ಯೆರೆಮೀಯ 25:9 - ಪರಿಶುದ್ದ ಬೈಬಲ್9 ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಾನು ಉತ್ತರ ದಿಕ್ಕಿನ ಜನಾಂಗಗಳನ್ನೆಲ್ಲಾ ಕರೆಯಿಸಿ, ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡುವೆನು. ಇವರೆಲ್ಲರನ್ನು ಈ ದೇಶದ ಮೇಲೂ, ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ, ಅವುಗಳನ್ನು ತುಂಬಾ ಹಾಳುಗೈದು, ಪರಿಹಾಸ್ಯಕ್ಕೂ, ನಿತ್ಯನಾಶನಕ್ಕೂ ಈಡುಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 “ನೀವು ನನ್ನ ಮಾತನ್ನು ಕೇಳದ ಕಾರಣ ನಾನು ಉತ್ತರಭಾಗದ ರಾಷ್ಟ್ರಗಳನ್ನೆಲ್ಲ ಕರೆಯಿಸುವೆನು. ಬಾಬಿಲೋನಿನ ಅರಸ ಹಾಗು ನನ್ನ ಸೇವಕನಾದ ನೆಬೂಕದ್ನೆಚ್ಚರನನ್ನೂ ಬರಮಾಡುವೆನು. ಅವರು ಈ ನಾಡಿನ, ಇದರ ನಿವಾಸಿಗಳ, ಮತ್ತು ಸುತ್ತಮುತ್ತಲಿನ ನಾಡುಗಳ ಮೇಲೂ ಬೀಳುವರು. ಹೀಗೆ ಇವುಗಳನ್ನು ತೀರ ಹಾಳುಮಾಡುವೆನು. ನಿರಂತರ ಪರಿಹಾಸ್ಯಕ್ಕೂ ಪರಿವಿನಾಶಕ್ಕೂ ಇವನ್ನು ಗುರಿಪಡಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಇಗೋ, ನಾನು ಬಡಗಣ ಜನಾಂಗಗಳನ್ನೆಲ್ಲಾ ಕರೆಯಿಸಿ ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡಿ ಇವರೆಲ್ಲರನ್ನು ಈ ದೇಶದ ಮೇಲೂ ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ ಅವುಗಳನ್ನು ತುಂಬಾ ಹಾಳುಗೈದು ಬೆರಗಿನ ಸಿಳ್ಳಿಗೆ ಗುರಿಪಡಿಸಿ ನಿತ್ಯನಾಶನಕ್ಕೆ ಈಡುಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಇಗೋ, ನಾನು ಕಳುಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ, ನನ್ನ ಸೇವಕನಾದ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನನ್ನೂ ತೆಗೆದುಕೊಂಡು, ಈ ದೇಶಕ್ಕೆ ವಿರೋಧವಾಗಿಯೂ, ಅವರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ತರಿಸಿ, ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ಭಯಕ್ಕೂ, ಪರಿಹಾಸ್ಯಕ್ಕೂ ಗುರಿಮಾಡಿ ನಿತ್ಯ ನಾಶಮಾಡುವೆನು. ಅಧ್ಯಾಯವನ್ನು ನೋಡಿ |
ನಿನ್ನನ್ನು ನೋಡುತ್ತಿದ್ದ ಆ ಯೆಹೂದ್ಯರಿಗೆ ಹೀಗೆ ಹೇಳು: ‘ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಇಲ್ಲಿಗೆ ಕರೆಸುತ್ತೇನೆ. ಅವನು ನನ್ನ ಸೇವಕನಾಗಿದ್ದಾನೆ. ನಾನು ಈ ಸ್ಥಳದಲ್ಲಿ ಹೂಳಿದ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಸ್ಥಾಪಿಸುತ್ತೇನೆ. ನೆಬೂಕದ್ನೆಚ್ಚರನು ಈ ಕಲ್ಲುಗಳ ಮೇಲೆ ತನ್ನ ಗುಡಾರವನ್ನು ಹಾಕುವನು.
ಅದು ನಿನ್ನ ಹೆಸರು. ಏಕೆಂದರೆ ಯೆಹೋವನು ಹೇಳುತ್ತಾನೆ: ‘ನಾನು ತಕ್ಷಣ ನಿನ್ನನ್ನು ನಿನಗೆ ಭಯಂಕಾರಿಯನ್ನಾಗಿ ಮಾಡುವೆನು. ನಾನು ನಿನ್ನನ್ನು ನಿನ್ನ ಎಲ್ಲಾ ಸ್ನೇಹಿತರಿಗೆ ಭಯಂಕಾರಿಯನ್ನಾಗಿ ಮಾಡುವೆನು. ವೈರಿಗಳು ಖಡ್ಗಗಳಿಂದ ನಿನ್ನ ಸ್ನೇಹಿತರನ್ನು ಕೊಲ್ಲುವುದನ್ನು ನೀನು ನೋಡುವೆ. ಯೆಹೂದದ ಎಲ್ಲಾ ಜನರನ್ನು ನಾನು ಬಾಬಿಲೋನಿನ ರಾಜನಿಗೆ ಒಪ್ಪಿಸುವೆನು. ಅವನು ಯೆಹೂದ್ಯರನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗುವನು; ಅವನ ಸೈನಿಕರು ಯೆಹೂದ್ಯರನ್ನು ತಮ್ಮ ಕತ್ತಿಗಳಿಂದ ಕೊಂದುಹಾಕುವರು.
