ಯೆರೆಮೀಯ 25:7 - ಪರಿಶುದ್ದ ಬೈಬಲ್7 “ನೀವು ನನ್ನ ಮಾತನ್ನು ಕೇಳಲಿಲ್ಲ.” ಇದು ಯೆಹೋವನ ನುಡಿ. “ನೀವು ಮನುಷ್ಯನು ಮಾಡಿದ ವಿಗ್ರಹಗಳನ್ನು ಪೂಜಿಸಿದಿರಿ. ಅದೇ ನನಗೆ ಕೋಪ ತಂದಿತು. ಅದು ನಿಮಗೇ ಕೇಡನ್ನು ಉಂಟುಮಾಡಿತು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ, ನಿಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ಕೆಣಕಿ ನಿಮಗೆ ನೀವೇ ಕೇಡನ್ನು ತಂದುಕೊಂಡಿದ್ದೀರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆದರೆ ಸರ್ವೇಶ್ವರ ಸ್ವಾಮಿಯೇ ಹೇಳುವಂತೆ ನೀವು ಅವರಿಗೆ ಕಿವಿಗೊಡದೆ ನಿಮ್ಮ ಕೈಕೃತಿಗಳಾದ ವಿಗ್ರಹಗಳಿಂದ ಅವರನ್ನು ಕೆಣಕಿ ನಿಮಗೇ ಕೇಡನ್ನು ತಂದುಕೊಂಡಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಯೆಹೋವನು ಇಂತೆನ್ನುತ್ತಾನೆ - ನೀವು ನನ್ನ ಕಡೆಗೆ ಕಿವಿಗೊಡದೆ ನಿಮ್ಮ ಕೈ ಕೆಲಸದ ಬೊಂಬೆಗಳಿಂದ ನನ್ನನ್ನು ಕೆಣಕಿ ನಿಮಗೆ ಕೇಡನ್ನು ತಂದುಕೊಂಡಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 “ಆದರೂ ನೀವು ನನಗೆ ಕಿವಿಗೊಡದೆ, ನಿಮಗೆ ಕೇಡು ಬರುವ ಹಾಗೆ ನಿಮ್ಮ ಕೈಕೆಲಸಗಳಿಂದ ನನಗೆ ಕೋಪವನ್ನೆಬ್ಬಿಸಿದ್ದೀರಿ,” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |
ನೀವು ವಿಗ್ರಹಗಳನ್ನು ಮಾಡಿ ನನ್ನನ್ನು ಏಕೆ ಸಿಟ್ಟಿಗೆಬ್ಬಿಸುವಿರಿ? ಈಗ ನೀವು ಈಜಿಪ್ಟಿನಲ್ಲಿ ವಾಸಮಾಡುತ್ತಿರುವಿರಿ. ಈಗ ಈಜಿಪ್ಟಿನ ಸುಳ್ಳುದೇವರುಗಳಿಗೆ ನೈವೇದ್ಯವನ್ನು ಅರ್ಪಿಸಿ ನನಗೆ ಕೋಪ ಬರುವಂತೆ ಮಾಡುತ್ತಿರುವಿರಿ. ನೀವೇ ನಿಮ್ಮನ್ನು ನಾಶಮಾಡಿಕೊಳ್ಳುವಿರಿ. ಅದು ನಿಮ್ಮ ತಪ್ಪೇ ಆಗುವುದು. ಬೇರೆ ಜನಾಂಗದವರು ನಿಂದಿಸುವಂತೆ ನಿಮ್ಮನ್ನು ನೀವು ಮಾಡಿಕೊಳ್ಳುತ್ತಿದ್ದೀರಿ. ಭೂಮಂಡಲದ ಎಲ್ಲಾ ಜನಾಂಗಗಳು ನಿಮ್ಮನ್ನು ತಮಾಷೆ ಮಾಡುವಂತಾಗುವುದು.