ಯೆರೆಮೀಯ 25:6 - ಪರಿಶುದ್ದ ಬೈಬಲ್6 ಬೇರೆ ದೇವರುಗಳನ್ನು ಅನುಸರಿಸಬೇಡಿರಿ; ಅವುಗಳ ಸೇವೆ ಮಾಡಬೇಡಿರಿ; ಅವುಗಳನ್ನು ಪೂಜಿಸಬೇಡಿರಿ. ಮನುಷ್ಯ ನಿರ್ಮಿತವಾದ ವಿಗ್ರಹಗಳನ್ನು ಪೂಜಿಸಬೇಡಿ. ನೀವು ಪೂಜಿಸಿದರೆ ನಿಮ್ಮ ಮೇಲೆ ನಾನು ಕೋಪಗೊಂಡು ನಿಮಗೆ ಕೇಡುಮಾಡುವೆನು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅನ್ಯದೇವತೆಗಳನ್ನು ಹಿಂಬಾಲಿಸಿ, ಸೇವಿಸಿ ಪೂಜಿಸಬೇಡಿರಿ; ನಿಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ರೇಗಿಸಬೇಡಿರಿ; ಹೀಗಾದರೆ ನಾನು ನಿಮಗೆ ಯಾವ ಕೇಡನ್ನೂ ಮಾಡುವುದಿಲ್ಲ’ ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಬೇರೆ ದೇವರುಗಳನ್ನು ಹಿಂಬಾಲಿಸಿ, ಅವರನ್ನು ಸೇವಿಸಿ ಪೂಜಿಸಬೇಡಿ. ನಿಮ್ಮ ಕೈ ಕೃತಿಗಳಾದ ವಿಗ್ರಹಗಳನ್ನು ಆರಾಧಿಸಿ, ನನ್ನನ್ನು ರೇಗಿಸಬೇಡಿ. ಆಗ ನಾನು ನಿಮಗೆ ಯಾವ ಕೇಡನ್ನೂ ಮಾಡೆನು.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸಿ ಪೂಜಿಸಬೇಡಿರಿ; ನಿಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ರೇಗಿಸದಿರಿ; ಹೀಗಾದರೆ ನಾನು ನಿಮಗೆ ಯಾವ ಕೇಡನ್ನೂ ಮಾಡೆನು ಎಂಬದೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಬೇರೆ ದೇವರುಗಳನ್ನು ಸೇವಿಸುವುದಕ್ಕೂ, ಆರಾಧಿಸುವುದಕ್ಕೂ ಹಿಂಬಾಲಿಸಬೇಡಿರಿ. ನಿಮ್ಮ ಕೈಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸಬೇಡಿರಿ. ಆಗ ನಿಮಗೆ ಯಾವ ಕೇಡೂ ಮಾಡೆನು.” ಅಧ್ಯಾಯವನ್ನು ನೋಡಿ |
ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಇಸ್ರೇಲಿಗೆ ಮತ್ತು ಯೆಹೂದಕ್ಕೆ ಕಳುಹಿಸಿಕೊಟ್ಟೆ. ನಾನು ಅವರನ್ನು ನಿಮ್ಮಲ್ಲಿಗೆ ಪುನಃಪುನಃ ಕಳುಹಿಸಿಕೊಟ್ಟೆ. ಆ ಪ್ರವಾದಿಗಳು, “ಇಸ್ರೇಲಿನ ಮತ್ತು ಯೆಹೂದದ ಪ್ರತಿಯೊಬ್ಬರೂ ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಬೇಕು. ನೀವು ಒಳ್ಳೆಯವರಾಗಿರಬೇಕು. ಬೇರೆ ದೇವರುಗಳನ್ನು ಅನುಸರಿಸಬಾರದು. ಅವುಗಳನ್ನು ಪೂಜಿಸಬಾರದು. ಅವುಗಳ ಸೇವೆಮಾಡಬಾರದು ಎಂದು ಹೇಳಿದರು. ನನ್ನ ಆಜ್ಞೆಯನ್ನು ಪಾಲಿಸಿದರೆ ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಕೊಟ್ಟ ಪ್ರದೇಶದಲ್ಲಿ ನೀವು ವಾಸಿಸಬಹುದು” ಎಂದು ಹೇಳಿದ್ದೆ. ಆದರೆ ನೀವು ನನ್ನ ಸಂದೇಶದ ಕಡೆಗೆ ಗಮನ ಕೊಡಲಿಲ್ಲ.
ನೀವು ವಿಗ್ರಹಗಳನ್ನು ಮಾಡಿ ನನ್ನನ್ನು ಏಕೆ ಸಿಟ್ಟಿಗೆಬ್ಬಿಸುವಿರಿ? ಈಗ ನೀವು ಈಜಿಪ್ಟಿನಲ್ಲಿ ವಾಸಮಾಡುತ್ತಿರುವಿರಿ. ಈಗ ಈಜಿಪ್ಟಿನ ಸುಳ್ಳುದೇವರುಗಳಿಗೆ ನೈವೇದ್ಯವನ್ನು ಅರ್ಪಿಸಿ ನನಗೆ ಕೋಪ ಬರುವಂತೆ ಮಾಡುತ್ತಿರುವಿರಿ. ನೀವೇ ನಿಮ್ಮನ್ನು ನಾಶಮಾಡಿಕೊಳ್ಳುವಿರಿ. ಅದು ನಿಮ್ಮ ತಪ್ಪೇ ಆಗುವುದು. ಬೇರೆ ಜನಾಂಗದವರು ನಿಂದಿಸುವಂತೆ ನಿಮ್ಮನ್ನು ನೀವು ಮಾಡಿಕೊಳ್ಳುತ್ತಿದ್ದೀರಿ. ಭೂಮಂಡಲದ ಎಲ್ಲಾ ಜನಾಂಗಗಳು ನಿಮ್ಮನ್ನು ತಮಾಷೆ ಮಾಡುವಂತಾಗುವುದು.