ಇನ್ನೂ ಜೆರುಸಲೇಮಿನಲ್ಲಿರುವ ಜನರಿಗೆ ಖಡ್ಗ, ಹಸಿವು ಮತ್ತು ಭಯಂಕರವಾದ ವ್ಯಾಧಿಗಳಿಂದೊಡಗೂಡಿ ಬೆನ್ನಟ್ಟುವೆನು. ಆ ಜನರ ದುರ್ಗತಿಯನ್ನು ನೋಡಿ ಭೂಲೋಕದ ಸಮಸ್ತ ರಾಜ್ಯಗಳಿಗೆ ಭಯ ಉಂಟಾಗುವಂತೆ ಮಾಡುವೆನು. ಆ ಜನರನ್ನು ನಾಶಮಾಡುವೆನು. ನಡೆದ ವಿಷಯಗಳ ಬಗ್ಗೆ ಕೇಳಿ ಜನರು ಬೆರಗಾಗಿ ಸಿಳ್ಳುಹಾಕುವರು. ಯಾರಿಗಾದರೂ, ಕೇಡಾಗಲಿ ಎಂದು ಹೇಳಬೇಕಾದರೆ ಜನರು ಅವರ ಉದಾಹರಣೆಯನ್ನು ಕೊಡುವರು. ನಾನು ಅವರನ್ನು ಅಟ್ಟಿದ ಎಲ್ಲೆಡೆಯಲ್ಲಿಯೂ ಜನರು ಅವರನ್ನು ಅವಮಾನಗೊಳಿಸುವರು.
ಯೆರೆಮೀಯನೇ, ಯೆಹೂದದ ರಾಜನಾದ ಯೆಹೋಯಾಕೀಮನಿಗೆ ಹೀಗೆ ಹೇಳು, ‘ಯೆಹೋವನು ಹೀಗೆನ್ನುತ್ತಾನೆ: ಯೆಹೋಯಾಕೀಮನೇ, ನೀನು ಆ ಸುರುಳಿಯನ್ನು ಸುಟ್ಟುಬಿಟ್ಟೆ. ನೀನು, “ಬಾಬಿಲೋನ್ ರಾಜನು ಖಂಡಿತವಾಗಿ ಬಂದು ಈ ದೇಶವನ್ನು ನಾಶಮಾಡುವನು ಎಂದು ಯೆರೆಮೀಯನು ಏಕೆ ಬರೆದನು? ಬಾಬಿಲೋನ್ ರಾಜನು ಈ ದೇಶದ ಮನುಷ್ಯರನ್ನು ಮತ್ತು ಪ್ರಾಣಿಗಳನ್ನು ನಾಶಮಾಡುವನು ಎಂದು ಏಕೆ ಹೇಳಿದನು?” ಎಂದು ಕೇಳಿದೆ.
“ಎದೋಮಿನ ಬಗ್ಗೆಯೂ ಉಳಿದ ಆ ವಿದೇಶಗಳ ಬಗ್ಗೆಯೂ ನಾನು ರೋಷದಿಂದ ಮಾತಾಡುತ್ತಿದ್ದೇನೆಂದು ಪ್ರಮಾಣ ಮಾಡುತ್ತೇನೆ. ಆ ಜನಾಂಗಗಳು ನನ್ನ ದೇಶವನ್ನು ತಮ್ಮ ಸ್ವಾಸ್ತ್ಯವನ್ನಾಗಿ ಸಂತೋಷದಿಂದ ತೆಗೆದುಕೊಂಡರು. ಅವರು ಅದನ್ನು ವಶಪಡಿಸಿಕೊಂಡು ಸೂರೆ ಮಾಡಿದಾಗ ಮತ್ತು ನನ್ನ ಜನರಿಗೆ ಅವಮಾನ ಮಾಡಿದಾಗ ನನ್ನ ಜನರನ್ನು ಅವರು ಎಷ್ಟೊಂದು ದ್ವೇಷಿಸುತ್ತಾರೆಂದು ತೋರಿಸುತ್ತಾ ಉಲ್ಲಾಸಪಟ್ಟರು.
“ಜೋರ್ಡನ್ ನದಿಯ ಸಮೀಪದ ದಟ್ಟವಾದ ಕಾಡಿನಿಂದ ಫಕ್ಕನೆ ಒಂದು ಸಿಂಹ ಬರುವದು. ಅದು ಹೊಲಗಳಲ್ಲಿದ್ದ ಜನರ ದನಕುರಿಗಳ ಹಟ್ಟಿಗಳಿಗೆ ನುಗ್ಗುವುದು. ನಾನು ಆ ಸಿಂಹದಂತೆ ಇದ್ದೇನೆ. ನಾನು ಎದೋಮ್ ನಗರಕ್ಕೆ ಹೋಗಿ ಆ ಜನರನ್ನು ಹೆದರಿಸುವೆನು; ಅವರು ಓಡಿಹೋಗುವಂತೆ ಮಾಡುವೆನು. ಅವರ ತರುಣರಲ್ಲಿ ಯಾರೂ ನನ್ನನ್ನು ತಡೆಯಲಾರರು. ನನ್ನತೆ ಯಾರೂ ಇಲ್ಲ. ಯಾರೂ ನನ್ನನ್ನು ಪ್ರತಿಭಟಿಸುವದಿಲ್ಲ. ಅವರ ನಾಯಕರಲ್ಲಿ ಯಾರೂ ನನ್ನ ವಿರುದ್ಧ ನಿಲ್ಲುವದಿಲ್ಲ.”