾಡಿಕೊಳ್ಳಿರಿ; ಶುಚಿಪಡಿಸಿಕೊಳ್ಳಿರಿ. ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ; ಅವುಗಳನ್ನು ನೋಡಲು ನನಗೆ ಮನಸ್ಸಿಲ್ಲ. ಕೆಟ್ಟದ್ದನ್ನು ಮಾಡದೆ ಒಳ್ಳೆಯದನ್ನೇ ಮಾಡಿರಿ;


ಇದು ಯೆಹೋವನ ಸಂದೇಶ: “ಇಸ್ರೇಲೇ, ನೀನು ಹಿಂತಿರುಗಿ ಬರಲು ಇಚ್ಛಿಸಿದರೆ ನನ್ನಲ್ಲಿಗೆ ಹಿಂತಿರುಗಿ ಬಾ. ನಿನ್ನ ವಿಗ್ರಹಗಳನ್ನು ಎಸೆದುಬಿಡು. ನನ್ನಿಂದ ದೂರಸರಿದು ಅಲೆದಾಡಬೇಡ.


ಆದರೆ ನಾನು ಯೆಹೂದ ದೇಶಕ್ಕೆ ಕರುಣೆಯನ್ನು ತೋರಿಸುವೆನು. ನಾನು ಅವರನ್ನು ರಕ್ಷಿಸುವೆನು. ಅವರನ್ನು ರಕ್ಷಿಸಲು ನಾನು ಬಿಲ್ಲುಬಾಣಗಳನ್ನು ಉಪಯೋಗಿಸುವದಿಲ್ಲ. ಅಥವಾ ಯುದ್ಧಾಶ್ವಗಳನ್ನಾಗಲಿ ಸೈನ್ಯವನ್ನಾಗಲಿ ಉಪಯೋಗಿಸುವದಿಲ್ಲ. ನನ್ನ ಸ್ವಂತ ಸಾಮರ್ಥ್ಯದಿಂದಲೇ ನಾನು ಅವರನ್ನು ರಕ್ಷಿಸುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು